Avatar

NAMMA MEDIA 24X7

ಇತಿಹಾಸ ಪ್ರಸಿದ್ಧ ಸಂತಡ್ಕ ಮಾಡದಲ್ಲಿ ಜೂನ್ 6–7 ರಂದು ಭವ್ಯ ‘ರುದ್ರಯಾಗ’ ಹಾಗೂ ‘ಗಿರಿಜಾ ಕಲ್ಯಾಣೋತ್ಸವ

ಸಂತಡ್ಕ: ಇತಿಹಾಸ ಪ್ರಸಿದ್ಧ ಸಂತಡ್ಕ ಮಾಡದ ಶ್ರೀ ಅರಸು ಸಂಕಲ ದೈವ ಕ್ಷೇತ್ರದಲ್ಲಿ ಲೋಕಕಲ್ಯಾಣ ಹಾಗೂ ಭಕ್ತರ ಅಭಿಷ್ಟಾರ್ಥ ಸಿದ್ಧಿಗಾಗಿ ಶ್ರೀ ರುದ್ರಯಾಗ, ಗಿರಿಜಾ ಕಲ್ಯಾಣೋತ್ಸವ ಹಾಗೂ ನೂತನ ಭೋಜನ ಶಾಲೆಯ ಉದ್ಘಾಟನಾ ಸಮಾರಂಭವು ಜೂನ್ 6 ಮತ್ತು 7 ರಂದು ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ. ಜೂನ್ 6ರಂದು ಭವ್ಯ ಶೋಭಾಯಾತ್ರೆ ಜೂನ್ 6ರ ಶನಿವಾರ ಸಂಜೆ 4 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಚಿಗುರುಪಾದೆಯಿಂದ ರುದ್ರಯಾಗ ಮತ್ತು ಗಿರಿಜಾ ಕಲ್ಯಾಣೋತ್ಸವದಲ್ಲಿ…

Read More

ಮಂಜೇಶ್ವರದಲ್ಲಿ ಯುವಕನ ನಿಗೂಢ ಸಾವು: ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ

ಮಂಜೇಶ್ವರ ವ್ಯಾಪ್ತಿಯ ಪೈವಳಿಕೆ ಬಾಯಾರುಪದವಿನ ನಿವಾಸಿ ಮೊಹಮ್ಮದ್ ಆಸಿಫ್ (29) ಅವರ ನಿಗೂಢ ಸಾವು ಪ್ರಕರಣ ಇದೀಗ ಹೈಕೋರ್ಟ್ ಗಮನ ಸೆಳೆದಿದೆ. 2025ರ ಜನವರಿ 15ರಂದು ಫೋನ್ ಕರೆ ಸ್ವೀಕರಿಸಿ ಮನೆಯಿಂದ ಹೊರಬಂದಿದ್ದ ಆಸಿಫ್, ಕೆಲವೇ ಗಂಟೆಗಳ ಬಳಿಕ ಗಂಭೀರ ಗಾಯಗಳೊಂದಿಗೆ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ಪ್ರಕರಣವನ್ನು ಪೊಲೀಸರು ಆರಂಭದಲ್ಲಿ ಅಸಹಜ ಸಾವು ಎಂದು ದಾಖಲಿಸಿಕೊಂಡಿದ್ದರು. ಆದರೆ, ಘಟನೆ ನಡೆದ ಸ್ಥಳದ ಸಮೀಪ ಲಾರಿ ಹಾಗೂ ಅದರ…

Read More

ಎಂಡಿಎಂಎ ಹಾಗೂ ಅರ್ಧಲಕ್ಷದಷ್ಟು ಹಣದೊಂದಿಗೆ ಯುವಕ ಸೆರೆ

ಮಂಜೇಶ್ವರ : ಮಾದಕ ವಸ್ತುಗಳ ವಿರುದ್ಧ ಕಠಿಣ ಸಮರ ಸಾರಿರುವ ಮಂಜೇಶ್ವರ ಪೊಲೀಸರು, ಮತ್ತೊಂದು ಕಾರ್ಯಾಚರಣೆಯಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ರಸ್ತೆಯ ಬಿಸ್ಮಿಲ್ಲಾ ಮಂಜಿಲ್ ನಿವಾಸಿ ಮೊಹಮ್ಮದ್ ಸಮೀರ್ ಪಿ.ಎ (30) ಬಂಧಿತ ಆರೋಪಿ. ​ಖಚಿತ ಮಾಹಿತಿ ಮೇರೆಗೆ ಬಪ್ಪಾಯಿತೊಟ್ಟಿಯಲ್ಲಿ ನಡೆಸಿದ ದಾಳಿಯ ವೇಳೆ, ಈತನಿಂದ 5.080 ಗ್ರಾಂ ಎಂಡಿಎಂಎ ಹಾಗೂ ಮಾರಾಟದ ಹಣ 55,860 ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಜೇಶ್ವರ ಪೋಲೀಸರ ತಂಡ ಈ ಕಾರ್ಯಾಚರಣೆಯನ್ನು ನಡೆಸಿದೆ. ಆರೋಪಿಯ…

Read More

ಪಿಣರಾಯಿ ವಿಜಯನ್ ವಿರುದ್ಧದ ‘ರಾಜಕೀಯ ಬೇಟೆ’ ಖಂಡಿಸಿ ಹೊಸಂಗಡಿಯಲ್ಲಿ ಸಿಪಿಐಎಂ ಪ್ರತಿಭಟನೆ

ಹೊಸಂಗಡಿ: ಕೇರಳದ ವಿರೋಧ ಪಕ್ಷ ನಾಯಕರು ಹಾಗೂ ಸಿಪಿಐಎಂ ಪೊಲಿಟ್ ಬ್ಯೂರೋ ಸದಸ್ಯರಾದ Pinarayi Vijayan ಅವರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ED ಅನ್ನು ಬಳಸಿಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ರಾಜಕೀಯ ಬೇಟೆ ನಡೆಸುತ್ತಿವೆ ಎಂದು ಆರೋಪಿಸಿ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ನೇತೃತ್ವದಲ್ಲಿ ಹೊಸಂಗಡಿ ಟೌನ್‌ನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ನಾಯಕರು, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗದ ಮೂಲಕ ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದರು. ಪ್ರಜಾಪ್ರಭುತ್ವದ…

Read More

ಕೋಸ್ಟಲ್ ಫಿಲ್ಮ್ ಅವಾಡ್ಸ್೯ ಅಕ್ಷರ್ ಜೆ ಶೆಟ್ಟಿಗೆ ಬಾಲ ನಟ ಪ್ರಶಸ್ತಿ

ಮುಲ್ಕಿ ಸುಂದರ್ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್ ನಲ್ಲಿ ಸ್ಯಾಂಡಿಸ್ ಕಂಪನಿಯ ಆಶ್ರಯದಲ್ಲಿ ನಡೆದ ಕೋಸ್ಟಲ್ ಫಿಲಂ ಅವಾಡ್ಸ್೯ ನಲ್ಲಿ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ “ಜೈ” ತುಳು ಸಿನಿಮಾದಲ್ಲಿ ಅಕ್ಷರ್ ಜೆ ಶೆಟ್ಟಿಯ ಅಭಿನಯಕ್ಕಾಗಿ ಬಾಲನಟ ಪ್ರಶಸ್ತಿ ಲಭಿಸಿದೆ.ಅಕ್ಷರ್ ಜೆ ಶೆಟ್ಟಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಮತ್ತು ಚಿತ್ರಾ ಜೆ ಶೆಟ್ಟಿ ದಂಪತಿಯ ಪುತ್ರ. ಅಕ್ಷರ್ ಜೆ ಶೆಟ್ಟಿ ಈ ಹಿಂದೆ ಜಯಕಿರಣ ಫಿಲಂಸ್ ಲಾಂಛನದಲ್ಲಿ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ವಿರೇಂದ್ರ…

Read More

ಬಾಳಿಯೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಅವಧಿ ವಿಸ್ತರಣೆ

ಬಾಳಿಯೂರು: ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಳಿಯೂರಿನಲ್ಲಿ ನಡೆಯುತ್ತಿರುವ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಶಿಬಿರದ ಅವಧಿಯನ್ನು ವಿಸ್ತರಿಸಲಾಗಿದೆ. ಶಿಬಿರದ ಫಲಾನುಭವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಹುಜನರ ಅಪೇಕ್ಷೆಯ ಮೇರೆಗೆ ಇನ್ನಷ್ಟು ಜನರಿಗೆ ಇದರ ಪ್ರಯೋಜನ ದೊರಕಲೆಂದು ಶಿಬಿರವನ್ನು ಮೇ 27, 2026ರ ಬುಧವಾರದವರೆಗೆ ಮುಂದುವರಿಸಲು ವ್ಯವಸ್ಥಾಪಕರು ತೀರ್ಮಾನಿಸಿದ್ದಾರೆ. ಆರೋಗ್ಯ ಸಂಬಂಧಿತ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಥೆರಪಿ ಸಹಕಾರಿಯಾಗುತ್ತಿದೆ ಎಂದು ಶಿಬಿರದಲ್ಲಿ ಭಾಗವಹಿಸಿದವರು ಅಭಿಪ್ರಾಯಪಟ್ಟಿದ್ದಾರೆ….

Read More

SIR ನಡೆಸಲು ಚುನಾವಣಾ ಆಯೋಗಕ್ಕೆ ಸಂಪೂರ್ಣ ಅಧಿಕಾರ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಸುವ ಸಂಬಂಧ ಚುನಾವಣಾ ಆಯೋಗಕ್ಕೆ ಸಂಪೂರ್ಣ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ತೀರ್ಪು ದೇಶದ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಮತದಾರರ ಪಟ್ಟಿಯ ಶುದ್ಧೀಕರಣಕ್ಕೆ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿಯ ಪರಿಶೀಲನೆ ಮತ್ತು ಪರಿಷ್ಕರಣೆ ನಡೆಸುವುದು ಸಂವಿಧಾನಬದ್ಧ ಅಧಿಕಾರದ ವ್ಯಾಪ್ತಿಗೆ ಬರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಮತದಾರರ ಪಟ್ಟಿಯಲ್ಲಿ ನಿಖರತೆ ಕಾಪಾಡಲು ಹಾಗೂ ನಕಲಿ ಅಥವಾ ಅನರ್ಹ ಹೆಸರುಗಳನ್ನು…

Read More

ಪುತ್ತೂರಿನಲ್ಲಿ ಪಂಚ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ

ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಉಮಾನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಕುರಿತು ಮಾರ್ಗಸೂಚಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ…

Read More

ಮಂಗಳೂರಿನಲ್ಲಿ ಮೇ 30ರಂದು “ಸುಹಾನಾ ಸಫರ್ ಮತ್ತು ಬಿನಾಕಾ ಗೀತಮಾಲಾ” ಸಂಗೀತ ವೈಭವ

ಮಂಗಳೂರು: ಲಯನ್ಸ್ ಪ್ರಕೋಷ್ಟ ಹಾಗೂ ಲಯನ್ಸ್ ಜಿಲ್ಲೆ 317D ಸಹಯೋಗದಲ್ಲಿ , ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ “ಸುಹಾನಾ ಸಫರ್ ಅಂಡ್ ಬಿನಾಕಾ ಗೀತಮಾಲಾ” ಎಂಬ ಪ್ರತಿಷ್ಠಿತ ಸಂಗೀತ ಕಾರ್ಯಕ್ರಮವು ಮೇ 30 ರ ಶನಿವಾರ ನಗರದ ಸುಜೀರ್ ಸಿ.ವಿ. ನಾಯಕ್ ಹಾಲ್‌ನಲ್ಲಿ ನಡೆಯಲಿದೆ ಎಂದು ಲಯನ್ಸ್ ಪ್ರಕೋಷ್ಟದ ಜಿಲ್ಲಾಧ್ಯಕ್ಷ ಲ/ ಕುಂಬ್ಳೆ ನರಸಿಂಹ ಪ್ರಭು ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 5 ಗಂಟೆಯಿಂದ 5.45ರವರೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಳಿಕ…

Read More

​ಬಂಗ್ರ ಮಂಜೇಶ್ವರ: ಶಿಥಿಲಗೊಂಡ ಸೇತುವೆ; ಮಹಾ ದುರಂತಕ್ಕೆ ಕಾಯುತ್ತಿದೆಯೇ ಆಡಳಿತ ವ್ಯವಸ್ಥೆ?

​ಮಂಜೇಶ್ವರ: ಸುಮಾರು 70 ವರ್ಷಗಳ ಇತಿಹಾಸವಿರುವ ಬಂಗ್ರ ಮಂಜೇಶ್ವರದ ಸೇತುವೆ ಇದೀಗ ತೀವ್ರ ಶಿಥಿಲಾವಸ್ಥೆಯಲ್ಲಿದ್ದು, ಯಾವುದೇ ಕ್ಷಣದಲ್ಲಿ ಕುಸಿದು ಬೀಳುವ ಭೀತಿಯಲ್ಲಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ. ಸೇತುವೆಯ ಅಡಿಭಾಗದ ಕಂಬಗಳು ತುಕ್ಕು ಹಿಡಿದು ಬಿರುಕು ಬಿಟ್ಟಿದ್ದು, ಸಂಬಂಧಪಟ್ಟ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.​ಈ ಸೇತುವೆಯು ದಶಕಗಳ ಹಿಂದೆಯೇ ನಿರ್ಮಾಣವಾಗಿದ್ದು, ಕಾಲದ ಹೊಡೆತಕ್ಕೆ ಸಿಲುಕಿ ಸಂಪೂರ್ಣ ದುರ್ಬಲಗೊಂಡಿದೆ ಎನ್ನಲಾಗುತ್ತಿದೆ. ಸೇತುವೆಯ ಮೇಲಿಂದ ಘನ ವಾಹನಗಳು ಸಂಚರಿಸುವಾಗ ಅದು ಅಲುಗಾಡುತ್ತಿದ್ದು, ಪ್ರಯಾಣಿಕರಲ್ಲಿ ಭಯದ ವಾತಾವರಣ…

Read More
error: Content is protected !!