ಸೌಜನ್ಯಾ ಪ್ರಕರಣ ಮರು ತನಿಖೆ: ಮಂಗಳೂರಿನಲ್ಲಿ ಎಸ್‌ಐಟಿ ಸಭೆ
ಮಂಗಳೂರು:ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳೂರಿನಲ್ಲಿ ಸಭೆ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಳೆಯ ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ, ತಂಡದ ಮುಖ್ಯಸ್ಥ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು. ಎಸ್‌ಐಟಿ ತಂಡವು ಮುಂದಿನ ಎರಡು ದಿನಗಳಲ್ಲಿ ಬೆಳ್ತಂಗಡಿಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಈ ಭೇಟಿಯ ವೇಳೆ ಪ್ರಕರಣದ ತನಿಖೆಗೆ ಸಂಬಂಧಿಸಿದ ಮುಂದಿನ…
