Avatar

NAMMA MEDIA 24X7

ಪುದುಚೇರಿ ಮುಖ್ಯಮಂತ್ರಿಯಾಗಿ ಎನ್. ರಂಗಸ್ವಾಮಿ ಪ್ರಮಾಣವಚನ

ಪುದುಚೇರಿ, ಮೇ 13: ಅಖಿಲ ಭಾರತ ಎನ್.ಆರ್. ಕಾಂಗ್ರೆಸ್ ನಾಯಕ ಎನ್. ರಂಗಸ್ವಾಮಿ ಅವರು ಬುಧವಾರ ಪುದುಚೇರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಶ್‌ನಾಥನ್ ಅವರು ರಂಗಸ್ವಾಮಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಬಿನ್ ಅವರ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ನಾಯಕ ಎ. ನಮಶಿವಾಯಂ ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ರಂಗಸ್ವಾಮಿ, ಜನರಿಗೆ…

Read More

ಪ್ರಧಾನಿ ಅಧಿಕಾರ ತ್ಯಜಿಸಿದರೆ ಜನರಿಗೆ ಸುಖ ಸಿಗುತ್ತದೆ: ಬಿ.ರಮಾನಾಥ ರೈ

ಮಂಗಳೂರು:ಸಂಕಷ್ಟದ ಸಮಯದಲ್ಲಿ ದೇಶದ ಜನರು ತ್ಯಾಗ ಮಾಡಬೇಕು ಎಂದು ಹೇಳುವ ಕೇಂದ್ರ ಸರ್ಕಾರಕ್ಕೆ ಸಾಮಾನ್ಯ ಜನರ ನೋವು ಅರ್ಥವಾಗುತ್ತಿಲ್ಲ. ಜನರು ತ್ಯಾಗ ಮಾಡುವುದಕ್ಕಿಂತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ದೇಶದ ಜನರಿಗೆ ಸುಖ ಸಿಗುತ್ತದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ತೀವ್ರ ವಾಗ್ದಾಳಿ ನಡೆಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆರ್ಥಿಕ ಹಾಗೂ ಶೈಕ್ಷಣಿಕ ನೀತಿಗಳನ್ನು ತೀವ್ರವಾಗಿ ಟೀಕಿಸಿದರು. “ಅಚ್ಚೇ…

Read More

ಮೋದಿ ಘೋಷಣೆಗಳು ಭಾರತವನ್ನು ಸ್ವಾವಲಂಬಿ ರಾಷ್ಟ್ರದತ್ತ ಕೊಂಡೊಯ್ಯಲಿವೆ: ಸಿ. ಎ. ಎಸ್. ಎಸ್. ನಾಯಕ್

ಮಂಗಳೂರು, ಮೇ 13: ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಪ್ರಕಟಿಸಿದ ಘೋಷಣೆಗಳು ಭಾರತದ ಆರ್ಥಿಕತೆಯನ್ನು ಮತ್ತಷ್ಟು ಬಲಿಷ್ಠ, ಸ್ವಾವಲಂಬಿ ಹಾಗೂ ಭವಿಷ್ಯೋನ್ಮುಖವಾಗಿಸುವ ದೂರದೃಷ್ಟಿಯ ಕ್ರಮಗಳಾಗಿವೆ ಎಂದು ಭಾರತೀಯ ಜನತಾ ಪಾರ್ಟಿ ಆರ್ಥಿಕ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಸಿ. ಎ. ಎಸ್. ಎಸ್. ನಾಯಕ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಘೋಷಣೆಗಳ ಹಿಂದೆ ಇಂಧನ ಉಳಿತಾಯ, ಅನಗತ್ಯ ಆಮದು ಕಡಿತ ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವ…

Read More

ಭಾವೈಕ್ಯತೆಯ ಬಂಡಿ ಉತ್ಸವ: ಉದ್ಯಾವರ ಅರಸು ಮಂಜೀಷ್ಣಾರ್ ಜಾತ್ರೋತ್ಸವ ಸಂಪನ್ನ

​ಮಂಜೇಶ್ವರ: ತುಳುನಾಡಿನ ಸುಪ್ರಸಿದ್ಧ ಸೌಹಾರ್ದತಾ ತಾಣಗಳಲ್ಲಿ ಒಂದಾದ ಉದ್ಯಾವರ ಅರಸು ಮಂಜೀಷ್ಣಾರ್ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವವು ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ಹಿಂದೂ-ಮುಸ್ಲಿಂ ಭಾವೈಕ್ಯತೆಯೊಂದಿಗೆ ಅದ್ಧೂರಿಯಾಗಿ ನೆರವೇರಿತು. ಈ ಕ್ಷೇತ್ರದ ವಿಶೇಷತೆಯೆಂಬಂತೆ, ಶತಮಾನಗಳ ಪ್ರಾಚೀನ ಪದ್ಧತಿಯನ್ನು ಈ ಬಾರಿಯೂ ಅಚ್ಚುಕಟ್ಟಾಗಿ ಪಾಲಿಸಲಾಯಿತು. ಜಾತ್ರೋತ್ಸವದ ಪ್ರಮುಖ ವಿಧಿವಿಧಾನಗಳ ಸಂದರ್ಭದಲ್ಲಿ ಸಿಂಹಾಸನ ಕಟ್ಟೆಯ ಬಲಭಾಗದಲ್ಲಿ ಕ್ಷೇತ್ರದ ಆಡಳಿತ ವರ್ಗದವರು ಹಾಗೂ ಎಡಭಾಗದಲ್ಲಿ ಮುಸ್ಲಿಂ ಬಾಂಧವರು (ಜಮಾಹತಿನವರು) ಆಸೀನರಾಗಿ ಇಡೀ ಉತ್ಸವವನ್ನು ಕಣ್ತುಂಬಿಕೊಂಡರು. ಧರ್ಮದ ಗಡಿಗಳನ್ನು ಮೀರಿ ಒಂದೇ ವೇದಿಕೆಯಲ್ಲಿ ಸೌಹಾರ್ದತೆಯಿಂದ…

Read More

ಮೇ 15ರಂದು ಮಾಹೆ 33ನೇ ಘಟಿಕೋತ್ಸವ; ಮಂಗಳೂರು ಕ್ಯಾಂಪಸ್‌ನಲ್ಲಿ ಭವ್ಯ ಸಮಾರಂಭ

ಮಂಗಳೂರು,:ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ 33ನೇ ಘಟಿಕೋತ್ಸವ ಸಮಾರಂಭವು ಶುಕ್ರವಾರ, ಮೇ 15 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ಕ್ಯಾಂಪಸ್‌ ಡಾ. ಟಿ.ಎಂ.ಎ. ಪೈ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಮಾಹೆ ಮಂಗಳೂರು ಕ್ಯಾಂಪಸ್‌ನ ಸಹ ಕುಲಪತಿ ಡಾ. ದಿಲೀಪ್ ಜಿ. ನಾಯಕ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಮೇ 16ರ, ಶನಿವಾರ ಮಧ್ಯಾಹ್ನ 2:30ಕ್ಕೆ ‘ಮಾಹೆ…

Read More

ಕರಾವಳಿಯ ಕ್ರಿಕೆಟ್ ಜಾತ್ರೆಗೆ ಸಜ್ಜಾದ ಬಂಟ್ವಾಳದ ನಂದಾವರ:ಕಾಂಗ್ರೆಸ್ ಟ್ರೋಪಿ–2026ಕ್ಕೆ ಭರ್ಜರಿ ಸಿದ್ಧತೆ

ಬಂಟ್ವಾಳ ತಾಲೂಕಿನಲ್ಲಿ ಅಂಡರ್ ಆರ್ಮ್ ಕ್ರಿಕೆಟ್‌ಗೆ ಹೊಸ ಮೆರುಗು ನೀಡುವ ಬೃಹತ್ ಮಟ್ಟದ “ಕಾಂಗ್ರೆಸ್ ಟ್ರೋಪಿ–2026” ಪಂದ್ಯಾಕೂಟ ಮೇ 16 ಮತ್ತು 17ರಂದು ನಂದಾವರ ಶಾರದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಎರಡು ದಿನಗಳ ಕಾಲ ಹೊನಲು ಬೆಳಕಿನ ಆರ್ಹನಿಶಿ ಕ್ರೀಡಾಜಾತ್ರೆಗೆ ವೇದಿಕೆ ಸಜ್ಜಾಗಿದೆ. ಕರಾವಳಿಯ ಕ್ರೀಡಾಭಿಮಾನಿಗಳ ಅಚ್ಚುಮೆಚ್ಚಿನ ಅಂಡರ್ ಆರ್ಮ್ ಕ್ರಿಕೆಟ್ ಅನ್ನು ವೈಭವೀಕರಿಸುವ ಉದ್ದೇಶದಿಂದ ಆಯೋಜಕರು ಅದ್ದೂರಿ ಸಿದ್ಧತೆ ಕೈಗೊಂಡಿದ್ದಾರೆ. ಪಂದ್ಯಾಕೂಟದಲ್ಲಿ ಪ್ರಥಮ ಬಹುಮಾನವಾಗಿ ₹5 ಲಕ್ಷ ನಗದು ಹಾಗೂ ದ್ವಿತೀಯ ಸ್ಥಾನಕ್ಕೆ ₹2.5 ಲಕ್ಷ…

Read More

ಹಂದಿ ಸಾಕಾಣಿಕೆಯಿಂದ ಶಾಲಾ ಮಕ್ಕಳಿಗೆ ತೊಂದರೆ ಆರೋಪ: ಕೇಂದ್ರ ತೆರವಿಗೆ ಒತ್ತಾಯ

ಬಂಟ್ವಾಳ: ಖಾಸಗಿ ಜಮೀನಿನಲ್ಲಿ ನಡೆಯುತ್ತಿರುವ ಹಂದಿ ಸಾಕಾಣಿಕೆಯಿಂದ ಶಾಲಾ ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದು, ಸಂಬಂಧಿತ ಕೇಂದ್ರವನ್ನು ತಕ್ಷಣ ತೆರವುಗೊಳಿಸಬೇಕು ಎಂದು ಇರ್ಪಾನ್ ಬೋಳಿಯಾರ್ ಒತ್ತಾಯಿಸಿದ್ದಾರೆ. ಬಿಸಿರೋಡಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತ ಥೋಮಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕೆದೂರು ಚರ್ಚ್ ಸಮೀಪ ಕಾರ್ಯನಿರ್ವಹಿಸುತ್ತಿರುವ ಹಂದಿ ಸಾಕಾಣಿಕೆ ಕೇಂದ್ರದಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು, ಶಾಲಾ ಮಕ್ಕಳ ಆರೋಗ್ಯ ಮತ್ತು ವಿದ್ಯಾಭ್ಯಾಸದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು….

Read More

ಹೃದಯಾಘಾತದಿಂದ ನಟ ದಿಲೀಪ್ ರಾಜ್ ನಿಧನ: ಕನ್ನಡ ಚಿತ್ರರಂಗಕ್ಕೆ ಆಘಾತ

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿದ್ದ ನಟ ಮತ್ತು ನಿರ್ಮಾಪಕದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ ಮನೆಯಲ್ಲೇ ಅವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದರಾದರೂ ವೈದ್ಯರು ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಅವರ ಮೃತದೇಹವನ್ನು ನಗರದ ಅಪೋಲೋ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಚಿತ್ರರಂಗದ ಅನೇಕ ಕಲಾವಿದರು, ನಿರ್ದೇಶಕರು ಹಾಗೂ ಅಭಿಮಾನಿಗಳು ಭೇಟಿ ನೀಡಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಅಭಿಮಾನಿಗಳು ಮತ್ತು ಸಿನಿತಾರೆಯರು…

Read More

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ₹167.89 ಕೋಟಿ ಆದಾಯ: ಸತತ 15ನೇ ವರ್ಷ ರಾಜ್ಯದ ನಂ.1 ಮುಜರಾಯಿ ದೇವಾಲಯ

ಕರ್ನಾಟಕದ ಮುಜರಾಯಿ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು 2025–26ರ ಸಾಲಿನ ಆರ್ಥಿಕ ವರ್ಷದಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ ದೇವಸ್ಥಾನವಾಗಿ ಹೊರಹೊಮ್ಮಿದೆ. ದೇವಸ್ಥಾನವು ಒಟ್ಟು 167.89 ಕೋಟಿ ರೂ. ಆದಾಯವನ್ನು ವರದಿ ಮಾಡಿದೆ, ಸತತ 15 ನೇ ವರ್ಷವೂ ಕರ್ನಾಟಕದ ನಂ. 1 ಮುಜರಾಯಿ ದೇವಸ್ಥಾನವಾಗಿ ತನ್ನ ಸ್ಥಾನವನ್ನು ಪಡೆಯುವ ಮೂಲಕ ಹೆಗ್ಗಳಿಕೆಗೆ ಪಾತ್ರವಾಗಿದೆ. ಅಧಿಕೃತ ದಾಖಲೆಗಳ ಪ್ರಕಾರ, ದೇವಾಲಯವು ಏಪ್ರಿಲ್ 1, 2025 ರಿಂದ ಮಾರ್ಚ್ 31, 2026 ರವರೆಗೆ 167,89,09,080.77…

Read More

ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ರಾತ್ರಿ ಮಳೆ ಸುರಿಯಿತು. ಮಂಗಳೂರು ನಗರದಲ್ಲಿ ರಾತ್ರಿ ವೇಳೆ ಕೆಲವು ಕಾಲ ಉತ್ತಮ ಮಳೆ ಸುರಿಯಿತು. ಉಳಿದಂತೆ, ಬೆಳ್ತಂಗಡಿ, ವೇಣೂರು, ಉಜಿರೆ, ಶಿರ್ಲಾಲು, ಗುರಿಪಳ್ಳ, ಸುಳ್ಯ, ನಿಂತಿಕಲ್ಲು, ಐವರ್ನಾಡು, ಬೆಳ್ಳಾರೆ, ಬಂಟ್ವಾಳ, ಪುತ್ತೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾದ ವರದಿಯಾಗಿದೆ. ಮಂಗಳೂರಿನಲ್ಲಿ 34.8 ಡಿ. ಸೆ. ಗರಿಷ್ಠ ತಾಪಮಾನ ಮತ್ತು 25.1 ಡಿ. ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ಬೆಳಗ್ಗೆ ಮೋಡದ ವಾತಾವರಣ ಇತ್ತು. ಬಳಿಕ ಉರಿ ಬಿಸಿಲು ಮತ್ತು…

Read More
error: Content is protected !!