ಬಂದ್ಯೋಡ್ ನಲ್ಲಿ ಅಗ್ನಿ ದುರಂತ: ಪೀಠೋಪಕರಣ–ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ
ಬಂದ್ಯೋಡ್ : ಬಂದ್ಯೋಡ್ ನಲ್ಲಿ ಸಿರಿಯಾಲ್ ಖದೀಜಾ ಅವರ ಒಡೆತನದ ಮನೆಯಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬೆಂಕಿಯಿಂದ ಮನೆಯಲ್ಲಿದ್ದ ಪೀಠೋಪಕರಣಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣವಾಗಿ ನಾಶವಾಗಿದ್ದು, ಸುಮಾರು ನಾಲ್ಕು ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ನಯ ಬಜಾರ್‌ನಿಂದ ಆಗಮಿಸಿದ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಪ್ರಾಥಮಿಕ ತನಿಖೆಯ ಪ್ರಕಾರ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆ ವೇಳೆ ಮನೆಯಲ್ಲಿ…
