ದೇಶಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸಿ ರಾಷ್ಟ್ರೀಯ ಆರ್ಥಿಕತೆಯನ್ನು ಬಲಪಡಿಸಿ : ರವಿ ಮುನಿಸ್ವಾಮಿ
ಪುತ್ತೂರು:`ಸ್ವದೇಶಿ ಬಳಸಿ ದೇಶ ಬೆಳೆಸಿ’ ಎಂಬ ಘೋಷವಾಕ್ಯದಡಿ, ಸಾಫ್ಟ್‌ವೇರ್ ಉತ್ಪನ್ನಗಳಿಂದ ಹಿಡಿದು ನಿತ್ಯೋಪಯೋಗಿ ವಸ್ತುಗಳ ತನಕ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸಿ ರಾಷ್ಟ್ರೀಯ ಆರ್ಥಿಕತೆಯನ್ನು ಬಲಪಡಿಸುವ ಉದ್ದೇಶದಿಂದ ಬೆಂಗಳೂರಿನ ಶ್ರೀ ಪರಿಪೂರ್ಣ ಸನಾತನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾರತೀಯ ಮಾಜಿ ಸೇನಾ ಅಧಿಕಾರಿ ಹಾಗೂ ಕರ್ನಾಟಕ ಸರಕಾರದ ಮಾಜಿ ನಿರ್ದೇಶಕ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸ್ವದೇಶಿ ಜಾಗರಣ ಸೈಕ್ಲಿಂಗ್ ಅಭಿಯಾನ ಪುತ್ತೂರಿಗೆ ಆಗಮಿಸಿತು. ಸುಳ್ಯ ಮಾರ್ಗವಾಗಿ ಪುತ್ತೂರಿಗೆ ಆಗಮಿಸಿದ ಅವರನ್ನು ದರ್ಬೆ ವಿನಾಯಕ…
