ಹೊಸ ಸರ್ಕಾರದ ಕಾರ್ಯವೈಖರಿ ಮೌಲ್ಯಮಾಪನಕ್ಕೆ ಇನ್ನೂ ಸಮಯ ಬೇಕು: ಸತೀಶ್ ಕುಂಪಲ
ಮಂಗಳೂರು:ರಾಜ್ಯದ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದ ಕಾರ್ಯವೈಖರಿಯನ್ನು ಮೌಲ್ಯಮಾಪನ ಮಾಡಲು ಇನ್ನೂ ಸಮಯವಿದ್ದು, ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆಗಳು ಹಾಗೂ ಭಿನ್ನಾಭಿಪ್ರಾಯಗಳು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿವೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ತಿಳಿಸಿದ್ದಾರೆ . ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು , ಕಳೆದ ಮೂರು ವರ್ಷಗಳ ಆಡಳಿತದಲ್ಲಿ ಹಲವು ಯೋಜನೆಗಳ ಅನುಷ್ಠಾನ ಸಮರ್ಪಕವಾಗಿರಲಿಲ್ಲ ಎಂಬುದನ್ನು ಮುಖ್ಯಮಂತ್ರಿ ಅವರ ಹೇಳಿಕೆಗಳೇ ಸೂಚಿಸುತ್ತವೆ ಎಂದು ಟೀಕಿಸಿದರು. ವಿದ್ಯಾರ್ಥಿಗಳು ಮತ್ತು ಯುವಕರಿಗಾಗಿ…