ಕೇರಳ ಸ್ಥಳೀಯಾಡಳಿತ ಚುನಾವಣೆ ಫಲಿತಾಂಶ ಪ್ರಕಟ .ಮಂಜೇಶ್ವರ ಗ್ರಾಮ ಪಂಚಾಯತ್ ಯುಡಿಎಫ್ ಗೆ ಸ್ಪಷ್ಟ ಬಹುಮತ
ಮಂಜೇಶ್ವರ: ಕೇರಳ ಸ್ಥಳೀಯಾಡಳಿತ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮಂಜೇಶ್ವರ ಗ್ರಾಮ ಪಂಚಾಯತ್‌ನಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಬಹುಮತವನ್ನು ಸಾಧಿಸಿದೆ. ಒಟ್ಟು 24 ಸ್ಥಾನಗಳ ಪೈಕಿ ಯುಡಿಎಫ್ 14 ಸ್ಥಾನಗಳನ್ನು ಗೆದ್ದು ಪಂಚಾಯತ್ ಮೇಲೆ ಹಿಡಿತ ಸಾಧಿಸಿದೆ.ಮಂಜೇಶ್ವರ ಗ್ರಾಮ ಪಂಚಾಯತ್‌ನ ಎರಡನೇ ವಾರ್ಡ್‌ನಿಂದ ಸ್ಪರ್ಧಿಸಿದ್ದ ಸಮಾಜ ಸೇವಕ ಹಾಗೂ ಯುಡಿಎಫ್ ಅಭ್ಯರ್ಥಿ ಇಲ್ಯಾಸ್ ತೂಮಿನಾಡು ಅವರು ಅತ್ಯಧಿಕ ಬಹುಮತದಿಂದ ವಿಜಯ ಸಾಧಿಸಿದ್ದಾರೆ. ಚುನಾವಣಾ ಅವಧಿಯಲ್ಲಿ ಎದುರಾಳಿಗಳಿಂದ ನಡೆದ ಅಪಪ್ರಚಾರಗಳನ್ನೆಲ್ಲಾ ಜನತೆಯ ಸ್ಪಷ್ಟ ತೀರ್ಪಿನ ಮೂಲಕ ಮಣಿಸಿ…