Avatar

NAMMA MEDIA 24X7

ಫುಟ್ ಪಾತ್ ಜೊತೆಗೆ ರಸ್ತೆ ಬದಿಯ ಸ್ಥಳವನ್ನು ಆಕ್ರಮಿಸಿ ವ್ಯಾಪಾರ ಮಾಡುವವರಿಗೆ ಬಿಸಿ ಮುಟ್ಟಿಸಿದ ಮ.ನ.ಪಾ ಅಧಿಕಾರಿಗಳು

ಮಂಗಳೂರು : ಫುಟ್ ಪಾತ್ ಜೊತೆಗೆ ರಸ್ತೆ ಬದಿಯ ಸ್ಥಳವನ್ನು ಆಕ್ರಮಿಸಿ ವ್ಯಾಪಾರ ಮಾಡುತ್ತಿದ್ದವರನ್ನು ಮಂಗಳೂರು ಮಹಾ ನಗರ ಪಾಲಿಕೆ ಅಧಿಕಾರಿಗಳು ತೆರವು ಮಾಡಿದರು. ಈ ಸಂದರ್ಭ ಕೆಲವರು ಅಧಿಕಾರಿಗಳ ಜೊತೆ ವಾಗ್ಯುದ್ದ ನಡೆಸಿದರು. ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರಿನ ಕೆಲವು ಕಡೆಗಳಲ್ಲಿ ರಸ್ತೆ ಬದಿ ಮತ್ತು ಫುಟ್ಪಾತ್ ಅತಿಕ್ರಮಣ ಮಾಡಿ ಇಟ್ಟಿದ್ದ ಅಕ್ರಮ ಗೂಡಂಗಡಿಗಳನ್ನು ಮತ್ತು ಇತರ ಸ್ಟಾಲ್ ಗಳನ್ನ ಟೈಗರ್ ಕಾರ್ಯಾಚರಣೆ ಮೂಲಕ ತೆರವು ಮಾಡಲಾಯಿತು. ಮಂಗಳೂರು ನಗರದಲ್ಲಿ ಸಾರ್ವಜನಿಕರಿಗಾಗಿ ಸ್ಮಾರ್ಟ್ ಸಿಟಿಯಡಿ…

Read More

ಡಿಸೆಂಬರ್ 19ರಿಂದ 22ರವರೆಗೆ ಮಂಗಳೂರಿನ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ 5ನೇ ರಾಷ್ಟ್ರೀಯ ಫಿನ್‌ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025 ಸ್ಪರ್ಧೆ

ಮಂಗಳೂರು :ಅಂಡರ್‌ವಾಟರ್ ಸ್ಪೋರ್ಟ್ಸ್ ಫೆಡರೇಶನ್ ಆಫ್ ಇಂಡಿಯಾ (USFI) ವತಿಯಿಂದ 5ನೇ ರಾಷ್ಟ್ರೀಯ ಫಿನ್‌ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025 ಈಜು ಸ್ಪರ್ಧೆಯು ಡಿಸೆಂಬರ್ 19ರಿಂದ 22ರ ತನಕ ಮಂಗಳೂರಿನ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಆಯೋಜಿಸಲಾಗಿದೆ ಎಂದು ಅಂಡರ್ ವಾಟರ್ ಸ್ಪೋರ್ಟ್ಸ್ ಫೆಡರೇಶನ್ ಆಫ್ ಇಂಡಿಯಾ ಸೆಕ್ರೆಟರಿ ಜನರಲ್ ಡಾ. ತಪನ್ ಕುಮಾರ್ ಪಾಣಿಗ್ರಾಹಿ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿ , ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ (ಭಾರತ ಸರ್ಕಾರ)ದಿಂದ ಮಾನ್ಯತೆ ಪಡೆದಿರುವ…

Read More

ಜಪ್ಪು ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಿ : ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು

ಮಂಗಳೂರು ನಗರದ ಜಪ್ಪು ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಬೇಕು ಹಾಗೂ ಕನಿಷ್ಠ ಒಂದು ವರ್ಷಗಳ ಕಾಲ ಜಪ್ಪು ಮಹಾಕಾಳಿಪಡ್ಪು ರೈಲ್ವೇ ಗೇಟ್ ಅನ್ನು ಮುಚ್ಚದೆ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಸರಕಾರವನ್ನು ಆಗ್ರಹಿಸಿದ್ದಾರೆ. ಅವರು ಗುರುವಾರ ಜಪ್ಪು ಮಹಾಕಾಳಿಪಡ್ಪು ರೈಲ್ವೇ ಗೇಟ್ ಬಳಿ ನಡೆದ ಹಕ್ಕೊತ್ತಾಯ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಜಪ್ಪು ಮಹಾಕಾಳಿಪಡ್ಪು ಪ್ರದೇಶವು ಮಂಗಳೂರಿನ ಪ್ರಮುಖ ನಗರ ಪ್ರದೇಶಗಳಲ್ಲೊಂದಾಗಿದ್ದು,…

Read More

ಮಿಸೆಸ್ ಅರ್ಥ್ ಇಂಟರ್ನ್ಯಾಷನಲ್ ಗ್ರ್ಯಾಂಡ್ ವಿನ್ನರ್ ಕಿರೀಟ ಮುಡಿಗೇರಿಸಿಕೊಂಡ ಮಂಗಳೂರಿನ ಬೆಡಗಿ ವಿದ್ಯಾ ಸಂಪತ್

ಪಿಲಿಪೈನ್ಸ್‌ನಲ್ಲಿ ಡಿ.2ರಿಂದ ಡಿ.10ರವರೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಮಿಸೆಸ್ ಅರ್ಥ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ಗ್ರ್ಯಾಂಡ್ ವಿನ್ನರ್ ಪ್ರಶಸ್ತಿಯನ್ನು ಮಂಗಳೂರು ಮೂಲದ ವಿದ್ಯಾ ಸಂಪತ್ ಪಡೆದುಕೊಂಡಿದ್ದಾರೆ.ಪಿಲಿಫೈನ್ಸ್‌ನ ನಡೆದ ಮಿಸೆಸ್ ಅರ್ಥ್ ಇಂಟರ್ನ್ಯಾಷನಲ್ ಸ್ಪರ್ಧೆಯೂ ಒಂಬತ್ತು ದಿನಗಳ ಕಾಲ ನಡೆದಿದ್ದು, 22ಕ್ಕೂ ಅಧಿಕ ಸ್ಪರ್ಧಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ನಾನಾ ದೇಶಗಳ ನಡುವೆ ಭಾರತವನ್ನು ಪ್ರತಿನಿಧಿಸಿದ ವಿದ್ಯಾ ಸಂಪತ್ ಗ್ರ್ಯಾಂಡ್ ವಿನ್ನರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಸ್ಪರ್ಧೆಯೂ ವಿವಿಧ ಹಂತಗಳಲ್ಲಿ ನಡೆದಿದ್ದು, ಟ್ಯಾಲೆಂಟ್ ರೌಂಡ್, ರಾಷ್ಟ್ರೀಯ ಕಾಸ್ಟ್ಯೂಮ್, ಕ್ಲೋಸ್ ರೂಂ ಇಂಟರ್‌ವ್ಯೂ ಸೇರಿದಂತೆ…

Read More

ನೆಲ್ಯಾಡಿ ಪೇಟೆಯಲ್ಲಿ ಸರಣಿ ಅಪಘಾತ: ಅಂಗಡಿಗೆ ನುಗ್ಗಿದ ಈಚರ್ ಗಾಡಿ

ನೆಲ್ಯಾಡಿ:ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಪೇಟೆಯ ಮಧ್ಯಭಾಗದಲ್ಲಿ ಬುಧವಾರ ಸಂಜೆ ಸರಣಿ ಅಪಘಾತ ಸಂಭವಿಸಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.ನೆಲ್ಯಾಡಿಯ ಗಣೇಶ್ ಸ್ಟೋರ್ ಬಳಿ ನಿಲ್ಲಿಸಿದ್ದ ಉಜಿರೆ ಮಹಾವೀರ ಸಂಸ್ಥೆಗೆ ಸೇರಿದ ಲೈನ್ ಸೇಲ್ಸ್ ಈಚರ್ ಗಾಡಿ, ಪಶು ಆಹಾರ ಸಾಗಿಸುತ್ತಿದ್ದ ಗೂಡ್ಸ್ ಟೆಂಪೋ ಗೆ ಎಸ್‌ಎಲ್‌ವಿ ಸಂಸ್ಥೆಗೆ ಸೇರಿದ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಈಚರ್ ಲಾರಿ ನೇರವಾಗಿ ಗಣೇಶ್ ಸ್ಟೋರ್ ಅಂಗಡಿಗೆ ನುಗ್ಗಿ ಭೀತಿಯ ವಾತಾವರಣ ನಿರ್ಮಾಣವಾಯಿತು….

Read More

ನೆಟ್ಟಣ ರೈಲು ನಿಲ್ದಾಣದ ಹಳಿಗೆ ಉರುಳಿದ ಕ್ರೇನ್‌.. !

ಕಡಬ:ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುವ ವೇಳೆ ಅಡಿಭಾಗ ಕುಸಿದು ಕ್ರೇನ್ ರೈಲು ಹಳಿಗೆ ಉರುಳಿ ಬಿದ್ದ ಘಟನೆ ಬುಧವಾರ ಕಡಬ ತಾಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಸಂಭವಿಸಿದೆ. ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕ್ರೇನ್ ಪ್ಲಾಟ್ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಉರುಳಿ ರೈಲು ಹಳಿ ಮೇಲೆ ಅಡ್ಡಲಾಗಿ ಬಿದ್ದಿದೆ. ಪ್ಲಾಟ್ ಫಾರ್ಮ್‌ನ ಸೈಡ್ ನಲ್ಲಿದ್ದ ಕ್ರೇನ್ ಪ್ಲಾಟ್ ಫಾರ್ಮ್ನ ಬದಿ ಕುಸಿದ ಪರಿಣಾಮ ನಿಯಂತ್ರಣ ತಪ್ಪಿ ರೈಲು…

Read More

ಇನ್ನು ಪ್ರಯಾಣದ ಹತ್ತು ಗಂಟೆ ಮೊದಲೇ ರೈಲ್ವೇ ರಿಸರ್ವೇಷನ್ ಚಾರ್ಟ್ ಸಿದ್ದ.. ! ರೈಲ್ವೆ ಇಲಖೆಯಿಂದ ಹೊಸ ಆದೇಶ.. !

ನವದೆಹಲಿ:ಇನ್ನು ಪ್ರಯಾಣದ ಹತ್ತು ಗಂಟೆ ಮೊದಲೇ ರೈಲ್ವೇ ರಿಸರ್ವೇಷನ್ ಚಾರ್ಟ್ ಸಿದ್ದಗೊಳ್ಳಲಿದೆ.ಇದರಿಂದ ರೈಲು ಪ್ರಯಾಣಿಕರಿಗೆ ದೊಡ್ಡ ರಿಲೀಫ್ ಸಿಗಲಿದೆ. ಇನ್ನು ರೈಲು ಪ್ರಯಾಣಿಕರು ತಮ್ಮ ಟಿಕೆಟ್‌ಗಳು ದೃಢೀಕರಿಸಲ್ಪಟ್ಟಿದೆಯೇ ಅಥವಾ ಇಲ್ಲವೇ ಎಂಬುದನ್ನು 10 ಗಂಟೆಗಳ ಮುಂಚಿತವಾಗಿ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ.ಈ ನಿಟ್ಟಿನಲ್ಲಿ ರೈಲ್ವೆ ಹೊಸ ಆದೇಶ ಹೊರಡಿಸಿದೆ. ಇನ್ನು ಸೀಟ್ ರಿಸರ್ವೇಷನ್ ಚಾರ್ಟ್ ಮುಂಚಿತವಾಗಿ ಸಿದ್ಧಪಡಿಸಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ. ರೈಲ್ವೆ ಇಲಾಖೆಯ ಪ್ರಕಾರ, ಬೆಳಗ್ಗೆ 5:01ರಿಂದ ಮಧ್ಯಾಹ್ನ 2:00 ರವರೆಗೆ ಚಲಿಸುವ ರೈಲುಗಳಿಗೆ ಮೊದಲ ರಿಸರ್ವೇಷನ್ ಪಟ್ಟಿಯನ್ನು…

Read More

ಕಾರ್ ಗೆ ಬೈಕ್ ಢಿಕ್ಕಿ : ಇಬ್ಬರ ಪರಿಸ್ಥಿತಿ ಗಂಭೀರ…. !

ಉಳ್ಳಾಲ:ಕಾರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರ್ ಬಳಿ ಬುಧವಾರ ಸಂಜೆ ನಡೆದಿದೆ. ಗಾಯಗೊಂಡ ವರನ್ನು ನಿಖಿಲ್,ಗಗನ್ ಜೀತ್ ಎಂದು ಗುರುತಿಸಲಾಗಿದೆ.ಇವರಿಬ್ಬರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರಿನ ಹಿಂಭಾಗಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಿಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗ್ಗೆ ಮಂಗಳೂರು ಗ್ರಾಮಾಂತರ ಸಂಚಾರ ಠಾಣೆಯಲ್ಲಿ ಪ್ರಕರಣ…

Read More

ದೇಶಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸಿ ರಾಷ್ಟ್ರೀಯ ಆರ್ಥಿಕತೆಯನ್ನು ಬಲಪಡಿಸಿ : ರವಿ ಮುನಿಸ್ವಾಮಿ

ಪುತ್ತೂರು:`ಸ್ವದೇಶಿ ಬಳಸಿ ದೇಶ ಬೆಳೆಸಿ’ ಎಂಬ ಘೋಷವಾಕ್ಯದಡಿ, ಸಾಫ್ಟ್‌ವೇರ್ ಉತ್ಪನ್ನಗಳಿಂದ ಹಿಡಿದು ನಿತ್ಯೋಪಯೋಗಿ ವಸ್ತುಗಳ ತನಕ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸಿ ರಾಷ್ಟ್ರೀಯ ಆರ್ಥಿಕತೆಯನ್ನು ಬಲಪಡಿಸುವ ಉದ್ದೇಶದಿಂದ ಬೆಂಗಳೂರಿನ ಶ್ರೀ ಪರಿಪೂರ್ಣ ಸನಾತನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾರತೀಯ ಮಾಜಿ ಸೇನಾ ಅಧಿಕಾರಿ ಹಾಗೂ ಕರ್ನಾಟಕ ಸರಕಾರದ ಮಾಜಿ ನಿರ್ದೇಶಕ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸ್ವದೇಶಿ ಜಾಗರಣ ಸೈಕ್ಲಿಂಗ್ ಅಭಿಯಾನ ಪುತ್ತೂರಿಗೆ ಆಗಮಿಸಿತು. ಸುಳ್ಯ ಮಾರ್ಗವಾಗಿ ಪುತ್ತೂರಿಗೆ ಆಗಮಿಸಿದ ಅವರನ್ನು ದರ್ಬೆ ವಿನಾಯಕ…

Read More

ಡಿ 28 ರಂದು ಬಂಟರ ಸಂಘ ಬಜಪೆ ವಲಯದ ಆಶ್ರಯದಲ್ಲಿ ಪಾಲ್ದಟ್ಟೆಡ್ ಬಂಟೆರೆ ಪರ್ಬ-2025

ಮಂಗಳೂರು: ಪಾಲ್ದಟ್ಟೆಡ್ ಬಂಟೆರೆ ಪರ್ಬ-2025 ಕಾರ್ಯಕ್ರಮವು ಡಿ 28 ರವಿವಾರ ಬಂಟರ ಸಂಘ ಬಜಪೆ ವಲಯದ ಆಶ್ರಯದಲ್ಲಿ ನಡೆಯಲಿರುವುದು . ಈ ಕ್ರಾಯಕ್ರಮದಲ್ಲಿ ನೂತನ ಅಧ್ಯಕ್ಷರ ಪದಗ್ರಹಣ, ಬಂಟರ ಸಂಘಗಳ ಸಾಂಸ್ಕೃತಿಕ ಸ್ಪರ್ಧೆ , ಗೌರವ ಅಭಿನಂದನೆ, ವಿದ್ಯಾನಿಧಿಯ ಉದ್ಘಾಟನೆ, ಆರ್ಥಿಕ ಸಹಾಯಧನ ವಿತರಣಾ ಕಾರ್ಯಕ್ರಮವುಬಜಪೆಯ ತಾರಿಕಂಬಳ ಬಂಟರ ಸಂಘದ ನಿವೇಶನದಲ್ಲಿ ನಡೆಯಲಿರುವುದು ಎಂದು ಸಂಘದ ಉಪಾಧ್ಯಕ್ಷರಾದ ಸುಕೇಶ್ ಶೆಟ್ಟಿ ಮುಂಡಾರುಗುತ್ತು ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ…

Read More
error: Content is protected !!