Avatar

NAMMA MEDIA 24X7

ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ? ಕಾಂಗ್ರೆಸ್ ವಲಯದಲ್ಲಿ ಚರ್ಚೆ ತೀವ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ‘ಕಾವೇರಿ’ಯಲ್ಲಿ ಇಂದು ಬೆಳಗ್ಗೆ ನಡೆದ ಬ್ರೇಕ್‌ಫಾಸ್ಟ್ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿರುವ ಸೂಚನೆಗಳು ಲಭಿಸಿವೆ. ಸಭೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ ಸಚಿವ ಸಂತೋಷ್ ಲಾಡ್ ಭಾವುಕರಾಗಿ ಕಣ್ಣೀರು ಹಾಕಿದ ಘಟನೆ ಗಮನ ಸೆಳೆಯಿತು. ಸಭೆ ಬಳಿಕ ಕಾರಿನಲ್ಲಿ ತೆರಳುತ್ತಿದ್ದ ಸಚಿವ ಸಂತೋಷ್ ಲಾಡ್ ಅವರನ್ನು ಮಾಧ್ಯಮ ಪ್ರತಿನಿಧಿಗಳು “ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆಯೇ?” ಎಂದು ಪ್ರಶ್ನಿಸಿದರು. ಈ ವೇಳೆ ದುಃಖ ತಡೆಯಲಾರದೆ ಕಾರಿನಲ್ಲೇ ಕಣ್ಣೀರು…

Read More

ಮಂಗಳೂರು-ಉಡುಪಿ ಭೋವಿ ಸಮಸ್ಯೆಗಳಿಗೆ ಪವನ್ ಕುಮಾರ್ ಶಿರ್ವ ಹೋರಾಟದ ಘೋಷಣೆ

ಮಂಗಳೂರು: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭೋವಿ ಸಮುದಾಯಕ್ಕೆ ಸಂಬಂಧಿಸಿದಂತೆ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಭೋವಿ ಯುವ ಮುಖಂಡ ಪವನ್ ಕುಮಾರ್ ಶಿರ್ವ ಹೋರಾಟದ ನಿಲುವು ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ಅವರು ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಳ್ಳಬೇಕಾಗಿದ್ದರೂ, ಕಾರಣಾಂತರಗಳಿಂದ ಆ ಪ್ರವಾಸ ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ. ಇದೀಗ ಅಧ್ಯಕ್ಷರೊಂದಿಗೆ ಸಮಯ ನಿಗದಿಯಾಗಿರುವ ಹಿನ್ನೆಲೆ, ಪವನ್ ಕುಮಾರ್ ಶಿರ್ವ ಅವರು ನಾಳೆ ಬೆಂಗಳೂರಿನಲ್ಲಿ ಎಂ….

Read More

ಮಂಗಳೂರಿನಲ್ಲಿ ‘ಮ್ಯಾವರಿಕ್ಸ್ ಸಮರ್ ನ್ಯಾಷನಲ್ಸ್ 2026’ ಬ್ರಿಡ್ಜ್ ಪಂದ್ಯಾವಳಿ

ಮಂಗಳೂರು: ಕರಾವಳಿ ಬ್ರಿಡ್ಜ್ ಅಸೋಸಿಯೇಷನ್ ವತಿಯಿಂದ ಪ್ರತಿಷ್ಠಿತ ‘ಮ್ಯಾವರಿಕ್ಸ್ ಸಮರ್ ನ್ಯಾಷನಲ್ಸ್ 2026’ ಬ್ರಿಡ್ಜ್ ಪಂದ್ಯಾವಳಿಯು ಜೂನ್ 4ರಿಂದ 13ರವರೆಗೆ ನಗರದ ಸೆಂಟ್ ಸೆಬಾಸ್ಟಿಯನ್ ಸೆಂಟೆನರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷೆ ಮಾರ್ಜೊರಿ ಟೆಕ್ಸೇರಾ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಬ್ರಿಡ್ಜ್ ಫೆಡರೇಷನ್ (BFI) ಹಾಗೂ ಕರ್ನಾಟಕ ರಾಜ್ಯ ಬ್ರಿಡ್ಜ್ ಅಸೋಸಿಯೇಷನ್ ಆಶ್ರಯದಲ್ಲಿ ಈ ರಾಷ್ಟ್ರೀಯ ಮಟ್ಟದ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ತಿಳಿಸಿದರು. ಈ ಪ್ರತಿಷ್ಠಿತ ವಾರ್ಷಿಕ ರಾಷ್ಟ್ರೀಯ…

Read More

​ಮಂಜೇಶ್ವರದಲ್ಲಿ ಸಡಗರದಿಂದ ನೆರವೇರಿದ ಬಕ್ರೀದ್: ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಮುಸ್ಲಿಂ ಬಾಂಧವರು

​ಮಂಜೇಶ್ವರ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಪವಿತ್ರ ‘ಈದುಲ್ ಅಝಾ’ (ಬಕ್ರೀದ್) ಹಬ್ಬವನ್ನು ಮಂಜೇಶ್ವರ ತಾಲೂಕಿನಾದ್ಯಂತ ಗುರುವಾರ ಅತ್ಯಂತ ಭಕ್ತಿ, ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಯಿತು.​ಬೆಳಿಗ್ಗೆಯಿಂದಲೇ ನವವಸ್ತ್ರಧಾರಿಗಳಾದ ಮುಸ್ಲಿಂ ಬಾಂಧವರು ಮಸೀದಿಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಪವಿತ್ರ ಈದ್ ನಮಾಜ್ ಸಲ್ಲಿಸಿದ ಬಳಿಕ, ಪರಸ್ಪರ ಆಲಂಗಿಸಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಹಲವು ಮಸೀದಿಗಳಲ್ಲಿ ಮಹಿಳೆಯರಿಗೂ ಪ್ರಾರ್ಥನೆ ಸಲ್ಲಿಸಲು ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ​ಮಂಜೇಶ್ವರ ತಾಲೂಕಿನ ವಿವಿಧ ಮಸೀದಿಗಳಲ್ಲಿ ಧಾರ್ಮಿಕ ವಿಧಿವಿಧಾನಗಳು ಹಾಗೂ ವಿಶೇಷ ಪ್ರಾರ್ಥನೆಗಳು…

Read More

ಜೆ. ಕೊರಗಪ್ಪ ಅವರಿಗೆ ‘ಸೇವಾ ತ್ರಿವಿಕ್ರಮ’ ಬಿರುದು ಪ್ರದಾನ

ಮಂಗಳೂರುದಲ್ಲಿ ನಡೆದ ಸಮಾರಂಭದಲ್ಲಿ ಸಮಾಜಸೇವಕ ಜೆ. ಕೊರಗಪ್ಪ ಅವರಿಗೆ “ಸೇವಾ ತ್ರಿವಿಕ್ರಮ” ಬಿರುದು ಪ್ರದಾನ ಮಾಡಿ ಗೌರವಿಸಲಾಯಿತು. ರಿಯಲ್ ಎಸ್ಟೇಟ್ ಸಂಸ್ಥೆ ಲ್ಯಾಂಡ್ ಲಿಂಕ್ಸ್ ರೂವಾರಿ ಹಾಗೂ ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್ ಅವರ ಮುಂದಾಳತ್ವದಲ್ಲಿ ಮೇರಿಹಿಲ್‌ನಲ್ಲಿ ನಿರ್ಮಾಣಗೊಂಡ ಪಾಲೆಮಾರ್ ಕನ್ವೆಷನ್ ಸೆಂಟರ್ ಸೇರಿದಂತೆ ನಾಲ್ಕು ಸಭಾಂಗಣಗಳ ಲೋಕಾರ್ಪಣೆ ಕಾರ್ಯಕ್ರಮದ ವೇಳೆ ಈ ಗೌರವ ಪ್ರದಾನ ಮಾಡಲಾಯಿತು. ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟೀಸ್ ಎಸ್. ಅಬ್ದುಲ್ ನಝೀರ್ ಅವರ ದಿವ್ಯಹಸ್ತದಲ್ಲಿ ಜೆ. ಕೊರಗಪ್ಪ ಅವರಿಗೆ ಗೌರವಾಭಿನಂದನ…

Read More

ಉಡುಪಿ ಜಿಲ್ಲೆಯಲ್ಲಿ ಸ್ಪೀಡ್ ರ್ಯಾಡರ್ ಕ್ಯಾಮೆರಾ ಕಣ್ಗಾವಲು; ವಾರದಲ್ಲಿ 46,753 ಸಂಚಾರ ನಿಯಮ ಉಲ್ಲಂಘನೆ ಪತ್ತೆ

ಉಡುಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಳವಡಿಸಲಾದ ಆರು ಅತ್ಯಾಧುನಿಕ ಸ್ಪೀಡ್ ರ್ಯಾಡರ್ ಕ್ಯಾಮೆರಾಗಳು ಕಳೆದ ಒಂದು ವಾರದಲ್ಲಿ 46,753 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆಹಚ್ಚಿವೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲ, ಕಾಪು ಠಾಣಾ ವ್ಯಾಪ್ತಿಯ ದಂಡತೀರ್ಥ, ಕೋಟ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ, ಗಂಗೊಳ್ಳಿ ಠಾಣಾ ವ್ಯಾಪ್ತಿಯ ತ್ರಾಸಿ, ಬೈಂದೂರು ಠಾಣಾ ವ್ಯಾಪ್ತಿಯ ಕೆರ್ಗಾಲ್ ಹಾಗೂ ಪಡುಬಿದ್ರೆ-ಬೆಳ್ಮಣ್ ರಾಜ್ಯ ಹೆದ್ದಾರಿಯ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ…

Read More

ಕೊರಿಂಗಿಲ ಜುಮಾ ಮಸೀದಿಯಲ್ಲಿ ಭಕ್ತಿಭಾವದಿಂದ ಬಕ್ರೀದ್ ಆಚರಣೆ

ಪುತ್ತೂರು/ಬೆಟ್ಟಂಪಾಡಿ: ಕೊರಿಂಗಿಲ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಮಸೀದಿಯ ಖತೀಬರಾದ ಬಹು| ಅಲ್ಹಾಜ್ ಜಿ.ಎಚ್. ಅಯ್ಯೂಬ್ ವಹಬಿ ಉಸ್ತಾದರು ಈದ್ ಪ್ರಾರ್ಥನೆಗೆ ನೇತೃತ್ವ ವಹಿಸಿ, ತ್ಯಾಗ, ಸಮರ್ಪಣೆ, ಶಾಂತಿ, ಮಾನವೀಯತೆ ಹಾಗೂ ಕರುಣೆಯ ಪ್ರತೀಕವಾದ ಬಕ್ರೀದ್ ಹಬ್ಬದ ಮಹತ್ವವನ್ನು ವಿವರಿಸಿದರು. ಇದೇ ವೇಳೆ ಅವರು ಸಮಸ್ತ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಪ್ರಾರ್ಥನೆಯಲ್ಲಿ ಕೊರಿಂಗಿಲ ಜುಮಾ ಮಸೀದಿ ಆಡಳಿತ ಸಮಿತಿಯ ಪದಾಧಿಕಾರಿಗಳು, ಜಮಾತ್ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತರು…

Read More

ಕೊಲ್ಲೂರಿನಲ್ಲಿ ‘ವರಾಹ ಮಿಹಿರನ್’ ಕಥಕ್ಕಳಿ ಪ್ರದರ್ಶನ ಜೂನ್‌ 10ರಂದು

ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸ್ವರ್ಣಮುಖಿ ರಂಗಮಂದಿರದಲ್ಲಿ ಜೂನ್‌ 10ರಂದು “ವರಾಹ ಮಿಹಿರನ್” ಕಥಕ್ಕಳಿ ಪ್ರದರ್ಶನ ನಡೆಯಲಿದೆ ಎಂದು ಕಾರ್ಯಕ್ರಮದ ಸಂಯೋಜಕ ಚೇತಲ್ಲೂರ್ ವಿಜಯಕುಮಾರ್ ಗುಪ್ತನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಕೇರಳದ ಖ್ಯಾತ ಕಥಕ್ಕಳಿ ಕಲಾವಿದರು ಭಾಗವಹಿಸಲಿದ್ದು, ಪೌರಾಣಿಕ ಖಗೋಳಶಾಸ್ತ್ರಜ್ಞ ಹಾಗೂ ಜ್ಯೋತಿಷಿ ವರಾಹಮಿಹಿರರ ಜೀವನ ಮತ್ತು ಭವಿಷ್ಯವಾಣಿಯನ್ನು ಆಧರಿಸಿದ ದೃಶ್ಯಮಯ ನಿರೂಪಣೆ ಪ್ರದರ್ಶಿಸಲಿದ್ದಾರೆ ಎಂದರು. “ವರಾಹ ಮಿಹಿರನ್” ಕಥಕ್ಕಳಿಯ ಕಥಾವಸ್ತು ಉಜ್ಜಯಿನಿ…

Read More

ಉಳಿಯತ್ತಡ್ಕ: 24ನೇ ವರ್ಷದ ವೈದಿಕ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭ ಸಂಪನ್ನ

​ಉಳಿಯತ್ತಡ್ಕ: ಗುರುಕೃಪಾ ವೈದಿಕ ಶಿಕ್ಷಣ ಸಮಿತಿ ಉಳಿಯತ್ತಡ್ಕ ಇದರ ವತಿಯಿಂದ ವಿಶ್ವಬ್ರಾಹ್ಮಣ ಸಮಾಜದ ಮಕ್ಕಳಿಗೆ ವೈದಿಕ ಧಾರ್ಮಿಕ ಸಂಸ್ಕಾರವನ್ನು ಒದಗಿಸುವ 24 ನೇ ವರ್ಷದ “ವೈದಿಕ ಶಿಕ್ಷಣ ಶಿಬಿರ”ವು ಇಲ್ಲಿನ ಗುರುಕೃಪಾ ನಿವಾಸದಲ್ಲಿ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ​ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಬ್ರಹ್ಮ ಶ್ರೀ ಪುರೋಹಿತರತ್ನ ಬಿ. ಕೇಶವ ಆಚಾರ್ಯ ಅವರು, “ನಿತ್ಯ ನೈಮಿತ್ತಿಕ ಕರ್ಮಾನುಷ್ಠಾನವನ್ನು ಬಾಲ್ಯದಲ್ಲಿಯೇ ಅಳವಡಿಸಿಕೊಂಡಿದ್ದಲ್ಲಿ ಸಮಾಜವು ಬಲಿಷ್ಟವಾಗಿ ಬೆಳೆಯುವುದು. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಧಾರೆ…

Read More

ಪುತ್ತೂರು ವಿದ್ಯಾರ್ಥಿನಿ ಪ್ರಕರಣ ತೀರ್ಪಿಗೆ ಶಾಕ್: ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ

ಉಡುಪಿ: ಪುತ್ತೂರಿನ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಕೊಟ್ಟಿರುವ ತೀರ್ಮಾನದ ಬಗ್ಗೆ ನನಗೆ ಶಾಕ್ ಆಗಿದೆ. ಸಂತ್ರಸ್ತೆಗೆ ಕೇವಲ ಪರಿಹಾರ ನೀಡುವುದರಿಂದ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ತೀರ್ಮಾನದ ಬಗ್ಗೆ ಮತ್ತೆ ಮೇಲ್ಮನವಿ ಸಲ್ಲಿಸಬೇಕಾಗಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ತೆಗೆದುಕೊಂಡು ಹೋಗಬೇಕಾಗುತ್ತದೆ. ನಾವು ಎಲ್ಲ ಹಂತದಲ್ಲೂ ಸಂತ್ರಸ್ತೆಯ ಪರವಾಗಿ…

Read More
error: Content is protected !!