Avatar

NAMMA MEDIA 24X7

ಅಕ್ರಮ ಜಾನುವಾರು ಸಾಗಾಟದ ಪಿಕಪ್ ಪಲ್ಟಿ; ಪ್ರಕರಣ ದಾಖಲು

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ಜೂನ್ 13ರಂದು ರಾತ್ರಿ ಸಂಭವಿಸಿದೆ. ಮಾಹಿತಿಯ ಪ್ರಕಾರ, ಹೋರಿಗಳನ್ನು ಅಕ್ರಮವಾಗಿ ಪಿಕಪ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ವಾಹನವು ಕುಲ್ಕುಂದ ದಾಟಿ ಸಾಗುತ್ತಿದ್ದ ವೇಳೆ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪಿಕಪ್‌ನಲ್ಲಿ ಎರಡು ಹೋರಿಗಳನ್ನು ಸಾಗಿಸಲಾಗುತ್ತಿದ್ದು, ಅವುಗಳ ಕಾಲುಗಳನ್ನು ಕಟ್ಟಿ ಹಾಕಲಾಗಿತ್ತು ಎನ್ನಲಾಗಿದೆ. ವಾಹನ ಪಲ್ಟಿಯಾದ ಬಳಿಕ ಜಾನುವಾರುಗಳ ಕೈಕಾಲುಗಳನ್ನು ಬಿಚ್ಚಿ ಸ್ಥಳದಿಂದ ಕರೆದೊಯ್ಯಲು ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ….

Read More

ಪಂತಡ್ಕ ರಸ್ತೆ ಬದಿಯಲ್ಲಿ ತ್ಯಾಜ್ಯ ರಾಶಿ; ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಬಂಟ್ವಾಳ: ನೆಟ್ಲ ಮುಡ್ನೂರು ಗ್ರಾ.ಪಂ ವ್ಯಾಪ್ತಿಯ ಪಂತಡ್ಕದ ರಸ್ತೆ ಬದಿಯಲ್ಲಿ ತ್ಯಾಜ್ಯ ರಾಶಿ ಬಿದ್ದಿದ್ದು, ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಪಂಚಾಯಿತಿಯು ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಕಸ, ಕೊಳೆತ ಹಣ್ಣು, ತರಕಾರಿ ಮತ್ತು ಹೋಟೆಲ್ ಗಳ ಉಳಿಕೆ ಆಹಾರವನ್ನು ಎಸೆಯಲಾಗುತ್ತಿದೆ. ತ್ಯಾಜ್ಯ ರಾಶಿ ದುರ್ವಾಸನೆ ಬೀರುತ್ತಿದ್ದರೂ ಗ್ರಾಪಂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಮನ ಹರಿಸಿಲ್ಲ ಎಂದು ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದುರ್ವಾಸನೆ ಈ ಪ್ರದೇಶ ವ್ಯಾಪಿಸಿ…

Read More

ಶ್ರೀರಾಮ ಕುರಿತು ಪ್ರೊ. ಕೆ.ಎಸ್. ಭಗವಾನ್ ಹೇಳಿಕೆ ಖಂಡನೆ; ಸುಮೊಟೊ ಪ್ರಕರಣಕ್ಕೆ ಶಾಸಕ ಅಶೋಕ್ ಕುಮಾರ್ ರೈ ಆಗ್ರಹ

ಪುತ್ತೂರು: ಪ್ರಭು ಶ್ರೀರಾಮಚಂದ್ರರ ಕುರಿತು ಪ್ರೊ. ಕೆ.ಎಸ್. ಭಗವಾನ್ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿರುವ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ, ಅವರ ವಿರುದ್ಧ ಕೂಡಲೇ ಸುಮೊಟೊ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರೊ. ಭಗವಾನ್ ಯಾವ ಧರ್ಮವನ್ನು ನಂಬುತ್ತಾರೆ ಎಂಬುದು ನಮಗೆ ತಿಳಿದಿಲ್ಲ. ಆದರೆ ಅವರು ಪದೇಪದೇ ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಹೇಳಿಕೆಗಳಿಂದ ಸಮಾಜದಲ್ಲಿ ಅಶಾಂತಿ…

Read More

ಬಿಹಾರ ಪೊಲೀಸ್ ನೇಮಕಾತಿ ಪರೀಕ್ಷೆ: ರೈಲು ಸೌಲಭ್ಯ ಕೊರತೆಗೆ ಅಭ್ಯರ್ಥಿಗಳ ಪ್ರತಿಭಟನೆ

ಪಾಟ್ನಾ: ಬಿಹಾರ ಪೊಲೀಸ್ ನೇಮಕಾತಿ ಪರೀಕ್ಷೆಗೆ ತೆರಳಲು ಸಮರ್ಪಕ ರೈಲು ವ್ಯವಸ್ಥೆ ಕಲ್ಪಿಸದಿರುವುದನ್ನು ಖಂಡಿಸಿ ಸಾವಿರಾರು ಅಭ್ಯರ್ಥಿಗಳು ಪಾಟಲಿಪುತ್ರ ರೈಲು ನಿಲ್ದಾಣದಲ್ಲಿ ಭಾನುವಾರ ಭಾರಿ ಪ್ರತಿಭಟನೆ ನಡೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಅಭ್ಯರ್ಥಿಗಳು ರೈಲು ಹಳಿಗಳ ಮೇಲೆ ನಿಂತು ರೈಲು ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ ಪರಿಣಾಮ ನಿಲ್ದಾಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿರುವುದಾಗಿ ವರದಿಯಾಗಿದೆ….

Read More

ಉಡುಪಿ ಶ್ರೀಕೃಷ್ಣ ಮಠಕ್ಕೆ ಅನಂತ್ ಅಂಬಾನಿ ಭೇಟಿ; ಶ್ರೀಕೃಷ್ಣನ ದರ್ಶನ ಪಡೆದು ಆಶೀರ್ವಾದ

ಉಡುಪಿ: ಖ್ಯಾತ ಉದ್ಯಮಿ ಅನಂತ್ ಅಂಬಾನಿ ಅವರು ಭಾನುವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಅನಂತ್ ಅಂಬಾನಿ ಅವರು ಮೊದಲು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಠದ ಒಳಭಾಗಕ್ಕೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದರು. ಪೂಜಾ ವಿಧಿವಿಧಾನಗಳ ನಂತರ ಅವರು ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳವರಿಂದ…

Read More

ಉಡುಪಿ ಶ್ರೀಕೃಷ್ಣ ಮಠಕ್ಕೆ ಅನಂತ್ ಅಂಬಾನಿ ಭೇಟಿ; ಶ್ರೀಕೃಷ್ಣನ ದರ್ಶನ ಪಡೆದು ಆಶೀರ್ವಾದ

ಉಡುಪಿ: ಖ್ಯಾತ ಉದ್ಯಮಿ ಅನಂತ್ ಅಂಬಾನಿ ಅವರು ಭಾನುವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಅನಂತ್ ಅಂಬಾನಿ ಅವರು ಮೊದಲು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಠದ ಒಳಭಾಗಕ್ಕೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದರು. ಪೂಜಾ ವಿಧಿವಿಧಾನಗಳ ನಂತರ ಅವರು ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳವರಿಂದ…

Read More

ವಿಧಾನ ಪರಿಷತ್‌ಗೆ ಪಿ.ವಿ. ಮೋಹನ್ ಆಯ್ಕೆ ರಾಜ್ಯಕ್ಕೆ ಮಾದರಿ: ದಲಿತ ಸಂಘಟನೆಗಳ ಒಕ್ಕೂಟ

ಮಂಗಳೂರು, ಸುಮಾರು ನಾಲ್ಕು ದಶಕಗಳಿಗೂ ಅಧಿಕ ಕಾಲ ಸಾಮಾಜಿಕ ಚಳುವಳಿಗಳೊಂದಿಗೆ ಗುರುತಿಸಿಕೊಂಡು, ಜಾತಿ-ಮತ-ಧರ್ಮ-ಭಾಷೆಗಳ ಆಚೆಗೆ ನಿಂತು ಬಡವರು, ಶೋಷಿತರು, ವಿದ್ಯಾರ್ಥಿಗಳು ಹಾಗೂ ಯುವಜನರ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸಿರುವ ಹಿರಿಯ ಚಿಂತಕ, ಮಾಜಿ ಪತ್ರಕರ್ತ, ಜನಪರ ಹೋರಾಟಗಾರ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಪಿ.ವಿ. ಮೋಹನ್ ಅವರನ್ನು ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲ ಪಕ್ಷಗಳ ಶಾಸಕರು ಪಕ್ಷಭೇದ ಮರೆತು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ…

Read More

ಕ್ಯಾನ್ಸರ್ ಪೀಡಿತ ಮಹಿಳೆಯ ಚಿಕಿತ್ಸೆಗೆ ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆಯಿಂದ ಆರ್ಥಿಕ ನೆರವು

ಮಂಜೇಶ್ವರ: ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆ (ರಿ) ಮಂಜೇಶ್ವರ ತನ್ನ 102ನೇ ಸಮಾಜಮುಖಿ ಯೋಜನೆಯ ಅಂಗವಾಗಿ ಮಂಜೇಶ್ವರ ತಾಲೂಕಿನ ವರ್ಕಾಡಿ ಪಂಚಾಯತ್ ವ್ಯಾಪ್ತಿಯ ಒಳ್ಳಪಟ್ಟ ಸುಳ್ಯಮೆ ನಿವಾಸಿ ಮೀನಾಕ್ಷಿ ಅವರಿಗೆ ಚಿಕಿತ್ಸಾ ವೆಚ್ಚಕ್ಕಾಗಿ ಆರ್ಥಿಕ ನೆರವು ನೀಡಿತು. ಕೆಲವು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಮೀನಾಕ್ಷಿ ಅವರು ಪತಿ ಹಾಗೂ ಮಗನನ್ನು ಕಳೆದುಕೊಂಡಿದ್ದು, ಹೆಣ್ಣು ಮಕ್ಕಳೇ ಅವರಿಗೆ ಆಸರೆಯಾಗಿದ್ದಾರೆ. ಅವರ ಸಂಕಷ್ಟದ ಕುರಿತು ಸ್ವಾತಿ ಬಾಲಕೃಷ್ಣ ಅವರ ಪುತ್ರ ಇಶಾನ್ ಸುಳ್ಯಮೆ ಸಂಸ್ಥೆಗೆ ಮಾಹಿತಿ…

Read More

ಬಸ್ ಮಾದರಿಯ ವಿನೂತನ ತಂಗುದಾಣ; ಗುರುಪುರದ ಬಂಡಸಾಲೆಯಲ್ಲಿ ಹೊಸ ಆಕರ್ಷಣೆ

ಮಂಗಳೂರು: ಮಂಗಳೂರು ಹೊರವಲಯದ ಗುರುಪುರ ಸಮೀಪದ ಬಂಡಸಾಲೆಯಲ್ಲಿ ನಿರ್ಮಾಣಗೊಂಡಿರುವ ವಿನೂತನ ಬಸ್ ತಂಗುದಾಣ ಇದೀಗ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಸಾಮಾನ್ಯ ಬಸ್ ಶೆಲ್ಟರ್‌ಗಳಿಗಿಂತ ಭಿನ್ನವಾಗಿ, ನಿಜವಾದ ಬಸ್‌ನ ಮಾದರಿಯಲ್ಲೇ ನಿರ್ಮಿಸಲಾಗಿರುವ ಈ ತಂಗುದಾಣ ಪ್ರಯಾಣಿಕರಿಗೆ ಆಸರೆಯಾಗುವುದರ ಜೊತೆಗೆ ಪ್ರದೇಶದ ಹೊಸ ಆಕರ್ಷಣೆಯ ಕೇಂದ್ರವಾಗಿದೆ. ಸ್ಥಳೀಯ ವಿ2 ಗೈಸ್ ಯುವ ಬಳಗದ ಪರಿಕಲ್ಪನೆಯಡಿ ನಿರ್ಮಾಣಗೊಂಡಿರುವ ಈ ವಿಶೇಷ ತಂಗುದಾಣ ಮೊದಲ ನೋಟಕ್ಕೆ ರಸ್ತೆಯ ಬದಿಯಲ್ಲಿ ಬಸ್ ನಿಂತಿರುವಂತೆ ಭಾಸವಾಗುತ್ತದೆ. ಅದರ ವಿಶಿಷ್ಟ ವಿನ್ಯಾಸವು ಪ್ರಯಾಣಿಕರು ಮಾತ್ರವಲ್ಲದೆ ಸ್ಥಳೀಯರು ಹಾಗೂ…

Read More

ರಂಗ ಕಲಾವಿದ ದೇವ ನಾಗೇಶ್ ಅವರಿಗೆ ರಂಗನಮನ; ಬೆಂಗಳೂರಿನಲ್ಲಿ ಯುವ ನಾಟಕೋತ್ಸವ-2026

ಬೆಂಗಳೂರು: ಹಿರಿಯ ರಂಗ ಕಲಾವಿದ ದೇವ ನಾಗೇಶ್ ಅವರಿಗೆ ರಂಗನಮನ ಸಲ್ಲಿಸುವ ಅಂಗವಾಗಿ ನಂದನ ಸಂಘಟನೆ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಯುವ ನಾಟಕೋತ್ಸವ-2026 ಜೂನ್ 16 ಮತ್ತು 17ರಂದು ಬೆಂಗಳೂರಿನ ನಯನ ರಂಗಮಂದಿರದಲ್ಲಿ ನಡೆಯಲಿದೆ. ಜೂನ್ 16ರಂದು ಸಂಜೆ 5 ಗಂಟೆಗೆ ಚಲನಚಿತ್ರ ನಿರ್ದೇಶಕ ರಾಜ್ ರವಿಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಿ.ಎಂ. ತಿಮ್ಮಯ್ಯ,…

Read More
error: Content is protected !!