ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನೆಟ್ಲದಲ್ಲಿ ಲೋಕಕಲ್ಯಾಣಾರ್ಥಕವಾಗಿ ಶ್ರೀ ದೇವರಿಗೆ ಸೀಯಾಳ ಅಭಿಷೇಕ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ವತಿಯಿಂದ,ಜನಜಾಗೃತಿ ವೇದಿಕೆ ಕಲ್ಲಡ್ಕ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ಇದರ ಸಹಕಾರದೊಂದಿಗೆ ಲೋಕಕಲ್ಯಾಣಾರ್ಥಕವಾಗಿ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನೆಟ್ಲದಲ್ಲಿ ಶ್ರೀ ದೇವರಿಗೆ ಸೀಯಾಳ ಅಭಿಷೇಕ ಮೇ 18 ಸೋಮವಾರ ನಡೆಯಿತು.ಪುರೋಹಿತರಾದ ಪ್ರಕಾಶ್ ಭಟ್ ಅಭಿಷೇಕ ಕಾರ್ಯಕ್ರಮ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕ ಸುಖರಾಜ್, ಜನಜಾಗೃತಿ ವೇದಿಕೆ ಕಲ್ಕಡ್ಕ ವಲಯ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ,ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷೆ…