ಅಕ್ರಮ ಎಂಡಿಎಂಎ ಸಾಗಾಟ ವೇಳೆ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ .. ಪರಾರಿಯಾಗಲು ಯತ್ನಿಸಿದ ರೌಡಿಶೀಟರ್‌ನ ಬೆನ್ನೆಟ್ಟಿ ಹಿಡಿದ ಖಾಕಿ … ! ಪೊಲೀಸರ ಕಾರ್ಯಾಚರಣೆಗೆ ಮೆಚ್ಚುಗೆ .. !
ಮೂಡುಬಿದಿರೆ: ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ರೌಡಿ ಶೀಟರ್ ಓರ್ವನನ್ನು ಮೂಡುಬಿದಿರೆ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿರುವ ಘಟನೆ ಕೊಡಂಗಲ್ಲು ಎಂಬಲ್ಲಿ ಮಂಗಳವಾರ ಸಂಜೆ ವರದಿಯಾಗಿದೆ. ಬಂಧಿತನನ್ನು ಕಲ್ಲಡ್ಕ ನಿವಾಸಿ ತೌಸೀಫ್ ಎಂದು ಗುರುತಿಸಲಾಗಿದೆ. ಬಂಧಿತನಿಂದ ಸುಮಾರು 50ಸಾವಿರ ರೂ. ಮೌಲ್ಯದ 10.800 ಗ್ರಾಂ ತೂಕದ ಎಂಡಿಎಂಎ, ಕೃತ್ಯಕ್ಕೆ ಬಳಸಿದ್ದ ಸುಮಾರು 3ಲಕ್ಷ ರೂ.ಮೌಲ್ಯದ ಕಾರು, ಈತನ ಕಾರಿನಲ್ಲಿ ಪತ್ತೆಯಾಗಿದ್ದ ತಲವಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡುಬಿದಿರೆ ತಾಲೂಕಿನ ಶಿರ್ತಾಡಿಯಿಂದ ಕೊಡಂಗಲ್ಲು – ಮಹಾವೀರ…