Avatar

Rashmitha Acharya

ಕೃಷಿಕ ಧೂಮಪ್ಪ ಬೆಳ್ಚಡ ನಿಧನ -ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ಸಂತಾಪ

ಮಂಜೇಶ್ವರ : ವರ್ಕಾಡಿ ಕೊಡ್ಲಮೊಗರು ಪಜ್ವ ಸಂಕಪ್ಪ ಬೆಳ್ಚಡ ಹಾಗೂ ಕಲ್ಯಾಣಿ ಅವರ ಪುತ್ರ (೬೯) ಧೂಮಪ್ಪ ಬೆಳ್ಚಡ ಕೃಷಿ ಕ 30-09-2025 ರಂದು ಬೆಳಿಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ಪಾರ್ವತಿ ಮಕ್ಕಳಾದ ಸುಕುಮಾರ್ ಪಜ್ವ ಚಂದ್ರಶೇಖರ ಪಜ್ವ ಸಹೋದರರಾದ ಪದ್ಮನಾಭ ಪಜ್ವ ದಾಮೋದರ ಪಜ್ವ ಸಹೋದರಿಯಾರಾದ ಗಿರಿಜಾ. ಸೀತಾಮ್ಮ. ಹೇಮಾವತಿ ದೇವಕಿ. ಅವರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರುಸಂತಾಪ ಸೂಚಿಸಿದ್ದಾರೆ. ಅವರ ಅಂತ್ಯ ಸಂಸ್ಕಾರ…

Read More

ಉಚ್ಚಿಲ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಉಡುಪಿ: ಪಡುಬಿದ್ರಿ ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಬೈಕ್‌ ಸವಾರನ ಗುರುತು ಪತ್ತೆ ಇನ್ನೂ ಪತ್ತೆಯಾಗಿಲ್ಲ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಪುತ್ತೂರು ನೋಂದಣಿ ಇರುವ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟರು ಎಂದು…

Read More

ಬಂಟ್ವಾಳ: ನಿಷೇಧಿತ ಗಾಂಜಾ ಮಾರಾಟಗಾರರು ಎನ್ನಲಾಗಿರುವ ಆರೋಪಿಗಳಿಂದ ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ,

ಬಂಟ್ವಾಳ: ನಿಷೇಧಿತ ಗಾಂಜಾ ಮಾರಾಟಗಾರರು ಎನ್ನಲಾಗಿರುವ ಆರೋಪಿಗಳು ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಅಪರಾಧ ಎಸಗಲು ಪ್ರಯತ್ನ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ‌ಅಬಕಾರಿ ನಿರೀಕ್ಷಕರಾದ ಲಕ್ಷ್ಮಣ್ ಹಾಗೂ ಅವರ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ‌ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳೂರು ಕಡೆಯಿಂದ ಬೊಲೆರೋ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಸಾಗಾಟ ನಡೆಸುತ್ತಿದ್ದಾರೆ ಮತ್ತು ಅವರು ಬಿಸಿರೋಡು ಕಡೆಗೆ ಬರುತ್ತಿದ್ದಾರೆ ಎಂಬ ಮಾಹಿತಿಯನ್ನು ಪಡೆದ ಅಬಕಾರಿ ಜಿಲ್ಲಾ ಉಪ ಆಯುಕ್ತರ ನಿರ್ದೇಶನದಂತೆ…

Read More

ಕಾಳಭೈರವನಿಗೆ ಬೆಳ್ಳಿ ಪ್ರಭಾವಳಿ ಸಮರ್ಪಣೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶ್ರೀ ಕಾಳಭೈರವ ದೇವರಿಗೆ ಕುದ್ರೋಳಿ ಕ್ಷೇತ್ರದ ಸ್ಥಾಪಕ ಅಧ್ಯಕ್ಷರಾದ ಸಾವ್‌ಕಾರ್ ಕೊರಗಪ್ಪರವರ ಪುತ್ರ ದಿ.ಸೋಮಸುಂದರಂ ಕುಟುಂಬಸ್ಥರು ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆ.ಜಿ. ತೂಕ ಬೆಳ್ಳಿಯ ಪ್ರಭಾವಳಿಯನ್ನು ಕೊಡುಗೆಯಾಗಿ ನೀಡಿದ್ದು, ಶುಕ್ರವಾರ ಸಮರ್ಪಿಸಲಾಯಿತು. ದಿ.ಸೋಮಸುಂದರಂರವರು ಸುಮಾರು 34 ವರ್ಷ ಕ್ಷೇತ್ರದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರ ಕಿರಿಯ ಪುತ್ರ ಜೈರಾಜ್ ಎಚ್.ಸೋಮಸುಂದರಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ…

Read More

ಶಿಕ್ಷಕರ ಕಾರ್ಯಚಟುವಟಿಕೆಗಳಿಗೆ, ಅವರ ಸಂಘಗಳ ಸಭೆಗಳಿಗೆ ತಮ್ಮ ಕಚೇರಿಯನ್ನು ನೀಡುವುದಾಗಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಭರವಸೆ

ಮಂಗಳೂರು :ಶಿಕ್ಷಕರ ಕಾರ್ಯಚಟುವಟಿಕೆಗಳಿಗೆ, ಅವರ ಸಂಘಗಳ ಸಭೆಗಳಿಗೆ ತಮ್ಮ ಕಚೇರಿಯನ್ನು ನೀಡುವುದಾಗಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಭರವಸೆ ನೀಡಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಮಹಾನಗರ ಪಾಲಿಕೆ ಕಟ್ಟಡದ ಮೊದಲ ಮಹಡಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರ ಕಚೇರಿ ಗುರುವಾರದಂದು ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು. ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಸೇರಿದಂತೆ ಅನೇಕ ಗಣ್ಯರು ಕಚೇರಿ ಉದ್ಘಾಟನೆ ಸಂದರ್ಭ ಉಪಸ್ಥಿತರಿದ್ದು ಶುಭ ಹಾರೈಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಭೋಜೇಗೌಡ ಅವರು ತಾನು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದರಿಂದ ಶಿಕ್ಷಕರ…

Read More

ಕೇಂದ್ರದ ಬಿಜೆಪಿ ಸರಕಾರವು ಜಿಎಸ್ ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ-ಮಂಜುನಾಥ್ ಭಂಡಾರಿ

ಮಂಗಳೂರು: ಕೇಂದ್ರದ ಬಿಜೆಪಿ ಸರಕಾರವು ಜಿಎಸ್ ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ. ಕಳೆದ 8 ವರ್ಷಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಸಾಕಷ್ಟು ಸಮಸ್ಯೆ, ತೊಂದರೆಯನ್ನು ಅನುಭವಿಸಿದ್ದರು. ಜಿಎಸ್ ಟಿಯನ್ನು ಹೆಚ್ಚು ಮಾಡಿದ್ದು ಅವರೇ, ಈಗ ಕಡಿಮೆ ಮಾಡಿರುವುದೂ ಅವರೇ. ಇದಕ್ಕೆಲ್ಲಾ ಸಂಭ್ರಮದ ಆಚರಣೆಯ ಅಗತ್ಯ ಇದೆಯಾ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಪ್ರಶ್ನೆ ಮಾಡಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ,…

Read More

ಕೊಲ್ಲಮೊಗ್ರು ಪಂಚಾಯತ್‌ ನಲ್ಲಿ ಕಳ್ಳರು ಯಾರು? ಅಂಗಡಿ ಮುಂಗಟ್ಟು ಬಂದ್ – ಗ್ರಾಮಸ್ಥರಿಂದ ಮುತ್ತಿಗೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿನ ಸೊತ್ತುಗಳನ್ನು ಅಲ್ಲಿನ ಗುಮಾಸ್ತನೇ ಕಳವು ಮಾಡಿದ್ದರೂ ಆತನ ವಿರುದ್ಧ ಪಂಚಾಯತ್ ಸೂಕ್ತ ಕ್ರಮ ಜರುಗಿಸಿಲ್ಲ, ಪಂಚಾಯತ್ ಸಿಸಿ ಟಿವಿ ಅಳವಡಿಸಿ ಜನರ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಅದನ್ನು ವಾಟ್ಸ್ಯಾಪ್‌ನಲ್ಲಿ ಹರಿಯಬಿಡಲಾಗುತ್ತದೆ‌ ಎಂದು ಆರೋಪಿಸಿದ ಗ್ರಾಮಸ್ಥರು ಗುರುವಾರ ಬೆಳಗ್ಗೆ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯತ್ ಗೆ ಸಂಬಂಧಪಟ್ಟ ಸಿಸಿ ಟಿವಿ ಪರಿಕರ, ಸೌಂಡ್ ಸಿಸ್ಟಮ್‌ ಗಳನ್ನು ಖಾಸಗಿ…

Read More

ಮಂಜೇಶ್ವರ: ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿತ – ವಿದ್ಯಾರ್ಥಿಗಳು ಪವಾಡಸದೃಶ ಪಾರು

ಮಂಜೇಶ್ವರ: ಉದ್ಯಾವರ ಮಾಡದಲ್ಲಿರುವ ಕುಂಜತ್ತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯೊಂದರಲ್ಲಿ ಭಾರೀ ಒಂದು ದುರಂತ ತಪ್ಪಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಶಾಲೆಯ ಎರಡನೇ ತರಗತಿಯ ಮೇಲ್ಛಾವಣಿ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ಪಾಠಕ್ಕೆ ತಡವಾಗಿ ಬಂದ ವಿದ್ಯಾರ್ಥಿಗಳು ಪವಾಡಸದೃಶವಾಗಿ ಪಾರಾಗಿದ್ದಾರೆ. ಘಟನೆ ಬೆಳಿಗ್ಗೆ 8.45ರ ಸುಮಾರಿಗೆ ಸಂಭವಿಸಿದೆ. ಅಪಘಾತದ ಹೊತ್ತಿನಲ್ಲಿ ವಿದ್ಯಾರ್ಥಿಗಳು ತರಗತಿ ಕೊಠಡಿಗೆ ಇನ್ನೂ ತಲುಪಿರಲಿಲ್ಲ. ಒಂದು ವೇಳೆ ವಿದ್ಯಾರ್ಥಿಗಳು ಆಗಲೇ ತರಗತಿಯಲ್ಲಿ ಹಾಜರಿದ್ದರೆ, ಭಾರೀ ದುರಂತ ತಪ್ಪಿಸಿಕೊಳ್ಳಲಾಗುತ್ತಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಸಮಯದಲ್ಲಿ, ಶಾಲೆಯ…

Read More

ಮಂಗಳೂರು ದಸರಾದಲ್ಲಿ ಮುದ್ದು ಶಾರದೆ ಕಲರವ

ಮಂಗಳೂರು: ಶೃಂಗೇರಿ ಶಾರದಾ ಪೀಠದ ವೈಭವ, ವೀಣೆಯ ನುಡಿಸುತ್ತಾ ಮುಗುಳ್ನಗುವ ಕಂದಮ್ಮಗಳು, ಕೈಯೊಲು ತಾವರೆ, ಪುಸ್ತಿಕೆಗಳಿಂದ ಶೋಭಿಸುವ ವಿದ್ಯಾಧಿದೇವತೆ. ಈ ಮಧ್ಯೆ ನವರೂಪಗಳಲ್ಲಿ ಶೋಭಿಸುವ ನವದುರ್ಗೆಯರು. ಇದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದಲ್ಲಿ ಬುಧವಾರ ನಡೆದ ಮುದ್ದು ಶಾರದೆ ಮತ್ತು ನವದುರ್ಗೆಯರ ಸ್ಪರ್ಧೆಯ ಝಲಕ್.ಪಿ.ಕೆ.ಲೋಹಿತ್ ಸ್ಮರಣಾರ್ಥ ಪಿ.ಕೆ ದೂಜ ಪೂಜಾರಿ ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ಆಭರಣ ಜುವೆಲರ್ಸ್ ಮತ್ತು ಅದಿರಾ ಪ್ರಾಪರ್ಟಿಸ್ ಸಹಕಾರದೊಂದಿಗೆ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ನೂರಾರು ಮಂದಿ…

Read More

ಕಾಸರಗೋಡು ದಸರಾ ಸಾಹಿತ್ಯ ವೈಭವ…..!

ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಾಂಸ್ಕೃತಿಕ ಘಟಕ, ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕಾಸರಗೋಡು ಇದರ ಸಂಯುಕ್ತ ಆಶ್ರಯದಲ್ಲಿ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025 ಕಾರ್ಯಕ್ರಮದ ಅಂಗವಾಗಿ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಕೀರ್ತನಾ ಪ್ರತಿಷ್ಠಾನ ಮುಜುಂಗಾವು ಇದರ ಆಶ್ರಯದಲ್ಲಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರ ಬಗ್ಗೆ ಗಾನಗಂಗೆ ಕೃತಿ ರಚಿಸಿದ…

Read More
error: Content is protected !!