ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ; ನೂತನ ಸಿಎಂ ಆಯ್ಕೆ ಸಾಧ್ಯತೆ
ಬೆಂಗಳೂರುದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ಪಕ್ಷದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಶನಿವಾರ (ಮೇ 30) ಸಂಜೆ 4 ಗಂಟೆಗೆ ಕರೆಯಲಾಗಿದೆ. ವಿಧಾನಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 334ರ ‘ಸಮ್ಮೇಳನ ಸಭಾಂಗಣ’ದಲ್ಲಿ ಸಭೆ ನಡೆಯಲಿದ್ದು, ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ…