ಕೇರಳದಲ್ಲಿ ಯುಡಿಎಫ್ ಭರ್ಜರಿ ಗೆಲುವು ಸಾಧಿಸಲಿದೆ: ರಾಜ್‌ಮೋಹನ್ ಉಣ್ಣಿತ್ತಾನ್ ಭವಿಷ್ಯವಾಣಿ
ಮಂಜೇಶ್ವರ: ಕೇರಳದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಲ್‌ಡಿಎಫ್ (LDF) ಸರ್ಕಾರ ಧೂಳಿಪಟವಾಗಲಿದ್ದು, ಯುಡಿಎಫ್ (UDF) 111ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಅಧಿಕಾರಕ್ಕೆ ಬರಲಿದೆ ಎಂದು ಕಾಸರಗೋಡು ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ಭವಿಷ್ಯ ನುಡಿದಿದ್ದಾರೆ. ಕೇರಳದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಈ ಹೇಳಿಕೆಯು, ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎಷ್ಟರಮಟ್ಟಿಗಿದೆ ಎಂಬುದಕ್ಕೆ ಕನ್ನಡಿ ಹಿಡಿದಿದೆ. 1977ರ ತುರ್ತು ಪರಿಸ್ಥಿತಿಯ ನಂತರ ನಡೆದ ಚುನಾವಣೆಯಲ್ಲಿ ಉಂಟಾದ ರಾಜಕೀಯ ಧ್ರುವೀಕರಣವನ್ನು ನೆನಪಿಸಿರುವ ಉಣ್ಣಿತ್ತಾನ್, ಅಂದು…