Avatar

NAMMA MEDIA 24X7

ಕರ್ನಾಟಕದ ಆಹಾರ ಸುರಕ್ಷತೆಗೆ ಹೊಸ ನಿಯಮ: ಅಮೆರಿಕದ ಪ್ರತಿಷ್ಠಿತ Purdue ವಿಶ್ವವಿದ್ಯಾಲಯದೊಂದಿಗೆ ಸಮಾಲೋಚನೆ

ಕರ್ನಾಟಕದ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಡಾ ಯು ಟಿ ಖಾದರ್ ಅವರು ಆಹಾರ ಸುರಕ್ಷತೆ ಹಾಗೂ ಗುಣಮಟ್ಟದ ಆಹಾರ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ, ಅಮೆರಿಕದ ಇಂಡಿಯಾನಾ ರಾಜ್ಯದಲ್ಲಿರುವ ವಿಶ್ವಪ್ರಸಿದ್ಧ ಪರ್ಡ್ಯೂ (Purdue) ಯೂನಿವರ್ಸಿಟಿಯ Department of Food Scienceಗೆ ಭೇಟಿ ನೀಡಿ ತಜ್ಞರೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಾಯಿತು. ಇತ್ತೀಚಿನ ದಿನಗಳಲ್ಲಿ ಅಸುರಕ್ಷಿತ ಹಾಗೂ ಅಸಮರ್ಪಕ ಆಹಾರ ತಯಾರಿಕೆಯಿಂದ ಉಂಟಾಗುವ ಅನಾರೋಗ್ಯದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಸುರಕ್ಷಿತ ಮತ್ತು ಗುಣಮಟ್ಟದ…

Read More

ರಾಹುಲ್ ಗಾಂಧಿ ಕುರಿತು ದ್ವೇಷ ಭಾಷಣ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಯಶ್‌ಪಾಲ್ ಸುವರ್ಣ, ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ…

Read More

ಲಾವಣ್ಯ ಹತ್ಯೆ ಪ್ರಕರಣ: ಚಿಕಿತ್ಸೆ ಬಳಿಕ ಆರೋಪಿ ಚೇತನ್ ಪೊಲೀಸ್ ವಶಕ್ಕೆ; ನಾಲ್ಕು ದಿನಗಳ ಕಸ್ಟಡಿ

ಬಂಟ್ವಾಳ: ಜುಲೈ 16ರಂದು ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ (21) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಚೇತನ್ (22) ಅವರನ್ನು ಸೋಮವಾರ ಬಂಟ್ವಾಳ ನಗರ ಪೊಲೀಸರು ಅಧಿಕೃತವಾಗಿ ತಮ್ಮ ವಶಕ್ಕೆ ಪಡೆದಿದ್ದಾರೆ. ಪೊಲೀಸರು ನೀಡಿದ ಮಾಹಿತಿಯಂತೆ, ಮಂಗಳವಾರ ಆರೋಪಿಯನ್ನು ಬಂಟ್ವಾಳ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಪ್ರಕರಣದ…

Read More

ಕೆಪಿಎಸ್ ಸಿ ಹಗರಣದ ಬಗ್ಗೆ ಸಮಗ್ರ ತನಿಖೆ ನಡೆಸಿ: ಸುನಿಲ್ ಕುಮಾರ್ ಆಗ್ರಹ

ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ ಸಿ) ಒಂದರ ಹಿಂದೆ ಒಂದರಂತೆ ಹಗರಣಗಳು ಬೆಳಕಿಗೆ ಬರುತ್ತಿರುವುದು ಉದ್ಯೋಗಾಕಾಂಕ್ಷಿ ಯುವಕರಲ್ಲಿ ಆತಂಕ ಮೂಡಿಸಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಪಾರದರ್ಶಕ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಒತ್ತಾಯಿಸಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್ಸಿ ಅಧ್ಯಕ್ಷರೇ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಗಳು ಕೇಳಿಬಂದಿದ್ದು, ನೇಮಕಾತಿಗೆ ಕೋಟ್ಯಂತರ ರೂಪಾಯಿ ಹಣ ಪಡೆದಿರುವ ಕುರಿತು ಧ್ವನಿಮುದ್ರಿಕೆಗಳು ಬಹಿರಂಗವಾಗಿವೆ ಎಂದು ಆರೋಪಿಸಿದರು.ಈ ವಿಷಯವನ್ನು ವಿಧಾನಸಭೆಯಲ್ಲೂ ಪ್ರಸ್ತಾಪಿಸಿದ್ದರೂ, ಸರ್ಕಾರ ನಿಯಮಾವಳಿ…

Read More

ಸಂಪುಟ ವಿಸ್ತರಣೆಗೆ ಕ್ಷಣಗಣನೆ: ರಾಹುಲ್-ಖರ್ಗೆ ಸಭೆಯ ಬಳಿಕ ಹೊಸ ಸಚಿವರ ಪಟ್ಟಿ ಅಂತಿಮ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತ ತಲುಪಿದ್ದು, ಹೊಸ ಸಚಿವರ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್‌ನ ಅಂತಿಮ ಒಪ್ಪಿಗೆ ಪಡೆಯಲು ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಭೆ ನಡೆಯುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಗುರುವಾರ ಸಂಜೆ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ. ಮಂಗಳವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಕೆ.ಸಿ. ವೇಣುಗೋಪಾಲ್ ಸಚಿವರ ಪಟ್ಟಿಯ ಕುರಿತು ಅಂತಿಮ ಹಂತದ ಚರ್ಚೆ ನಡೆಸಿದ್ದಾರೆ. ಸಚಿವ ಸ್ಥಾನಕ್ಕಾಗಿ…

Read More

ನೀಟ್ ಪ್ರತಿಭಟನಾಕಾರರಿಗೆ ಫಡ್ನವೀಸ್ ರಿಲೀಫ್: ಎಫ್‌ಐಆರ್ ಹಿಂಪಡೆಯಲು ಗೃಹ ಇಲಾಖೆಗೆ ಸೂಚನೆ

ಮುಂಬೈ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದವರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗಳನ್ನು (FIR) ಹಿಂಪಡೆಯುವಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ವಾರ ಮುಂಬೈ, ಪುಣೆ ಹಾಗೂ ನಾಗ್ಪುರ ಸೇರಿದಂತೆ ಹಲವು ನಗರಗಳಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರು ವ್ಯಾಪಕ ಪ್ರತಿಭಟನೆ ನಡೆಸಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ, ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗೆ ಬೆಂಬಲ ಹಾಗೂ ಜುಲೈ 20ರಂದು…

Read More

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಅದ್ಯಕ್ಷ ಸ್ಥಾನಕ್ಕೆ, ಪಕ್ಷನಿಷ್ಠೆ,ಸಂಘಟನಾ ಚಾತುರ್ಯ ಹೊಂದಿರುವ ಕಾರ್ಯಕರ್ತರ ಅಭಿಮಾನದ ನಾಯಕ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಆಯ್ಕೆಗೆ ಜಿಲ್ಲಾದ್ಯಾಂತ ಅಭಿಮತ

ತಳಮಟ್ಟದ ಪಕ್ಷ ಸಂಘಟನೆ,ಹೊಸ ಅಭಿವೃದ್ದಿಶೀಲ ಚಿಂತನೆ,ಯುವಪೀಳಿಗೆಗೆ ಪ್ರೋತ್ಸಾಹ ನೀಡಿ ಕಾರ್ಯಕರ್ತರೊಂದಿಗೆ ಕಾರ್ಯಕರ್ತನಗಿ ಬೆರೆಯುವ ಪಂಚಾಯತ್ ರಾಜ್ ಅನುಭವದ ಗಣಿ,ಉತ್ತಮ ನಾಯಕನ ಅನುಭವಕ್ಕೆ ಮನ್ನಣೆ ನೀಡುವ ಸಮಯ ಇದಾಗಿದ್ದು,ಪಕ್ಷದ ತತ್ವ-ಸಿದ್ಧಾಂತಗಳಿಗೆ ಅಚಲ ಬದ್ಧತೆ, ಜನಸೇವೆಯ ಗುರಿ ಹಾಗೂ ಅಪಾರ ಅನುಭವದ ಮೂಲಕ ಗುರುತಿಸಿಕೊಂಡಿರುವ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಮರ್ಥ ಹಾಗೂ ಸೂಕ್ತ ಅಭ್ಯರ್ಥಿಯಾಗಿ ಕಾರ್ಯಕರ್ತರ ವಲಯದಲ್ಲಿ ವ್ಯಾಪಕ…

Read More

ಇರಾನ್ ಬೆಂಬಲಿತ ನೆಲೆಗಳ ಮೇಲೆ ಅಮೆರಿಕ-ಸೌದಿ ಜಂಟಿ ವಾಯುದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

ವಾಷಿಂಗ್ಟನ್: ಅಮೆರಿಕ ಮತ್ತು ಸೌದಿ ಅರೇಬಿಯಾ ಸೇನೆಗಳು ಇರಾನ್ ಬೆಂಬಲಿತ ಮಿಲಿಷಿಯಾಗಳು ಬಳಸುತ್ತಿದ್ದ ಇರಾಕ್‌ನ ಹಲವು ನೆಲೆಗಳ ಮೇಲೆ ಜಂಟಿ ವಾಯುದಾಳಿ ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ. ಅಮೆರಿಕದ ಪಡೆಗಳು ಹಾಗೂ ಸೌದಿ ತೈಲ ಮೂಲಸೌಕರ್ಯಗಳ ಮೇಲೆ ನಡೆದ ದಾಳಿಗಳಿಗೆ ಪ್ರತಿಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದ್ದು, ಇರಾನ್ ಉಡಾಯಿಸಿದ ಕ್ಷಿಪಣಿಗಳನ್ನು ಯಶಸ್ವಿಯಾಗಿ ತಡೆಹಿಡಿದಿರುವುದಾಗಿ CENTCOM ಸ್ಪಷ್ಟಪಡಿಸಿದೆ. ಕಳೆದ 72 ಗಂಟೆಗಳಲ್ಲಿ ಇರಾನ್ ಬೆಂಬಲಿತ ಮಿಲಿಷಿಯಾಗಳು 30ಕ್ಕೂ ಹೆಚ್ಚು ಡ್ರೋನ್ ದಾಳಿಗಳನ್ನು…

Read More

ರಾಹುಲ್ ಗಾಂಧಿ ವಿರುದ್ಧದ ಹೇಳಿಕೆ ಖಂಡನೆ: ಯಶ್‌ಪಾಲ್ ಸುವರ್ಣ ಕ್ಷಮೆಯಾಚಿಸಲಿ, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ – ಯುವ ಕಾಂಗ್ರೆಸ್

ಮಂಗಳೂರು: ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕುರಿತು ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೊಹಮ್ಮದ್ ಬಶೀರ್, ಅವಹೇಳನಕಾರಿ, ಪ್ರಚೋದನಕಾರಿ ಹಾಗೂ ಅಸಭ್ಯ ಭಾಷೆಯ ಬಳಕೆ ಜನಪ್ರತಿನಿಧಿಯ ಘನತೆಗೆ ತಕ್ಕದ್ದಲ್ಲ ಎಂದು ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಜಾಪ್ರಭುತ್ವದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು, ರಾಜಕೀಯ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವ ಬದಲು…

Read More

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಡಿ ಪಡೆದ ಹಕ್ಕುಗಳೇ ಹೆಚ್ಚು – ಹೋರಾಟ ಅನಿವಾರ್ಯ- ಪಿಂಚಣಿದಾರರ ಸಮಾವೇಶದಲ್ಲಿ ರವಿ ಡಿ ಚೆಣ್ಣನ್ನನವರ್

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಇದರ ಆಶ್ರಯದಲ್ಲಿ ಕರ್ನಾಟಕ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಪಿಂಚಣಿದಾರರ ಪ್ರಥಮ ಸಮಾವೇಶವು ಇಂದು ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯಿತು. ಈ ಪ್ರಥಮ ಸಮಾವೇಶವನ್ನು ನಗಾರಿ ಬಡಿಯುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿದ ಕರ್ನಾಟಕ ರಾಜ್ಯ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾದ ರವಿ ಡಿ ಚೆನ್ನಣ್ಣನವರ್ ಮಾತನಾಡುತ್ತಾ ಹಕ್ಕಿನಿಂದ ವಂಚಿತರಾದವರ ಹಕ್ಕಿಗಾಗಿ ಅನ್ಯಾಯದ ವಿರುದ್ದ, ವ್ಯವಸ್ಥೆಯ ದೌರ್ಜನ್ಯದ ವಿರುದ್ಧ ಹೋರಾಡುವ ಸಂಘಟನೆ ಕಟ್ಟಲು ಬದ್ದತೆ…

Read More
error: Content is protected !!