Avatar

NAMMA MEDIA 24X7

ಉಳ್ಳಾಲ ಬೈಲಿನ ಯುವಕ ನೇಣು ಬಿಗಿದು ಆತ್ಮಹತ್ಯೆ

ಉಳ್ಳಾಲ: ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಉಳ್ಳಾಲ ಬೈಲು ನಿವಾಸಿ ಯಜ್ನೇಶ್ (31) ಆತ್ಮಹತ್ಯೆಗೈದ ಯುವಕನಾಗಿದ್ದಾನೆ. ಯಜ್ನೇಶ್ ಅವಿವಾಹಿತನಾಗಿದ್ದು ನಿರ್ದಿಷ್ಟ ಕೆಲಸವಿಲ್ಲದೆ ಜಿಗುಪ್ಸೆಗೊಂಡಿದ್ದನಂತೆ.ಸೋಮವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಣೆಯ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.ಸಂಜೆ ವೇಳೆ ಯಜ್ನೇಶ್ ತಾಯಿ ಮತ್ತು ಸಹೋದರಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.ಉಳ್ಳಾಲ ಠಾಣಾ ಪೊಲೀಸರು ಮೃತ ದೇಹದ ಮರಣೋತ್ತರ…

Read More

ಮಂಗಳೂರು: ಚಿಪ್ಪು ಹಂದಿಯ ಚಿಪ್ಪುಗಳ ಅಕ್ರಮ ಮಾರಾಟ ಯತ್ನ – ಮೂವರು ಬಂಧನ

ಮಂಗಳೂರು: ನಗರದ ಕದ್ರಿ ಉದ್ಯಾನವನದ ಬಳಿ ಅಕ್ರಮವಾಗಿ ಚಿಪ್ಪು ಹಂದಿಯ ಚಿಪ್ಪುಗಳನ್ನು (Pangolin Scales) ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಿ.ಐ.ಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 05-05-2026 ರಂದು ಮಧ್ಯಾಹ್ನ ಸುಮಾರು 3:00 ಗಂಟೆಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರಿನಲ್ಲಿ (KA 05 MS 1049) ಹೊಂಚು ಹಾಕುತ್ತಿದ್ದವರನ್ನು ವಶಕ್ಕೆ ಪಡೆದರು. ಬಂಧಿತರಿಂದ ಒಟ್ಟು 5.200 ಕೆ.ಜಿ ತೂಕದ ಚಿಪ್ಪು ಹಂದಿಯ…

Read More

ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯದ ಅರಿವು ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದರಿಂದ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಸಹಾಯವಾಗುತ್ತದೆ. ದೇಶದ ಯುವಜನತೆಯನ್ನು ಉದ್ಯೋಗ-ಸಂಬಂಧಿತ ತರಬೇತಿಯ ಮೂಲಕ ಸಬಲೀಕರಣಗೊಳಿಸಬೇಕು ಎಂದು ಅವರು ಹೇಳಿದರು. ಪಿಎಮ್ ಸ್ವನಿದಿ ಮತ್ತು ನಿಪುಣ್ ಯೋಜನೆಯು ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಸಣ್ಣ ವ್ಯಾಪಾರಿಗಳ ಮತ್ತು ಯುವಜನರ ಸಬಲೀಕರಣಕ್ಕೆ ಸಹಾಯ…

Read More

ಜೀವರಾಜ್ ಪ್ರಮಾಣವಚನಕ್ಕೆ ವಿಳಂಬವಿಲ್ಲ: ಸಭಾಧ್ಯಕ್ಷ ಯು.ಟಿ. ಖಾದರ್ ಸ್ಪಷ್ಟನೆ

ಮಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಜೀವರಾಜ್ ಅವರ ಪ್ರಮಾಣವಚನ ಸ್ವೀಕಾರಕ್ಕೆ ಯಾವುದೇ ವಿಳಂಬವಾಗಿಲ್ಲ ಎಂದು ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಸರ್ಕ್ಯೂಟ್ ಹೌಸ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಅರ್ಜಿ ಸಲ್ಲಿಸಲಾಗಿದ್ದು, ನಿಯಮಾವಳಿ ಪ್ರಕಾರ ಅಗತ್ಯ ಅಭಿಪ್ರಾಯಗಳನ್ನು ಪಡೆದು ಸಮಯ ನಿಗದಿಪಡಿಸಲಾಗುತ್ತದೆ. ಈ ಪ್ರಕ್ರಿಯೆಯನ್ನು ವಿಳಂಬವೆಂದು ಹೇಳುವುದು ಸರಿಯಲ್ಲ ಎಂದು ಹೇಳಿದರು. ಪ್ರಜಾಪ್ರಭುತ್ವ ಸಂಸದೀಯ ವ್ಯವಸ್ಥೆ ವಿಶ್ವಾಸದ ಮೇಲೆ ನಡೆಯಬೇಕೇ ಹೊರತು ಆರೋಪಗಳ ಆಧಾರದಲ್ಲಿ ಅಲ್ಲ. ಸಂವಿಧಾನ ಮತ್ತು ಕಾನೂನಿನಡಿ…

Read More

ಮೂಡಬಿದ್ರಿಯಲ್ಲಿ “ಡರ್ಟ್ ಫೆಸ್ಟ್ 2026” ಕಾರ್ ರೇಸಿಂಗ್ ಸ್ಪರ್ಧೆ ಮೇ 10ರಂದು

ಮೂಡಬಿದ್ರಿಯಲ್ಲಿ “ಡರ್ಟ್ ಫೆಸ್ಟ್ 2026” ಕಾರ್ ರೇಸಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ ಎಂದು ಆಯೋಜಕರಾದ ಕೆಟಿಸಿ ನಝೀರ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟೀಮ್ ಡೈನಾಮಿಕ್ಸ್ ರೇಸಿಂಗ್ ವತಿಯಿಂದ ಮೇ 10ರಂದು ಮೂಡಬಿದ್ರಿಯ ಸ್ವರಾಜ್ ಮೈದಾನದ ಸಮೀಪದ ಫಾರ್ಚ್ಯೂನ್ ಗ್ರೌಂಡ್‌ನಲ್ಲಿ ಹೈ-ಎನರ್ಜಿ ಆಟೋಕ್ರಾಸ್ ಸ್ಪರ್ಧೆ ನಡೆಯಲಿದೆ ಎಂದರು. ಈ ಸ್ಪರ್ಧೆಯ ಮೂಲಕ ನಿಪುಣ ಚಾಲಕರು, ಶಕ್ತಿಶಾಲಿ ವಾಹನಗಳು ಹಾಗೂ ಉತ್ಸಾಹಭರಿತ ಪ್ರದರ್ಶನವನ್ನು ಒಂದೇ ವೇದಿಕೆಯಲ್ಲಿ ಒಂದಾಗಿಸುವ ಉದ್ದೇಶವಿದೆ. ಜೊತೆಗೆ ಗ್ರಾಮೀಣ ಮಟ್ಟದ ಮೋಟಾರ್ ಸ್ಪೋರ್ಟ್ಸ್‌ಗೆ…

Read More

ಜಿ.ಟಿ.ಟಿ.ಸಿ. ಬೈಕಂಪಾಡಿ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶ ಆರಂಭ: ಮೇ 13 ಕೊನೆಯ ದಿನಾಂಕ

ಮಂಗಳೂರು: Government Tool Room and Training Centre (ಜಿ.ಟಿ.ಟಿ.ಸಿ.) ಬೈಕಂಪಾಡಿಯ ಡಿಪ್ಲೋಮಾ ಕಾಲೇಜಿನಲ್ಲಿ 2026-27ನೇ ಸಾಲಿನ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀ ನಾರಾಯಣ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಕಾಲೇಜಿನಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಫ್ಯಾಕ್ಚರಿಂಗ್ ಹಾಗೂ ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಕೋರ್ಸುಗಳು ಲಭ್ಯವಿವೆ ಎಂದರು. ಮೊದಲ ಎರಡು ಕೋರ್ಸುಗಳು ಮೆಕ್ಯಾನಿಕಲ್ ಇಂಜಿನಿಯರಿಂಗ್‌ಗೆ…

Read More

ಡೆಫೆಕ್ಷನ್ ವಿರೋಧಿ ಕಾನೂನು ಬಲಪಡಿಸುವ ಅಗತ್ಯ: ಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯ

ಮಂಗಳೂರು: Anti-Defection Law (ಡೆಫೆಕ್ಷನ್ ವಿರೋಧಿ ಕಾನೂನು) ಅನ್ನು ಇನ್ನಷ್ಟು ಬಲಿಷ್ಠಗೊಳಿಸುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ವಿವಿಧ ರಾಜ್ಯಗಳ ಸಭಾಧ್ಯಕ್ಷರು, ಕಾನೂನು ತಜ್ಞರು ಮತ್ತು ಸಂವಿಧಾನ ತಜ್ಞರು ವ್ಯಕ್ತಪಡಿಸಿದ್ದಾರೆ ಎಂದು ಸಭಾಧ್ಯಕ್ಷರಾದ ಯು.ಟಿ. ಖಾದರ್ ತಿಳಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಸಮನ್ವಯ ಸಭೆ ಮುಂಬೈ ನಲ್ಲಿ ನಡೆದಿದ್ದು, ನಂತರದ ಎರಡನೇ ಸಭೆ ಪುರಿ ಯಲ್ಲಿ ಎರಡು ದಿನಗಳ ಕಾಲ ನಡೆಯಿತು ಎಂದರು. ಈ ಸಭೆಗಳಲ್ಲಿ ಮಹಾರಾಷ್ಟ್ರ, ಒಡಿಶಾ, ನಾಗಾಲ್ಯಾಂಡ್ ಹಾಗೂ…

Read More

ಕರಾವಳಿ ಪ್ರವಾಸೋದ್ಯಮಕ್ಕೆ ಭರವಸೆಗಳು ಈಡೇರಿಲ್ಲ: ಡಿ.ಕೆ. ಶಿವಕುಮಾರ್ ವಿರುದ್ಧ ವಿವೇಕಾನಂದ ಸಾಲಿನ್ಸ್ ಟೀಕೆ

ಮಂಗಳೂರು ಡಿ.ಕೆ. ಶಿವಕುಮಾರ್ ಅವರು ಇದೇ ವರ್ಷದ ಜನವರಿ 10ರಂದು ಮಂಗಳೂರಿಗೆ ಭೇಟಿ ನೀಡಿ ಹೂಡಿಕೆದಾರರ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಕರಾವಳಿ ಕರ್ನಾಟಕಕ್ಕಾಗಿ ಹೊಸ ಪ್ರವಾಸೋದ್ಯಮ ನೀತಿ ರೂಪಿಸುವುದಾಗಿ ಹಾಗೂ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿರುವುದಾಗಿ ನೀಡಿದ ಭರವಸೆಗಳು ಇದುವರೆಗೆ ವಿಧಾನಸಭೆಯಲ್ಲಿ ಪ್ರಸ್ತಾವನೆಯಾಗದಿರುವುದು ವಿಷಾದನೀಯ ಎಂದು ವಿವೇಕಾನಂದ ಸಾಲಿನ್ಸ್ ತಿಳಿಸಿದ್ದಾರೆ.ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೂಡಿಕೆದಾರರ ಸಭೆಯಲ್ಲಿ ಐಟಿ ಹಾಗೂ ಇತರ ಕೈಗಾರಿಕೆಗಳಿಗೆ ಅಗತ್ಯವಾದ ಬೃಹತ್ ಮೂಲಸೌಕರ್ಯ ಒದಗಿಸುವುದಾಗಿ ನೀಡಿದ ಭರವಸೆಯೂ ಈಡೇರಿಲ್ಲ ಎಂದು…

Read More

ನೇತ್ರಾವತಿ ನದಿ ತೀರದಲ್ಲಿ ಅಪರಿಚಿತ ಪುರುಷನ ಶವ ಪತ್ತೆ

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ, ಮೃತ ವ್ಯಕ್ತಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಬಿಳಿ ಬಣ್ಣದ ತುಂಬು ತೋಳಿನ ಅಂಗಿಯನ್ನು ಧರಿಸಿದ್ದಾನೆ. ಅಲ್ಲದೆ, ಅವನ ಬಲ ಕೈಯಲ್ಲಿ ಕೆಂಪು ದಾರ ಕಟ್ಟಿರುವುದು ಗುರುತು ಲಕ್ಷಣವಾಗಿ ಕಂಡುಬಂದಿದೆ. ಘಟನೆಯ ಮಾಹಿತಿ ಪಡೆದ ತಕ್ಷಣ ಬಂಟ್ವಾಳ…

Read More

ಪುತ್ತೂರಿನಲ್ಲಿ ವಿಭಿನ್ನವಾಗಿ ನೆರವೇರಿದ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಅತ್ಯಂತ ವಿನೂತನವಾಗಿ ಆಚರಿಸಲಾಯಿತು. ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗೆ ನಡೆದ ಕನ್ನಡ ರಸಪ್ರಶ್ನೆ ಹಾಗೂ ಪುಸ್ತಕ ಬಹುಮಾನ ಕಾರ್ಯಕ್ರಮವು ಜನಸಾಮಾನ್ಯರ ಸಾಹಿತ್ಯ ಪ್ರೇಮಕ್ಕೆ ಸಾಕ್ಷಿಯಾಯಿತು. ಕಾರ್ಯಕ್ರಮವನ್ನು ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಮೇಲ್ವಿಚಾರಕರಾದ ಶ್ರೀ ಪೂರ್ಣೇಶ್ ಅವರು ಉದ್ಘಾಟಿಸಿ, ಪರಿಷತ್ತಿನ ಈ ವಿಭಿನ್ನ ಪ್ರಯತ್ನಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ…

Read More
error: Content is protected !!