ಸಚಿವ ಸ್ಥಾನದ ಪೈಪೋಟಿ ಪ್ರಶ್ನೆಯೇ ಇಲ್ಲ: ಯು.ಟಿ. ಖಾದರ್ ಸ್ಪಷ್ಟನೆ
ಮಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಬೆನ್ನಲ್ಲೇ ಸಚಿವ ಸಂಪುಟ ರಚನೆ ಕುರಿತ ರಾಜಕೀಯ ಚರ್ಚೆಗಳು ಜೋರಾಗಿರುವ ನಡುವೆಯೇ, ಸಚಿವ ಸ್ಥಾನದ ಆಕಾಂಕ್ಷೆ ಮತ್ತು ಜಮೀರ್ ಅಹ್ಮದ್ ಖಾನ್ ಅವರದ್ದು ಎನ್ನಲಾದ ವೈರಲ್ ಆಡಿಯೋ ಕುರಿತು ಕೇಳಲಾದ ಪ್ರಶ್ನೆಗಳಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹ್ಮದ್ ಖಾನ್ ಹಾಗೂ ತಮ್ಮ ನಡುವೆ ಯಾವುದೇ ರೀತಿಯ ಪೈಪೋಟಿ ಇಲ್ಲ ಎಂದು ಸ್ಪಷ್ಟಪಡಿಸಿದರು. “ಪೈಪೋಟಿ ಎಂಬ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ…