Avatar

NAMMA MEDIA 24X7

ಬಡಗುಶಬರಿಮಲೆಯಲ್ಲಿ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ; ಭವ್ಯ ಮಹೋತ್ಸವ ಸಂಭ್ರಮ

ಕುಂಬ್ಡಾಜೆ ಬಡಗುಶಬರಿಮಲೆ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ ಹಾಗೂ ಶ್ರೀ ದೇವರ ಭವ್ಯ ಮಹೋತ್ಸವ ಬಡಗುಶಬರಿಮಲೆ ಪರಮಪವಿತ್ರ ಧಾರ್ಮಿಕ ಕೇಂದ್ರ – ಪಂದಳA ಅರಮನೆಯ ನಾರಾಯಣ ವರ್ಮಬದಿಯಡ್ಕ: ಕುಂಬ್ಡಾಜೆ ಬಡಗುಶಬರಿಮಲೆ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ ಹಾಗೂ ಶ್ರೀ ದೇವರ ಭವ್ಯ ಮಹೋತ್ಸವ ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಈ ಸಂದರ್ಭದಲ್ಲಿ ಧಾರ್ಮಿಕ…

Read More

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ

ತಿರುವನಂತಪುರಂ: ಕೇರಳದಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್‌ (ಯುಡಿಎಫ್) ಭರ್ಜರಿ ಗೆಲುವಿನ ಬಳಿಕ ಕಳೆದ ಹತ್ತು ದಿನಗಳಿಂದ ಮುಂದುವರಿದಿದ್ದ ಮುಖ್ಯಮಂತ್ರಿ ಆಯ್ಕೆ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಕೇರಳದ ನೂತನ ಮುಖ್ಯಮಂತ್ರಿಯಾಗಿ ಹಿರಿಯ ನಾಯಕ ಹಾಗೂ ಮಾಜಿ ಪ್ರತಿಪಕ್ಷ ನಾಯಕ ವಿ.ಡಿ. ಸತೀಶನ್ ಅವರನ್ನು ಆಯ್ಕೆ ಮಾಡಿದೆ. ಮೇ 4ರಂದು ಪ್ರಕಟವಾದ ಕೇರಳ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭೂತಪೂರ್ವ ಗೆಲುವು ಸಾಧಿಸಿತ್ತು. ಆದರೆ ಮುಖ್ಯಮಂತ್ರಿ ಹುದ್ದೆಗಾಗಿ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್…

Read More

ಯುಎಇಗೆ ಪ್ರಧಾನಿ ಮೋದಿ ಭೇಟಿ: ಇಂಧನ ಭದ್ರತೆ ಮೇಲೆ ಮಹತ್ವದ ಮಾತುಕತೆ

ನವದೆಹಲಿ: ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಜಾಗತಿಕ ತೈಲ ಮಾರುಕಟ್ಟೆಯ ಅಸ್ಥಿರತೆಯ ನಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಯುಎಇ ರಾಜಧಾನಿ ಅಬುಧಾಬಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೇದ್ ಅಲ್ ನಹ್ಯಾನ್ ಅವರೊಂದಿಗೆ ಇಂಧನ ಭದ್ರತೆ, ವ್ಯಾಪಾರ ಹಾಗೂ ಹೂಡಿಕೆ ಕುರಿತ ಮಹತ್ವದ ಮಾತುಕತೆ ನಡೆಯಲಿದೆ. ಭಾರತ ಮತ್ತು ಯುಎಇ ನಡುವೆ ಎಲ್‌ಪಿಜಿ ಪೂರೈಕೆ ಹಾಗೂ ತಂತ್ರಾತ್ಮಕ ಪೆಟ್ರೋಲಿಯಂ ಸಂಗ್ರಹಕ್ಕೆ ಸಂಬಂಧಿಸಿದ ಎರಡು ಪ್ರಮುಖ ಒಪ್ಪಂದಗಳಿಗೆ ಸಹಿ ಮಾಡುವ…

Read More

ವಿ.ಡಿ. ಸತೀಶನ್ vs ಕೆ.ಸಿ. ವೇಣುಗೋಪಾಲ್: ಅಂತಿಮ ಘಟ್ಟದಲ್ಲಿ ಸಿಎಂ ಪೈಪೋಟಿ

ಚರ್ಚೆಗಳಿಗೆ ಇಂದು ಅಂತ್ಯ ಸಿಗುವ ಸಾಧ್ಯತೆ ಇದೆ. ಗುರುವಾರ ತಿರುವನಂತಪುರಂನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸಲಾಗಲಿದೆ. ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ, ವೀಕ್ಷಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ.ಹಿರಿಯ ನಾಯಕರಾದ ವಿ.ಡಿ. ಸತೀಶನ್, ರಮೇಶ್ ಚೆನ್ನಿತ್ತಲ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್…

Read More

ಮಣಿಪಾಲ: ಭಗ್ನ ಪ್ರೇಮಿಯಿಂದ ಯುವತಿಗೆ ಚೂರಿ ಇರಿತ.ಶಾಂತಿನಗರ ಸಮೀಪದ ಮಹಿಳಾ ಪಿಜಿಯಲ್ಲಿ ಘಟನೆ

ಉಡುಪಿ: ಭಗ್ನ ಪ್ರೇಮಿಯಿಂದ ಯುವತಿಗೆ ಚೂರಿಯಿಂದ ಇರಿದ ಘಟನೆ ಮಣಿಪಾಲ- ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್ ನಲ್ಲಿರುವ ಮಹಿಳಾ ಪಿಜಿಯಲ್ಲಿ ನಡೆದಿದೆ.ಅಂಕೋಲ ಮೂಲದ ಯೋಗಿತಾ(23) ಮಾರಣಾಂತಿಕ ಹಲ್ಲೆಗೊಳಗಾದ ಯುವತಿ. ಈಕೆ ಮಣಿಪಾಲ- ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್ ನಲ್ಲಿರುವ ಮಹಿಳಾ ಪಿಜಿಯಲ್ಲಿ ವಾಸವಾಗಿದ್ದಳು. ಮಂಗಳವಾರ ರಾತ್ರಿ ಆಕೆಗೆ ಚೂರಿ ಇರಿಯಲಾಗಿದೆ. ಯುವತಿಯು ಪ್ರೀತಿ ನಿರಾಕರಿಸಿರುವುದಕ್ಕೆ ಭಗ್ನ ಪ್ರೇಮಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿರುವ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ,…

Read More

ಇ-ಆಟೋ ರಿಕ್ಷಾ ಪರವಾನಿಗೆಗೆ ಅರ್ಜಿ ಸಲ್ಲಿಸಲು ಸಾರಿಗೆ ಇಲಾಖೆ ಸೂಚನೆ

ಮಂಗಳೂರು: ಮಂಗಳೂರು ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ (ಕೆಎ-19) ವ್ಯಾಪ್ತಿಯಲ್ಲಿ ನೋಂದಣಿಗೊಂಡಿರುವ ಒಟ್ಟು 3,551 ಇಲೆಕ್ಟ್ರಿಕ್ ಆಟೋ ರಿಕ್ಷಾಗಳ ಪೈಕಿ 2,162 ವಾಹನಗಳಿಗೆ ಮಾತ್ರ ಪರವಾನಿಗೆಗಾಗಿ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಇಲಾಖೆ ತಿಳಿಸಿದೆ.ಇನ್ನೂ 1,389 ಇಲೆಕ್ಟ್ರಿಕ್ ಆಟೋ ರಿಕ್ಷಾ ಮಾಲಕರು ಪರವಾನಿಗೆ ಪಡೆಯಲು ಅರ್ಜಿ ಸಲ್ಲಿಸಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪರವಾನಿಗೆಗೆ ಅರ್ಜಿ ಸಲ್ಲಿಸಲು ಬಾಕಿ ಉಳಿದಿರುವ ವಾಹನ ಮಾಲಕರು ತಕ್ಷಣ ಅರ್ಜಿ ಸಲ್ಲಿಸಬೇಕು. ಇನ್ನಷ್ಟು ವಿಳಂಬ ಮಾಡಿದಲ್ಲಿ ಮೋಟಾರು ವಾಹನ…

Read More

ಕೊಡವೂರಿನಲ್ಲಿ ಮಹಾರುದ್ರಯಾಗದ ಪ್ರಯುಕ್ತ ಮೇ 18ರಂದು “ಬೃಹತ್ ಉದ್ಯೋಗ ಮೇಳ”

ಉಡುಪಿ:ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಮೇ 18ರಂದು ಕೊಡವೂರಿನ ವಿಪ್ರಶ್ರೀ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಉದ್ಯೋಗ ಮೇಳದ ಅಧ್ಯಕ್ಷೆ ಡಾ.ದಿವ್ಯಾ ರಾಣಿ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಮೇಳದಲ್ಲಿ 60ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 6000ಕ್ಕೂ ಅಧಿಕ ಉದ್ಯೋಗ ಅವಕಾಶಗಳು ಲಭ್ಯವಿರಲಿದೆ. ಮ್ಯಾನೇಜ್‌ಮೆಂಟ್, ಎಂಜಿನಿಯರಿಂಗ್, ಉತ್ಪಾದನಾ ವಲಯ, ಆರೋಗ್ಯ ಸೇವೆ, ಹೋಟೆಲ್, ಬ್ಯಾಂಕಿಂಗ್ ಮತ್ತು…

Read More

ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಅವರ ವಿಷಪೂರಿತ ಹೇಳಿಕೆ:ವಿಶ್ವ ಹಿಂದೂ ಪರಿಷದ್ ಖಂಡನೆ

ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು ಪ್ರಚೋದನಾತ್ಮಕ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ.ರಾಜಕೀಯ ಲಾಭಕ್ಕಾಗಿ ಕೋಟ್ಯಂತರ ಜನರ ನಂಬಿಕೆಯಾಗಿರುವ ಸನಾತನ ಧರ್ಮದ ನಿರ್ಮೂಲನೆಯ ಬಗ್ಗೆ ಮಾತನಾಡುವುದು ಸಂವಿಧಾನ ವಿರೋಧಿ ನಡವಳಿಕೆಯಾಗಿದ್ದು, . ಸದನದ ಗೌರವವನ್ನು ಕಾಪಾಡುವ ದೃಷ್ಟಿಯಿಂದ ಸನಾತನ ಧರ್ಮದ ವಿರುದ್ಧದ ಈ ವಿಷಪೂರಿತ ಮಾತುಗಳನ್ನು ವಿಧಾನಸಭೆಯ ಅಧಿಕೃತ ನಡಾವಳಿಗಳಿಂದ ಕೂಡಲೇ ತೆಗೆದುಹಾಕಲು ತಮಿಳ್ನಾಡು ಸರಕಾರಕ್ಕೆ ಆಗ್ರಹಿಸುತ್ತೇನೆ . ಇತಿಹಾಸದುದ್ದಕ್ಕೂ ಸನಾತನ…

Read More

ಮೇ 17ರಂದು ರಾಶಿ ರಾಜೇಶ್ ಹೆಗ್ಡೆ ಅದ್ದೂರಿ ಭರತನಾಟ್ಯ ರಂಗಪ್ರವೇಶ

ಮಂಗಳೂರು,ಕದ್ರಿ ನೃತ್ಯ ವಿದ್ಯಾನಿಲಯ ಚಾರಿಟೇಬಲ್ ಟ್ರಸ್ಟ್(ರಿ) ನಿರ್ದೇಶಕ ವಿದ್ವಾನ್ ಯು. ಕೆ. ಪ್ರವೀಣ್ ಅವರ ಶಿಷ್ಯೆ ಕುಮಾರಿ ರಾಶಿ ರಾಜೇಶ್ ಹೆಗ್ಡೆ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಮೇ 17ರಂದು ರವಿವಾರ ಸಂಜೆ 4.30ಕ್ಕೆ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ವಿದ್ವಾನ್ ಯು. ಕೆ. ಪ್ರವೀಣ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 13 ವರ್ಷಗಳಿಂದ ಭರತನಾಟ್ಯ ಅಭ್ಯಾಸ ಮಾಡುತ್ತಿರುವ ರಾಶಿ ರಾಜೇಶ್ ಹೆಗ್ಡೆ ಅವರು ಪುಷ್ಪಾಂಜಲಿ, ಶ್ಲೋಕ,…

Read More

ಸ್ಪೀಕರ್ ಯು.ಟಿ. ಖಾದರ್‌ಗೆ ಮುತ್ತಿಗೆ ಆರೋಪ: 11 ಮಂದಿ ವಿರುದ್ಧ ಪ್ರಕರಣ

ಮಂಗಳೂರು, ಮೇ 13: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಆರೋಪದಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಕೆಲ ದಿನಗಳ ಹಿಂದೆ ಉಳ್ಳಾಲ ತಾಲೂಕಿನ ಕುತ್ತಾರ್ ಪ್ರದೇಶಕ್ಕೆ ಭೇಟಿ ನೀಡಿದ್ದ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಸ್ಥಳೀಯರು ವೃತ್ತ ನಿರ್ಮಾಣ ಹಾಗೂ ಇತರ ಸಮಸ್ಯೆಗಳ ಕುರಿತು ಪ್ರಶ್ನಿಸಿ ತಡೆದ ಘಟನೆ ನಡೆದಿತ್ತು. ಸ್ಪೀಕರ್ ಅವರ ವಾಹನವನ್ನು ತಡೆದು ಅಸಭ್ಯವಾಗಿ ವರ್ತಿಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಲಾಗಿದೆ….

Read More
error: Content is protected !!