Avatar

NAMMA MEDIA 24X7

ಇನೋಳಿಗೆ ಸರ್ಕಾರಿ ಬಸ್ ಓಡಾಟಕ್ಕೆ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ

ಕೊಣಾಜೆ: ಪಾವೂರು ಗ್ರಾಮದ ಇನೋಳಿಗೆ ಸರ್ಕಾರಿ ಬಸ್ ಸೇವೆ ಆರಂಭಿಸುವಂತೆ ಆಗ್ರಹಿಸಿ ಸರ್ಕಾರಿ ಬಸ್ ಹೋರಾಟ ಸಮಿತಿಯ ನೇತೃತ್ವದಲ್ಲಿ ಮಲಾರ್ ಪದವಿನ ಸೆಂಟ್ರಲ್ ಮುಸ್ಲಿಂ ಶಾಲೆ ಬಳಿ ಭಾನುವಾರ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಇನೋಳಿಗೆ ಸರ್ಕಾರಿ ಬಸ್ ಓಡಾಟ ಆರಂಭಿಸುವಂತೆ ಗ್ರಾಮ ಪಂಚಾಯಿತಿ, ಸಚಿವರು ಹಾಗೂ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಈಗಾಗಲೇ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸಮಿತಿ ಮುಖಂಡರು ಆರೋಪಿಸಿದ್ದಾರೆ. ಸರ್ಕಾರಿ ಬಸ್ ಸೇವೆ ಇಲ್ಲದ ಕಾರಣ ರಾಜ್ಯ ಸರ್ಕಾರದ ಮಹತ್ವದ…

Read More

ಸಮುದ್ರ ಪಾಲಾದ ಇಬ್ಬರು ಯುವಕರ ಮೃತದೇಹ ಪತ್ತೆ

ಕಾಸರಗೋಡು: ಬೇಕಲ ಕೋಟೆ ಸಮೀಪದ ಪಳ್ಳಿಕೆರೆ ಸಮುದ್ರ ತೀರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಯುವಕರ ಮೃತದೇಹಗಳು ಸೋಮವಾರ ಮಧ್ಯಾಹ್ನ ಪತ್ತೆಯಾಗಿವೆ. ಮೃತರನ್ನು ಕೊಟ್ಟಾಯಂ ಜಿಲ್ಲೆಯ ಚಂಗನಕ್ಕೇರಿ ಮೂಲದ ಅಪ್ಪುಟಿ ಅಬ್ರಹಾಂ (20) ಹಾಗೂ ಅಂಕಿತ್ (20) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ನಾಲ್ವರು ಯುವಕರು ಕೊಟ್ಟಾಯಂನಿಂದ ಪಳ್ಳಿಕೆರೆ ಸಮುದ್ರ ತೀರಕ್ಕೆ ಆಗಮಿಸಿ ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದರು. ಈ ವೇಳೆ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿದ ನಾಲ್ವರಲ್ಲಿ ಇಬ್ಬರು ಸುರಕ್ಷಿತವಾಗಿ ದಡ ಸೇರಿದ್ದರೆ, ಅಪ್ಪುಟಿ ಅಬ್ರಹಾಂ…

Read More

ರೈತರ ಸಮಸ್ಯೆ ಪರಿಹಾರಕ್ಕೆ ಎಸ್‌ಪಿಗೆ ಮನವಿ ಸಲ್ಲಿಕೆ

ಮಂಗಳೂರು: ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ರಕ್ಷಣೆಗಾಗಿ ಅಗತ್ಯವಿರುವ ಕೋವಿ ಪರವಾನಗಿ ನವೀಕರಣಕ್ಕೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ಪಡೆಯುವಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ನಿಯೋಗವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಮುಂದಾಳತ್ವದಲ್ಲಿ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ನಿಯೋಗವು ಎಸ್‌ಪಿ ಅವರನ್ನು…

Read More

ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಪ್ರಧಾನಿ ಮೋದಿ ಸ್ವಾಗತ; ಮಧ್ಯಪ್ರಾಚ್ಯದಲ್ಲಿ ಸ್ಥಿರತೆ ನಿರೀಕ್ಷೆ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹಲವು ತಿಂಗಳುಗಳಿಂದ ಮುಂದುವರಿದಿದ್ದ ಉದ್ವಿಗ್ನತೆಯನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದಿರುವ ಶಾಂತಿ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸ್ವಾಗತಿಸಿದ್ದಾರೆ. ಈ ಒಪ್ಪಂದದಿಂದ ಜಾಗತಿಕ ಆರ್ಥಿಕತೆಯಲ್ಲಿ ಉಂಟಾಗಿದ್ದ ಅಡಚಣೆಗಳು ನಿವಾರಣೆಯಾಗುವ ಜೊತೆಗೆ, ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಮರುಸ್ಥಾಪನೆಯಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ಯುರೋಪ್ ಪ್ರವಾಸದ ಅಂಗವಾಗಿ ಸ್ಲೋವಾಕಿಯಾದ ರಾಜಧಾನಿ ಬ್ರಾಟಿಸ್ಲಾವಾದಲ್ಲಿ ಇರುವ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯೆ ನೀಡಿದ್ದು, “ಮಧ್ಯಪ್ರಾಚ್ಯ ಸಂಘರ್ಷವನ್ನು ಅಂತ್ಯಗೊಳಿಸುವ…

Read More

ಶಬರಿಮಲೆ ಯಾತ್ರೆಗೆ ತೆರಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಪಂಪ: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಸೋಮವಾರ ಮುಂಜಾನೆ ಕೊಚ್ಚಿನ್‌ನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿ, ಶ್ರೀ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿದರು. ಬಳಿಕ ದೇವಸ್ಥಾನದಲ್ಲಿಯೇ ಇರುಮುಡಿ ಕಟ್ಟಿ ಶಬರಿಮಲೆ ಯಾತ್ರೆಗೆ ಚಾಲನೆ ನೀಡಿದರು. ಮಧ್ಯಾಹ್ನದ ವೇಳೆಗೆ ಪಂಪಾ ನದಿ ತೀರ ತಲುಪಲಿರುವ ಸಚಿವರು, ಪವಿತ್ರ ಸ್ನಾನ ನೆರವೇರಿಸಿದ ಬಳಿಕ ಶಬರಿಮಲೆಯತ್ತ ಪಾದಯಾತ್ರೆ ಮುಂದುವರಿಸಲಿದ್ದಾರೆ….

Read More

ಇಸ್ರೇಲ್ ದಾಳಿಯಿಂದ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಪ್ರಕ್ರಿಯೆಗೆ ಹಿನ್ನಡೆ: ಟ್ರಂಪ್

ವಾಷಿಂಗ್ಟನ್: ಇಸ್ರೇಲ್ ಪ್ರಧಾನಿಬೆಂಜಮಿನ್ ನೆತನ್ಯಾಹು ಲೆಬನಾನ್‌ನ ಬೈರುತ್ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಪ್ರಕ್ರಿಯೆ ಹಿನ್ನಡೆ ಕಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟ್ರಂಪ್, ನೆತನ್ಯಾಹು ಅವರನ್ನು “ತುಂಬಾ ಕಠಿಣ ವ್ಯಕ್ತಿ” ಎಂದು ಬಣ್ಣಿಸಿ, ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದುವುದನ್ನು ತಡೆಯುವ ಒಪ್ಪಂದಕ್ಕಾಗಿ ಇಸ್ರೇಲ್ ಅಮೆರಿಕಕ್ಕೆ ಕೃತಜ್ಞರಾಗಿರಬೇಕು ಎಂದರು. ಜೂನ್ 19ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಸಹಿಯಾಗಲಿರುವ ಒಪ್ಪಂದವು ಲೆಬನಾನ್ ಸೇರಿದಂತೆ ಎಲ್ಲ ರಂಗಗಳಲ್ಲಿನ ಸಂಘರ್ಷಕ್ಕೆ ಅಂತ್ಯ ಹಾಡುವುದು, ಹಾರ್ಮುಜ್ ಜಲಸಂಧಿಯ ಮೂಲಕ…

Read More

ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ಖಂಡಿಸಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಆಕ್ರೋಶ

ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಆರೈಕೆ ಇಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಕೆಲವು ಕಡೆ ಸರ್ಕಾರಿ ಆಸ್ಪತ್ರೆ ಕಾರ್ಯ ನಿರ್ವಹಿಸುತ್ತಿದೆಯೋ ಅಥವಾ ಇಲ್ಲವೋ ಎಂಬ ಪ್ರಶ್ನೆ ಕಾಡುತ್ತಿದೆ.. ಕೆಲವು ಆಸ್ಪತ್ರೆಗಳಲ್ಲಿ ಸರಿಯಾದ ಆರೈಕೆ ಇಲ್ಲದೆ ಬಡ ರೋಗಿಗಳು ಪರದಾಡುವಂತಾಗಿದೆ.. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ತಮ್ಮ ಜೀವವನ್ನೇ ಕಳೆದುಕೊಂಡ ಕೆಲವು ಘಟನೆಗಳು ಕೂಡ ತಮ್ಮ ಕಣ್ಣೆದುರು ಇದೇ.. ಹಾಗೂ ಬಡ ಜನಾಂಗದವರಿಗೆ ದುಬಾರಿ ಹಣ ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಷ್ಟು…

Read More

ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ತಂತ್ರಜ್ಞಾನ ಬಳಸಬೇಕು: ಎಂ.ಎಲ್. ಅಶ್ವಿನಿ

ಕಾಸರಗೋಡು: ಸ್ಮಾರ್ಟ್‌ಫೋನ್ ಸೇರಿದಂತೆ ಆಧುನಿಕ ತಂತ್ರಜ್ಞಾನ ವ್ಯವಸ್ಥೆಗಳನ್ನು ಕೇವಲ ಮನರಂಜನೆಗಾಗಿ ಮಾತ್ರವಲ್ಲದೆ ಜ್ಞಾನಾರ್ಜನೆ ಹಾಗೂ ಶಿಕ್ಷಣದ ಉದ್ದೇಶಕ್ಕೂ ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಕರೆ ನೀಡಿದರು. ಮಧೂರು ಎಸ್‌ಸಿ-ಎಸ್‌ಟಿ ಪಂಚಾಯತ್ ಸಮಿತಿಯ ವತಿಯಿಂದ ಕೂಡ್ಲು ಗೋಪಾಲಕೃಷ್ಣ ವಿದ್ಯಾಲಯದಲ್ಲಿ ಆಯೋಜಿಸಲಾದ ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಂತ್ರಜ್ಞಾನವನ್ನು ವಿದ್ಯಾರ್ಥಿಗಳು ದುರುಪಯೋಗಪಡಿಸಿಕೊಳ್ಳದಂತೆ ಪೋಷಕರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ ಅವರು, ಕಳೆದ 12 ವರ್ಷಗಳಲ್ಲಿ ಶಿಕ್ಷಣ ಸೇರಿದಂತೆ…

Read More

“ಬಂಟ ಸಮಾಜ ಮಕ್ಕಳಿಗೆ ಶಿಕ್ಷಣದ ಜೊತೆ ಉತ್ತಮ ಸಂಸ್ಕಾರವನ್ನು ನೀಡಬೇಕು” -ಅಜಿತ್ ಕುಮಾರ್ ರೈ ಮಾಲಾಡಿ

ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ 26ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಸಹಾಯಹಸ್ತ, ವಿದ್ಯಾರ್ಥಿ ವೇತನ, ದತ್ತಿ ನಿಧಿ ಹಾಗೂ ಸಮೂಹ ನೃತ್ಯ ಸ್ಪರ್ಧೆ ಕಾರ್ಯಕ್ರಮವು ಆದಿತ್ಯವಾರ ಬಂಟರ ಸಂಘದಲ್ಲಿ ಜರುಗಿತು. ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು “ಬಂಟ ಸಮಾಜ ಇಂದು ಬಹಳಷ್ಟು ಮುಂದುವರಿದಿದೆ. ಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಇಂದು ಅದೇ ವಿಧ್ಯೆ ನಮ್ಮ…

Read More

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಅನಂತ್ ಅಂಬಾನಿ ಭೇಟಿ; ವಿಶೇಷ ಪೂಜೆ ಸಲ್ಲಿಕೆ

ಉಡುಪಿ : ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಭಾನುವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅನಂತ್ ಅಂಬಾನಿ ಅವರು ಶನಿವಾರವೇ ಕೊಲ್ಲೂರಿಗೆ ಆಗಮಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಮುಂಬೈನಲ್ಲಿ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ಉಂಟಾದ ತೊಂದರೆಯಿಂದ ಅವರ ಭೇಟಿ ಮುಂದೂಡಲ್ಪಟ್ಟಿತ್ತು. ಭಾನುವಾರ ಸಂಜೆ ದೇವಸ್ಥಾನಕ್ಕೆ ಆಗಮಿಸಿದ ಅನಂತ್ ಅಂಬಾನಿ, ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ…

Read More
error: Content is protected !!