ಪುತ್ತೂರು : ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ್ಳತನ ಯತ್ನ – ದಂಪತಿ ಬಂಧನ, ಬೈಕ್ ವಶ
ಪುತ್ತೂರು: ಪುತ್ತೂರು ಕಸಬಾದಲ್ಲಿ 84 ವರ್ಷದ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ ಅವರ ಮನೆಗೆ ಮಧ್ಯರಾತ್ರಿ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಆರೋಪದ ಮೇಲೆ ಕಾರ್ತಿಕ್ ರಾವ್ (31) ಹಾಗೂ ಅವರ ಪತ್ನಿ ಕೆ.ಎಸ್. ಸ್ವಾತಿ ರಾವ್ (25) ಅವರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಿರ್ಯಾದಿದಾರ ನಾರಾಯಣ ಅವರ ದೂರಿನಂತೆ, ಡಿಸೆಂಬರ್ 17ರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಹೆಲ್ಮೆಟ್ ಧರಿಸಿ ಮುಖವನ್ನು ಮರೆಮಾಚಿಕೊಂಡಿದ್ದ ಇಬ್ಬರು ಅಪರಿಚಿತರು ಮನೆಯ…
