ಕುದುರೆಮುಖ ಪುನರ್ವಸತಿ ಯೋಜನೆ:2.38 ಕೋಟಿ ರೂ. ಚೆಕ್ ವಿತರಿಸಿದ ಸಚಿವ ಈಶ್ವರ ಖಂಡ್ರೆ
ಮಂಗಳೂರು, ಮೇ 17: ಕುದುರೆಮುಖ ಸೇರಿದಂತೆ ರಾಜ್ಯದ ಅರಣ್ಯದೊಳಗಿರುವ ವಸತಿ ಪ್ರದೇಶಗಳ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮಂಗಳೂರಿನಲ್ಲಿಂದು ನಡೆದ ಗೇರುಮೇಳದಲ್ಲಿ, ಕೆಲವು ತಿಂಗಳ ಹಿಂದೆ ಆನೆ ದಾಳಿಗೆ ಇಬ್ಬರು ಮೃತಪಟ್ಟಿದ್ದ, ಕೆರೆಕಟ್ಟೆ ಪ್ರದೇಶ ಸೇರಿದಂತೆ ಕುದುರೆಮುಖ ಅರಣ್ಯದಿಂದ ಸ್ವಯಂ ಪ್ರೇರಿತರಾಗಿ ಹೊರಬರಲು ಅರ್ಜಿ ಸಲ್ಲಿಸಿದ್ದ 5 ಕುಟುಂಬಗಳಿಗೆ 2.38 ಕೋಟಿ ರೂ.ಚೆಕ್ ವಿತರಿಸಿ ಅವರು ಮಾತನಾಡಿದರು.ಇಬ್ಬರ ಮೇಲೆ ಕಾಡಾನೆ ದಾಳಿ ಮಾಡಿದಾಗ, ಪುಂಡಾನೆಯನ್ನು…