ಬೀದಿ ವ್ಯಾಪಾರಸ್ಥರ ಹೆಸರಿನಲ್ಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಸರಿಯಲ್ಲ : ಪ್ರಸನ್ನ ರವಿ ಆಗ್ರಹ
ಮಂಗಳೂರು: ಮಂಗಳೂರು ನಗರದ ಪುರಭವನದ ಫುಟ್‌ಪಾತ್‌ನಿಂದ ಸ್ಟೇಟ್ ಬ್ಯಾಂಕ್, ರಾವ್ ಆ್ಯಂಡ್ ರಾವ್ ಸರ್ಕಲ್ ಹಾಗೂ ಲೇಡಿಗೋಷನ್ ಆಸ್ಪತ್ರೆವರೆಗೆ ಶನಿವಾರ ಮತ್ತು ಭಾನುವಾರ ನಡೆಯುತ್ತಿರುವ ಬೀದಿ ವ್ಯಾಪಾರ ಚಟುವಟಿಕೆಗಳ ಕುರಿತು ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು , ಬೀದಿ ವ್ಯಾಪಾರಸ್ಥರ ಜೀವನೋಪಾಯಕ್ಕೆ ತಾವು ವಿರೋಧಿಯಲ್ಲ, ಆದರೆ ಅವರಿಗೆ ಮಹಾನಗರ ಪಾಲಿಕೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು . ಬೀದಿ ಬದಿ ವ್ಯಾಪಾರಸ್ಥರ ಪರ ಹೋರಾಟ…