Avatar

NAMMA MEDIA 24X7

ವಿಷು ಕಣಿಯ ದರ್ಶನ ಪಡೆದ ಭಕ್ತರು: ಶ್ರೀ ಮುತ್ತಪ್ಪನ್ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮಂಗಳೂರು: ವಿಷು ಹಬ್ಬವು ದಕ್ಷಿಣ ಭಾರತದ ಪ್ರಮುಖ ಹಬ್ಬಗಳಲ್ಲಿ ಒಂದು .ಈ ಹಬ್ಬವನ್ನು ಕೇರಳ ಮತ್ತು ತುಳುನಾಡಿನ ಭಾಗದಲ್ಲಿ ಭಕ್ತಿಪೂರ್ವಕವಾಗಿ ಆಚರಿಸಲಾಗುತ್ತದೆ. ವಿಷು ಹಬ್ಬದ ಪ್ರಮುಖ ವಿಶೇಷವೆಂದರೆ ವಿಷು ಕಣಿ. ಬೆಳಿಗ್ಗೆ ಎದ್ದ ತಕ್ಷಣ ದೇವರ ಮುಂದೆ ಇಡಲಾಗಿರುವ ಹಣ್ಣುಗಳು, ಹೂವುಗಳು, ಕನ್ನಡಿ, ನಾಣ್ಯಗಳು ಮತ್ತು ಶ್ರೀಕೃಷ್ಣನ ಮೂರ್ತಿಯನ್ನು ನೋಡುವುದು ಶುಭಕರವೆಂದು ನಂಬಲಾಗುತ್ತದೆ. ಈ ಸಂಪ್ರದಾಯವು ಮುಂದಿನ ವರ್ಷದ ಜೀವನ ಸಮೃದ್ಧಿಯಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸುತ್ತದೆ. ಹಬ್ಬದ ಸಂದರ್ಭದಲ್ಲಿ ಹಿರಿಯರು ಕಿರಿಯರಿಗೆ ವಿಷುಕೈನೀಟಂ ಎಂಬ ಹೆಸರಿನಲ್ಲಿ ಹಣ…

Read More

ಅಡುಗೆ ಅನಿಲ ದರ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಹಾಗೂ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವೈಫಲ್ಯವನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ ನಗರದ ಕದ್ರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಖಾಲಿ ಗ್ಯಾಸ್ ಸಿಲಿಂಡರ್‌ಗೆ ಹೂಮಾಲೆ ಹಾಕಿ ಅದನ್ನು ಚಟ್ಟದ ಮೇಲೆ ಕಟ್ಟಿ ಹೊತ್ತುಕೊಂಡು ಅಣಕು ಶವಯಾತ್ರೆ ನಡೆಸಿ ಸಾರ್ವಜನಿಕರ ಗಮನ ಸೆಳೆದರು. ಅಲ್ಲದೆ ಗ್ಯಾಸ್ ಸ್ಟೌ ಹಾಗೂ ಖಾಲಿ ಪಾತ್ರೆಗಳನ್ನು ಪ್ರದರ್ಶಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ…

Read More

ಪಜಿಂಗಾರ್ ಸಾಲಿಯಾನ್ ಕುಟುಂಬದಲ್ಲಿ ಧಾರ್ಮಿಕ ವೈಭವ: ಗ್ರಹಪ್ರವೇಶ, ಕೋಲ ಸೇವೆ ಸಂಪನ್ನ

ಮೂಡಂಬೈಲ್ ಪಜಿಂಗಾರ್ ಸಾಲಿಯಾನ್ ಕುಟುಂಬದ ನೂತನ ತರವಾಡಿನ ಗ್ರಹಪ್ರವೇಶ, ಬ್ರಹ್ಮಕಲಶ ಪ್ರತಿಷ್ಠೆ ಹಾಗೂ ನೇಮೋತ್ಸವ ಕಾರ್ಯಕ್ರಮಗಳು ಏಪ್ರಿಲ್ 12ರಂದು ಭಕ್ತಿಶ್ರದ್ದೆಯಿಂದ ನೆರವೇರಿದವು. ಕಾರ್ಯಕ್ರಮದ ಪೂರ್ವಭಾವಿಯಾಗಿ ಏಪ್ರಿಲ್ 11ರಂದು ತಂತ್ರಿಗಳ ಉಪಸ್ಥಿತಿಯಲ್ಲಿ ಸ್ಥಳ ಶುದ್ಧಿ, ಪುಣ್ಯಹ ವಚನ, ಕಲಶ ಶುದ್ಧಿ, ವಾಸ್ತು ಹೋಮ ಹಾಗೂ ವಾಸ್ತು ಬಲಿ ವಿಧಿವಿಧಾನಗಳು ವಿಜೃಂಭಣೆಯಿಂದ ನಡೆಯಿತು. ಏಪ್ರಿಲ್ 12ರಂದು ಬ್ರಹ್ಮಶ್ರೀ ಬಡಾಜೆಬೀಡು ಗೋಪಾಲ ಕೃಷ್ಣ ತಂತ್ರಿಯವರ ಸಾನ್ನಿಧ್ಯದಲ್ಲಿ ಬೆಳಗ್ಗೆ 8:45ಕ್ಕೆ ಗ್ರಹಪ್ರವೇಶ ಮತ್ತು ಮಹಾ ಪೂಜೆ ನೆರವೇರಿತು. ಮಧ್ಯಾಹ್ನ ಮಲರಾಯ ದೈವದ ನೇಮ,…

Read More

ಸೌದಿ ಅರೇಬಿಯಾ ಭಾರತೀಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ರಾಯಭಾರಿ ಡಾ. ಸುಹೇಲ್ ಐಜಾಝ್ ಖಾನ್ ಅವರೊಂದಿಗೆ ಝಕರಿಯಾ ಜೋಕಟ್ಟೆ ಸಭೆ

ರಿಯಾದ್: ಸೌದಿ ಅರೇಬಿಯಾದಲ್ಲಿ ವಾಸಿಸುತ್ತಿರುವ ಭಾರತೀಯರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಚರ್ಚಿಸಲು, ಸೌದಿ ಅರೇಬಿಯಾದಲ್ಲಿನ ಭಾರತೀಯ ರಾಯಭಾರ ಕಚೇರಿಯ ರಾಯಭಾರಿಯಾಗಿರುವ ಡಾ. ಸುಹೇಲ್ ಐಜಾಝ್ ಖಾನ್ ಅವರೊಂದಿಗೆ ಝಕರಿಯಾ ಜೋಕಟ್ಟೆ ಗೌರವಪೂರ್ವಕ ಸಭೆ ನಡೆಸಿದರು. ಭಾರತೀಯ ಸಮುದಾಯದ ಹಕ್ಕುಗಳು, ಸುರಕ್ಷತೆ ಹಾಗೂ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು, ಭಾರತೀಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ತಕ್ಷಣ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು. ಈ ವೇಳೆ ಅಲ್ ಮುಝೈನ್ ಕಂಪನಿಯ ಸಿಇಒ ಝಕರಿಯಾ ಜೋಕಟ್ಟೆ, ಉದ್ಯಮಿ ಅಯಾಜ್…

Read More

ಹಾರ್ಮುಜ್ ತಣಾವಣೆ ತೀವ್ರ: ಬಂದರುಗಳ ಮೇಲೆ ದಾಳಿ ಎಚ್ಚರಿಸಿದ ಇರಾನ್

ಟೆಹ್ರಾನ್: ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ಹಿನ್ನೆಲೆ ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ರಂಧನ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ, ಇರಾನ್ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದೆ. ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಕೊಲ್ಲಿ ಪ್ರದೇಶದ ಯಾವುದೇ ಬಂದರುಗಳ ಮೇಲೂ ಯಾವ ಕ್ಷಣದಲ್ಲಾದರೂ ದಾಳಿ ನಡೆಸುವ ಸಾಧ್ಯತೆ ಇರುವುದಾಗಿ ಇರಾನ್ ಎಚ್ಚರಿಸಿದೆ. ಅಮೆರಿಕದ ದಿಗ್ರಂಧನ ಬೆದರಿಕೆಯನ್ನು ಕಟುವಾಗಿ ಟೀಕಿಸಿದ ಇರಾನ್, ಇಂತಹ…

Read More

ವಗ್ಗದಲ್ಲಿ ದ್ವಿಚಕ್ರ ವಾಹನಗಳ ಅಪಘಾತ: ಇಡ್ಲಿ ವ್ಯಾಪಾರಿ ಮೃತ್ಯು

ಬಂಟ್ವಾಳ: ಬಿಸಿರೋಡು–ಕಡೂರು ರಾಷ್ಟ್ರೀಯ ಹೆದ್ದಾರಿಯ ವಗ್ಗದಲ್ಲಿ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ವಗ್ಗ ನಿವಾಸಿ ಜಗದೀಶ ಪೂಜಾರಿ ಮೃತ ವ್ಯಕ್ತಿಯಾಗಿದ್ದಾರೆ. ಇಡ್ಲಿ ವ್ಯಾಪಾರಿಯಾಗಿದ್ದ ಅವರು, ವಗ್ಗದ ರೆಸ್ಟೋರೆಂಟ್ ಒಂದರಿಂದ ವ್ಯಾಪಾರದ ಹಣವನ್ನು ಪಡೆದು ರಸ್ತೆ ದಾಟುವ ವೇಳೆ ಅಪಘಾತ ಸಂಭವಿಸಿದೆ. ಬಿಸಿರೋಡು ಕಡೆಯಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಸವಾರ ಮೊಹಮ್ಮದ್ ಯಾಸೀನ್ ಅವರು ಡಿಕ್ಕಿ ಹೊಡೆದ ಪರಿಣಾಮ ಜಗದೀಶ್ ಪೂಜಾರಿ ಅವರು…

Read More

ಮಕ್ಕಳಿಗೆ ರಾಜ್ಯ ಮಟ್ಟದ ಬೇಸಿಗೆ ಸಾಹಿತ್ಯ ಶಿಬಿರ: ಏಪ್ರಿಲ್ 29ರಿಂದ ತುಮಕೂರಿನಲ್ಲಿ: ದಿನಾಂಕ 20-4-2026 ಪ್ರತಿನಿಧಿಗಳ ಹೆಸರು ನೋಂದಣಿಗೆ ಕೊನೆಯ ದಿನ

ಕಾಸರಗೋಡು: ಮಕ್ಕಳಲ್ಲಿ ಸಾಹಿತ್ಯ, ಸಂಸ್ಕೃತಿ ಮತ್ತು ಸೃಜನಾತ್ಮಕ ಚಿಂತನೆ ಬೆಳೆಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ರಾಜ್ಯ ಮಟ್ಟದ ಬೇಸಿಗೆ ಸಾಹಿತ್ಯ ಶಿಬಿರವನ್ನು ಆಯೋಜಿಸಿದೆ. ಚನ್ನರಾಯಪಟ್ಟಣದ ಪರಿಸರ ತಜ್ಞ ಸಿ.ಎನ್. ಅಶೋಕ ಅವರ ನೇತೃತ್ವದಲ್ಲಿ ಕಳೆದ 15 ವರ್ಷಗಳಿಂದ ಮಕ್ಕಳಿಗಾಗಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುತ್ತಿರುವ ಪರಿಷತ್ತು, ಈ ಬಾರಿ ತುಮಕೂರು ಜಿಲ್ಲೆಯ ಕೊರಟಗೆರೆ ಸಮೀಪದ ಸಿದ್ದರಬೆಟ್ಟದಲ್ಲಿ ಏಪ್ರಿಲ್ 29ರಿಂದ ಮೇ 2ರವರೆಗೆ ನಾಲ್ಕು ದಿನಗಳ ಶಿಬಿರವನ್ನು ನಡೆಸಲಿದೆ. ಶಿಬಿರದಲ್ಲಿ…

Read More

ನಂತೂರು ಅಪಘಾತ: ಹಿರಿಯ ಛಾಯಾಗ್ರಾಹಕ ಕೆ. ಮೋಹನ್ ಚಂದರ್ ಮೃತ್ಯು

ಬೈಕ್‌ ಸವಾರನ ಧಾವಂತಕ್ಕೆ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಹಿರಿಯೆ ಛಾಯಾಗ್ರಾಹಕ ಸಾವಿಗೀಡಾಗಿದ್ದಾರೆ. ಕಳೆದ ಶನಿವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ನಂತೂರು ತಾರಾಯಿತೋಟ ಎಂಬಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಸಾವನ್ನಪ್ಪಿದ್ದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಅಮಾಯಕ ಸ್ಕೂಟರ್ ಸವಾರ, ಹಿರಿಯ ಛಾಯಾಗ್ರಾಹಕ ಕೆ.ಮೋಹನ್ ಚಂದರ್ (64) ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಧರ್ಮಸ್ಥಳದ ಕಾರ್ಯತಡ್ಕ ನಿವಾಸಿ ಗೋಪಾಲಕೃಷ್ಣ(27) ಎಂಬ ಯುವಕ ಶನಿವಾರ ರಾತ್ರಿ ಸುಮಾರು…

Read More

ಎ.16ರಿಂದ ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಭಂದ ಬ್ರಹ್ಮಕಲಶೋತ್ಸವ ವೈಭವ

ಉಡುಪಿ: ಇತಿಹಾಸ ಪ್ರಸಿದ್ಧ ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ‘ಅಷ್ಟಭಂದ ಬ್ರಹ್ಮಕಲಶೋತ್ಸವ ವೈಭವ-2026’ ಎ.16ರಿಂದ ಎ.20ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಿ.ಮಾಧವ ಪೂಜಾರಿ ತಿಳಿಸಿದ್ದಾರೆ.ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ.20ರಂದು ಬೆಳಗ್ಗೆ 9.15ಕ್ಕೆ ಶ್ರೀಮಹಾಲಿಂಗೇಶ್ವರ ದೇವರ ಪರಿಕಲಶ ಅಭಿಷೇಕ, ಬ್ರಹ್ಮಕಲಶಾಭಿಷೇಕ, ಕಲಾನ್ಯಾಸ, ಮಹಾಪೂಜೆ, ಪಲ್ಲಪೂಜೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾ ಅನ್ನಸಂತರ್ಪಣೆ ಮತ್ತು ಸಂಜೆ 6ಗಂಟೆಗೆ ಉತ್ಸವ ಬಲಿ, ಮಹಾರಂಗ ಪೂಜೆ, ಭೂತ ಬಲಿ ನಡೆಯಲಿದೆ ಎಂದರು. ಎ.15ರಂದು ಮಧ್ಯಾಹ್ನ 3ಗಂಟೆಗೆ…

Read More

ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ, ವಾರ್ಷಿಕೋತ್ಸವ ಸಂಭ್ರಮ

ಸೇವೆಯ ಪಥಕ್ಕೆ ಹೊಸ ಚೈತನ್ಯ: ವಿಜೃಂಭಣೆಯಿಂದ ಕಂಗೊಳಿಸಿದ ಪದವಿ ಪ್ರಧಾನ ಹಾಗೂ ವಾರ್ಷಿಕೋತ್ಸವ ಸಮಾರಂಭಕುಂಟಿಕಾನದ ಎ.ಜೆ. ಆಡಿಟೋರಿಯಂನಲ್ಲಿ ಏಪ್ರಿಲ್ 13, ಸೋಮವಾರದಂದು ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್‌ನ ಪದವಿ ಪ್ರದಾನ ಹಾಗೂ ವಾರ್ಷಿಕೋತ್ಸವ ಸಮಾರಂಭವು ಅತ್ಯಂತ ಸಂಭ್ರಮದಿಂದ ಜರುಗಿತು. ಭಕ್ತಿಪೂರ್ವಕ ಪ್ರಾರ್ಥನೆಯೊಂದಿಗೆ ಆರಂಭವಾದ ಈ ಸಮಾರಂಭಕ್ಕೆ ಉಪ ಪ್ರಾಂಶುಪಾಲರಾದ ಡಾ. ತೆರೇಸಾ ಲಿಯೋನಿಲ್ಡಾ ಮೆಂಡೋನ್ಸಾ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಪ್ರಾಂಶುಪಾಲರಾದ ಡಾ. ಲರಿಸ್ಸಾ ಮಾರ್ಥಾ ಸಾಮ್ಸ್ ಅವರು ಕಾಲೇಜಿನ ಯಶೋಗಾಥೆಯನ್ನೊಳಗೊಂಡ ವಾರ್ಷಿಕ ವರದಿಯನ್ನು ಮಂಡಿಸುವ ಮೂಲಕ…

Read More
error: Content is protected !!