ಕೆಸಿ ರೋಡಲ್ಲಿ ಎಮ್ ಡಿಎಮ್ಎ ಮಾರಾಟ,ಉಳ್ಳಾಲ ಪೊಲೀಸರ ದಾಳಿ.ಓರ್ವನ ಬಂಧನ,ಇಬ್ಬರು ಆರೋಪಿಗಳು ಪರಾರಿ.11 ಗ್ರಾಂ ಡ್ರಗ್ಸ್ ವಶಕ್ಕೆ.
ಉಳ್ಳಾಲ: ತಲಪಾಡಿ ಗ್ರಾಮದ ಕೆ.ಸಿ ರೋಡ್ ಫಲಾಹ್ ಶಾಲಾ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಎಮ್ ಡಿಎಮ್ಎ ಕ್ರಿಸ್ಟಲ್ ಎಂಬ ಮಾದಕ ವಸ್ತುವನ್ನು ಮಾರಾಟದಲ್ಲಿ ತೊಡಗಿದ್ದ ಕೇರಳದ ಉಪ್ಪಳ, ಮಂಗಲ್ಪಾಡಿ ನಿವಾಸಿ ಶೇಖ್ ಮೊಹಮ್ಮದ್ ಕೈಫ್ (22)ಎಂಬಾತನನ್ನು ಉಳ್ಳಾಲ ಪೊಲೀಸರು ಸೋಮವಾರದಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು ,ಕೃತ್ಯದಲ್ಲಿ ತೊಡಗಿದ್ದ ಮತ್ತಿಬ್ಬರು ಪೆಡ್ಲರ್ ಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಕೈಫ್ ನಿಂದ 55,000/- ರೂಪಾಯಿ ಬೆಲೆ ಬಾಳುವ ನಿಷೇಧಿತ 11 ಗ್ರಾಂ ಎಮ್ ಡಿಎಮ್ಎ…
