ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 30 ದಿನಗಳ ಎಲ್‌ಪಿಜಿ ಸಂಗ್ರಹಕ್ಕೆ ಕೇಂದ್ರ ಸೂಚನೆ
ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಪರಿಣಾಮ ಆಯಕಟ್ಟಿನ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿ (Strait of Hormuz) ಬಂದ್ ಆಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕನಿಷ್ಠ 30 ದಿನಗಳ ಬೇಡಿಕೆಗೆ ಸಾಕಾಗುವಷ್ಟು ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಂಗ್ರಹ ಸಾಮರ್ಥ್ಯ ಹೊಂದುವಂತೆ ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಸೂಚನೆ ನೀಡಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್…