ಇಂಡಿಯಾನಾ ಆಸ್ಪತ್ರೆಯಲ್ಲಿ ಆರಂಭಗೊಂಡ ಲೇಸರ್ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಯು ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ -ಡಾ.ಭಗವಾನ್ ಬಿ.ಸಿ. ಶ್ಲಾಘನೆ
ಮಂಗಳೂರು : ಇಂಡಿಯಾನಾ ಆಸ್ಪತ್ರೆಯಲ್ಲಿ ಆರಂಭಗೊಂಡ ಲೇಸರ್ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಯು ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ ಎಂದು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಭಗವಾನ್ ಬಿ.ಸಿ. ಶ್ಲಾಘಿಸಿದ್ದಾರೆ.ಮಂಗಳೂರಿನ ಇಂಡಿಯಾನಾ ಹಾಸ್ಪಿಟಲ್ ಆಂಡ್ ಹಾರ್ಟ್ ಇನ್‌ಸ್ಟಿಟ್ಯೂಟ್ ಆರಂಭಿಸಿರುವ ಹೈ ಪ್ರಿಸಿಶನ್ ಲೇಸರ್ ಆಂಜಿಯೋಪ್ಲಾಸ್ಟಿ ವೈದ್ಯಕೀಯ ಚಿಕಿತ್ಸಾ ಸೌಲಭ್ಯವನ್ನು ಅನಾವರಣಗೊಳಿಸಿ ಅವರು ಮಾತನಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಹೃದ್ರೋಗ ಸಮಸ್ಯೆ ಯುವ ಜನರಲ್ಲಿ ಹೆಚ್ಚುತ್ತಿದೆ.ಇದಕ್ಕೆ ನಮ್ಮ ಆಹಾರ ಪದ್ಧತಿ, ಜೀವನ ಪದ್ಧತಿ, ವಂಶ ಪಾರಂಪರ್ಯವಾಗಿ ಬಂದಿರುವ ಕೆಲವು ಕಾರಣಗಳಿವೆ….