Avatar

NAMMA MEDIA 24X7

ಮಂಗಳೂರು: ಪ್ರಚೋದನಾತ್ಮಕ ಭಾಷಣ ಆರೋಪ – ಎಸ್‌ಡಿಪಿಐ ಮುಖಂಡನ ವಿರುದ್ಧ ಕಠಿಣ ಕ್ರಮಕ್ಕೆ ವಿಎಚ್‌ಪಿ ಆಗ್ರಹ

ಮಂಗಳೂರು: ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿರುವ ಆರೋಪದಡಿ ಎಸ್‌ಡಿಪಿಐ ಮುಖಂಡನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಈ ಕುರಿತು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಂಟ್ವಾಳ ತಾಲೂಕಿನ ಗೂಡಿನ ಬಳಿ ನಡೆದ ಉರುಸ್ ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಮುಖಂಡನೊಬ್ಬ ಪ್ರಚೋದನಾತ್ಮಕ ಭಾಷಣ ಮಾಡಿರುವುದಾಗಿ ಆರೋಪಿಸಿದರು. “ಗೋಮಾಂಸ ತಿನ್ನುವುದು ನಮ್ಮ ಹಕ್ಕು” ಎಂದು ಭಾಷಣದಲ್ಲಿ ಹೇಳಿರುವುದಲ್ಲದೆ, “ಇದನ್ನು ಪ್ರಶ್ನಿಸಲು ಯಾರಾದರೂ ಬಂದರೆ ಕೈಕಟ್ಟಿ…

Read More

ಮಂಗಳೂರು: ‘ಸರಯೂ ಸಪ್ತಾಹ–2026’ ಮೇ 25ರಿಂದ ಕದ್ರಿ ದೇವಳದಲ್ಲಿ ಆರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಪ್ರಥಮ ಮಕ್ಕಳ ಮೇಳ ‘ಸರಯೂ ಬಾಲ ಯಕ್ಷ ವೃಂದ’ ಕೋಡಿಕಲ್ ತಂಡದ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಬಹುನಿರೀಕ್ಷಿತ ‘ಸರಯೂ ಸಪ್ತಾಹ–2026’ ಕಾರ್ಯಕ್ರಮವು ಮೇ 25ರಿಂದ ಜೂನ್ 1ರವರೆಗೆ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ಸ್ವಾಮಿ ದೇವಳದ ರಾಜಾಂಗಣದಲ್ಲಿ ಪ್ರತಿದಿನ ಸಂಜೆ 5.30ರಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿದೆ ಎಂದು ಸಂಸ್ಥೆಯ ನಿರ್ದೇಶಕ ವರ್ಕಾಡಿ ರವಿ ಅಲೆವೂರಾಯ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾರಪೂರ್ತಿ…

Read More

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಗೆ ” ಜಾನಪದ ರತ್ನ – 2026″ ಪ್ರಶಸ್ತಿ

ಮಂಗಳೂರು: ಗಡಿ ಭಾಗದ ಕನ್ನಡ ಸಂಸ್ಕೃತಿ, ಜಾನಪದ ಕಲೆ ಹಾಗೂ ಸಾಹಿತ್ಯ ಪರಂಪರೆಯನ್ನು ಒಗ್ಗೂಡಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು, ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಹಾಗೂ ಕೇರಳ ಗಡಿನಾಡ ಘಟಕ, ಕಾಸರಗೋಡು ಇವರ ಸಂಯುಕ್ತ ಆಶ್ರಯದಲ್ಲಿ ನಾಟ್ಯರತ್ನಂ ಕಣ್ಣನ್ ಪಾಟಾಳಿ ಸ್ಮಾರಕ ಕಥಕಳಿ ಟ್ರಸ್ಟ್ ಸಂಯೋಜನೆಯಲ್ಲಿ ನಡೆದ ‘ಸಮನ್ವಯ’ ಜಾನಪದ ಉತ್ಸವದ ಸಂದರ್ಭದಲ್ಲಿ ಘೋಷಿಸಲಾದ ‘ಜಾನಪದ ರತ್ನ – 2026’ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್…

Read More

ಬಸ್ ಮುಷ್ಕರಕ್ಕೆ ತಾತ್ಕಾಲಿಕ ತಡೆಸಾರಿಗೆ ಸೇವೆ ಸ್ಥಗಿತ ಆತಂಕ ದೂರ; ಪ್ರಯಾಣಿಕರಿಗೆ ನೆಮ್ಮದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ನಾಳೆಯಿಂದ ನಡೆಸಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಬಸ್ ಮುಷ್ಕರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಸಾರ್ವಜನಿಕರ ಹಿತದೃಷ್ಟಿಯನ್ನು ಪರಿಗಣಿಸಿದ ನ್ಯಾಯಾಲಯ, ಯಾವುದೇ ರೀತಿಯ ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ನಾಳೆ ಎಂದಿನಂತೆ ರಾಜ್ಯಾದ್ಯಂತ ಬಸ್ ಸಂಚಾರ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ. ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ…

Read More

ಬ್ಯಾಂಕ್ ಸೆಕ್ಯೂರಿಟಿ ನೌಕರನ ಹತ್ಯೆ; ಇಬ್ಬರು ಆರೋಪಿಗಳ ಬಂಧನ

​ ಮಂಜೇಶ್ವರ: ಕುಂಬಡಾಜೆ ಸೇವಾ ಸಹಕಾರಿ ಬ್ಯಾಂಕಿನ ಮಾರ್ಪನಡ್ಕ ಶಾಖೆಯ ಭದ್ರತಾ ಸಿಬ್ಬಂದಿ ಸುರೇಶ್ ಬಿ.ಕೆ. (45) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಣ್ (30) ಮತ್ತು ಅಖಿಲೇಷ್ (25) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ​ಕಳೆದ ಭಾನುವಾರ ರಾತ್ರಿ ಬ್ಯಾಂಕ್ ಪರಿಸರದಲ್ಲಿ ಈ ಕೃತ್ಯ ನಡೆದಿತ್ತು. ಕುಂದ್ಲಾಜೆ ಮೈದಾನದಲ್ಲಿ ನಡೆದಿದ್ದ ಕ್ರಿಕೆಟ್ ಪಂದ್ಯಾಟದ ವೇಳೆ ಉಂಟಾದ ಸಣ್ಣ ಮಾತಿನ ಚಕಮಕಿಯೇ ಈ ಹತ್ಯೆಗೆ ಮೂಲ ಕಾರಣ ಎನ್ನಲಾಗಿದೆ. ಕೃತ್ಯದ ಬಳಿಕ ಬೈಕ್ ಬಿಟ್ಟು ಪರಾರಿಯಾಗಿದ್ದ ಆರೋಪಿಗಳು, ಏತಡ್ಕ…

Read More

ಅಂತರರಾಜ್ಯ ಮಾದಕ ದ್ರವ್ಯ ಜಾಲದ ಪ್ರಮುಖ ಆರೋಪಿ ಕುಂಬಳೆ ಪೊಲೀಸರ ವಶಕ್ಕೆ

​ಮಂಜೇಶ್ವರ: ಕೇರಳಕ್ಕೆ ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಅಂತರರಾಜ್ಯ ಜಾಲದ ಪ್ರಮುಖ ಕೊಂಡಿ, ಕೋಝಿಕೋಡ್ ತಿರುವಂಬಾಡಿ ನಿವಾಸಿ ಗೊಡ್ವಿನ್ (30) ಎಂಬಾತನನ್ನು ಕುಂಬಳೆ ಪೊಲೀಸರು ಕರ್ನಾಟಕದ ಮಡಿಕೇರಿಯಲ್ಲಿ ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ​ಕಳೆದ ಫೆಬ್ರವರಿಯಲ್ಲಿ ಮಂಗಲ್ಪಾಡಿ ಎಂಬಲ್ಲಿ 53.980 ಗ್ರಾಂ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈತ ಎರಡನೇ ಆರೋಪಿಯಾಗಿದ್ದಾನೆ. ಮೈಸೂರಿನಲ್ಲಿದ್ದ ಈತನ ಅಡಗುತಾಣವನ್ನು ಪೊಲೀಸರು ಸುತ್ತುವರೆದಾಗ, ಅಪಾರ್ಟ್‌ಮೆಂಟ್ ಗೇಟ್‌ಗೆ ಕಾರು ಡಿಕ್ಕಿ ಹೊಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ಗಂಟೆಗಳ ಕಾಲ ಬೆನ್ನಟ್ಟಿ…

Read More

ಉಪ್ಪಳ: ತಾಲೂಕು ಆಸ್ಪತ್ರೆಗೆ ₹10 ಲಕ್ಷ ಮೌಲ್ಯದ ಕ್ಯಾನ್ಸರ್ ಪರೀಕ್ಷಾ ಯಂತ್ರ ದೇಣಿಗೆ

ಉಪ್ಪಳ: ಕೇರಳದಲ್ಲಿ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ, ಮಂಜೇಶ್ವರಂ ತಾಲೂಕು ಆಸ್ಪತ್ರೆಗೆ ₹10 ಲಕ್ಷ ಮೌಲ್ಯದ ಅತ್ಯಾಧುನಿಕ ಕ್ಯಾನ್ಸರ್ ಡಿಟೆಕ್ಷನ್ ಹಾರ್ಮೋನ್ ಯಂತ್ರವನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಇರ್ಫಾನ ಇಕ್ಬಾಲ್ ಉಚಿತವಾಗಿ ನೀಡಿ ಮಾದರಿಯಾಗಿದ್ದಾರೆ. ಈ ‘ಕ್ಲಿಯಾ ಮೈಂಡ್‌ರೈ CL990i’ ಆಧುನಿಕ ಯಂತ್ರದ ಮೂಲಕ ಥೈರಾಯ್ಡ್, ಗರ್ಭಧಾರಣೆ ಸಂಬಂಧಿತ ಹಾರ್ಮೋನ್ ಪರೀಕ್ಷೆಗಳು ಹಾಗೂ ವಿವಿಧ ಕ್ಯಾನ್ಸರ್ ಪರೀಕ್ಷೆಗಳನ್ನು ಕ್ಷಣಾರ್ಧದಲ್ಲಿ ನಡೆಸಬಹುದು. ಮಂಜೇಶ್ವರಂ ಕ್ಷೇತ್ರದಲ್ಲಿ ಇತ್ತೀಚೆಗೆ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ…

Read More

ಮಾಸ್ಟರ್ಸ್ ಕ್ಲಬ್ 15 ನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀಯಪದವು : ಮೀಯಪದವಿನ ಪ್ರತಿಷ್ಠಿತ ಕ್ರೀಡೆ ಹಾಗೂ ಸಾಂಸ್ಕೃತಿಕ ಸಂಘಟನೆಯಾದ ಮಾಸ್ಟರ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ (ರಿ.) ವತಿಯಿಂದ 15ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ನಾರಾಯಣೀಯಂ ವೇದಿಕೆಯಲ್ಲಿ ಬಹಳ ವಿಜೃಂಭಣೆಯಿಂದ ಜರಗಿತು. ಕಾರ್ಯಕ್ರಮದ ಅಂಗವಾಗಿ ಜರಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ಮಾಜಿ ಸದಸ್ಯರಾದ ಕೆ.ವಿ ರಾಧಾಕೃಷ್ಣ ಭಟ್ ವಹಿಸಿದ್ದರು. ಕಾರ್ಯಕ್ರಮಕ್ಕೆ ಶ್ರೀ ಗುರುದೇವದತ್ತ ಸಂಸ್ಥಾನ ಒಡಿಯೂರಿನ ಪರಮಪೂಜ್ಯ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು…

Read More

ಮಂಗಳೂರು: ನೀಟ್, ಯುಜಿಸಿ ನೆಟ್ ಅಕ್ರಮ ವಿರೋಧಿಸಿ ಎಸ್‌ಐಒ ಪ್ರತಿಭಟನೆ

ಮಂಗಳೂರು: ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್ ಐ ಒ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಕ್ಲಾಕ್ ಟವರ್ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದ ಉನ್ನತ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಹಾಗೂ ಈ ಅವ್ಯವಹಾರಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (NTA)ದ ಪಾತ್ರದ ಕುರಿತು ತನಿಖೆ ನಡೆಸಬೇಕೆಂದು…

Read More

ಮಂಗಳೂರು: ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆಯ ತೀವ್ರತೆ ಹೆಚ್ಚಳ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಬೇಸಿಗೆ ಮಳೆ ತೀವ್ರಗೊಂಡಿದ್ದು, ಉತ್ತರ ಕರ್ನಾಟಕ ಹಾಗೂ ಮಲೆನಾಡು ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮೈಸೂರು ಸುತ್ತಮುತ್ತಲಿನ ಜಿಲ್ಲೆಗಳು ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವ…

Read More
error: Content is protected !!