Avatar

NAMMA MEDIA 24X7

ಚಲಿಸುತ್ತಿದ್ದ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ; ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಮಣಿಪಾಲ, ಜೂ.15: ಚಲಿಸುತ್ತಿದ್ದ ಶಾಲಾ ಬಸ್‌ನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾದ ಪರಿಣಾಮ ಬಸ್ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಸೋಮವಾರ ಮಣಿಪಾಲದಲ್ಲಿ ಸಂಭವಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಮಣಿಪಾಲದ ಮಾಧವ ಕೃಪಾ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕ ಸುರೇಶ್ ಸಣ್ಣಕ್ಕಿಬೆಟ್ಟು (54) ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಅಸ್ವಸ್ಥಗೊಂಡರು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅವರು ಬಸ್‌ನ ನಿಯಂತ್ರಣ ಕಳೆದುಕೊಳ್ಳುವ ಮುನ್ನವೇ ವಾಹನವನ್ನು ರಸ್ತೆ ಬದಿಗೆ ತರುವ…

Read More

ರಾ.ಹೆ.66ರ ಅಂಬಲಪಾಡಿ ಮೇಲ್ಸೇತುವೆಯ ಒಂದು ಬದಿಯ ರಸ್ತೆ ಸಂಚಾರಕ್ಕೆ ಮುಕ್ತ

ಉಡುಪಿ: ಅಂಬಲಪಾಡಿ ಮೇಲ್ಸೇತುವೆಯ ಒಂದು ಬದಿಯನ್ನು ಮಂಗಳೂರಿನಿಂದ ಕುಂದಾಪುರ ಕಡೆಗೆ ಏಕಮುಖ ವಾಹನ ಸಂಚಾರಕ್ಕೆ ಭಾನುವಾರ ಮುಕ್ತಗೊಳಿಸಲಾಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮೇಲ್ಸೇತುವೆಯ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಚಾಲನೆ ನೀಡಿದರು.ಮೇಲ್ಸೇತುವೆಯ ಕೆಳಭಾಗದ ಸರ್ವಿಸ್ ರಸ್ತೆ ಹೊಂಡಗಳಿಂದ ಕೂಡಿದ್ದು, ಮಳೆ ನೀರು ನಿಂತ ಪರಿಣಾಮ ವಾಹನ ಸಂಚಾರ ದುಸ್ತರವಾಗಿತ್ತು. ಇದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ಕ್ರಮವಾಗಿ ಮೇಲ್ಸೇತುವೆಯ ಒಂದು ಬದಿಯನ್ನು ಸಂಚಾರಕ್ಕೆ ತೆರೆಯಲಾಗಿದೆ ಎಂದು ಅಧಿಕಾರಿಗಳು…

Read More

ಕೇರಳ ರಾಜ್ಯ-ಕಾಸರಗೋಡು ಜಿಲ್ಲಾ ಕನ್ನಡ ಸಂಘಟನೆಗಳ ಡೈರೆಕ್ಟರಿ ಪ್ರಕಟಣೆ; ಮಾಹಿತಿ ಕೋರಿಕೆ

ಕಾಸರಗೋಡು: ಕೇರಳ ರಾಜ್ಯದ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ತನ್ನ 36ನೇ ಸಂಸ್ಥಾಪನಾ ವರ್ಷಾಚರಣೆಯ ಅಂಗವಾಗಿ ಕೇರಳ ರಾಜ್ಯ ಹಾಗೂ ಕಾಸರಗೋಡು ಜಿಲ್ಲಾ ಕನ್ನಡ ಸಂಘಟನೆಗಳ ವಿಳಾಸಗಳ ಡೈರೆಕ್ಟರಿಯ 2ನೇ ಪರಿಷ್ಕೃತ ಆವೃತ್ತಿಯನ್ನು ಪ್ರಕಟಿಸಲು ನಿರ್ಧರಿಸಿದೆ. ಈ ಡೈರೆಕ್ಟರಿಯಲ್ಲಿ ಕೇರಳ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಕಾಸರಗೋಡು ಜಿಲ್ಲೆಯ ಸುಮಾರು 500ಕ್ಕೂ ಅಧಿಕ ಕನ್ನಡ, ಸಾಹಿತ್ಯಿಕ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ಕನ್ನಡಪರ ಸಂಘಟನೆಗಳು,…

Read More

ಮಲಯಾಳಂ ಭಾಷಾ ಮಸೂದೆಯ ಕನ್ನಡ ವಿರೋಧಿ ಅಂಶಗಳ ಕುರಿತು ಸಚಿವ ಕೆ.ಎಂ. ಶಾಜಿಗೆ ಮನವಿ

ಕಾಸರಗೋಡು: ಕೇರಳ ಸರ್ಕಾರದ ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯಲ್ಲಿರುವ ಕನ್ನಡ ವಿರೋಧಿ ಅಂಶಗಳ ಕುರಿತು ಕರ್ನಾಟಕ ಸಮಿತಿಯ ನಿಯೋಗವು ರಾಜ್ಯ ಸ್ಥಳೀಯ ಆಡಳಿತ ಹಾಗೂ ಕಾಸರಗೋಡು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಾಜಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮನವಿಯಲ್ಲಿ ಮಸೂದೆಯಲ್ಲಿರುವ ಕೆಲವು ಅಂಶಗಳು ಕನ್ನಡ ಭಾಷಿಕರ ಹಿತಾಸಕ್ತಿಗೆ ಧಕ್ಕೆಯುಂಟುಮಾಡುವ ಸಾಧ್ಯತೆ ಇರುವುದನ್ನು ವಿವರಿಸಿ, ರಾಜ್ಯದ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರನ್ನು ಒತ್ತಾಯಿಸಲಾಯಿತು. ನಿಯೋಗದಲ್ಲಿ ಕರ್ನಾಟಕ ಸಮಿತಿ…

Read More

ಒಲವಿನಹಳ್ಳಿ ಆಶ್ರಮದಲ್ಲಿ ವಿಶ್ವ ಪರಿಸರ ದಿನಾಚರಣೆ; ವೃಕ್ಷಾರೋಪಣ, ಸಂಗೀತ ಕಾರ್ಯಕ್ರಮ ಹಾಗೂ ಸೇವಾ ಕಾರ್ಯ

ಮಂಗಳೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ SUEZ Projects Pvt. Ltd. ಹಾಗೂ ಹಾರ್ಮೋನಿ ವೈಬ್ಸ್ ಸಂಗೀತ ಬಳಗದ ಸಂಯುಕ್ತ ಆಶ್ರಯದಲ್ಲಿ ಒಲವಿನಹಳ್ಳಿ ಆಶ್ರಮದಲ್ಲಿ ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಸೇವೆಗೆ ಒತ್ತು ನೀಡುವ ವಿಶೇಷ ಕಾರ್ಯಕ್ರಮ ನಡೆಯಿತು. SUEZ Projects‌ನ ಆಡಳಿತ ವ್ಯವಸ್ಥಾಪಕ ರಾಕೇಶ್ ಶೆಟ್ಟಿ ಬಿ.ಎಸ್. ಅವರ ನೇತೃತ್ವದಲ್ಲಿ ಹಾಗೂ ಹಾರ್ಮೋನಿ ವೈಬ್ಸ್ ಬಳಗದ ಗೋಪಾಲಕೃಷ್ಣ ಕುಂದರ್ ಅವರ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಡಾ. ಅನಂತ ಪ್ರಭು ಜಿ., ಶೇಖ್ ಸಲೀಂ ಮತ್ತು ಸತೀಶ್…

Read More

ಪ್ರಿಯದರ್ಶಿನಿ ಯೋಜನೆ ಜಾರಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ

ಕಾಸರಗೋಡು, ಕೇರಳದ ಯುಡಿಎಫ್ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಿಯದರ್ಶಿನಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯಕ್ಕೆ ಸೋಮವಾರ ಚಾಲನೆ ದೊರೆಯಿತು. ಉಪ್ಪಳ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಯೋಜನೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಜೆ. ಸೋಮಶೇಖರ ಸೇರಿದಂತೆ ಯುಡಿಎಫ್ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ರಾಜ್ಯಮಟ್ಟದ ಉದ್ಘಾಟನಾ ಕಾರ್ಯಕ್ರಮವು ತಿರುವನಂತಪುರದಲ್ಲಿ ನಡೆಯಿದ್ದು, ಮುಖ್ಯಮಂತ್ರಿ ವಿ.ಡಿ. ಸತೀಶನ್ ಮಹಿಳಾ ಪ್ರಯಾಣಿಕರೊಬ್ಬರಿಗೆ ‘ಶೂನ್ಯ ದರ’ದ…

Read More

ಕೇರಳದಲ್ಲಿ ಮಹಿಳೆಯರು, ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ; ‘ಪ್ರಿಯದರ್ಶಿನಿ’ ಯೋಜನೆಗೆ ಚಾಲನೆ

ತಿರುವನಂತಪುರ: ಮಹಿಳೆಯರು ಹಾಗೂ ತೃತೀಯಲಿಂಗಿಗಳ ಸಬಲೀಕರಣದ ಉದ್ದೇಶದಿಂದ ಕೇರಳ ಸರ್ಕಾರ ಜಾರಿಗೆ ತಂದಿರುವ ‘ಪ್ರಿಯದರ್ಶಿನಿ’ ಉಚಿತ ಬಸ್ ಪ್ರಯಾಣ ಯೋಜನೆಗೆ ಸೋಮವಾರ ಅಧಿಕೃತ ಚಾಲನೆ ನೀಡಲಾಗಿದೆ. ತಂಬಾನೂರು ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ಮಹಿಳೆಯರು ಹಾಗೂ ತೃತೀಯಲಿಂಗಿಗಳ ಪ್ರತಿನಿಧಿಗಳಿಗೆ ಶೂನ್ಯ ಟಿಕೆಟ್‌ಗಳನ್ನು ಹಸ್ತಾಂತರಿಸುವ ಮೂಲಕ ಯೋಜನೆಯನ್ನು ಉದ್ಘಾಟಿಸಿದರು. ಬಳಿಕ ಪಪ್ಪನಂಕೋಡ್ ಡಿಪೋದಿಂದ ತಂಬಾನೂರು ಮೂಲಕ ಪೆರುಮಾತುರವರೆಗೆ ವಿಶೇಷ ಬಸ್ ಪ್ರಯಾಣ ನಡೆಸಲಾಯಿತು. ಮುಖ್ಯಮಂತ್ರಿ ಸೇರಿದಂತೆ 20ಕ್ಕೂ ಹೆಚ್ಚು ಗಣ್ಯರು ಈ ಪ್ರಯಾಣದಲ್ಲಿ…

Read More

ಹೊಂಡಮಯ ರಸ್ತೆಗೆ ಸ್ಥಳೀಯರಿಂದ ಶ್ರಮದಾನ; ಮಣ್ಣು-ಜಲ್ಲಿ ತುಂಬಿಸಿ ಸಂಚಾರಕ್ಕೆ ಅನುಕೂಲ

ಕಡಬ: ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ಸಂಪರ್ಕ ರಸ್ತೆಯಲ್ಲಿನ ಹೊಂಡಗಳನ್ನು ಸ್ಥಳೀಯರು ಶ್ರಮದಾನದ ಮೂಲಕ ಮುಚ್ಚಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿರುವ ಘಟನೆ ಭಾನುವಾರ ನಡೆದಿದೆ. ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್‌ವರೆಗೆ ಸುಮಾರು 2.5 ಕಿ.ಮೀ. ರಸ್ತೆ ಸಂಪೂರ್ಣ ಹೊಂಡಮಯಗೊಂಡು ವಾಹನ ಸಂಚಾರಕ್ಕೆ ಅಸಮರ್ಪಕವಾಗಿತ್ತು. ಈ ಹಿನ್ನೆಲೆಯಲ್ಲಿ ಕೊಯಿಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಿದಾನಂದ ಪಾನ್ಯಾಲು ಅವರ ನೇತೃತ್ವದಲ್ಲಿ ವಾಟ್ಸ್ಆ್ಯಪ್‌ ಗುಂಪು ರಚಿಸಿ ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಆರ್ಥಿಕ ನೆರವು ಸಂಗ್ರಹಿಸಲಾಯಿತು. ಹಲವು ದಾನಿಗಳು…

Read More

ಹೊಂಡಮಯ ರಸ್ತೆಗೆ ಸ್ಥಳೀಯರಿಂದ ಶ್ರಮದಾನ; ಮಣ್ಣು-ಜಲ್ಲಿ ತುಂಬಿಸಿ ಸಂಚಾರಕ್ಕೆ ಅನುಕೂಲ

ಕಡಬ: ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ಸಂಪರ್ಕ ರಸ್ತೆಯಲ್ಲಿನ ಹೊಂಡಗಳನ್ನು ಸ್ಥಳೀಯರು ಶ್ರಮದಾನದ ಮೂಲಕ ಮುಚ್ಚಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿರುವ ಘಟನೆ ಭಾನುವಾರ ನಡೆದಿದೆ. ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್‌ವರೆಗೆ ಸುಮಾರು 2.5 ಕಿ.ಮೀ. ರಸ್ತೆ ಸಂಪೂರ್ಣ ಹೊಂಡಮಯಗೊಂಡು ವಾಹನ ಸಂಚಾರಕ್ಕೆ ಅಸಮರ್ಪಕವಾಗಿತ್ತು. ಈ ಹಿನ್ನೆಲೆಯಲ್ಲಿ ಕೊಯಿಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಿದಾನಂದ ಪಾನ್ಯಾಲು ಅವರ ನೇತೃತ್ವದಲ್ಲಿ ವಾಟ್ಸ್ಆ್ಯಪ್‌ ಗುಂಪು ರಚಿಸಿ ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಆರ್ಥಿಕ ನೆರವು ಸಂಗ್ರಹಿಸಲಾಯಿತು. ಹಲವು ದಾನಿಗಳು…

Read More

ಇಂದಿರಾ ಲಂಕೇಶ್ ನಿಧನ; ಸಾಹಿತ್ಯ, ಮಾಧ್ಯಮ ಕ್ಷೇತ್ರಕ್ಕೆ ಅಪಾರ ನಷ್ಟ

ಬೆಂಗಳೂರು: ಖ್ಯಾತ ಪತ್ರಕರ್ತ, ಸಾಹಿತಿ ಹಾಗೂ ‘ಲಂಕೇಶ್ ಪತ್ರಿಕೆ’ಯ ಸಂಸ್ಥಾಪಕ ದಿವಂಗತ ಪಿ. ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾದರು. ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ಪುತ್ರಿ ಕವಿತಾ ಲಂಕೇಶ್ ಅವರ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು. ಇಂದಿರಾ ಲಂಕೇಶ್ ಅವರು ದಿವಂಗತ ಪತ್ರಕರ್ತೆ ಮತ್ತು ಚಿಂತಕಿ ಗೌರಿ ಲಂಕೇಶ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಹಾಗೂ ನಟ-ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ತಾಯಿಯಾಗಿದ್ದರು. ಇಂದಿರಾ ಲಂಕೇಶ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ…

Read More
error: Content is protected !!