Avatar

NAMMA MEDIA 24X7

ಯುನೈಟೆಡ್ ಹೋಮ್ಸ್ – ಆರ್ಥಿಕವಾಗಿ ಹಿಂದುಳಿದವರಿಗೆ ಒಂದು ಆಶ್ರಯ ತಾಣ

ಮಂಗಳೂರು, ಮೇ 17: ಬಿಜೈಯ ‘ಯುನೈಟೆಡ್ ಫ್ರೆಂಡ್ಸ್ ಟ್ರಸ್ಟ್’ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗಾಗಿ ಹಮ್ಮಿಕೊಳ್ಳಲಾದ ‘ಯುನೈಟೆಡ್ ಹೋಮ್ಸ್’ ವಸತಿ ಯೋಜನೆಯನ್ನು ಅಬ್ಬೆಟ್ಟುವಿನಲ್ಲಿ ಉದ್ಘಾಟಿಸಲಾಯಿತು. 10 ವಸತಿ ಘಟಕಗಳನ್ನು ಒಳಗೊಂಡಿರುವ ಈ ಅಪಾರ್ಟ್‌ಮೆಂಟ್ ಕಟ್ಟಡವನ್ನು ಬಿಜೈಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನ ಪ್ರಧಾನ ಧರ್ಮಗುರುಗಳಾದ ವಂದನೀಯ ಡಾ. ಜೆ. ಬಿ. ಸಲ್ಡಾನ್ಹಾ ಅವರು ಆಶೀರ್ವದಿಸಿದರು. ದೈಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರಾದ ಶ್ರೀ ವಾಲ್ಟರ್ ನಂದಳಿಕೆ ಮತ್ತು ದಾನಿ ಶ್ರೀ ಮೈಕಲ್ ಡಿಸೋಜಾ ಅವರ ಪ್ರತಿನಿಧಿಯಾದ ಶ್ರೀ…

Read More

ಮಳೆಗಾಲದಲ್ಲಿ ಮಣ್ಣು, ರಸ್ತೆ ಹಾಗೂ ಗುಡ್ಡ ಅಗೆತಕ್ಕೆ ನಿಷೇಧ

ಮಂಗಳೂರು, ಮೇ 23: ಮಳೆಗಾಲದ ಅವಧಿಯಲ್ಲಿ ಭೂಕುಸಿತ ಸೇರಿದಂತೆ ಅನಾಹುತಗಳನ್ನು ತಡೆಗಟ್ಟುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ಮಣ್ಣು ಅಗೆತ, ರಸ್ತೆ ಅಗೆತ ಹಾಗೂ ಗುಡ್ಡ ಅಗೆತ ಕಾಮಗಾರಿಗಳಿಗೆ ನಿಷೇಧ ಹೇರಲಾಗಿದೆ. ಈ ಕುರಿತು ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದು, ಮಣ್ಣು ಕುಸಿತ, ಗುಡ್ಡ ಕುಸಿತ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಹಾಗೂ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ನಾಲ್ಕು ತಿಂಗಳ ಅವಧಿಯಲ್ಲಿ ಯಾವುದೇ ರೀತಿಯ ಅಗೆತ ಕಾಮಗಾರಿಗಳನ್ನು ಕೈಗೊಳ್ಳಬಾರದು ಎಂದು…

Read More

ಎಂ.ಸಿ.ಸಿ. ಬ್ಯಾಂಕಿಗೆ ಇಥಿಯೋಪಿಯಾದ ಡ್ಯಾಶೆನ್ ಬ್ಯಾಂಕ್ ಎಸ್.ಸಿ. ಇದರ ಆಡಳಿತ ಮಂಡಳಿಯ ನಿರ್ದೇಶಕರ ಭೇಟಿ

ಪೂರ್ವ ಆಫ್ರಿಕಾದ ಇಥಿಯೋಪಿಯಾದ ಪ್ರಮುಖ ಖಾಸಗಿ ಬ್ಯಾಂಕ್ ಆಗಿರುವ ಡ್ಯಾಶೆನ್ ಬ್ಯಾಂಕ್ ಎಸ್.ಸಿ.ಯ ಆಡಳಿತ ಮಂಡಳಿಯ ಸದಸ್ಯರು 22 ಮೇ 2026 ರಂದು ಎಂ.ಸಿ.ಸಿ. ಬ್ಯಾಂಕಿನ ಪ್ರಧಾನ ಕಚೇರಿಗೆ ಅಧಿಕೃತ ಸಂಸ್ಥಾತ್ಮಕ ಸಂವಹನ ಮತ್ತು ಜ್ಞಾನ ವಿನಿಮಯ ಕಾರ್ಯಕ್ರಮದ ಅಂಗವಾಗಿ ಭೇಟಿ ನೀಡಿದರು. ಈ ಭೇಟಿಯನ್ನು ವೃತ್ತಿಪರ ಸಂಬಂಧಗಳನ್ನು ಬೆಳೆಸುವುದು, ಭಾರತದ ಸಹಕಾರ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳುವುದು, ಬ್ಯಾಂಕಿಂಗ್ ಪರಿಣತಿಯನ್ನು ವಿನಿಮಯ ಮಾಡಿಕೊಳ್ಳುವುದು ಹಾಗೂ ಡಿಜಿಟಲ್ ಬ್ಯಾಂಕಿಂಗ್, ಕಾರ್ಯಾಚರಣಾ ದಕ್ಷತೆ ಮತ್ತು ತಾಂತ್ರಿಕ ಆಧುನೀಕರಣದ ಬೆಳವಣಿಗೆಗಳನ್ನು ಅನ್ವೇಷಿಸುವ…

Read More

NITK ಸುರತ್ಕಲ್ ನಲ್ಲಿ ಭಾರತ ಸರ್ಕಾರ (ANRF–CSIR) ಅನುದಾನಿತ ಗ್ರಾಫ್ ಸಿದ್ಧಾಂತ ಮತ್ತು ನರಮಂಡಲ ಜಾಲಗಳ ಕಾರ್ಯಾಗಾರ

ಸುರತ್ಕಲ್, 22 ಮೇ 2026: ಸುರತ್ಕಲ್ ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NITK) ಯ ಗಣಿತ ಮತ್ತು ಕಂಪ್ಯೂಟೇಶನಲ್ ವಿಜ್ಞಾನ ವಿಭಾಗವು “ಗ್ರಾಫ್ ಸಿದ್ಧಾಂತ ಮತ್ತು ಗ್ರಾಫ್ ನರಮಂಡಲ ಜಾಲಗಳಲ್ಲಿ ಉದಯೋನ್ಮುಖ ನಿರ್ದೇಶನಗಳು” ಎಂಬ ವಿಷಯದ ಕುರಿತು ಐದು ದಿನಗಳ ಕಾರ್ಯಾಗಾರವನ್ನು 2026 ಮೇ 18 ರಿಂದ 22 ರವರೆಗೆ NITK ಸುರತ್ಕಲ್ ನಲ್ಲಿ ಆಯೋಜಿಸಿತ್ತು. ಈ ಕಾರ್ಯಾಗಾರಕ್ಕೆ ಅನುಸಂಧಾನ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ (ANRF) ಮತ್ತು ಭಾರತ ಸರ್ಕಾರದ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ…

Read More

ಪುತ್ತೂರು ಬಿಜೆಪಿಯ ಪ್ರತಿಭಟನೆ ಮೂರ್ಖತನದ್ದು-ಕಾಂಗ್ರೆಸ್

ವಿಟ್ಲ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಜನಪ್ರಿಯತೆಯನ್ನು ಸಹಿಸದೇ ದಲಿತ ಸಂಘಟನೆಯ ಹೆಸರಿನಲ್ಲಿ ಹಲವರಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಮುಂದಿಟ್ಟುಕೊಂಡು ಬಿಜೆಪಿ ಮಾಡಿದ ಪ್ರತಿಭಟನೆ ಮೂರ್ಖತನದ್ದಾಗಿದೆ ಎಂದು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಧ್ಮನಾಭ ಪೂಜಾರಿ ಸಣ್ಣಗುತ್ತು ಹೇಳಿದರು.ಶುಕ್ರವಾರ ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕರನ್ನು ನಿಂದಿಸುವ ಭರದಲ್ಲಿ ಅವಾಚ್ಯ ಪದಗಳನ್ನೂ ಬಳಕೆ ಮಾಡಿರುವುದು ತಪ್ಪು ಎಂದರು. ಪುಣಚ ಗ್ರಾಮಕ್ಕೆ ಕಳೆದ ಮೂರು ವರ್ಷಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗಾಗಿ…

Read More

ಉಡುಪಿ: ಬಾವಿಯ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತ್ಯು, ಇನ್ನೋರ್ವ ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ!

ಉಡುಪಿ: ಬಾವಿ ತೊಡುತ್ತಿರುವಾಗ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಇನ್ನೋರ್ವ ಕುಸಿದ ಮಣ್ಣಿನಡಿ ಸಿಲುಕಿರುವ ಘಟನೆ ಕೊಡವೂರಿನ ಗರಡಿಮಜಲಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಮತ್ತು ಪೊಲೀಸರು ದೌಡಾಯಿದ್ದಾರೆ. ಓರ್ವ ಕಾರ್ಮಿಕನ ಮೃತ ದೇಹ ಮಣ್ಣಿನಡಿಯಿಂದ ಹೊರಕ್ಕೆ ತೆಗೆಯಲಾಗಿದೆ. ಮತ್ತೋರ್ವ ಕುಸಿದ ಮಣ್ಣಿನಡಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದೆ.

Read More

ಮಂಗಳೂರಿನ ಇನ್ಟಾಮಾರ್ಟ್ ಸಂಸ್ಥೆಯಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ಕಾರ್ಮಿಕ ಸಾವು : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿದ ಎಸ್.ಡಿ.ಟಿ.ಯು ಜಿಲ್ಲಾ ನಿಯೋಗ

ಮಂಗಳೂರು ಮೇ 22: ಮಂಗಳೂರಿನ ಎಜೆ ಆಸ್ಪತ್ರೆಯ ಮುಂಭಾಗದಲ್ಲಿರುವ ಇನ್ಟಾಮಾರ್ಟ್ ಸಂಸ್ಥೆಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಕಾರ್ಮಿಕನೊಬ್ಬ ಲಿಫ್ಟ್ ಅವಘಡಕ್ಕೆ ಬಲಿಯಾದ ಘಟನೆ ಅತ್ಯಂತ ದುಃಖಕರವಾಗಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಸಮಿತಿ ಆಗ್ರಹಿಸಿದೆ. ಈ ಹಿನ್ನೆಲೆಯಲ್ಲಿ ಎಸ್.ಡಿ.ಟಿ.ಯು ಜಿಲ್ಲಾ ನಿಯೋಗವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಅಪಘಾತ ಸಂಭವಿಸಿದ ಲಿಫ್ಟ್…

Read More

ಖಾಸಗಿ ಶಾಲೆಗಳ ಶುಲ್ಕ ನಿಯಂತ್ರಣಕ್ಕೆ ಸರ್ಕಾರ ಮಧ್ಯಪ್ರವೇಶಿಸಲಿ:ಆಮ್ ಆದ್ಮಿ ಪಾರ್ಟಿ ಆಗ್ರಹ

ಮಂಗಳೂರು, ಮೇ 22: ಪ್ರಾಥಮಿಕ ಶಿಕ್ಷಣದ ವ್ಯಾಪಾರೀಕರಣ ಹಾಗೂ ಸರ್ಕಾರಿ ಶಾಲೆಗಳ ವ್ಯವಸ್ಥಿತ ಕುಸಿತದ ಬಗ್ಗೆ ಆಮ್‌ ಆದ್ಮಿ ಪಾರ್ಟಿ (ಆಪ್‌) ದಕ್ಷಿಣ ಕನ್ನಡ ಜಿಲ್ಲಾ ಘಟಕ ತೀವ್ರ ಕಳವಳ ವ್ಯಕ್ತಪಡಿಸಿದೆ. ಖಾಸಗಿ ಶಾಲೆಗಳ ಗಗನಚುಂಬಿ ಶುಲ್ಕ ನಿಯಂತ್ರಣಕ್ಕೆ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದೆ. ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಪ್‌ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್‌, 2026-27ನೇ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಖಾಸಗಿ ಶಾಲೆಗಳು ವಿವಿಧ ರೀತಿಯ ಶುಲ್ಕಗಳ ಹೆಸರಿನಲ್ಲಿ…

Read More

ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳಲ್ಲಿ ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಮೀಸಲು ಸಂಭವ. ನವೀನ್ ಡಿಸೋಜ ಹೆಸರು ಮುಂಚೂಣಿಯಲ್ಲಿ

ಬೆಂಗಳೂರು: ಕಾಂಗ್ರೆಸ್ ನ ಮೂರು ರಾಜ್ಯಸಭಾ ಸ್ಥಾನಗಳು ಮುಂದಿನ ತಿಂಗಳು ತೆರವಾಗಲಿದೆ. ಈ ಪೈಕಿ ಒಂದು ಸ್ಥಾನ ಮತ್ತೊಮ್ಮೆ ಕಾಂಗ್ರೆಸ್ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಮ್ಮೆ ಸಿಗಲಿದೆ ಎಂಬುದು ಗ್ಯಾರಂಟಿಯಾಗಿದೆ. ಒಂದು ಸ್ಥಾನ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಈ ಬಾರಿ ಮೀಸಲಿರಿಸುವ ಸಂಭವ ಹೆಚ್ಚಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕಳೆದ ಬಾರಿ ಮುಸ್ಲಿಂ ಅಲ್ಪಸಂಖ್ಯಾತರಿಗೆ ಒಂದು ರಾಜ್ಯಸಭಾ ಸದಸ್ಯ ಸ್ಥಾನ ಒಲಿದು ಬಂದಿತ್ತು. ಈ ಬಾರಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಒಲಿದು ಬರಲಿದೆ ಎಂದು…

Read More

ಜಿಪ್ಪು ಕಡೆಕಾರಿನಲ್ಲಿ ನಾಲ್ಕು ಅತ್ಯಾಧುನಿಕ ಸಭಾಭವನಗಳಿಗೆ ಚಾಲನೆ

ಮಂಗಳೂರು, ಮೇ 22: ಮಂಗಳೂರು ಮಹಾನಗರದ ಜಿಪ್ಪು ಕಡೆಕಾರು ಪ್ರದೇಶದಲ್ಲಿರುವ ನೇತ್ರಾವತಿ ನದಿಯ ಕಿನಾರೆಯ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿಧಾನದಲ್ಲಿ ಹಾಗೂ ಪರಮಪೂಜ್ಯ ಶ್ರೀ ಶ್ರೀ ನರೇಂದ್ರನಾಥ ಯೋಗೇಶ್ವರೇಶ್ವರ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡ ನಾಲ್ಕು ಅತ್ಯಾಧುನಿಕ ಸಭಾಭವನಗಳ ಲೋಕಾರ್ಪಣೆಯ ಚಾಲನಾ ಕಾರ್ಯಕ್ರಮ ಶುಕ್ರವಾರ ಗುರುವನ ಶ್ರೀ ದುರ್ಗಾ ಕ್ಷೇತ್ರದಲ್ಲಿ ಜರುಗಿತು. ನೇತ್ರಾವತಿ ಸಭಾಭವನ, ಪಾಲೇಮಾರ್ ಫಾರ್ಮ್ಸ್, ಪಾಲೇಮಾರ್ ಕನ್ವೆನ್ಷನ್ ಸೆಂಟರ್ ಹಾಗೂ ಪಾಲೇಮಾರ್ ಗಾರ್ಡನ್…

Read More
error: Content is protected !!