ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನಾಶೀರ್ವಾದ: ಸಿಎಂ ಸಿದ್ದರಾಮಯ್ಯ ಹೇಳಿಕೆ
ಮೈಸೂರು:ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದನ್ನು ಸೂಚಿಸುತ್ತದೆ .ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ ಎಂದರು. ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ…