Avatar

NAMMA MEDIA 24X7

ಅಂಬೇಡ್ಕರ್ ನಗರ ಕುಬಣೂರಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಅಂಬೇಡ್ಕರ್ ನಗರ ಕುಬಣೂರಿನ ಡಾ. ಬಿ.ಆರ್. ಅಂಬೇಡ್ಕರ್ ಕಲಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕೋಪಕರಣ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಅಂಗನವಾಡಿಯಿಂದ ಎಸ್‌ಎಸ್‌ಎಲ್‌ಸಿ ವರೆಗಿನ ಸುಮಾರು 60 ವಿದ್ಯಾರ್ಥಿಗಳಿಗೆ ಪುಸ್ತಕಗಳು ಮತ್ತು ಅಗತ್ಯ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮಕ್ಕೆ ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸಾಕ್ಷಿ ಶೆಟ್ಟಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಗ್ರಾಮ ವಿಕಸನ ಕಲಾ ವೇದಿಕೆ ಮಂಗಲ್ಪಾಡಿ ಅಧ್ಯಕ್ಷ ಶ್ರೀ ಕಿಶೋರ್ ಕುಮಾರ್ ಮಂಗಲ್ಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ…

Read More

600 ಬಿಲಿಯನ್ ಡಾಲರ್‌ಗಿಂತ ಹೆಚ್ಚಿನ ಸೆಮಿಕಂಡಕ್ಟರ್ ಉದ್ಯಮಕ್ಕೆ ಹೊಸ ದಾರಿ: ಸಹ್ಯಾದ್ರಿ ಇಸಿಇ ವಿಭಾಗ ಹಾಗೂ ಅನ್ಮಯ ಟೆಕ್ನಾಲಜೀಸ್ ಸಹಭಾಗಿತ್ವ

ಮಂಗಳೂರು: ನಗರದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಮ್ಯಾನೇಜ್‌ಮೆಂಟ್‌ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಎಂಜಿನಿಯರಿಂಗ್ (ಇಸಿಇ) ವಿಭಾಗವು ಸೆಮಿಕಂಡಕ್ಟರ್ ಆಧಾರಿತ ತಾಂತ್ರಿಕ ಶಿಕ್ಷಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಅನ್ಮಯ ಟೆಕ್ನಾಲಜೀಸ್ ಸಂಸ್ಥೆಯೊಂದಿಗೆ ತಂತ್ರಜ್ಞಾನ ಸಹಭಾಗಿತ್ವದ ಒಪ್ಪಂದಕ್ಕೆ ಐತಿಹಾಸಿಕ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದೆ. ಎಫ್‌ಪಿಜಿಎ ನೆಟಿವ್ ಹಾಗೂ ಎಂಬೆಡೆಡ್ ಹಾರ್ಡ್‌ವೇರ್ ಪರಿಹಾರಗಳಲ್ಲಿ ಪರಿಣತಿ ಹೊಂದಿರುವ ಅನ್ಮಯ ಟೆಕ್ನಾಲಜೀಸ್ ಜೊತೆಗಿನ ಈ ಒಪ್ಪಂದಕ್ಕೆ ಮೇ 21ರಂದು ಕಾಲೇಜು ಆವರಣದಲ್ಲಿ ಅಧಿಕೃತವಾಗಿ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ಸಹ್ಯಾದ್ರಿ…

Read More

ಕೇರಳದ ನೂತನ ಗೃಹಮಂತ್ರಿ ರಮೇಶ್ ಚೆನ್ನಿತ್ತಲವರನ್ನು ಭೇಟಿ ಮಾಡಿ ಅಭಿನಂದಿಸಿದ ಹರೀಶ್ ಕುಮಾರ್

ಮಂಗಳೂರು/ತಿರುವನಂತಪುರ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಯುಡಿಎಫ್ ಸರ್ಕಾರದ ಗೃಹಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರಮೇಶ್ ಚೆನ್ನಿತ್ತಲ ಅವರನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷ ಹರೀಶ್ ಕುಮಾರ್ ಆತ್ಮೀಯವಾಗಿ ಭೇಟಿ ಮಾಡಿ ಅಭಿನಂದಿಸಿದರು. ವಿದ್ಯಾರ್ಥಿ ರಾಜಕೀಯ ದಿನಗಳಲ್ಲಿ ಆರಂಭವಾದ ಸ್ನೇಹ ಇಂದು ಸಹ ಅದೇ ಆತ್ಮೀಯತೆಯೊಂದಿಗೆ ಮುಂದುವರಿದಿರುವುದು ವಿಶೇಷವಾಗಿತ್ತು. ರಾಜೀವ್ ಗಾಂಧಿಯವರ ಯುವ ನಾಯಕತ್ವ ಬೆಳೆಸುವ ಕನಸಿನ ಭಾಗವಾಗಿ, ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಚತುರ ಸಂಘಟಕರಾಗಿ ಗುರುತಿಸಿಕೊಂಡಿದ್ದ ರಮೇಶ್ ಚೆನ್ನಿತ್ತಲ ಅವರನ್ನು ಅಖಿಲ ಭಾರತೀಯ…

Read More

ಬೆಂಗಳೂರಿನಲ್ಲಿ ಎಬೋಲಾ ಆತಂಕ: ಉಗಾಂಡಾದ ಮಹಿಳೆ ಐಸೋಲೇಷನ್‌ಗೆ ದಾಖಲು

ಬೆಂಗಳೂರು: ‘ಎಬೋಲಾ’ ಮಹಾಮಾರಿ ಬೆಂಗಳೂರಿಗೂ ಕಾಲಿಟ್ಟಿದೆಯೇ ಎಂಬ ಆತಂಕ ರಾಜ್ಯದಲ್ಲಿ ಹೆಚ್ಚಾಗಿದೆ. ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿಗೆ ಹೋಲುವ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತುರ್ತು ಕ್ರಮ ಕೈಗೊಂಡು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿ ದಾಖಲಿಸಿ ಕಟ್ಟುನಿಟ್ಟಿನ ವೈದ್ಯಕೀಯ ನಿಗಾದಲ್ಲಿ ಇರಿಸಿದೆ. ಮಹಿಳೆಯನ್ನು ಉಗಾಂಡಾದ ರಾಜಧಾನಿ ಕಂಪಾಲ ನಿವಾಸಿ ನಗಿರೆ ಲತೀಫಾ ಎಂದು ಗುರುತಿಸಲಾಗಿದೆ. ಅವರು ಮೇ 23ರಂದು ಬೆಂಗಳೂರಿಗೆ ಆಗಮಿಸಿ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು ಎನ್ನಲಾಗಿದೆ.ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆ, ಅಧಿಕಾರಿಗಳು ಅವರನ್ನು ಆಂಬ್ಯುಲೆನ್ಸ್…

Read More

ದಕ್ಷಿಣ ಕನ್ನಡ ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ … !

ಮಂಗಳೂರು : ಭಾರತದ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು ಮೇ 30 ಹಾಗೂ 31ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿ ಇರಲಿದ್ದಾರೆ . ಅಧಿಕೃತ ಕಾರ್ಯಕ್ರಮದ ಪ್ರಕಾರ, ಮೇ 30ರಂದು ಸಂಜೆ 4:25ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಉಪರಾಷ್ಟ್ರಪತಿಗಳು, ಬಳಿಕ ಸಂಜೆ 5:05ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್ ತಲುಪಲಿದ್ದಾರೆ. ನಂತರ ಅವರು ಧರ್ಮಸ್ಥಳ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮೇ 31ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಧರ್ಮಸ್ಥಳ ದೇವಾಲಯಕ್ಕೆ ಭೇಟಿ…

Read More

ಕೈ ನಾಯಕತ್ವ ಬದಲಾವಣೆಗೆ ಮುಹೂರ್ತ ಫಿಕ್ಸ್: ನಾಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ?

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಚರ್ಚೆಯಾಗುತ್ತಿದ್ದ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಹಾಗೂ ನಾಯಕತ್ವ ಹಸ್ತಾಂತರದ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕಮಾಂಡ್ ಮಟ್ಟದಲ್ಲಿ ನಡೆದ ಮಹತ್ವದ ಮಾತುಕತೆಯ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನ ತ್ಯಾಗ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ರಾಷ್ಟ್ರ ರಾಜಧಾನಿ ದೆಹಲಿಯ ಎಐಸಿಸಿ (AICC) ಕಚೇರಿಯಲ್ಲಿ ನಡೆದ ಸತತ 7 ಗಂಟೆಗಳ ಮ್ಯಾರಥಾನ್ ಸಭೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…

Read More

ಕೆಲಸಕ್ಕೆ ಸೇರುವ ಮುನ್ನವೇ ಯುವಕನ ಜೀವ ಬಲಿ: ಹಿಟ್ ಆ್ಯಂಡ್ ರನ್‌ಗೆ ಬಲಿಯಾದ ಅಭಿಜಿತ್

ಬಂಟ್ವಾಳ,ಉದ್ಯೋಗ ಸಿಕ್ಕ ಸಂತೋಷದಲ್ಲಿದ್ದ ಯುವಕನೊಬ್ಬ ಕೆಲಸಕ್ಕೆ ಸೇರುವ ಮುನ್ನವೇ ಅಪರಿಚಿತ ವಾಹನದ ಡಿಕ್ಕಿಗೆ ಬಲಿಯಾದ ಹೃದಯವಿದ್ರಾವಕ ಘಟನೆ ಫರಂಗಿಪೇಟೆ ಸಮೀಪದ ಕಡೆಗೋಳಿಯಲ್ಲಿ ಇಂದು ಮುಂಜಾನೆ ನಡೆದಿದೆ. ಬಜಪೆ ಕೈಕಂಬ ನಿವಾಸಿ ಅಭಿಜಿತ್ (28) ಮೃತ ಯುವಕ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಹಸವಾರ ಸಂದೀಪ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿಯ ಪ್ರಕಾರ, ಅಭಿಜಿತ್ ಅವರು ತಮ್ಮ ಸ್ನೇಹಿತ ಸಂದೀಪ್ ಅವರನ್ನು ಬಂಟ್ವಾಳದ ಅಮ್ಟಾಡಿಯ ಮನೆಗೆ ಬೈಕ್‌ನಲ್ಲಿ ಬಿಟ್ಟು ಬರಲು ತೆರಳಿದ್ದರು. ಮುಂಜಾನೆ ಸುಮಾರು 3 ಗಂಟೆ…

Read More

AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ – ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್

“AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವದ ಕುರಿತಾಗಿದೆ”ತಂತ್ರಜ್ಞಾನವು ಸಾರ್ವಜನಿಕ ಸೇವೆ ವಿತರಣೆ, ಆಡಳಿತಾತ್ಮಕ ಪ್ರತಿಕ್ರಿಯೆ ಮತ್ತು ಒಳಗೊಳ್ಳುವಿಕೆಯನ್ನು ಸುಧಾರಿಸುವ ಮೂಲಕ ಕರ್ನಾಟಕವನ್ನು AI ತಂತ್ರಜ್ಞಾನದ ಹಬ್ ಮಾತ್ರವಲ್ಲದೆ, ‘AI-ಸಕ್ರಿಯ ಆಡಳಿತ ರಾಜ್ಯ’ವನ್ನಾಗಿ ಮಾಡುವುದು ಸರ್ಕಾರದ ದೂರದೃಷ್ಟಿಯಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದರು. ಕರ್ನಾಟಕ ಸರ್ಕಾರದ ಇ-ಆಡಳಿತ ಕೇಂದ್ರದಿಂದ ವತಿಯಿಂದ ದಿ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾದ “AI…

Read More

ದೇರಳಕಟ್ಟೆ ಆಸ್ಪತ್ರೆಯ ಜಂಕ್ಷನ್ ನಲ್ಲಿ ಕೊಳಚೆ ನೀರು ಶೇಖರಣೆ – ವಿಪರೀತ ದುರ್ವಾಸನೆ – ಕಠಿಣ ಕ್ರಮ ಕೈಗೊಳ್ಳಲು ಸಿಪಿಐ(ಎಂ) ಒತ್ತಾಯ

ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಯ ಜಂಕ್ಷನ್ ನಲ್ಲಿ ಕಳೆದ ಹಲವಾರು ತಿಂಗಳಿನಿಂದ ಕೊಳಚೆ ನೀರು ಶೇಖರಣೆಗೊಂಡಿದ್ದು ಇದರಿಂದ ವಿಪರೀತ ದುರ್ವಾಸನೆ ಪರಿಸರದಾದ್ಯಂತ ಬೀರುತ್ತಿದ್ದು, ಇದರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್‌ವಾದಿ) ಉಳ್ಳಾಲ ವಲಯ ಸಮಿತಿಯು ಇಂದು(26-05-2026) ಉಳ್ಳಾಲ ತಾಲೂಕು ತಹಶೀಲ್ದಾರ್, ಕೋಟೆಕಾರ್ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು,ಬೆಳ್ಮ ಗ್ರಾಮ ಪಂಚಾಯತ್ ನ‌ ಅಭಿವೃದ್ಧಿ ಅಧಿಕಾರಿಗಳು ಹಾಗೂ ನಾಟೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳಿಗೆ ಮನವಿಯನ್ನು ಅರ್ಪಿಸಿತು….

Read More

ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ನಿಗೂಢ ನಾಪತ್ತೆ

​ಮಂಜೇಶ್ವರ: ಮಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದ ಯುವಕನೊಬ್ಬ ಕಳೆದ ಎರಡು ವರ್ಷಗಳಿಂದ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೋಡಿಬೈಲು ಕೊಡಂಗೆ ನಿವಾಸಿ ಸಚಿನ್ ಕುಮಾರ್ (34) ನಾಪತ್ತೆಯಾದವರು. ​ಸಚಿನ್ ಕುಮಾರ್ 2024ರ ಮಾರ್ಚ್‌ನಲ್ಲಿ ಮಂಗಳೂರಿನ ಹೋಟೆಲ್ ಒಂದರಲ್ಲಿ ಕೆಲಸಕ್ಕೆ ಸೇರುತ್ತಿರುವುದಾಗಿ ಮನೆಯಲ್ಲಿ ತಿಳಿಸಿ ತೆರಳಿದ್ದಾರೆನ್ನಲಾಗಿದೆ. ಆದರೆ ನಂತರ ಅವರು ಮನೆಗೆ ಮರಳಿಲ್ಲ, ಅವರ ಮೊಬೈಲ್ ಸಹ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗಿದೆ. ಸೋದರಿ ಸಾರಿಕಾ ರೂಪರಾಜ್ ಶೆಟ್ಟಿ ಅವರು ಹಲವು ಬಾರಿ ಹುಡುಕಾಟ ನಡೆಸಿದರೂ ಫಲ ನೀಡಿಲ್ಲ. ಕೆಲಸ ಮಾಡುತ್ತಿದ್ದ…

Read More
error: Content is protected !!