Avatar

NAMMA MEDIA 24X7

ಕೊಂಕಣಿ ಚಿತ್ರ ‘ವಾಗಾಂಚೊ ಖೇಳ್’ ಮೊದಲ ಹಾಡು ‘ಮೋಗ್ ಜಾಲಾ’ ಫೆ.14ರಂದು ಬಿಡುಗಡೆ

ಮಂಗಳೂರು :ಸನ್ ಶೈನ್ ಕ್ರಿಯೇಷನ್ ಲಾಂಛನದಲ್ಲಿ ಪ್ರವೀಣ್ ಫೆರ್ನಾಂಡೀಸ್ ನಿರ್ಮಾಣದ ಹಾಗೂ ಅರ್ವಿನ್ ಲೋಬೊ ಇವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಕೊಂಕಣಿ ಚಲನ ಚಿತ್ರ ವಾಗಾಂಚೊ ಖೇಳ್ ಚಿತ್ರದ ಮೊದಲ ಹಾಡು ಮೋಗ್ ಜಾಲಾ ಇದೇ ಬರುವ ಫೆಬ್ರವರಿ 14 ಪ್ರೇಮಿಗಳ ದಿನಾಚರಣೆಯಂದು ಸನ್ ಶೈನ್ ಕ್ರಿಯೇಷನ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರದ ನಿರ್ದೇಶಕರಾದ ಅರ್ವಿನ್ ಲೋಬೊ ಅವರು ಹೇಳಿದರು. ಪತ್ರಿಕಾಭವನದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಚಲನಚಿತ್ರವು ಕರಾವಳಿ ಭಾಗದ…

Read More

ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್.

ಪುತ್ತೂರು:ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆ ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಫೆ.25ರಂದು ನಡೆಯಲಿದೆ….

Read More

ಶಿರ್ವ ಸಮೀಪ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ಐವರ ಪ್ರಾಣ ರಕ್ಷಣೆ

ಉಡುಪಿ: ಮಂಗಳೂರಿನಿಂದ ಶಿರ್ವದತ್ತ ಸಾಗುತ್ತಿದ್ದ ಮಾರುತಿ ಡಿಸೈರ್ ಕಾರೊಂದು ಸೋಮವಾರ ಮಧ್ಯರಾತ್ರಿ ಆಕಸ್ಮಿಕವಾಗಿ ರಸ್ತೆ ಮಧ್ಯದಲ್ಲೇ ಬೆಂಕಿಗಾಹುತಿಯಾದ ಘಟನೆ ನ್ಯಾರ್ಮ ಶ್ರೀ ಜಾರಂದಾಯ ದೈವಸ್ಥಾನದ ಸಮೀಪ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸೋಮವಾರ ತಡರಾತ್ರಿ ಮಂಗಳೂರಿನಿಂದ ಶಿರ್ವಕ್ಕೆ ಬರುತ್ತಿದ್ದ ಕಾರು ನ್ಯಾರ್ಮ ಪ್ರದೇಶವನ್ನು ತಲುಪುತ್ತಿದ್ದಂತೆ ಅದರ ಇಂಜಿನ್ ಭಾಗದಿಂದ ಹೊಗೆ ಹೊರಬರುತ್ತಿರುವುದು ಗಮನಕ್ಕೆ ಬಂದಿದೆ. ತಕ್ಷಣ ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ, ಕಾರಿನಲ್ಲಿದ್ದ ತನ್ನ ಕುಟುಂಬದ…

Read More

ಫೆಬ್ರವರಿ 12 ಮಹಾ ಮುಷ್ಕರ ಬೆಂಬಲಿಸಿ ಬಂದರು ಹಮಾಲಿ ಕಾರ್ಮಿಕರ ಸಭೆ

ಮಂಗಳೂರು : ಕೇಂದ್ರ ಸರಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ 4 ಕಾರ್ಮಿಕ ಸಂಹಿತೆ ರದ್ದುಗೊಳಿಸಲು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿರುವ ಫೆಬ್ರವರಿ 12 ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಕಾರ್ಮಿಕರ ಮುಷ್ಕರವನ್ನು ಹಳೆ ಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಬೆಂಬಲಿಸಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಇಂದು ಹಳೆ ಬಂದರಿನ ಕಾರ್ಮಿಕರ ಕಟ್ಟೆ ಬಳಿ ಸಭೆ ನಡೆಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಮಾತನಾಡುತ್ತಾ…

Read More

ಫೆ.13ರಿಂದ 17ರವರೆಗೆ ಶಕ್ತಿನಗರದಲ್ಲಿ ಐದು ದಿನಗಳ ಪದವು ಫ್ರೆಂಡ್ಸ್ ಕ್ಲಬ್ ಸ್ವರ್ಣ ವಾರ್ಷಿಕೋತ್ಸವ ಸಂಭ್ರಮ …. !

ಮಂಗಳೂರು:ಪದವು ಫ್ರೆಂಡ್ಸ್ ಕ್ಲಬ್ (PFC) ತನ್ನ ಸ್ವರ್ಣ ವಾರ್ಷಿಕೋತ್ಸವವನ್ನು ಫೆಬ್ರವರಿ 13ರಿಂದ 17ರವರೆಗೆ ಶಕ್ತಿನಗರ ಸರಕಾರಿ ಪ್ರೌಢ ಶಾಲಾ ಮೈದಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಿದೆ ಎಂದು ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್ ಕೆ. ತಿಳಿಸಿದರು . ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಸಾಮಾಜಿಕ, ಶೈಕ್ಷಣಿಕ, ಕ್ರೀಡಾ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಪದವು ಫ್ರೆಂಡ್ಸ್ ಕ್ಲಬ್, ಶಕ್ತಿನಗರ ಪರಿಸರದ ಹೆಮ್ಮೆಯ ಸಂಸ್ಥೆಯಾಗಿ ಬೆಳೆದಿದೆ. ಸ್ಥಳೀಯ ಸರಕಾರಿ…

Read More

ತುಳುನಾಡಿನ ಆಚರಣೆಗಳಲ್ಲಿ ಮೂಡನಂಬಿಕೆ ವೈಭವೀಕರಣಕ್ಕೆ ಕಳವಳ ವ್ಯಕ್ತಪಡಿಸಿದ ಡಾ. ಸಂತೋಷ್ ಗುರೂಜಿ

ಅರಬ್ ಸಂಯುಕ್ತ ಸಂಸ್ಥಾನದ ವಾಣಿಜ್ಯ ನಗರಿ ದುಬಾಯಿಯಲ್ಲಿ ಯು.ಎ.ಇ. ಬಂಟ್ಸ್ ಮತ್ತು ಯು.ಎ.ಇ.ಯಲ್ಲಿರುವ ಕರ್ನಾಟಕ ಪರ ಸಂಘಟನೆಗಳ ಆಶ್ರಯದಲ್ಲಿ ಫೆಬ್ರವರಿ 8ನೇ ತಾರೀಕಿನಂದು ತುಳುನಾಡ ಸಂಸ್ಕೃತಿಯ ಅನಾವರಣ ಉಪನ್ಯಾಸ ಕಾರ್ಯಕ್ರಮ ಫಾರ್ಚೂನ್ ಪ್ಲಾಝಾ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಶ್ರೀ ಬಾರ್ಕೂರು ಮಹಾ ಸಂಸ್ಥಾನ (ಭಾರ್ಗವಬೀಡು ಬಾರ್ಕೂರು) ಪೀಠಾಧಿಪತಿ ಶ್ರೀ ಶ್ರೀ ಶ್ರೀ ಡಾ|| ವಿದ್ಯಾವಾಚಾಸ್ಪತಿ ವಿಶ್ವಸಂತೋಷ ಭಾರತಿ ಶ್ರೀಪಾದರು ಪ್ರವಚನ ಹಾಗೂ ತುಳುನಾಡಿನ ಆಚಾರ ವಿಚಾರ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.ಸುಮಂಗಲೆಯರ ಪೂರ್ಣ ಕುಂಭ…

Read More

ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ಬೆಳ್ತಂಗಡಿ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕಾಲೇಜು ಹೋಗುವ ವೇಳೆ ಅಪರಿಚಿತ ಗೂಂಡಾಗಳು ಅಪಹರಿಸಲು ಯತ್ನಿಸಿ, ಚಾಕುವಿನಿಂದ ಇರಿದ ಘಟನೆ ಅತ್ಯಂತ ಬೆಚ್ಚಿಬೀಳಿಸುವಂತದ್ದು. ಇದು ಹೆಣ್ಣು ಮಕ್ಕಳ ಸುರಕ್ಷತೆಯ ಮೇಲೆ ದೊಡ್ಡ ಸವಾಲು ಎತ್ತಿದೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಅಧ್ಯಕ್ಷೆ ಶಿನೀರ ಖಂಡಿಸಿದರು. ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಎಪ್‌ಸ್ಟೀನ್ ಫೈಲ್ಸ್ ಮತ್ತು ನ್ಯಾಯ ಸಿಗದೇ ಉಳಿದಿರುವ ಸ್ಥಳೀಯ ಮಟ್ಟದಲ್ಲಿ ನಡೆದ ಬೆಳ್ತಂಗಡಿ ಸೌಜನ್ಯ ಪ್ರಕರಣ ಇರುವಾಗಲೇ ಹೆಣ್ಣು ಮಕ್ಕಳ ಮೇಲಿನ ಅಪಹರಣ,…

Read More

ಕಾಟಿಪಳ್ಳ ನಿವಾಸಿ ಆಟೋ ಚಾಲಕ ವಿಘ್ನೇಶ್ ಕಾಣೆ: ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು- ನಗರದ ಕೃಷ್ಣಪುರ ಕಾಟಿಪಳ್ಳ ನಿವಾಸಿ ವಿಘ್ನೇಶ್ (40) ಬಾಡಿಗೆ ಆಟೋರಿಕ್ಷಾ ಚಾಲಕರಾಗಿ ಕೆಲಸವನ್ನು ಮಾಡಿಕೊಂಡಿದ್ದರು. ಸಾಲವನ್ನು ಪಡೆದುಕೊಂಡಿದ್ದ ಅವರು ವಿಪರೀತ ಮದ್ಯಪಾನ ಮಾಡುವ ಅಭ್ಯಾಸವನ್ನು ಮಾಡಿಕೊಂಡಿದ್ದರು. ಫೆಬ್ರವರಿ 7 ರಂದು ಬಾಡಿಗೆ ಆಟೋರಿಕ್ಷಾ ತರಲು ಹಾಗೂ ಆರ್.ಟಿ.ಒ ಕಛೇರಿಗೆ ಪರವಾನಿಗೆ ಪಡೆಯುವ ಬಗ್ಗೆ ಮಂಗಳೂರಿಗೆ ತೆರಳಿರುವುದಾಗಿ ತಿಳಿಸಿ ಹೋದವರು ಈವರೆಗೆ ಮನೆಗೆ ವಾಪಸ್ಸು ಬಾರದೇ ಕಾಣೆಯಾಗಿರುತ್ತಾರೆ. ಈ ಬಗ್ಗೆ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದವರ ಚಹರೆ : ಎತ್ತರ ಸುಮಾರು 5.2 ಅಡಿ,…

Read More

ವಾಮಂಜೂರು ಅಪ್ರಾಪ್ತ ಬಾಲಕಿ ಸಾಮೂಹಿಕ ಅತ್ಯಾಚಾರ–ಕೊಲೆ: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹೈಕೋರ್ಟ್ ದೃಢೀಕರಣ

ಮಂಗಳೂರು:ವಾಮಂಜೂರಿನ ಉಳಾಯಿಬೆಟ್ಟು ಟೈಲ್ ಫ್ಯಾಕ್ಟರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ದೃಢೀಕರಿಸಿದೆ.ಶಿಕ್ಷೆಯ ಪ್ರಮಾಣ ಕಡಿಮೆ ಮಾಡಿದ್ದೇ ಆದರೆ ಇಂತಹ ಕ್ರೂರ ಕೃತ್ಯಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಮತ್ತು ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ವಿಚಾರಣ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ದೃಢೀಕರಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಜೊತೆಗೆ, ಶಿಕ್ಷೆ ರದ್ದುಪಡಿಸುವಂತೆ…

Read More

ಕೋಟ: ಫಾರ್ಚೂನರ್ ಕಾರು ಪಲ್ಟಿ – ಚಾಲಕ ಸಹಿತ 6 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ–66ರ ಕುಂದಾಪುರ ತಾಲೂಕಿನ ಕನ್ನುಕೆರೆ, ನವಶಕ್ತಿ ಕಲ್ಯಾಣ ಮಂಟಪದ ಎದುರು ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಗೊಂಡವರು ಮಹಾರಾಷ್ಟ್ರದ ಪುಣೆಯ ಲಾ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಒಟ್ಟು 12 ಮಂದಿ ವಿದ್ಯಾರ್ಥಿಗಳು ಜ.31ರಂದು…

Read More
error: Content is protected !!