Avatar

Rashmitha Acharya

ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಎಡರಂಗ ಸರ್ವ ಪತನ- ಕಾಂಗ್ರೆಸ್

ಈ ವರ್ಷದ ಅಂತ್ಯದೊಳಗೆ ನಡೆಯಲಿರುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಭ್ರಷ್ಟ ಹಾಗೂ ವಚನಭ್ರಷ್ಟ ಎಡರಂಗದ ಅಂತ್ಯವಾಗಲಿದೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಹೇಳಿದ್ದಾರೆ. ಕಾಂಗ್ರೆಸ್ ನ ಗೃಹ ಸಂದರ್ಶನ ಕಾರ್ಯಕ್ರಮದ ಹಿನ್ನಲೆಯಲ್ಲಿ ನಡೆದ ಮಂಗಲ್ಪಾಡಿ ಮಂಡಲ ಕಾಂಗ್ರೆಸ್ ಸಮಿತಿಯ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಬಾಬು ಬಂದ್ಯೋಡು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ನೇತಾರರಾದ ಶ್ರೀ ಫಾರೂಕ್ ಶಿರಿಯ, ಬರ್ನಾರ್ಡ್ ಡಿ’ಅಲ್ಮೇಡಾ, ಅಶ್ರಫ್ ಮುಟ್ಟಂ, ರಾಜೇಶ್ ನಾಯ್ಕ್, ಬಾಬು ಇಚ್ಲಂಗೋಡು, ಬಶೀರ್…

Read More

ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 5ನೇ ಕಾರ್ಯಕ್ರಮ,ಭಾಷೆಯಿಂದ ಸಾಹಿತ್ಯ, ಸಾಹಿತ್ಯದಿಂದ ಸಂಸ್ಕಾರ – ವಿ.ಬಿ ಕುಳಮರ್ವ

ಕಾಸರಗೋಡು :’ ನಾವು ಹೆಚ್ಚು ಹೆಚ್ಚು ಭಾಷೆಗಳನ್ನು ಕಲಿಯುವ ಕಾರಣ ಅನೇಕ ಸಂಸ್ಕೃತಿಯ ಪರಿಚಯವಾಗುತ್ತದೆ. ಭಾಷೆಯುಂದ ಸಾಹಿತ್ಯ ಬೆಳಗುತ್ತದೆ. ಸಾಹಿತ್ಯದಿಂದ ಸಂಸ್ಕಾರ ದೊರೆಯುತ್ತದೆ. ಕನ್ನಡ ಸಾಹಿತ್ಯ ಸರಸ್ವತಿಯ ಸೇವೆ ನಿರಂತರವಾಗಬೇಕು ‘ ಎಂದು ನಿವೃತ್ತ ಶಿಕ್ಷಕ ವಿ. ಬಿ. ಕುಳಮರ್ವ ಹೇಳಿದರು. ಅವರು ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ಶನಿವಾರ ಕೊಂಡೆವೂರು ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ನಡೆದ ಕನ್ನಡ ಸಾಹಿತ್ಯ ಮಾರ್ಗದರ್ಶನ ಅಭಿಯಾನದ ‘ಕನ್ನಡದ ನಡಿಗೆ…

Read More

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸೆ.30 ರಂದು ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇದೇ ಸೆ.30 ರಂದು ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಬಳಿಕ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧ‌ರ್ ಶೆಟ್ಟಿ ಯವರು, ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು, ಪ್ರತಿ ವರ್ಷದಂತೆ ನಗರದ ಕೇಂದ್ರ ಮೈದಾನದಲ್ಲಿ ಈ ಬಾರಿಯ…

Read More

ವಯೋಶ್ರೀ ಯೋಜನೆಯಡಿಯಲ್ಲಿ ಹಿರಿಯ ಅಶಕ್ತರಿಗೆ ಸಹಾಯಕ ಉಪಕರಣ ವಿತರಣೆ

ಕಾಸರಗೋಡು : ನರೇಂದ್ರ ಮೋದಿ ಸರ್ಕಾರದ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ 60 ವರ್ಷ ಮೇಲ್ಪಟ್ಟವರಿಗೆ ಸಹಾಯಕ ಉಪಕರಣಗಳನ್ನು ವಿತರಿಸಲಾಯಿತು. ವಿಕಸಿತ ಕೇರಳ ಕಾಸರಗೋಡು ಜಿಲ್ಲಾ ಹೆಲ್ಸ್ ಡೆಸ್ಕ್ ಮೂಲಕ ನೋಂದಾಯಿಸಿದವರಿಗೆ ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷರಾದ ಅಶ್ವಿನಿ ಎಂ.ಎಲ್. ಅವರು ಸಹಾಯಕ ಉಪಕರಣಗಳನ್ನು ಹಸ್ತಾಂತರಿಸಿದರು. ಬಿಜೆಪಿ ಜಿಲ್ಲಾ ಕಚೇರಿ ಡಾ. ಶ್ಯಾಮ್ ಪ್ರಕಾಶ್ ಮುಖರ್ಜಿ ಮಂದಿರದಲ್ಲಿ ವಿತರಣಾ ಕಾರ್ಯಕ್ರಮ ನಡೆಯಿತು. 60 ವರ್ಷ ಮೇಲ್ಪಟ್ಟ ಹೆಸರು ನೋಂದಾಯಿಸಿದ ಹಿರಿಯ ಕಾರ್ಯಕರ್ತರಿಗೆ ಸಹಾಯಕ ಉಪಕರಣಗಳನ್ನು ವಿತರಿಸಲಾಯಿತು.

Read More

ರಾಷ್ಟ್ರೀಯ ಹೆದ್ದಾರಿ 66ರ ಕುಂಬಳೆ ಆರಿಕ್ಕಾಡಿ ಕಡವತ್ ನಲ್ಲಿ ಟಾಲ್ ಪ್ಲಾಝಾ ಸ್ಥಾಪಿಸಲು ನಾಗರಿಕರ ಅಡ್ಡಿ -ಸಂರಕ್ಷಣೆ ನೀಡುವಂತೆ ಪೊಲೀಸ್ ಮೊರೆ ಹೋದ ಗುತ್ತಿಗೆದಾರ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66ರ ಕುಂಬಳೆ ಆರಿಕ್ಕಾಡಿ ಕಡವತ್ ನಲ್ಲಿ ಟಾಲ್ ಪ್ಲಾಝಾ ಸ್ಥಾಪಿಸಲು ನಾಗರಿಕ ಹಿತಾಸಕ್ತಿಯ ಕ್ರಿಯಾ ಸಮಿತಿ ವಿರೋಧ ಒಡ್ಡಿ, ಕಾಮಗಾರಿ ತಡೆಯುತ್ತಿರುವುದರಿಂದ ಕಾರ್ಮಿಕರಿಗೆ ಸಂರಕ್ಷಣೆ ನೀಡಿ ಕಾಮಗಾರಿಗೆ ಭದ್ರತೆ ಒದಗಿಸಬೇಕೆಂದು ಗುತ್ತಿಗೆದಿರರಾದULPC ಸೊಸೈಟಿ ಪ್ರತಿನಿಧಿಗಳು ಪೋಲೀಸ್ ಮೊರೆ ಹೊರೆ ಹೋಗಿದ್ದಾರೆ. ಟಾಲ್ ಪ್ಲಾಝಾ ನಿರ್ಮಾಣದ ತಡೆಯಾಜ್ಞೆಯನ್ನು ಹೈಕೋರ್ಟು ಮಧ್ಯಂತರ ಆದೇಶದಲ್ಲಿ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮುಂದಿನ 60ದಿನದೊಳಗೆ ಟೋಲ್ ಪ್ಲಾಝಾ ನಿರ್ಮಿಸಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗುತ್ತಿಗೆದಾರರಿಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಅವರು ಕಾಮಗಾರಿ…

Read More

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪ ಮುಸುಕುಧಾರಿಯ ಬಂಧನ..!

ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಎಸ್‌ಐಟಿ ಅಧಿಕಾರಿಗಳು ದೂರುದಾರ ‘ಮಾಸ್ಕ್‌ಮ್ಯಾನ್’ ಅವರನ್ನು ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧಿಸಿದ್ದಾರೆ. ಆಗಸ್ಟ್ 23 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಮೂಲಗಳ ಪ್ರಕಾರ, ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಆಗಸ್ಟ್ 22 ರಂದು ಬೆಳಿಗ್ಗೆ 10 ರಿಂದ ಆಗಸ್ಟ್ 23 ರಂದು ಬೆಳಿಗ್ಗೆ 5 ಗಂಟೆಯವರೆಗೆ ದೂರುದಾರರನ್ನು…

Read More

ಹದಗೆಟ್ಟ ರಸ್ತೆ ಸಂಚಾರ ಶೀಘ್ರ ಪುನರ್ ನಿರ್ಮಾಣಕ್ಕೆ ಶಾಸಕ ವೇದವ್ಯಾಸ್ ಕಾಮತ್ ಒತ್ತಾಯ

ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆ, ಚರಂಡಿ, ರಾಜಕಾಲುವೆ, ತಡೆಗೋಡೆಗಳು ಹಾಳಾಗಿದ್ದು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಇವೆಲ್ಲದರ ಪುನರ್ ನಿರ್ಮಾಣಕ್ಕಾಗಿ ತುರ್ತು ಕಾಮಗಾರಿ ಅಗತ್ಯವಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಗ್ರಹಿಸಿದರು. ಪ್ರಾಕೃತಿಕ ವಿಕೋಪದಿಂದಾಗಿರುವ ಹಾನಿಗೆ ಕಳೆದೆರಡು ವರ್ಷಗಳಿಂದ ರಾಜ್ಯ ಸರ್ಕಾರ ಯಾವುದೇ ವಿಶೇಷ ಅನುದಾನ ಬಿಡುಗಡೆಗೊಳಿಸಿಲ್ಲ. ಎಲ್ಲವೂ ಕೇವಲ ಹಾಳೆಗಳಲ್ಲಿವೆ ವಿನಃ ಕಾರ್ಯರೂಪಕ್ಕೆ ಬಂದಿಲ್ಲ. ಇದೊಂತರಾ ಕನ್ನಡಿಯೊಳಗಿನ…

Read More

ಮಂಜೇಶ್ವರ ಠಾಣಾ ಎ ಎಸ್ಸೈ ಆತ್ಮಹತ್ಯೆ ಗೈದ ಸ್ಥಿತಿಯಲ್ಲಿ ಪತ್ತೆ : ಡೆತ್ ನೋಟ್ ಲಭಿಸಿರುವುದಾಗಿ ಸೂಚನೆ

ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣಾ ಎಎಸ್ಟೈ ಯೊಬ್ಬರು ಪೊಲೀಸ್ ಕ್ಟಾರ್ಟರ್ಸ್ ನೊಳಗೆ ಆತ್ಮಹತ್ಯೆಗೈದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಕುತ್ತಿಕೋಲ್ ನಿವಾಸಿ ಮಧು (50) ಸಾವನ್ನಪ್ಪಿದ ದುರ್ದೈವಿ. ಶುಕ್ರವಾರ ಬೆಳಿಗ್ಗೆ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಅವರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಮಾಹಿತಿ ಅರಿತು ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಸಂಬಂಧ ಒಂದು ಡೆತ್ ನೋಟ್ ಕ್ವಾರ್ಟರ್ಸ್‌ನಿಂದ ಪತ್ತೆಯಾಗಿದೆ ಎಂಬ ಮಾಹಿತಿ ಇದೆ. ಮಧು ಅವಿವಾಹಿತರಾಗಿದ್ದರು. ಠಾಣೆಗೆ ಬರುವ ನಾಗರಿಕರೊಡನೆ ಉತ್ತಮ ಸಂಬಂಧ…

Read More

ಟೀಚರ್ಸ್ ಸ್ಪೋರ್ಟ್ಸ್ ಕೌನ್ಸಿಲ್ ವತಿಯಿಂದ ಪ್ರಶಾಂತ್ ರೈ ಮೆಮೋರಿಯಲ್ ಕ್ರಿಕೆಟ್ ಪಂದ್ಯಾಟ

ಮಿಯಪದವು : ಟೀಚರ್ಸ್ ಸ್ಪೋರ್ಟ್ಸ್ ಕೌನ್ಸಿಲ್ ಕಾಸರಗೋಡು ಇದರ ನೇತೃತ್ವದಲ್ಲಿ ದಿವಂಗತ ಅಧ್ಯಾಪಕ ಪ್ರಶಾಂತ್ ರೈ ಅವರ ಸ್ಮರಣಾರ್ಥ ಇಂಡಿಪೆಂಡೆನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಮೀಯಪದವು ಶಾಲಾ ಮೈದಾನದಲ್ಲಿ ಜರಗಿತು. ಪಂದ್ಯಾಟವನ್ನು ಮೀಯಪದವು ಯು ಪಿ ಶಾಲಾ ಮುಖ್ಯೋಪಾಧ್ಯಾಯರಾದ ಅರವಿಂದಾಕ್ಷ ಭಂಡಾರಿ ಉದ್ಘಾಟಿಸಿದರು. ಟಿ ಎಸ್ಸಿ ಯ ಅಧ್ಯಕ್ಷರಾದ ಸಂಜೀವ ಸಿ ಎಚ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರುಗಳಾದ ಉದಯ್ ಸಾರಂಗ್ ಮತ್ತು ಸದಾಶಿವ ಬಾಲಮಿತ್ರ,ಜತೆ ಕಾರ್ಯದರ್ಶಿ ರಘುವೀರ್ ಉಪಸ್ಥಿತರಿದ್ದರು. ಟಿ ಎಸ್ಸಿ ಕಾರ್ಯದರ್ಶಿ ಪ್ರಶಾಂತ್…

Read More

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಿದೂರು ಶ್ರೀ ಮಹಾದೇವ ನವಜೀವನ ಸಮಿತಿ ಆಶ್ರಯದಲ್ಲಿ ನವಜೀವನೋತ್ಸವ – ಅಗೋಸ್ಟ್ -23 ರಂದು

ಕುಂಬಳೆ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮಂಜೇಶ್ವರ ತಾಲೂಕು ಮತ್ತು ಕಿದೂರು ಶ್ರೀ ಮಹಾದೇವ ನವಜೀವನ ಸಮಿತಿ ಆಶ್ರಯದಲ್ಲಿ ನವಜೀವನೋತ್ಸವ ಹಾಗೂ ಕೆಸರ್ದ ಕಂಡದ್ ಕುಸಲ್ದ ಗೊಬ್ಬು ಲು ಅಗೋಸ್ಟ್ -23 ರಂದು ನಡೆಯಲಿದೆ.ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಉದ್ಘಾಟಿಸಲಿದ್ದಾರೆ. ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಡಾ. ಜಯಪ್ರಕಾಶ್ ನಾರಾಯಣ ತೊಟ್ಟಿತೋಡಿ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ…

Read More
error: Content is protected !!