Avatar

NAMMA MEDIA 24X7

ಗುರುಪುರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದಲೂ ಜನವಿರೋಧಿ ಧೋರಣೆ ಅನುಸರಿಸುತ್ತಿದ್ದು, ಹಳ್ಳಿಗಳ ಪಂಚಾಯತ್ ವ್ಯವಸ್ಥೆಯನ್ನು ಕಡೆಗಣಿಸಿ ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆಯ ಮೂಲಕ ಜನರ ರಕ್ತ ಹೀರುವ ಕೆಲಸ ಮಾಡುತ್ತಿದೆ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಜಂಟಿಯಾಗಿ ಗುಡುಗಿದ್ದಾರೆ. ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ…

Read More

ಭಾರತೀಯ ವಾಯುಪಡೆಯ ಅತ್ಯಾಧುನಿಕ ರಫೇಲ್ ಪೈಲಟ್ ಆಗಿ ಮಂಗಳೂರಿನ ಪ್ರಜ್ವಲ್ ಶೆಟ್ಟಿ ನೇಮಕ

ಭಾರತೀಯ ವಾಯುಪಡೆಯ ಅತ್ಯಾಧುನಿಕ ರಫೇಲ್ ಯುದ್ಧವಿಮಾನದ ಕಾರ್ಯಾಚರಣಾ ಪೈಲಟ್ ಆಗಿ ಮಂಗಳೂರಿನ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ನೇಮಕಗೊಂಡಿದ್ದಾರೆ. ದ್ವಿತೀಯ ಪಿಯುಸಿ ಶಿಕ್ಷಣವನ್ನು ಪೂರ್ಣಗೊಳಿಸಿದ ಬಳಿಕ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 42ನೇ ರ‍್ಯಾಂಕ್ ಗಳಿಸಿದ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ಅವರು, ದೇಶದ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ), ಪುಣೆಯಲ್ಲಿ ಮೂರು ವರ್ಷಗಳ ಸೈನಿಕ ತರಬೇತಿಯನ್ನು ಪಡೆದರು. ಈ ಅವಧಿಯಲ್ಲಿ ಸೂಪರ್ ಡಿಮೋನಾ ವಿಮಾನವನ್ನು ಹಾರಿಸುವ ತರಬೇತಿಯನ್ನೂ ಪಡೆದು, ತಮ್ಮ…

Read More

ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ – 2026, ಕೇರಳ- ಕರ್ನಾಟಕ ಉತ್ಸವ, ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವ ಸ್ವಾಗತ ಸಮಿತಿ ಸಭೆ , ಅಂತರ ರಾಜ್ಯದ 2000 ಪ್ರತಿನಿಧಿಗಳಿಗೆ ಆಹ್ವಾನ

ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ, ಕಾಸರಗೋಡು ಇದರ ನೇತೃತ್ವದಲ್ಲಿ ಕಳೆದ 36 ವರ್ಷಗಳಿಂದ ಕೇರಳ ರಾಜ್ಯದ ಕನ್ನಡ ಭಾಷೆ,ಸಾಹಿತ್ಯ, ಸಂಸ್ಕೃತಿ,ಇತಿಹಾಸ ಪರಂಪರೆಯನ್ನು ಭಾರತದಾದ್ಯಂತ ಕನ್ನಡ ಜನತೆಗೆ ತಲುಪಿಸುವ ಉದ್ದೇಶದಿಂದ ಕೇರಳ,ಕರ್ನಾಟಕ ಹಾಗೂ ಅಖಿಲ ಭಾರತ ಮತ್ತು ಆನಿವಾಸಿ ಭಾರತೀಯ ಕನ್ನಡಿಗರು,ಕಲಾವಿದರು, ಸಾಹಿತಿಗಳನ್ನು ಆಮಂತ್ರಿಸಿ ರಾಜ್ಯ, ರಾಷ್ಟ್ರೀಯ,ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸಾಂಸ್ಕೃತಿಕ ವಿನಿಮಯಕ್ಕಾಗಿ ಕಾಸರಗೋಡು ಮೀಪುಗುರಿ- ಪಾರೆಕಟ್ಟೆ- ಕನ್ನಡ…

Read More

ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ ತುಲಾ ಪತ್ತ್ ಆಚರಣೆ ಸಂಪನ್ನ

ಮಂಜೇಶ್ವರ: ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ತುಲಾ ಪತ್ತ್ ಆಚರಣೆಯು ಶ್ರದ್ಧಾಭಕ್ತಿ ಹಾಗೂ ಧಾರ್ಮಿಕ ಸಂಭ್ರಮದೊಂದಿಗೆ ಸಂಪನ್ನಗೊಂಡಿತು. ಅನಾದಿ ಕಾಲದಿಂದಲೂ ಮೂಲ ಮಂಜು ವಂಶದ ಬಂಗೇರ ಕುಟುಂಬಸ್ಥರು ನಡೆಸಿಕೊಂಡು ಬರುತ್ತಿರುವ ಸಾಂಪ್ರದಾಯಿಕ ಆಚರಣೆಯು ಕ್ಷೇತ್ರದಲ್ಲಿ ಭಕ್ತಿಪೂರ್ಣ ವಾತಾವರಣದಲ್ಲಿ ನಡೆಯಿತು. ಶ್ರೀ ಕ್ಷೇತ್ರದಲ್ಲಿ ಕೊಪ್ಪರಿಗೆ ಮುಹೂರ್ತದ ಬಳಿಕ ಬೆಳಗ್ಗೆ 7.30ಕ್ಕೆ ಭಂಡಾರ ಮನೆಯಿಂದ ಭಂಡಾರವನ್ನು ಕನಿಲ ಕ್ಷೇತ್ರಕ್ಕೆ ತರಲಾಯಿತು. ಬಳಿಕ ಸಂಜೆ 4 ಗಂಟೆಗೆ ಉತ್ಸವದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಬಿಂಬ ದರ್ಶನ ಹಾಗೂ ಭಕ್ತಾದಿಗಳ ಹರಕೆ ಸೇವೆಗಳು…

Read More

ಜೋಡುಕಲ್ಲು ಚಪ್ಪರ ವಿವಾದ ಉಲ್ಬಣ – ಪ್ರತಿಭಟನೆ, ಅಖಂಡ ಭಜನೆ

ಕಾಸರಗೋಡು: ಉಪ್ಪಳ ಸಮೀಪದ ಜೋಡುಕಲ್ಲಿನಲ್ಲಿ ಚಪ್ಪರ ನಿರ್ಮಾಣಕ್ಕೆ ಸಂಬಂಧಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಪ್ಪರ ತೆರವುಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕಳೆದ ಸುಮಾರು 50 ವರ್ಷಗಳಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದ ಸ್ಥಳದಲ್ಲಿ ತಾತ್ಕಾಲಿಕ ಚಪ್ಪರ ನಿರ್ಮಿಸಿದ ಬಳಿಕ ವಿವಾದ ಆರಂಭವಾಗಿದೆ ಎನ್ನಲಾಗಿದೆ. ಈ ಸಂಬಂಧ ಮುಸ್ಲಿಂ ಲೀಗ್ ಹಾಗೂ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದು, ಚಪ್ಪರ…

Read More

ವೇದವ್ಯಾಸ ಕಾಮತ್ ಮಂಗಳೂರಿನ ಅಭಿವೃದ್ಧಿಗೆ ತಂದ ಅನುದಾನೆಷ್ಟು? ಶ್ವೇತಪತ್ರ ಹೊರಡಿಸಿ: ಎ.ಸಿ. ವಿನಯರಾಜ್ ಸವಾಲು

ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ತಮ್ಮ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ತಂದ ಅನುದಾನವೆಷ್ಟು ಎಂಬುದನ್ನು ಬಹಿರಂಗಪಡಿಸಿ ಶ್ವೇತಪತ್ರ ಹೊರಡಿಸಲಿ. ಈ ಕುರಿತು ನೇರಾನೇರ ಚರ್ಚೆಗೆ ನಾವು ಸಿದ್ಧರಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎ.ಸಿ. ವಿನಯರಾಜ್ ಸವಾಲು ಹಾಕಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಶಾಸಕ ವೇದವ್ಯಾಸ ಕಾಮತ್ ಬೀದಿ ನಾಟಕ ಮಾಡುತ್ತಿದ್ದಾರೆ. 2019ರಿಂದ 2025ರವರೆಗೆ ಬಿಜೆಪಿ ಆಡಳಿತದಲ್ಲಿತ್ತು. ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ಅವರೇ…

Read More

ಶ್ರೀ ತುಳಸಿ ಜ್ಞಾನವಿಕಾಸ ಕೇಂದ್ರ ಉಳಿಯತ್ತಡ್ಕದ ದಶಮಾನೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಾಸರಗೋಡು ಶ್ರೀ ತುಳಸಿ ಜ್ಞಾನವಿಕಾಸ ಕೇಂದ್ರ ಉಳಿಯತ್ತಡ್ಕ ಇದರ ದಶಮಾನೋತ್ಸವ ಕಾರ್ಯಕ್ರಮ ತರುಣ ಕಲಾವೃಂದ ಪರಕ್ಕಿಲದಲ್ಲಿ ನಡೆಯಿತು . ಮಧೂರು ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜ್ಞಾನಿ ಶಾನಬೋಗ್ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು . ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ತಾಲೂಕಿನ ಮಾನ್ಯ ಯೋಜನಾಧಿಕಾರಿ ಶ್ರೀ ದಿನೇಶ್ ಹಾಗೂ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಜ್ಞಾನೇಶ್ವರ ಆಚಾರ್ಯ ಪರಕ್ಕಿಲ…

Read More

60 ವರ್ಷದ ಇಬ್ರಾಹಿಂ ಬಾಡಿಪಲ್ಪ ನಾಪತ್ತೆ – ಸುಳಿವು ಸಿಕ್ಕರೆ ಸಂಪರ್ಕಿಸಲು ಮನವಿ

​ ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮೀಂಜ ಗ್ರಾಮ ಪಂಚಾಯತ್‌ಗೆ ಸೇರಿದ ಕಡಂಬಾರು ನಿವಾಸಿ ಇಬ್ರಾಹಿಂ (60), ಬಾಡಿಪಲ್ಪ ಅವರು ಮಂಗಳವಾರ ಬೆಳಿಗ್ಗೆಯಿಂದ ಕಾಣೆಯಾಗಿದ್ದಾರೆ. ಈ ಕುರಿತು ಮಂಜೇಶ್ವರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ​ ಮಂಗಳವಾರ ಬೆಳಿಗ್ಗೆ ಕಡಂಬಾರಿನಿಂದ ಆಟೋರಿಕ್ಷಾ ಮೂಲಕ ಹೊಸಂಗಡಿಗೆ ತೆರಳಿದ್ದನ್ನು ಸ್ಥಳೀಯರು ಗಮನಿಸಿದ್ದು, ತದನಂತರ ಅವರು ನಾಪತ್ತೆಯಾಗಿದ್ದಾರೆ.ಪ್ರಸ್ತುತ ಇವರ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ನಡೆಯುತ್ತಿದೆ. ​ಈ ವ್ಯಕ್ತಿಯ ಕುರಿತು ಯಾವುದೇ ಮಾಹಿತಿ ಅಥವಾ ಸುಳಿವು ಲಭಿಸಿದಲ್ಲಿ ಕೂಡಲೇ ಸ್ಥಳೀಯ…

Read More

ಕೇರಳ ಕೇಂದ್ರೀಯ ವಿವಿಯಲ್ಲಿ ಅ. 29ಕ್ಕೆ ‘ಸಾಹಿತ್ಯ ಸಂಸ್ಕೃತಿ ಸಿರಿ’: ಹರೇಕಳ ಹಾಜಬ್ಬರಿಗೆ ಸನ್ಮಾನ, ಯಕ್ಷಗಾನ ಸಂಭ್ರಮ

​ ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗವು ಅಕ್ಟೋಬರ್ 29ರಂದು ಸಂಜೆ 3.30ಕ್ಕೆ ಪಯಸ್ವಿನಿ ಸಭಾಂಗಣದಲ್ಲಿ ‘ಸಾಹಿತ್ಯ ಸಂಸ್ಕೃತಿ ಸಿರಿ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕುಲಪತಿ ಪ್ರೊ. ಸಿದ್ದು ಪಿ. ಅಲಗೂರು ಉದ್ಘಾಟಿಸಲಿದ್ದು, ಕಸಾಪ ಕೇರಳ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್‌ ತೊಟ್ಟೆತ್ತೋಡಿ ‘ಕರಾವಳಿ ಕಲಾ ಸಂಪತ್ತು’ ವಿಷಯವಾಗಿ ಉಪನ್ಯಾಸ ನೀಡಲಿದ್ದಾರೆ. ​ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಪದ್ಮಶ್ರೀ ಹರೇಕಳ ಹಾಜಬ್ಬ ಅವರಿಗೆ ಈ ಸಂದರ್ಭದಲ್ಲಿ ಗೌರವ ಸನ್ಮಾನ ನೆರವೇರಲಿದೆ. ವಿವಿಯ ಪ್ರಮುಖ ಅಧಿಕಾರಿಗಳು ಭಾಗವಹಿಸಲಿರುವ ಈ ಸಮಾರಂಭದಲ್ಲಿ…

Read More

ಮಂಜೇಶ್ವರ ಗೋವಿಂದ ಪೈ ಕಾಲೇಜು ಯು.ಎ.ಇ. ಪೂರ್ವ ವಿದ್ಯಾರ್ಥಿ ಕುಟುಂಬ ಮಿಲನ

ಮಂಜೇಶ್ವರ/ದುಬೈ : ಗೋವಿಂದ ಪೈ ಮೆಮೋರಿಯಲ್ ಗವರ್ನ್ಮೆಂಟ್ ಕಾಲೇಜ್ ಮಂಜೇಶ್ವರ ಇದರ ಯು.ಎ.ಇ. ಪೂರ್ವ ವಿದ್ಯಾರ್ಥಿಗಳ ವತಿಯಿಂದ ಆಯೋಜಿಸಲಾದ ಕುಟುಂಬ ಮಿಲನವು ಸದಸ್ಯರು ಮತ್ತು ಅವರ ಕುಟುಂಬಸ್ಥರ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಗಮನಸೆಳೆಯಿತು. ಕಾಲೇಜು ದಿನಗಳ ನೆನಪುಗಳು ಮತ್ತು ಸ್ನೇಹವನ್ನು ನವೀಕರಿಸುವುದರ ಜೊತೆಗೆ, ಕುಟುಂಬಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು ಈ ಮಿಲನವು ವೇದಿಕೆಯಾಯಿತು. ​ಜಿಪಿಎಂ ಕಾಲೇಜು ಯು.ಎ.ಇ. ಅಲುಮ್ನೈ ಅಧ್ಯಕ್ಷ ಮುನೀರ್ ಸೊಂಕಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಮೊಯ್ದೀನ್ ಅಲಿ ಸ್ವಾಗತಿಸಿದರು.ಜನ್ನಿ ಫ್ಲವರ್ಸ್…

Read More
error: Content is protected !!