Avatar

NAMMA MEDIA 24X7

‘ಚುನ್ಯಾಚೊ ಫೊಂಡ್’ ಕೊಂಕಣಿ ಕವನ ಸಂಕಲನ ಬಿಡುಗಡೆ

ಮಂಗಳೂರು:ಖ್ಯಾತ ಪತ್ರಕರ್ತ ಹಾಗೂ ಸಾಹಿತಿ ರೇಮಂಡ್ ಡಿಕುನ್ಹಾ ತಾಕೊಡೆ ಅವರು ರಚಿಸಿರುವ ಕನ್ನಡ ಮತ್ತು ದೇವನಾಗರಿ ಲಿಪಿಯಲ್ಲಿನ ಕೊಂಕಣಿ ಕವನ ಸಂಕಲನ ‘ಚುನ್ಯಾಚೊ ಫೊಂಡ್’ ’ ಕೃತಿಯ ಬಿಡುಗಡೆ ಸಮಾರಂಭವು ಮಂಗಳೂರಿನ ನಗರದ ಪತ್ರಿಕಾಭವನದಲ್ಲಿ ನಡೆಯಿತು. ಕೃತಿಯನ್ನು ‘ಮೈಕಲ್ ಡಿಸೋಜಾ ವಿಷನ್ ಕೊಂಕಣಿ’ ಸಂಸ್ಥೆಯ ಸಂಸ್ಥಾಪಕ, ಅನಿವಾಸಿ ಭಾರತೀಯ ಉದ್ಯಮಿ ಹಾಗೂ ಸಮಾಜಸೇವಕರಾದ ಮೈಕಲ್ ಡಿಸೋಜಾ ಬಿಡುಗಡೆಗೊಳಿಸಿದರು. ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಮೈಕಲ್ ಡಿಸೋಜಾ, ‘ಮೈಕಲ್ ಡಿಸೋಜಾ ವಿಷನ್ ಕೊಂಕಣಿ’ ಸಂಸ್ಥೆಯ ಮೂಲಕ ಮಾತೃಭಾಷೆಯಲ್ಲಿ ಕೃತಿ ಪ್ರಕಟಿಸುವ…

Read More

ಕಾಂಗ್ರೆಸ್ ಸರಕಾರದಿಂದ ಉಡುಪಿ ಜಿಲ್ಲೆಯ ನಿರ್ಲಕ್ಷ್ಯ: ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ- ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ

ಉಡುಪಿ: ಉಡುಪಿ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಮೇ 16ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದ ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ ತೋರಿ ಜಿಲ್ಲೆಯ ಜನರಿಗೆ ಅನ್ಯಾಯ ಮಾಡುತ್ತಿದೆ. 2013ರಲ್ಲಿ ಉಡುಪಿ ನಗರ ಭಾಗಕ್ಕೆ ಆರಂಭಗೊಂಡ…

Read More

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈ ಬಿಡಿ : ಸರಕಾರಕ್ಕೆ ಸಿಪಿಐಎಂ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ನಾಲಕ್ಕು ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಆರೋಗ್ಯ ಇಲಾಖೆಯ ಆದೇಶವನ್ನು ಹಿಂಪಡೆಯಲು ಆಗ್ರಹಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರಿನಲ್ಲಿ ಬೃಹತ್ ಮೆರವಣಿಗೆ ಹಾಗು ಪ್ರತಿಭಟನಾ ಸಭೆ ನಡೆಸಿತು. ಡಾ. ಬಿ ಆರ್ ಅಂಬೆಡ್ಕರ್ ವೃತ್ತದಿಂದ ಹೊರಟ ಮೆರವಣಿಗೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು, ಮೆರವಣಿಗೆಯ ಉದ್ದಕ್ಕೂ ಆರೋಗ್ಯ ಸಚಿವರೂ ಆಗಿರುವ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ದ ಘೋಷಣೆಗಳು ಮೊಳಗಿದವು. ಮಿನಿ ವಿಧಾನ ಸೌಧದ ಮುಂಭಾಗ ಪ್ರತಿಭಟನಾ…

Read More

ಕಾಂಗ್ರೆಸ್ ನಿಂದ ಶೈಕ್ಷಣಿಕ ಕ್ಷೇತ್ರದಲ್ಲೂ ಒಡೆದು ಆಳುವ ನೀತಿ :- ಶಾಸಕ ಕಾಮತ್

ಶೈಕ್ಷಣಿಕ ಕೇಂದ್ರಗಳಲ್ಲಿ ಸಮಾನತೆ ಹಾಗೂ ಮಕ್ಕಳಲ್ಲಿ ಏಕತೆ ತರುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಶಿಸ್ತುಬದ್ಧ ಸಮವಸ್ತ್ರ ನಿಯಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂಪಡೆಯುವ ಮೂಲಕ ಶಾಲಾ-ಕಾಲೇಜುಗಳ ಶೈಕ್ಷಣಿಕ ವಾತಾವರಣವನ್ನು ಹಾಳುಗೆಡವಲು ಮುಂದಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಸಮವಸ್ತ್ರದ ಮೂಲ ಉದ್ದೇಶವೇ ವಿದ್ಯಾರ್ಥಿಗಳಲ್ಲಿ ಜಾತಿ-ಮತ-ಭೇದ ಮರೆಸಿ ಸಮಾನತೆಯ ಭಾವ ಮೂಡಿಸುವುದು. ಆದರೆ ಓಲೈಕೆ ರಾಜಕಾರಣಕ್ಕಾಗಿ ರಾಜ್ಯ ಸರ್ಕಾರವೇ, ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ವಿಭಜಿಸುತ್ತಿರುವುದು ಎಷ್ಟು ಸರಿ? ಈ ಹಿಂದೆ…

Read More

ಬನ್ನಡ್ಕ ಸರಣಿ ಅಪಘಾತಗಳಿಗೆ ಕಿಡಿಕಾರಿದ ಬಿಜೆಪಿ ಕಾರ್ಯಕರ್ತರು: ಸಂಸದ ಬ್ರಿಜೇಶ್ ಚೌಟ ವಿರುದ್ಧ ಆಕ್ರೋಶ

ಮಂಗಳೂರು :ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ವಿರುದ್ಧ ಕಾರ್ಯಕರ್ತರು ಗರಂ ಆದ ಘಟನೆ ನಡೆದಿದೆ.ಇದು‘ಇಂಥವರು ನಮ್ಮ ಜನಪ್ರತಿನಿಧಿಯಾಗಿದ್ದು ನಮ್ಮ ದುರಂತ ‘ ಎಂದು ಹೇಳುವಲ್ಲಿಗೆ ತಲುಪಿದೆ. ಬಿಜೆಪಿ ಮಂಡಲ ಉಪಾಧ್ಯಕ್ಷರೇ ಸಂಸದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನದ ಪೋಸ್ಟ್ ಹರಿದಾಡತೊಡಗಿದೆ.ರಸ್ತೆ ಸಮಸ್ಯೆಗೆ ಪರಿಹಾರ ಕೇಳಲು ಹೋದ ಬಿಜೆಪಿ ಮುಖಂಡರಿಗೆ ಅಧಿಕಾರಿಗಳ ಎದುರು ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗುತ್ತಿದೆ.ಇದು ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ಬ್ರಿಜೇಶ್ ಚೌಟ ವಿರುದ್ಧ ಆಕ್ರೋಶದ ಕಿಚ್ಚು ಹರಡಲು ಪ್ರೇರಣೆ ನೀಡುತ್ತಿದೆ. ಮೂಲ್ಕಿ…

Read More

ಮಳೆಗೆ ಜೀವಂತಗೊಂಡ ನೇತ್ರಾವತಿ; ಎ.ಎಂ.ಆರ್ ಡ್ಯಾಂನಿಂದ ನೀರು ಬಿಡುಗಡೆ ಹಿನ್ನೆಲೆ ನದಿ ಭರ್ತಿ

ಬಂಟ್ವಾಳ: ಉರಿ ಬಿಸಿಲಿನ ತಾಪಕ್ಕೆ ಬತ್ತಿ ಹೋಗಿ ಕಲ್ಲು ಬಂಡೆಗಳು ಕಾಣಿಸುತ್ತಿದ್ದ ನೇತ್ರಾವತಿ ನದಿ ಇದೀಗ ಮತ್ತೆ ಜಲಾವೃತಗೊಂಡು ತುಂಬಿ ಹರಿಯುತ್ತಿರುವ ದೃಶ್ಯ ಜನರಲ್ಲಿ ನಿರಾಳತೆ ಮೂಡಿಸಿದೆ. ಕೆಲವು ವಾರಗಳ ಹಿಂದೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ತೀವ್ರ ಕುಸಿತ ಕಂಡಿದ್ದು, ಒಳಹರಿವು ಕೂಡ ಕ್ಷೀಣವಾಗಿತ್ತು. ಇದರ ಪರಿಣಾಮ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾಗುವ ಭೀತಿ ಉಂಟಾಗಿತ್ತು. ಆದರೆ ಕಳೆದ ಮೂರು–ನಾಲ್ಕು ದಿನಗಳಿಂದ ಘಟ್ಟ ಪ್ರದೇಶ ಹಾಗೂ ತಾಲೂಕಿನ ವಿವಿಧ…

Read More

ಬೆದ್ರಾಳದಲ್ಲಿ ಮಲತ್ಯಾಜ್ಯ ಘಟಕ ಆಗಿಯೇ ಆಗುತ್ತದೆ: ಮಹಮ್ಮದ್ ಆಲಿ ಸ್ಪಷ್ಟನೆ

ಪುತ್ತೂರು :ಪುತ್ತೂರಿನ ಬೆದ್ರಾಳದ ಬಡಾವಣೆಯ ಬಗ್ಗೆ ಪುತ್ತೂರಿನ ನಗರಸಭೆ ಮಾಜಿ ವಿಪಕ್ಷ ನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಆಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಬೆದ್ರಾಳದಲ್ಲಿ ಮಲತ್ಯಾಜ್ಯ ಘಟಕ ಅಲ್ಲಿ ಅಗಿಯೇ ಆಗುತ್ತದೆ. ಯಾರು ಏನು ಬೇಕಾದರೂ ಮಾಡಲಿ. ಆದರೆ ಸರಕಾರ ವಿರುದ್ದ ಹೋಗಲು ಯಾರಿಗೂ ಸಾಧ್ಯವಿಲ್ಲ. ಮಲತ್ಯಾಜ್ಯ ಘಟಕಕ್ಕೆ ರಸ್ತೆ ನಿರ್ಮಾಣಕ್ಕೆ ಖಾಸಗಿ ಉದ್ಯಮಿ ಭೂ ಸ್ವಾಧೀನಕ್ಕೆ ನಗರ ಸಭೆಗೆ ಆದೇಶವಾಗಿದ್ದು ಇದರ ಪ್ರಕ್ರಿಯ ಆರಂಭವಾಗಿದೆ. ಕಾನೂನು ಬಾಹಿರ ಬಡಾವಣೆ ನಿರ್ಮಾಣಕ್ಕೆ ಮಾತ್ರ ನನ್ನ…

Read More

ಕಿನ್ನಿಮಜಲಿನಲ್ಲಿ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ನಾಲ್ವರು ಅಪಾಯದಿಂದ ಪಾರು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಹಾಗೂ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ರಿಕ್ಷಾದಲ್ಲಿ ಚಾಲಕ ಸಹಿತ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು, ರಾತ್ರಿ ಸುಮಾರು 2 ಗಂಟೆ ವೇಳೆ ಘಟನೆ ‌ನಡೆದಿದೆ ಎಂದು ಹೇಳಲಾಗಿದೆ.ಉದ್ಯಾವರ ಮಾಡ ಕ್ಷೇತ್ರದಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಹೋಗಿ ವಾಪಸು ಚಟ್ಟೆಕಲ್ಲು ಮನೆಗೆ ಬರುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದ ರಿಕ್ಷಾ ರಸ್ತೆಯಿಂದ ಪಕ್ಕದ ತೋಟಕ್ಕೆ…

Read More

ಮಂಗಳೂರು ವಿವಿಯಲ್ಲಿ ‘ಸಂಭ್ರಮ-2026’ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ‘ಸಂಭ್ರಮ-2026’ ಸಾಂಸ್ಕೃತಿಕ ಸ್ಪರ್ಧೆಗೆ ಮಂಗಳವಾರ ಮಂಗಳ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಸಿನಿಮಾ ಹಾಗೂ ನಾಟಕ ಕಲಾವಿದ ಸತೀಶ್ ಬಂದಲೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಾಗಿರುವುದು ಹೆಮ್ಮೆಯ ಸಂಗತಿ. ಸಾಂಸ್ಕೃತಿಕ ಕಾರ್ಯಕ್ರಮಗಳು ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಜೀವನದ ಬೆಳವಣಿಗೆಗೆ ಪೂರಕವಾಗುತ್ತವೆ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ ಕುಲಪತಿ…

Read More

ಸಿಟಿ ಸೆಂಟರ್‌ನಲ್ಲಿ ಮೂರು ದಿನಗಳ ಐತಿಹಾಸಿಕ ವಸ್ತು ಪ್ರದರ್ಶನ

ಮಂಗಳೂರು : ಸಿಟಿ ಸೆಂಟರ್ ಪ್ರಸ್ತುತಪಡಿಸುವ ದಕ್ಷಿಣ ಕನ್ನಡ ಜಿಲ್ಲಾ ಫಿಲಾಟೆಲಿಕ್ಸ್ ಮತ್ತು ನುಮಿಸ್ಮ್ಯಾಟಿಕ್ಸ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಮೂರು ದಿನಗಳ ಅಪರೂಪದ “ವಿಂಟೇಜ್ ವೈಬ್ಸ್” ವಸ್ತು ಪ್ರದರ್ಶನವು ಮೇ 15ರಿಂದ 17ರವರೆಗೆ ಮಂಗಳೂರಿನ ಸಿಟಿ ಸೆಂಟರ್ ಮಾಲ್ ನ ನೆಲ ಅಂತಸ್ತಿನಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಫಿಲಾಟೆಲಿಕ್ಸ್ ಮತ್ತು ನುಮಿಸ್ಮ್ಯಾಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಪ್ರಭಾಕರ್ ಕಾಮತ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರದರ್ಶನವು ಪ್ರತಿದಿನ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ…

Read More
error: Content is protected !!