ಕಾರ್ಕಳ: ಭೀಕರ ರಸ್ತೆ ಅಪಘಾತ- ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ, 9 ಮಂದಿಗೆ ಗಾಯ
ಉಡುಪಿ: ಕಾರ್ಕಳ ತಾಲೂಕಿನ ಮಿಯಾರು ಗ್ರಾಮದ ಕಂಬಳಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದ್ದು, ಮಗು ಸಹಿತ 9 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ತೂಫನ್ ವಾಹನ ಚಾಲಕ ಮಣ್ಣಪ್ಪ, ಚೇತನ್(27), ರೋಹಿತ್(28) ಹಾಗೂ ಮಲ್ಲಮ್ಮ(50) ಎಂದು ಗುರುತಿಸಲಾಗಿದೆ. ಸಂಗೀತ (40), ಕವಿತಾ(38), ಬಸವರಾಜ್(56), ಕಿಶೋರ್(28), ಲಕ್ಷ್ಮೀ(25), ಜ್ಯೋತಿ(25), ಜಯಲಕ್ಷ್ಮೀ(24), ಎರಡು ವರ್ಷದ ಮಗು ಕುಶಲ್ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲ ಗುಲ್ಬರ್ಗ ಜಿಲ್ಲೆಯವರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ…
