Avatar

NAMMA MEDIA 24X7

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಕುರಿತು ಕೀಳಾಗಿ ಮಾತನಾಡಿರುವ ಜತೆಗೆ ಅವಹೇಳನಕಾರಿ ಪದ ಬಳಕೆ ಮಾಡಿರುವ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ಕಾನೂನುಕ್ರಮ ಕ್ರಮಕ್ಕೆ ಆಗ್ರಹಿಸಿ ಹಕ್ಕೋತ್ತಾಯ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಅಧ್ಯಕ್ಷ ಭುವನೇಶ್ ಪಚಿನಡ್ಕ ಇವರ ನೇತೃತ್ವದಲ್ಲಿ ತಾಲೂಕಿನ ವಿವಿಧ ಬಿಲ್ಲವ ಸಂಘಗಳ ಉಪಸ್ಥಿತಿಯಲ್ಲಿ ತಾಲೂಕು ಕಛೇರಿ ಬಂಟ್ವಾಳ ದಲ್ಲಿ ಹರಿಕೃಷ್ಣ ಬಂಟ್ವಾಳ ಖಂಡನಾ ನಿರ್ಣಯ ಹಕ್ಕೋತ್ತಾಯವನ್ನು ಮಂಡಿಸಿ ಬಂಟ್ವಾಳ ತಹಶೀಲ್ದಾರರು ಮಂಜುನಾಥ್ ಇವರಿಗೆ ಮನವಿ ನೀಡಲಾಯಿತು ಹಾಗೂ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧಿಕಾರಿ ಯಶ್ ಕುಮಾರ್ ಶರ್ಮಾ ಇವರಿಗೂ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಬೂಡದ ಅದ್ಯಕ್ಷರು ಬೇಬಿ ಕುಂದರ್, ಸಂಘದ ಮಾಜಿ ಅಧ್ಯಕ್ಷರುಗಳು ರಾಮಪ್ಪ…

Read More

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಮೊದಲ ಹಂತದಲ್ಲಿ ಆರ್ಡಿನರಿ ಬಸ್‌ಗಳಿಗೆ ಮಾತ್ರ ಸೀಮಿತ?100 ದಿನಗಳ ಪ್ರಾಯೋಗಿಕ ಜಾರಿ ಕುರಿತು ಸರ್ಕಾರ ಚಿಂತನೆ

ತಿರುವನಂತಪುರ: ರಾಜ್ಯದಲ್ಲಿ ಮಹಿಳೆಯರಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಯೋಜನೆಯನ್ನು ಮೊದಲ ಹಂತದಲ್ಲಿ ಸಾಮಾನ್ಯ (ಆರ್ಡಿನರಿ) ಬಸ್‌ಗಳಿಗೆ ಮಾತ್ರ ಸೀಮಿತಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ತಾಂತ್ರಿಕ ಹಾಗೂ ಆರ್ಥಿಕ ಅಂಶಗಳ ಕುರಿತು ಸಾರಿಗೆ ಸಚಿವರು ಮುಖ್ಯಮಂತ್ರಿ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದು, ಆರಂಭಿಕ ಹಂತದಲ್ಲಿ ಆರ್ಡಿನರಿ ಬಸ್‌ಗಳಲ್ಲಿ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಕುರಿತು ಒಮ್ಮತ ವ್ಯಕ್ತವಾಗಿದೆ. ಈ ವ್ಯವಸ್ಥೆಯನ್ನು 100 ದಿನಗಳ ಕಾಲ ಜಾರಿಗೆ ತಂದು, ಅದರ ಕಾರ್ಯಸಾಧ್ಯತೆ, ಪ್ರಯಾಣಿಕರ…

Read More

ವಿಜಯಪುರದ ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ; ತನಿಖೆ ಆರಂಭ

ವಿಜಯಪುರದ ಪಾನ್ ಶಾಪ್ ನಲ್ಲಿ ನಿಗೂಢ ಸ್ಪೋಟ ಸಂಭವಿಸಿದೆ.ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ.ರವಿಕಿರಣ ಎಂಬುವವರಿಗೆ ಸೇರಿದ ಶೆಡ್ ಮಾದರಿಯ ಪಾನ್ ಶಾಪ್ ಇದಾಗಿದೆ.ಪಾನ್ ಶಾಪ್ ಒಳಗಿದ್ದ ಪ್ರಿಡ್ಜ್ ಗೆ ಯಾವುದೇ ಹಾನಿಯಾಗಿಲ್ಲ.ಹೊರಗಡೆಯಿಂದ ಸ್ಪೋಟವಾಗಿರಬಹುದಾದ ಶಂಕೆಯ ಹಿನ್ನೆಲೆಯಲ್ಲಿಸ್ಥಳಕ್ಕೆ ಬಬಲೇಶ್ವರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ, ಸೊಕೋ ತಂಡ ಶ್ವಾನದಳದಿಂದ ಸ್ಥಳ ಪರೀಕ್ಷೆ ನಡೆದಿದೆ.ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ.ತನಿಖೆಯ ಬಳಿಕವೇ ಸ್ಪೋಟಕ್ಕೆ ನಿಖರ ಕಾರಣ ತಿಳಿದು ಬರಲಿದೆ.

Read More

ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

ಮಂಗಳೂರು, ಜೂ. 8: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಿಸಿರುವ ಕ್ರಮವನ್ನು ಖಂಡಿಸಿ ಸಿಪಿಐ(ಎಂ) ಮಂಗಳೂರು ನಗರ ಸಮಿತಿ ವತಿಯಿಂದ ಸೋಮವಾರ ಲಾಲ್‌ಬಾಗ್‌ನಲ್ಲಿರುವ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ಮುಖಂಡ ಇಮ್ತಿಯಾಜ್, ಮನೆ ಬಾಡಿಗೆದಾರರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಕೆಲ ಮನೆ ಮಾಲೀಕರು ಯಾವುದೇ ಮುನ್ನೋಟಿಸ್ ನೀಡದೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಡಿತಗೊಳಿಸುವುದು, ಮನೆ ಖಾಲಿ ಮಾಡುವಂತೆ ಒತ್ತಡ…

Read More

ಪುತ್ತೂರಿನಲ್ಲಿ ಭಕ್ತಿಭಾವದಿಂದ ಸಾಮೂಹಿಕ ಸರಸ್ವತೀ ವಂದನೆ; 175 ವಿದ್ಯಾರ್ಥಿಗಳಿಂದ ವಿದ್ಯಾ ಸಂಕಲ್ಪ

ಪುತ್ತೂರು, ಜೂನ್ 7: ​ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ) ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಇವರ ಜಂಟಿ ಆಯೋಜಕತ್ವದಲ್ಲಿ,ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಸಹಯೋಗದೊಂದಿಗೆ ಈ ವಿಶಿಷ್ಟ “ಸಾಮೂಹಿಕ ಸರಸ್ವತೀ ವಂದನೆ” ಮತ್ತು “ವಿದ್ಯಾ ಸಂಕಲ್ಪ” ಕಾರ್ಯಕ್ರಮವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಅತ್ಯಂತ ಭಕ್ತಿಭಾವದಿಂದ ಜರುಗಿತು. ಬೆಳಗ್ಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀ ಈಶ್ವರ ಭಟ್ ಪಂಜಿಗುಡ್ಡೆ ಸಹಿತವಾಗಿ…

Read More

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಾಮೆಂಟ್; ವ್ಯಕ್ತಿ ಬಂಧನಜಾತಿನಿಂದನೆ, ಜೀವ ಬೆದರಿಕೆ ಆರೋಪದಡಿ ಕಾರ್ಕಳ ಪೊಲೀಸರ ಕ್ರಮ

ಉಡುಪಿ, ಜೂ. 8: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹಾಗೂ ಜಾತಿನಿಂದನಾತ್ಮಕ ಕಾಮೆಂಟ್ ಮಾಡಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಕಾರ್ಕಳ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ (48) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ‘ನಮ್ಮ ಕಾರ್ಲ’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಪ್ರಕಟಗೊಂಡಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತ ಪೋಸ್ಟ್‌ಗೆ ಸುಧೀರ ಬಂಗೇರ ಅವಹೇಳನಕಾರಿ, ಜಾತಿನಿಂದನಾತ್ಮಕ…

Read More

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಇಲ್ಲ: ಬಿಜೆಪಿ ಅಚ್ಚರಿಯ ನಿರ್ಧಾರ

ಬೆಂಗಳೂರು, ಜೂ. 8: ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಮರು ಅವಕಾಶ ನೀಡದೆ ಪ್ರೊ. ಎಂ. ನಾಗರಾಜ್ ಅವರನ್ನು ಕರ್ನಾಟಕದಿಂದ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಹಿಂದುಳಿದ ವರ್ಗದ (ಒಬಿಸಿ) ನಾಯಕ ಪ್ರೊ. ಎಂ. ನಾಗರಾಜ್ ಅವರ ಹೆಸರನ್ನು ಅಂತಿಮಗೊಳಿಸಿದೆ. ಜೊತೆಗೆ ವಿಧಾನ ಪರಿಷತ್ ಚುನಾವಣೆಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಲಾಗಿದೆ. ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಎಚ್.ಡಿ….

Read More

ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ: ನಾಲ್ವರು ಸಾವುಸುನಾಮಿ ಎಚ್ಚರಿಕೆ; ಹಲವು ಕಟ್ಟಡಗಳು ಕುಸಿತ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಮನಿಲಾ, ಜೂ. 8: ಫಿಲಿಪೈನ್ಸ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ಸಂಭವಿಸಿದ ಪ್ರಬಲ 7.8 ತೀವ್ರತೆಯ ಭೂಕಂಪದಿಂದ ಕನಿಷ್ಠ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಭೂಕಂಪದ ತೀವ್ರತೆಗೆ ಅನೇಕ ಕಟ್ಟಡಗಳು ಕುಸಿದು ಬಿದ್ದಿದ್ದು, ವ್ಯಾಪಕ ಹಾನಿ ಸಂಭವಿಸಿದೆ. ಭೂಕಂಪದ ಬೆನ್ನಲ್ಲೇ ಫಿಲಿಪೈನ್ಸ್ ಸೇರಿದಂತೆ ಇಂಡೋನೇಷ್ಯಾ, ತೈವಾನ್, ಪಲಾವ್, ಪಪುವಾ ನ್ಯೂಗಿನಿಯಾ ಹಾಗೂ ಜಪಾನ್ ದೇಶಗಳಲ್ಲಿ ಸುನಾಮಿ ಎಚ್ಚರಿಕೆ ಘೋಷಿಸಲಾಗಿದೆ. ಕರಾವಳಿ ಪ್ರದೇಶದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷಾ…

Read More

ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ನನ್ನ ಮೊದಲ ಆದ್ಯತೆ: ಆರೋಗ್ಯ ಸಚಿವ ಯು.ಟಿ. ಖಾದರ್ಆಸ್ಪತ್ರೆಗಳ ಲೋಪದೋಷ ಸರಿಪಡಿಸಲು ಕ್ರಮ;

ಮಂಗಳೂರು, ಜೂನ್ 8: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವುದು ತನ್ನ ಮೊದಲ ಆದ್ಯತೆಯಾಗಿದ್ದು, ಆಸ್ಪತ್ರೆಗಳಲ್ಲಿರುವ ಲೋಪದೋಷಗಳನ್ನು ಗುರುತಿಸಿ ಸರಿಪಡಿಸಲು ವಿಶೇಷ ಗಮನ ಹರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ರಾಜ್ಯದ ನೂತನ ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಅವರು, ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಹಿಂದಿನ ಆರೋಗ್ಯ ಸಚಿವರು ಆರಂಭಿಸಿರುವ ಯೋಜನೆಗಳನ್ನು…

Read More

ಜೂನ್ 11ರಂದು ಬೆಳ್ಳಿ ತೆರೆ ಮೇಲೆ ಅಪ್ಪಳಿಸಲಿದೆ “ಕಜ್ಜ” ತುಳು ಸಿನಿಮಾ ….. !

ಮಂಗಳೂರು, ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಬಹುನಿರೀಕ್ಷಿತ ತುಳು ಚಲನಚಿತ್ರ “ಕಜ್ಜ” ಜೂನ್ 11ರಂದು ಕರಾವಳಿ ಜಿಲ್ಲೆಗಳಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಾಹಿತ್ಯ ರಚನೆಕಾರ ಮೋಹನ್ ರಾಜ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಷ್ಣು ಎಸ್. ಮೆನನ್ ಹಾಗೂ ಸಿದ್ದಾರ್ಥ್ ಶೆಟ್ಟಿ ಅವರ ನಿರ್ದೇಶನದಲ್ಲಿ, ವಿಶಾಂತ್ ಮಿನೆಜಿಸ್ ನಿರ್ಮಾಣ ಹಾಗೂ ಪ್ರವೀಣ್ ಸುವರ್ಣ ಅವರ ಸಹ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬಂದಿದೆ ಎಂದು ತಿಳಿಸಿದರು. ಚಿತ್ರವು ಮಂಗಳೂರು, ಸುರತ್ಕಲ್,…

Read More
error: Content is protected !!