Avatar

Rashmitha Acharya

ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಶಾಸಕ ಮಂಜುನಾಥ ಭಂಡಾರಿ ಮನವಿ!

ಮಂಗಳೂರು: ರೈಲುಗಳ ಸಂಖ್ಯೆ ಹೆಚ್ಚಾದರೂ ರೈಲು ನಿಲ್ದಾಣಗಳು ಮೇಲ್ದರ್ಜೆಗೇರಿದರೂ ರೈಲ್ವೇ ಪೊಲೀಸ್ ಮಾತ್ರ ತುಂಬಾ ಹಳೆಯ ವ್ಯವಸ್ಥೆಯನ್ನೇ ಹೊಂದಿದೆ. ಮಂಗಳೂರು ಕೇಂದ್ರ ರೈಲು ನಿಲ್ದಾಣದ ಬಳಿ ಠಾಣೆಯನ್ನು ಹೊಂದಿರುವ ಮಂಗಳೂರು ರೈಲ್ವೇ ಪೊಲೀಸ್ ವಿಭಾಗದಲ್ಲಿ ಸಿಬ್ಬಂದಿ ಕೊರತೆ ಹಲವು ವರ್ಷಗಳಿಂದ ಇದ್ದು ಕೂಡಲೇ ಸಿಬ್ಬಂದಿಯ ನೇಮಕಕ್ಕೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಪತ್ರ ಮುಖೇನ ಮನವಿ ಮಾಡಿದ್ದಾರೆ. ಮಂಗಳೂರು ರೈಲ್ವೇ ಪೊಲೀಸ್ ತಲಪಾಡಿ, ತೊಕ್ಕೊಟ್ಟು…

Read More

ಕೊಂಕಣಿ ಸಾಹಿತ್ಯದ ವೀರ ಮಹಿಳೆ ನಾಮಾಂಕಿತ ಗ್ಲ್ಯಾಡಿಸ್ ರೇಗೊಗೆ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ವತಿಯಿಂದ ಶೃದ್ಧಾಂಜಲಿ.

ಕೊಂಕಣಿ ಭಾಷಾ ಕರ್ನಾಟಕ ಇದರ ಕಾರ್ಯಕಾರಿ ಸಭೆಯಲ್ಲಿ ಇತ್ತೀಚಿಗೆ ನಿಧನರಾದ ಕೊಂಕಣಿ ಭಾಷೆಗೆ 27 ಪುಸ್ತಕ ದೇಣಿಗೆ ನೀಡಿದ ಹಿರಿಯ ಸಾಹಿತಿ ಗ್ಲ್ಯಾಡಿಸ್ ರೇಗೊ ಅವರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು. ಈ ವೇಳೆ ಮಾತನಾಡಿದ ಕೆಬಿಎಂಕೆ ಕಾರ್ಯದರ್ಶಿ ರೇಮಂಡ್ ಡಿಕೂನಾ ತಾಕೊಡೆ, ಲೈಬ್ರೆರಿಗಳಲ್ಲಿ ಹುಡುಕಿ ಹಲವು ಸಾಹಿತ್ಯದ ವಿವಿಧ ದಾಖಲೆಗಳನ್ನು ತೆಗೆದು ತನ್ನ ಸ್ವಂತ ಖರ್ಚಿನಲ್ಲಿ ಪುಸ್ತಕ ಪ್ರಕಾಶನ ಮಾಡಿದ ಸಾಹಿತ್ಯದ ಶ್ರಮಜೀವಿ ಗ್ಲ್ಯಾಡಿಸ್ ರೇಗೊ ಆಗಿದ್ದರು ಎಂದು ಗುಣಗಾನ ಮಾಡಿದರು. ಕವಿ ಜೊಸ್ಸಿ ಪಿಂಟೊ ಮಾತನಾಡಿ,ಕೊಂಕಣಿ ಪತ್ರಿಕೆಗಳಿಗೆ…

Read More

ಬೈಕಂಪಾಡಿ ನಂತೂರು ನಡುವೆ ಭಾರಿ ಟ್ರಾಫಿಕ್ ಜಾಮ್- ಸಂಕಷ್ಟಕ್ಕೆ ಸಿಲುಕಿದ ವಾಹನ ಸವಾರರು

ಮಂಗಳೂರು ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್. ಜಂಕ್ಷನ್ ನಿಂದ ಅಯ್ಯಪ್ಪ ಗುಡಿಯವರೆಗೆ ರಸ್ತೆ ದುರಸ್ತಿ ಕಾಮಗಾರಿ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರದಲ್ಲಿ ಮಾಡಿರುವ ಮಾರ್ಪಾಡಿನಿಂದ ಬೈಕಂಪಾಡಿಯಿಂದ ನಂತೂರು ವರೆಗೆ ಭಾರೀ ಟ್ರಾಫಿಕ್ ಜಾಮ್ ಗೆ ಕಾರಣವಾಗಿದೆ. ಬೆಳಗ್ಗೆಯಿಂದಲೇ ಕೊಟ್ಟಾರ ಚೌಕಿ ಬಳಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಕಾಣಿಸಿಕೊಂಡಿದೆ. ಕಿಲೋ ಮೀಟರ್ ವರೆಗೆ ವಾಹನಗಳು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿವೆ. ಈ ಕಡೆ ಕೆಪಿಟಿ, ನಂತೂರು, ಕೊಟ್ಟಾರದ…

Read More

ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ

24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಅಬ್ದುಲ್ ಫಯಾನ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ…

Read More

ಮಾತಾ ಅಮೃತಾನಂದಮಯಿ ಮಠ ಬೋಳೂರಿನಲ್ಲಿ ಜುಲೈ 27ರಂದು ಗುರುಪೂರ್ಣಿಮಾ ಉತ್ಸವ

ಅಮ್ಮ,ತಾನಂದಮಯಿ ಮಠದಲ್ಲಿ ಗುರುಪೂರ್ಣಿಮಾ ಉತ್ಸವ ಜುಲೈ 27ರಂದು ಮಾತಾ ಅಮೃತಾನಂದಮಯಿ ಮಠ ಬೋಳೂರು ಇಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸುರೇಶ್ ಅಮೀನ್ ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುಪೂರ್ಣಿಮಾ ಆಚರಣೆಯನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯ ಪೂರ್ಣವಾಗಿ ಆಚರಿಸಲಾಗುವುದು. ಅಂದು ಬೆಳಗೆ, 7.00 ಗಂಟೆಗೆ ಮಂಗಳೂರು ನಗರದ ಬೋಳೂರಿನಲ್ಲಿರುವ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ಪ್ರಧಾನ ಅರ್ಚಕರಾದ ಬ್ರಹ್ಮಚಾರಿ ರತೀಶ್ ಮತ್ತು ಅರ್ಚಕ ವೃಂದದವರಿಂದ ಮಹಾಗಣಪತಿ ಹೋಮದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಗುರುಹೋಮ,…

Read More

ಹಿರಿಯ ರಂಗ ಭೂಮಿ ಕಲಾವಿದ ರಮೇಶ್ ಕಲ್ಲಡ್ಕ ಇನ್ನಿಲ್ಲ

ತುಳು ರಂಗಭೂಮಿಯ ಹಿರಿಯ ಕಲಾವಿದ, ಚಲನಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಪುತ್ರ, ಪುತ್ರಿಯನ್ನು ಹೊಂದಿದ್ದರು. ರಂಗಭೂಮಿಯಲ್ಲಿ 30 ವರ್ಷಕ್ಕೂ ಮಿಕ್ಕಿ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಕಳೆದ 20 ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ಮಾಡುತ್ತಿದ್ದರು. ವಿಜಯಕುಮಾರ್ ಕೊಡಿಯಾಲ್ ಬೈಲ್ ರವರ ಗರಡಿಯಲ್ಲಿ ಪಳಗಿದ ರಮೇಶ್ ಕಲ್ಲಡ್ಕ ಕಲಾಸಂಗಮದ ಎಲ್ಲಾ ಸಾಮಾಜಿಕ, ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಅದರಲ್ಲೂ “ಶಿವದೂತಗುಳಿಗೆ” ನಾಟಕದ…

Read More

ದಿ.ಮನೋಜ್ ಕುಮಾರ್ ಶೆಟ್ಟಿ ಸ್ಮರಣಾರ್ಥ ಉಚಿತ ಪುಸ್ತಕ ವಿತರಣೆ

ದಿ.ಮನೋಜ್ ಕುಮಾರ್ ಶೆಟ್ಟಿಯವರ ಸವಿನೆನಪಿಗಾಗಿ ಕುಟುಂಬದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಸರಕಾರಿ ಪ್ರೌಢ ಶಾಲೆ ಹೊಯ್ಗೆ ಬಜಾರ್ ನಲ್ಲಿ ಉಚಿತ ಪುಸ್ತಕ ವಿತರಣೆ ಸಮಾರಂಭವು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ದಿ.ಮನೋಜ್ ಕುಮಾರ್ ರವರು ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯರಾಗಿದ್ದವರು. ವೈಯಕ್ತಿಕವಾಗಿ ನನಗೂ ಬಹಳ ಆತ್ಮೀಯರಾಗಿದ್ದ ಅವರು ಈ ಭಾಗದ ಪಕ್ಷ ಸಂಘಟನೆಯಲ್ಲಿ ಎಲ್ಲರಿಗೂ ಮಾದರಿಯಾಗುವಂತೆ ತೊಡಗಿಸಿಕೊಂಡಿದ್ದರು. ಸಮಾಜಕ್ಕಾಗಿ ಏನಾದರೂ ಮಾಡಬೇಕು ಎನ್ನುತ್ತಲೇ ಸದಾ ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿದ್ದ ಅವರ ಸೇವಾ…

Read More

ಆಧುನಿಕ ವಿಶಿಷ್ಟ,ಹ್ಮದಯ ಕವಾಟ ವಾಲ್ವ್ ಇನ್ ವಾಲ್ವ್ ಟಿ ಎ ವಿ ಆರ್ ಚಿಕಿತ್ಸೆ ಯಶಸ್ವಿ -ಇಂಡಿಯಾನ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ ಯೂಸುಫ್ ಕುಂಬ್ಳೆ

ಇಂಡಿಯಾನಾ ಅಸ್ಪತ್ರೆಯಲ್ಲಿ ಮಂಗಳೂರು ನಗರದ ಮೊಟಮೊದಲ ಯಶಸ್ವಿ ವಿಶಿಷ್ಟ,ಹ್ಮದಯ ಕವಾಟ ವಾಲ್ವ್ ಇನ್ ವಾಲ್ವ್ ಟಿ ಎ ವಿ ಆರ್ ಚಿಕಿತ್ಸೆಯನ್ನು ಇಬ್ಬರು ಕ್ಲಿಷ್ಟಕರ ಪರಿಸ್ಥಿತಿ ಇರುವ ರೋಗಿಗಳಿಗೆ ಅಳವಡಿಸುವ ಮುಖಾಂತರ ಆಧುನಿಕ ಹೃದಯ ಚಿಕಿತ್ಸ ಕ್ಷೇತ್ರದಲ್ಲಿ ಮಹತ್ವಕರವಾದ ಮೈಲಿಗಲ್ಲನ್ನು ಸಾಧಿಸಿದೆ ಎಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಇಂಡಿಯಾನ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಾರಾದ ಡಾ ಯೂಸುಫ್ ಕುಂಬ್ಳೆ ತಿಳಿಸಿದರು . ಸುದ್ದಿಗಾರೊಂದಿಗೆ ಮಾತನಾಡಿದ ಅವರು , ಮಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ Valve-in-Valve TAVR (Transcatheter…

Read More

ಕೂಳೂರು ಸೇತುವೆ ರಸ್ತೆ ದುರಸ್ತಿ | ಪರ್ಯಾಯ ಮಾರ್ಗಗಳ ಮಾಹಿತಿ

ಮಂಗಳೂರು ನಗರದಲ್ಲಿ ಒಂದು ಪ್ರಮುಖ ರಸ್ತೆಯ ಕಾಮಗಾರಿ – ಕೂಲೂರು ಸೇತುವೆ ಬಳಿ ರಸ್ತೆ ದುರಸ್ತಿ ಕಾರ್ಯ ಆರಂಭಗೊಳ್ಳುತ್ತಿದೆ. ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಮಹತ್ವದ ಮಾಹಿತಿ ಇಲ್ಲಿದೆ.ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66, ಕೆಐಒಸಿಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜುಲೈ 22ರ ರಾತ್ರಿ 8 ಗಂಟೆಯಿಂದ, ಜುಲೈ 25ರ ಬೆಳಗ್ಗೆ 8 ಗಂಟೆವರೆಗೆ ರಸ್ತೆ ದುರಸ್ತಿ ಕಾರ್ಯ ನಡೆಯಲಿದೆ. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಹೊಸ ಕೂಳೂರು ಸೇತುವೆ ದ್ವಿಪಥ ರಸ್ತೆಯಾಗಿ ಪರಿವರ್ತನೆಗೊಳ್ಳಲಿದೆ….

Read More

ಉಡುಪಿ: ಲೋಕೋಪಯೋಗಿ ಕ್ವಾಟ್ರಸ್‌ನಲ್ಲಿ ಕಳ್ಳತನ ಪ್ರಕರಣ; ಇಬ್ಬರು ಕುಖ್ಯಾತ ಕಳ್ಳರ ಬಂಧನ

ಉಡುಪಿ: ಉಡುಪಿಯ ಮಿಷನ್ ಕಂಪೌಂಡ್‌ನಲ್ಲಿರುವ ಲೋಕೋಪಯೋಗಿ ವಸತಿ ಸಮುಚ್ಚಯದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತ‌ರ್ ರಾಜ್ಯ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಗಡ ರಮೇಶ್ ಜವಾನ್ ಸಿಂಗ್(37), ಕಾಲಿಯಾ ಕಾಲು (25) ಬಂಧಿತ ಕಳ್ಳರು. ಇವರು ಮಧ್ಯಪ್ರದೇಶ ಮೂಲದವರಾಗಿದ್ದಾರೆ. ಆರೋಪಿಗಳಿಂದ ಬೆಳ್ಳಿಯ ಆಭರಣಗಳಾದ ಕಾಲು ಗೆಜ್ಜೆ, ಸೊಂಟದ ನೇವಳ, ಕೈಬಳೆ, ಕಾಲುಂಗುರ, ಸೊಂಟದ ಪಟ್ಟಿ, ಬಟ್ಟಲು, ಕಡಗ ಮತ್ತು ಬ್ರಾಸ್‌ಲೈಟ್ ಸೇರಿ ಒಟ್ಟು 80,970 ರೂಪಾಯಿ ಮೌಲ್ಯದ 681.830 ಮಿಲಿ ಗ್ರಾಂನ ಬೆಳ್ಳಿಯ ಸೊತ್ತು,…

Read More
error: Content is protected !!