Avatar

NAMMA MEDIA 24X7

ಮಾಸ್ಟರ್ಸ್ ಕ್ಲಬ್ 15 ನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀಯಪದವು : ಮೀಯಪದವಿನ ಪ್ರತಿಷ್ಠಿತ ಕ್ರೀಡೆ ಹಾಗೂ ಸಾಂಸ್ಕೃತಿಕ ಸಂಘಟನೆಯಾದ ಮಾಸ್ಟರ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ (ರಿ.) ವತಿಯಿಂದ 15ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ನಾರಾಯಣೀಯಂ ವೇದಿಕೆಯಲ್ಲಿ ಬಹಳ ವಿಜೃಂಭಣೆಯಿಂದ ಜರಗಿತು. ಕಾರ್ಯಕ್ರಮದ ಅಂಗವಾಗಿ ಜರಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ಮಾಜಿ ಸದಸ್ಯರಾದ ಕೆ.ವಿ ರಾಧಾಕೃಷ್ಣ ಭಟ್ ವಹಿಸಿದ್ದರು. ಕಾರ್ಯಕ್ರಮಕ್ಕೆ ಶ್ರೀ ಗುರುದೇವದತ್ತ ಸಂಸ್ಥಾನ ಒಡಿಯೂರಿನ ಪರಮಪೂಜ್ಯ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು…

Read More

ಮಂಗಳೂರು: ನೀಟ್, ಯುಜಿಸಿ ನೆಟ್ ಅಕ್ರಮ ವಿರೋಧಿಸಿ ಎಸ್‌ಐಒ ಪ್ರತಿಭಟನೆ

ಮಂಗಳೂರು: ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್ ಐ ಒ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಕ್ಲಾಕ್ ಟವರ್ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದ ಉನ್ನತ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಹಾಗೂ ಈ ಅವ್ಯವಹಾರಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (NTA)ದ ಪಾತ್ರದ ಕುರಿತು ತನಿಖೆ ನಡೆಸಬೇಕೆಂದು…

Read More

ಮಂಗಳೂರು: ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆಯ ತೀವ್ರತೆ ಹೆಚ್ಚಳ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಬೇಸಿಗೆ ಮಳೆ ತೀವ್ರಗೊಂಡಿದ್ದು, ಉತ್ತರ ಕರ್ನಾಟಕ ಹಾಗೂ ಮಲೆನಾಡು ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮೈಸೂರು ಸುತ್ತಮುತ್ತಲಿನ ಜಿಲ್ಲೆಗಳು ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವ…

Read More

ವಾಷಿಂಗ್ಟನ್: ಇರಾನ್ ಮೇಲಿನ ದಾಳಿ ತಾತ್ಕಾಲಿಕವಾಗಿ ಮುಂದೂಡಿದ ಟ್ರಂಪ್

ವಾಷಿಂಗ್ಟನ್: ಇರಾನ್ ಮೇಲಿನ ಸೈನಿಕ ದಾಳಿಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಇಂದು ಮಂಗಳವಾರಕ್ಕೆ ದಾಳಿ ನಡೆಸುವ ಯೋಜನೆ, ಗಂಭೀರ ಮಾತುಕತೆಗಳು ನಡೆಯಲಿರುವ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಪೋಸ್ಟ್‌ನಲ್ಲಿ ಈ ಮಾಹಿತಿ ನೀಡಿದ ಟ್ರಂಪ್, ಒಪ್ಪಂದಕ್ಕೆ ಬರದಿದ್ದರೆ ಯುದ್ಧ ಮತ್ತೆ ಆರಂಭವಾಗುತ್ತದೆ ಸಾಧ್ಯತೆ ಇದೆ ಎಂದು ಸೂಚಿಸಿದ್ದಾರೆ. ಯುದ್ಧ ವಿರಾಮದ ಬಳಿಕ ಇರಾನ್‌ಗೆ ನೀಡಿರುವ ಸಮಯ ಮುಗಿಯುತ್ತಿದೆ, ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು…

Read More

ತಾಯಿ–ಮಗು ನಾಪತ್ತೆ: ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ನಗರದ ಬಂಗ್ರ ಕೂಳೂರು ದಂಬೆಲ್ ಪ್ರದೇಶದಲ್ಲಿ ವಾಸಿಸುತ್ತಿದ್ದ ತಾಯಿ ಹಾಗೂ ಮಗ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳ್ಳಾರಿ ಮೂಲದ ರಕ್ಷಿತಾ ಎಂ (21) ಅವರು ಮೇ 9ರಂದು ತಮ್ಮ ಒಂದು ವರ್ಷದ ಮಗ ಆದರ್ಶ್ನೊಂದಿಗೆ ಮನೆಯಿಂದ ಹೊರಟು ಹೋದವರು ಇದುವರೆಗೆ ವಾಪಸು ಬಾರದ ಹಿನ್ನೆಲೆಯಲ್ಲಿ ಕಾಣೆಯಾಗಿದ್ದಾರೆ. ಕಾಣೆಯಾದ ರಕ್ಷಿತಾ ಅವರ ಚಹರೆ: ಸುಮಾರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ ಹೊಂದಿದ್ದು, ಬಲ…

Read More

ಹಕ್ಕುಪತ್ರಕ್ಕಾಗಿ ಅಹೋರಾತ್ರಿ ಮೌನ ಪ್ರತಿಭಟನೆ ಆರಂಭ

ಬಂಟ್ವಾಳ, ಮೇ 18: ಪುಣಚ ಗ್ರಾಮದ 3 ನೇ ವಾರ್ಡ್ ನ ದೇವಿನಗರದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಕಳೆದ ಹಲವು ವರ್ಷದಿಂದ ವಾಸದ ಮನೆಗೆ ಹಕ್ಕುಪತ್ರ ನೀಡದೆ ಅಲೆದಾಡಿಸಲಾಗುತ್ತಿದೆ ಎಂದು ಆರೋಪಿಸಿ ಮೂರು ಮನೆಯ ಸದಸ್ಯರು ಹಾಗೂ ಸಂಬಂಧಿಕರು ಬಂಟ್ವಾಳ ತಾಲೂಕು ಕಚೇರಿ ಎದುರುಗಡೆ ಸೋಮವಾರ ಬೆಳಗ್ಗಿನಿಂದ ಅಹೋರಾತ್ರಿ ಮೌನ ಪ್ರತಿಭಟನೆ ಆರಂಭಿಸಿದ್ದಾರೆ. ಹಕ್ಕುಪತ್ರಕ್ಕಾಗಿ ಮನವಿ ಸಲ್ಲಿಸಿದ್ದ ಬೇಬು ಕುಮಾರಿ, ವಿಜಯಲಕ್ಷ್ಮಿ, ಪ್ರೇಮ ಅವರು ಹಾಗೂ ಮನೆ ಮಂದಿ ಸೇರಿ ಸುಮಾರು 15 ಮಂದಿ ಅಹೋರಾತ್ರಿ…

Read More

ದೇವೇಗೌಡರ ಜನ್ಮದಿನ: ಜೆಡಿಎಸ್ ವತಿಯಿಂದ ಮಂಗಳೂರಿನಲ್ಲಿ ರಕ್ತದಾನ ಶಿಬಿರ

ಮಂಗಳೂರು: ಮಾಜಿ ಪ್ರಧಾನಮಂತ್ರಿ, ಜನತಾದಳ (ಜಾತ್ಯತೀತ) ಪಕ್ಷದ ಹಿರಿಯ ನಾಯಕ ಹಾಗೂ ದೇಶದ ಹಿರಿಯ ರಾಜಕಾರಣಿಗಳಾದ ಶ್ರೀ ಎಚ್.ಡಿ. ದೇವೇಗೌಡರವರ ಜನ್ಮದಿನದ ಅಂಗವಾಗಿ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಂಗಳೂರಿನ ಲೇಡಿಗೋಷನ್ ಸಮೀಪದ ರೆಡ್ ಕ್ರಾಸ್ ರಕ್ತ ನಿಧಿ ಕೇಂದ್ರದಲ್ಲಿ ಅರ್ಥಪೂರ್ಣ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ದೇವೇಗೌಡರವರ ಜನ್ಮದಿನವನ್ನು ಆಚರಿಸುವ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಯುವಕರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವನ್ನು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ…

Read More

ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಮಂಗಳೂರು ನಗರದ ಹೊರವಲಯದ ಪ್ರಮುಖ ಹೆದ್ದಾರಿ ಜಂಕ್ಷನ್‌ಗಳಾದ ಬೈಕಂಪಾಡಿ ಮತ್ತು ಕೂಳೂರು ಬಳಿ ಸುಗಮ ಸಂಚಾರ ಹಾಗೂ ಅಪಘಾತ ಮುಕ್ತ ವಲಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವದ ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ರಾ. ಹೆ. 66ರಲ್ಲಿ ಬರುವ ಈ ಎರಡು ಪ್ರಮುಖ ಜಂಕ್ಷನ್‌ನಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಅಂಡರ್‌ಪಾಸ್ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

Read More

ದುಬಾರೆ ಆನೆ ಶಿಬಿರದಲ್ಲಿ ಭೀಕರ ಆನೆ ಕಾಳಗ: ಪ್ರವಾಸಿಗ ಮಹಿಳೆ ದುರ್ಮರಣ

ಕೊಡಗು: ದುಬಾರೆ ಆನೆ ಶಿಬಿರದಲ್ಲಿ ಭೀಕರ ಆನೆ ಕಾಳಗ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಕಾಣಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಚೆನ್ನೈ ಮೂಲದ ಜಿನ್ಶು (33) ಮೃತ ದುರ್ದೈವಿ. ದುಬಾರೆ ಆನೆ ಶಿಬಿರದಲ್ಲಿ ಆನೆಗಳಿಗೆ ಸ್ನಾನ ಮಾಡಿಸುವುದು ಹಾಗೂ ಆಹಾರ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಜಿನ್ಶು ಅವರು ಆನೆಗಳಿಗೆ ಆಹಾರಕ್ಕಾಗಿ ತೆರಳಿದ್ದಾಗ, ಅಲ್ಲಿ ಪಳಗಿಸಿದ್ದಾರೆ ಎರಡು ಆನೆಗಳು ಏಕಾಏಕಿ ಕಾಳಗ ಆರಂಭಿಸಿವೆ….

Read More

ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನೆಟ್ಲದಲ್ಲಿ ಲೋಕಕಲ್ಯಾಣಾರ್ಥಕವಾಗಿ ಶ್ರೀ ದೇವರಿಗೆ ಸೀಯಾಳ ಅಭಿಷೇಕ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ವತಿಯಿಂದ,ಜನಜಾಗೃತಿ ವೇದಿಕೆ ಕಲ್ಲಡ್ಕ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ಇದರ ಸಹಕಾರದೊಂದಿಗೆ ಲೋಕಕಲ್ಯಾಣಾರ್ಥಕವಾಗಿ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನೆಟ್ಲದಲ್ಲಿ ಶ್ರೀ ದೇವರಿಗೆ ಸೀಯಾಳ ಅಭಿಷೇಕ ಮೇ 18 ಸೋಮವಾರ ನಡೆಯಿತು.ಪುರೋಹಿತರಾದ ಪ್ರಕಾಶ್ ಭಟ್ ಅಭಿಷೇಕ ಕಾರ್ಯಕ್ರಮ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕ ಸುಖರಾಜ್, ಜನಜಾಗೃತಿ ವೇದಿಕೆ ಕಲ್ಕಡ್ಕ ವಲಯ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ,ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷೆ…

Read More
error: Content is protected !!