ಮಂಗಳೂರು: ಕಾರಿನಲ್ಲಿ ಜಾನುವಾರು ಸಾಗಾಟ – ಇಬ್ಬರು ಬಂಧನ
ಮಂಗಳೂರು: ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ಈ ಕಾರ್ಯಾಚರಣೆ ನಡೆದಿದೆ. ಮೂಡಬಿದ್ರೆ ಹಂಡೇಲು ನಿವಾಸಿ ಮಹಮ್ಮದ್ ಆರಿಫ್ ಮತ್ತು ಗಂಟಾಲಕಟ್ಟೆಯ ಇಮ್ರಾನ್ ಅಲಿಯಾಸ್ ಇಬ್ರಾಹಿಂ ಬಂಧಿತ ಆರೋಪಿಗಳು. ಇವರಿಂದ ಮಾರುತಿ ಬ್ರೀಜಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ರೌಂಡ್ಸ್‌ನಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬ್ರೀಜಾ ಕಾರನ್ನು ನಿಲ್ಲಿಸಲು ಸೂಚಿಸಿದಾಗ, ಆರೋಪಿಗಳು…