ಕಾಣೆಯಾದವರ ಪತ್ತೆಗೆ ಮನವಿ
ಮಂಗಳೂರು: ತೋಟಬೆಂಗ್ರೆಯ ಲೋಕನಾಥ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಪನಾ(18) ಯುವತಿ ಮಾ.6 ರಂದು ಎಂದಿನಂತೆ ಬಂದರಿನಲ್ಲಿರುವ ವಿವೇಕ್ ಮಾರ್ಟ್‍ಗೆ ಕೆಲಸಕ್ಕೆಂದು ಹೋದವರು ವಾಪಾಸು ಬಾರದೆ ಕಾಣೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ತೋಟಬೆಂಗ್ರೆಯ ಲೋಕನಾಥ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಪನಾ(18) ಯುವತಿ ಮಾ.6 ರಂದು ಎಂದಿನಂತೆ ಬಂದರಿನಲ್ಲಿರುವ ವಿವೇಕ್ ಮಾರ್ಟ್‍ಗೆ ಕೆಲಸಕ್ಕೆಂದು ಹೋದವರು ವಾಪಾಸು ಬಾರದೆ ಕಾಣೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು: ಪುತ್ತೂರು ನಗರದ ಹೃದಯಭಾಗದಲ್ಲಿ ಇರುವ ಹಾಲಿ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ೫.೧೬ ಎಕರೆ ಜಾಗದಲ್ಲೇ ಸುಸಜ್ಜಿತವಾಗಿ ೩೦೦ ಹಾಸಿಗೆ ಸಾಮರ್ಥ್ಯದ ಸರಕಾರಿ ಮೆಡಿಕಲ್ ಆಸ್ಪತ್ರೆ ಆಗಲಿ ಎಂದು ಸರಕಾರಿ ಆಸ್ಪತ್ರೆಯ ರಕ್ಷಾ ಸಮಿತಿ ನಿಕಟಪೂರ್ವ ಸದಸ್ಯರು ಆಗ್ರಹ ವ್ಯಕ್ತಪಡಿಸಿದ್ದಾರೆ.ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಕ್ಷಾ ಸಮಿತಿ ನಿಕಟಪೂರ್ವ ಸದಸ್ಯರಾದ ರಫೀಕ್ ದರ್ಬೆ, ರಾಜೇಶ್ ಬನ್ನೂರು ಹಾಗೂ ವಿದ್ಯಾ ಆರ್. ಗೌರಿ, ಕಳೆದ ಬಾರಿಯ ಬಿಜೆಪಿ ಸರಕಾರದ ಅವಧಿಯಲ್ಲಿ ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಆಗಬೇಕೆಂಬುದು ಜನರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತತ್‌ಕ್ಷಣ ಯಾವುದೇ ಏರಿಕೆ ಇಲ್ಲ ಎಂದು ಕೇಂದ್ರ ಸರ್ಕಾರದ ಮೂಲಗಳು ಸೋಮವಾರ ಸ್ಪಷ್ಟಪಡಿಸಿವೆ. ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ದೇಶದಲ್ಲಿ ಸಾಕಷ್ಟು ಇಂಧನ ದಾಸ್ತಾನು ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಇದರ ಪರಿಣಾಮವಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರಗಳು ಹೆಚ್ಚಳ ಕಂಡಿವೆ. ಅಂತಾರಾಷ್ಟ್ರೀಯ ಮಾನದಂಡವಾದ ಬ್ರೆಂಟ್ ಕಚ್ಚಾ ತೈಲದ ದರ ಬ್ಯಾರೆಲ್‌ಗೆ ಸುಮಾರು 120 ಅಮೆರಿಕನ್ ಡಾಲರ್‌ಗೆ ಏರಿಕೆಯಾಗಿದೆ. ಯುದ್ಧ…
ಕಾಸರಗೋಡು: ಚುನಾವಣಾ ಪೂರ್ವಭಾವಿ ಸಿದ್ಧತೆಗಳ ಅಂಗವಾಗಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾಸರಗೋಡು ಮಂಡಲ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರಿಗೆ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮವು ಕಾಸರಗೋಡು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಕಾಸರಗೋಡು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಬೂತ್ ಮಟ್ಟದಿಂದಲೇ ಪಕ್ಷದ ಸಂಘಟನೆಯನ್ನು ಬಲಪಡಿಸಿ ಜನಸಂಪರ್ಕವನ್ನು ಹೆಚ್ಚಿಸುವುದು ಅಗತ್ಯ ಎಂದು ಅವರು ತಿಳಿಸಿದರು. ಕಾರ್ಯಕ್ರಮದ…
ಬದಿಯಡ್ಕ: ನೆಕ್ರಾಜೆಯ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದ ವಸುದೈವ ಕುಟುಂಬಕಂ ಗೋಪ್ರಿಯರು – ಗೋವಿಂದ ಪುಣ್ಯಕೋಟಿ ಗೋಶಾಲೆಯ ಪ್ರವೇಶೋತ್ಸವ ಮಾರ್ಚ್ 4ರಂದು ಬುಧವಾರ ಬೆಳಗ್ಗೆ ಶುಭ ಮುಹೂರ್ತದಲ್ಲಿ ಭಕ್ತಿಭಾವದಿಂದ ನೆರವೇರಿತು. ಈ ಸಂದರ್ಭದಲ್ಲಿ ಶ್ರೀ ಗೋಪಾಲಕೃಷ್ಣನ ಸನ್ನಿಧಿಯಲ್ಲಿ ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಅರ್ಚಕರ ನೇತೃತ್ವದಲ್ಲಿ ಪ್ರದಕ್ಷಿಣೆ ನಡೆಸಿ ಗೋವುಗಳನ್ನು ಶ್ರದ್ಧಾಭಕ್ತಿಯಿಂದ ಗೋಶಾಲೆಗೆ ಬರಮಾಡಿಕೊಳ್ಳಲಾಯಿತು. ಗೋಪೂಜೆ ನೆರವೇರಿಸಿ ಗೋವುಗಳಿಗೆ ಗೋಗ್ರಾಸವನ್ನು ಸಮರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖರಾದ ಗೋಪಾಲಕೃಷ್ಣ ಪೈ ಬದಿಯಡ್ಕ, ಡಾ. ಶ್ರೀನಿಧಿ ಸರಳಾಯ ಬದಿಯಡ್ಕ, ಆಡಳಿತ…
ದೇಶಾದ್ಯಂತ ಹೆಚ್ಚುತ್ತಿರುವ ಉಷ್ಣತೆಯ ನಡುವೆ ಕೆಲ ರಾಜ್ಯಗಳಲ್ಲಿ ಮಳೆಯ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ರಿಂದ 72 ಗಂಟೆಗಳ ಅವಧಿಯಲ್ಲಿ ದೇಶದ ಹಲವು ಭಾಗಗಳಲ್ಲಿ ಬಿರುಗಾಳಿ, ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹಾಗೂ ಖಾಸಗಿ ಹವಾಮಾನ ಸಂಸ್ಥೆ ಪ್ರೈಮೆಟ್ ಮಾಹಿತಿ ನೀಡಿವೆ. ವಿಶೇಷವಾಗಿ ಪೂರ್ವ ಭಾರತ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ…
ಬಂಟ್ವಾಳ: ಬಿ.ಸಿ.ರೋಡ್ ಸಮೀಪದ ಕೈಕುಂಜೆ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಭಾನುವಾರ ಮಧ್ಯರಾತ್ರಿ ಅವಧಿಯಲ್ಲಿ ಚಿನ್ನಾಭರಣ ಕಳವು ನಡೆದಿರುವ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರು ಮಧ್ಯರಾತ್ರಿ ರಿಂದ ಬೆಳಗಿನ ಅವಧಿಯ ನಡುವೆ ಮನೆಯ ಹಿಂಬದಿ ಬಾಗಿಲಿನ ಚಿಲಕವನ್ನು ಯಾವುದೋ ಸಾಧನದಿಂದ ಮುರಿದು ಒಳಗೆ ಪ್ರವೇಶಿಸಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಒಟ್ಟು ಸುಮಾರು 61 ಗ್ರಾಂ ಚಿನ್ನಾಭರಣ ಕಳವಾಗಿರುವುದಾಗಿ ತಿಳಿದುಬಂದಿದೆ. ಘಟನೆ ಬೆಳಗ್ಗೆ ಮನೆಯವರಿಗೆ ತಿಳಿದುಬಂದಿದ್ದು, ಮನೆಯೆಲ್ಲ ಹುಡುಕಾಡಿದ ಬಳಿಕ ಚಿನ್ನಾಭರಣಗಳು…
ಮಂಗಳೂರು: ಮುಂದಿನ ತಲೆಮಾರಿಗೆ ನಮ್ಮ ಧಾರ್ಮಿಕತೆಯ ಸಾರವನ್ನು ತಿಳಿಸುವ ಮತ್ತು ಶುದ್ಧ ಕನ್ನಡದ ಅಸ್ತಿತ್ವಕ್ಕೆ ತನ್ನದೇ ಕೊಡುಗೆಯನ್ನು ನೀಡುತ್ತಿರುವ ಯಕ್ಷಗಾನ ಕಲೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಹುಟ್ಟಿಕೊಂಡ ರಂಗಸ್ಥಳ ಮಂಗಳೂರು ಸಂಘ ಇದರ ೧೧ ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಪೆರ್ಡೂರು ಇವರಿಂದ ರಾವಣನ ಜನನದಿಂದ ರಾವಣ ವಧಾವರೆಗಿನ ಸಮಗ್ರ ರಾವಣನ ಕಥೆಯನ್ನು ಒಳಗೊಂಡ ”ಪ್ರಚಂಡ ಲಂಕೇಶ್ವರ ” ಯಕ್ಷಗಾನ ಬಯಲಾಟವು ಮಾರ್ಚ್ ೧೪ ರಂದು ಸಂಜೆ ೭ ರಿಂದ ಕದ್ರಿ ಶ್ರೀ ದೇವಳದ…
ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ” ಕಟ್ಟಡದ ಸಮಗ್ರವಾದ ನೀಲ ನಕ್ಷೆ (ಬ್ಲೂಪ್ರಿಂಟ್) ಯನ್ನು ಖ್ಯಾತ ಕಲಾವಿದ, ರಂಗ ನಿರ್ದೇಶಕ, ಕಿರಣ್ ಕಲಾಂಜಲಿ ಕೂಡ್ಲು,ಕಾಸರಗೋಡು ಅವರು ರಚಿಸಿದ್ದಾರೆ. ಪ್ರಸ್ತುತ ಮಂಗಳೂರಿನಲ್ಲಿ ತನ್ನ ಕಲಾ ರಂಗಭೂಮಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೇರಳ- ಕರ್ನಾಟಕ ರಾಜ್ಯದಲ್ಲಿ ಕಲಾ, ರಂಗಭೂಮಿ ಕ್ಷೇತ್ರಗಳಲ್ಲಿ ಕಿರಣ್ ಕಲಾಂಜಲಿ ಕೂಡ್ಲು ತಮ್ಮ ಕಲಾ ಪ್ರಕಾರಗಳ ಮೂಲಕ ಗುರುತಿಸಿಕೊಂಡಿದ್ದಾರೆ.ಇವರು…
ಎಡನೀರು: ಎಡನೀರು ಶ್ರೀ ಮಠದ ಪವಿತ್ರ ಪರಿಸರದಲ್ಲಿ ಮಾರ್ಚ್ 8ರಂದು ಭಾನುವಾರ “ವಿರಾಟ್ ಹಿಂದೂ ಸಂಗಮ” ಭಕ್ತಿ ಹಾಗೂ ಸಂಸ್ಕೃತಿಯ ಸಡಗರದಲ್ಲಿ ಭವ್ಯವಾಗಿ ನಡೆಯಿತು. ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು. ಮಧ್ಯಾಹ್ನ 2.30ಕ್ಕೆ ಚೆಂಗಳ ಪಂಚಾಯತ್ ವ್ಯಾಪ್ತಿಯ ವಿವಿಧ ಬಾಲಗೋಕುಲಗಳ ಮಕ್ಕಳಿಂದ ಕುಣಿತ ಭಜನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಹಿಳಾ ತಂಡಗಳಿಂದ ಕೈಕೊಟ್ಟಕಳಿ ಮತ್ತು ತಿರುವಾದಿರಕಳಿ ನೃತ್ಯ ಪ್ರದರ್ಶನಗಳು ಭಕ್ತರ ಗಮನ ಸೆಳೆದವು. ಸಂಜೆ 4 ಗಂಟೆಗೆ ಶ್ರೀ…