ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ನೆರೆ ದೇಶಗಳ ಮೇಲೆ ದಾಳಿ ಮಾಡುವುದಿಲ್ಲ ಎಂದು ಇರಾನ್ ಘೋಷಣೆ
ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಮಹತ್ವದ ಬೆಳವಣಿಗೆಯಲ್ಲಿ ಇರಾನ್ ತನ್ನ ನೆರೆಯ ರಾಷ್ಟ್ರಗಳ ಮೇಲೆ ದಾಳಿ ನಡೆಸುವುದಿಲ್ಲ ಎಂದು ಘೋಷಿಸಿದೆ. ಆದರೆ ನೆರೆಯ ದೇಶಗಳ ಭೂಭಾಗದಿಂದ ತನ್ನ ಮೇಲೆ ದಾಳಿ ನಡೆದರೆ ಮಾತ್ರ ಪ್ರತಿದಾಳಿ ನಡೆಸುವುದಾಗಿ ಇರಾನ್ ಸ್ಪಷ್ಟಪಡಿಸಿದೆ. ಇರಾನ್ ಅಧ್ಯಕ್ಷ ಮಸೂದ್ ಪೆಜೆಸ್ಕಿಯಾನ್ ಮಾತನಾಡಿ, ನೆರೆ ದೇಶಗಳೊಂದಿಗೆ ಸ್ನೇಹಭಾವ ಉಳಿಸಿಕೊಳ್ಳಲು ಬಯಸುತ್ತೇವೆ. ಮುಂದಿನ ದಿನಗಳಲ್ಲಿ ಅವರ ಮೇಲೆ ದಾಳಿ ಮಾಡುವುದಿಲ್ಲ ಎಂದು ತಿಳಿಸಿದರು. ಆದರೆ ಯಾವುದೇ ಪರಿಸ್ಥಿತಿಯಲ್ಲಿಯೂ ಇಸ್ರೇಲ್ ಹಾಗೂ ಅಮೆರಿಕದ ಮುಂದೆ ಶರಣಾಗುವುದಿಲ್ಲ…
