Avatar

Shramitha bejja

ಶ್ರೀ ಅಯ್ಯಪ್ಪ ಭಜನಾ ಮಂದಿರ, ಬಾಳ್ಳೂರು – ವಾರ್ಷಿಕ ಮಹೋತ್ಸವ

ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಳ್ಳೂರಿನ ವಾರ್ಷಿಕ ಮಹೋತ್ಸವವು 13-12-2025 (ಶನಿವಾರ) ರಿಂದ 14-12-2025 (ಆದಿತ್ಯವಾರ)ದ ವರೆಗೆ ದಡ್ಡಂಗಡಿ ವೇದಮೂರ್ತಿ ಬಾಲಕೃಷ್ಣ ಭಟ್ ಅವರ ಪೌರೋಹಿತ್ಯದಲ್ಲಿ, ಕೊಂಡೆವೂರು ಮಠ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಜರಗಲಿದೆ. ಈ ಸಂದರ್ಭದಲ್ಲಿ 13ನೇ ವರ್ಷದ ಏಕಾಹ ಭಜನೆ, 36ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಯಕ್ಷಗಾನ ಬಯಲಾಟ ಸೇರಿದಂತೆ ವಿವಿಧ ಧಾರ್ಮಿಕ–ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

Read More

ಭಯದ ವಾತಾವರಣ ಸೃಷ್ಟಿಸಿದ ನಾಗರಾಹಾವು: ಸೆರೆ ಹಿಡಿದು ಮಾನವೀಯತೆ ಮೆರೆದ ಉರಗ ತಜ್ಞ ರಾಜು ಕಿದೂರು

ಕುಂಬ್ಳೆ : ಎರಡು ದಿನಗಳಿಂದ ಬಂಬ್ರಾಣ ಬತ್ತೆರಿ ನಿವಾಸಿ ನಾರಾಯಣ ಅವರ ಮನೆ ಅಂಗಳದಲ್ಲಿ ಸುತ್ತಾಡುತ್ತಿದ್ದ ನಾಗರ ಹಾವೊಂದು ಮನೆ ಮಂದಿಗೆ ಭಯದ ವಾತಾವರಣ ಸೃಷ್ಟಿಸಿತ್ತು. ಇದೀಗ ಕೊನೆಗೂ ಇಂದು ಮುಂಜಾನೆ 7 ಗಂಟೆಯ ಸುಮಾರಿಗೆ ಹೊಲಿ ಫ್ಯಾಮಿಲಿ ಶಾಲಾ ಅಧ್ಯಾಪಕರು ಹಾಗೂ ನುರಿತ ಉರಗ ತಜ್ಞರಾದ ರಾಜು ಕಿದುರ್ ಅವರು ಸ್ಥಳಕ್ಕೆ ಭೇಟಿ ನೀಡಿ ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕೊನೆಗೂ ಮನೆ ಹಾಗೂ ಊರ ಮಂದಿ ನಿಟ್ಟುಸಿರು ಬಿಡುವಂತಾಗಿದೆ. ಈ ಸಂಧರ್ಭದಲ್ಲಿ ಉರಗ ತಜ್ಞರಾದ ರಾಜು…

Read More

ಸ್ವಸ್ತಿಕ್ ಕಲಾಕೇಂದ್ರ ( ರಿ) ಜಲ್ಲಿಗುಡ್ಡೆ .ಯಕ್ಷರಂಗದ ಧೀಮಂತ ಪ್ರತಿಭೆ ಬಾಬು ಕುಡ್ತಡ್ಕ ಪ್ರಶಸ್ತಿ ಪ್ರಧಾನ ಸಮಾರಂಭ

ಸ್ವಸ್ತಿಕ್ ಕಲಾಕೇಂದ್ರ ( ರಿ) ಜಲ್ಲಿಗುಡ್ಡೆ ಇದರ ವತಿಯಿಂದ ರಾಮಕೃಷ್ಣ ಮಿಷನ್ ಮಂಗಳೂರು ಇಲ್ಲಿನ ವಿವೇಕಾನಂದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಯಕ್ಷರಂಗದಲ್ಲಿ 33 ವರ್ಷಗಳಿಗೂ ಹೆಚ್ಚು ಕಾಲ ಕಲಾದೇವಿಯನ್ನು ಆರಾಧಿಸಿ ಸವ್ಯಸಾಚಿ ಎನಿಸಿದ ಕುಮಾರ ಗೌಡ ಪುತ್ತಿಗೆ ಇವರಿಗೆ 25-26 ರ ಸಾಲಿನ ಬಾಬು ಕುಡ್ತಡ್ಕ ಪ್ರತಿಷ್ಟಿತ ಬಾಬು ಕುಡ್ತಡ್ಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿಗೆ ಸ್ಪಂದಿಸಿ ಮಾತನಾಡಿದ ಅವರು ಬಾಬು ಕುಡ್ತಡ್ಕ ರು ಬದುಕಿದ್ದಾಗ ಅವರು ನಾನು ಒಂದೇ ಮೇಳದಲ್ಲಿದ್ದೆವು ನನ್ನ.ತಪ್ಪುಗಳನ್ನು ತಿದ್ದಿ ನನಗೆ ಮೂರ್ತಿ…

Read More

ಟಯರ್ ಸ್ಪೋಟಗೊಂಡು ಟೆಂಪೋ ಪಲ್ಟಿ – ಕಾರ್ಮಿಕ ಮಹಿಳೆ ದುರಂತ ಅಂತ್ಯ …. !

ಉಡುಪಿ: ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋ ವೊಂದರ ಟಯರ್ ಸ್ಫೋಟಗೊಂಡು ಮಗುಚಿ ಬಿದ್ದ ಪರಿಣಾಮ ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ರಾ.ಹೆ. 66ರಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.ಮೃತಪಟ್ಟ ಮಹಿಳೆಯನ್ನು ಪಾರ್ವತಿ (30) ಎಂದು ಗುರುತಿಸಲಾಗಿದೆ. ಸಾವಿತ್ರಮ್ಮ, ಮಹಂತೇಶ್ ಸಹಿತ 7 ಜನರು ಗಾಯಗೊಂಡಿದ್ದಾರೆ. ಮುಲ್ಕಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೆಂಪೋದಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಯಂತ್ರ ಮತ್ತು ಪರಿಕರಗಳ ಸಹಿತ ಪುರುಷರು ಮತ್ತು ಮಹಿಳೆಯರಿದ್ದರು. ವೇಗವಾಗಿ ಸಾಗುತ್ತಿದ್ದ ವಾಹನದ…

Read More

ದೈವಾರಾಧಾನೆಯಲ್ಲಿ ನಿರತರಾಗಿರುವ ತುಳುನಾಡಿನ ಹಲವು ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಅವರ ನೆರವಿಗೆ ಕೂಡಲೇ ಧಾವಿಸಬೇಕು-ಶಾಸಕ ವೇದವ್ಯಾಸ ಕಾಮತ್

ದೈವಾರಾಧಾನೆಯಲ್ಲಿ ನಿರತರಾಗಿರುವ ತುಳುನಾಡಿನ ಹಲವು ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಅವರ ನೆರವಿಗೆ ಕೂಡಲೇ ಧಾವಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಪರಿಶಿಷ್ಟ ಜಾತಿಗೆ ಸೇರಿದ ಬಂಧುಗಳಾದ ದೈವ ನರ್ತಕರಲ್ಲಿ ನಲಿಕೆ, ಪರವ, ಪಂಬದ, ಪಾಣರ ಹೀಗೆ ವಿವಿಧ ವರ್ಗಳಿದ್ದು, ದೈವ ಪಾತ್ರಿಗಳಲ್ಲಿ ಮುಂಡಾಲ, ಆದಿ ದ್ರಾವಿಡ, ಮುಗೇರ, ಬಾಕುಡ, ಸಮಗಾರ ಅಲ್ಲದೇ ರಾಜನ್ ದೈವ ಪಾತ್ರಿಗಳಾಗಿ ಜೈನ, ಬಂಟ, ಬಿಲ್ಲವದವರಿದ್ದು, ದೈವದ ಚಾಕರಿ ಮಾಡುವವರಲ್ಲಿಯೂ…

Read More

ರಾಜಕೀಯ ಪಿತೂರಿಯಿಂದಾಗಿ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ : ಶಾಹಿದ ತಸ್ನೀಮ್

ಬಿಸಿರೋಡ್-ಡಿ.10: ರಾಜಕೀಯ ಪಿತೂರಿಯ ಭಾಗವಾಗಿ ಕಾನೂನುಗಳನ್ನು ದುರ್ಬಳಕೆ ಮಾಡಿ ಅಮಾಯಕರನ್ನು ವಿಚಾರಣೆ ಇಲ್ಲದೆ ವರ್ಷಗಟ್ಟಲೆ ಜೈಲಲ್ಲಿ ಕೊಳೆಸುತ್ತಿರುವುದು ಮತ್ತು ಕೊನೆಗೆ ಸಾಕ್ಷ್ಯಧಾರಗಳೇ ಇಲ್ಲದೇ ಬಿಡುಗಡೆಯಾಗುತ್ತಿರುವುದು ಮಾನವ ಹಕ್ಕಿನ ಉಲ್ಲಂಘನೆಯಾಗಿದೆ. ಕರಾಳ ಕಾನೂನುಗಳನ್ನು ತಮ್ಮ ಸ್ವಚ್ಛಾಚಾರಕ್ಕೆ ದುರ್ಬಳಕೆ ಮಾಡಿದ ಅಧಿಕಾರಿಗಳನ್ನು ಉತ್ತರದಾಯಿಗಳನ್ನಾಗಿಸಬೇಕು ಮತ್ತು ಮುಗ್ಧರಿಗೆ ಪರಿಹಾರ ಒದಗಿಸಬೇಕು. ಅತಿ ಹೆಚ್ಚು ದುರ್ಬಳಕೆಗೀಡಾಗುತ್ತಿರುವ ಇಂತಹ ಕರಾಳ ಕಾನೂನುಗಳನ್ನು ತಕ್ಷಣ ಹಿಂಪಡೆಯಬೇಕು. ಇದಕ್ಕಾಗಿ ಜನಾಂದೋಲನ ರೂಪಿಸಲು ಇಂದಿನ ವಿಶ್ವ ಮಾನವ ಹಕ್ಕುಗಳ ದಿನ ಪ್ರೇರಣೆಯಾಗಲಿ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ರಾಷ್ಟ್ರೀಯ…

Read More

ದೇಗುಲದ ಮುಂಭಾಗ ಆಯೋಜಿಸಿದ್ದ ದಫ್ ಪ್ರದರ್ಶನ ರದ್ದು

ಹಿಂದೂಪರ ಸಂಘಟನೆಗಳ ಒತ್ತಡದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗ ಏರ್ಪಡಿಸಿದ್ದ ದಫ್ ಪ್ರದರ್ಶನವನ್ನು ರದ್ದು ಮಾಡಲಾಗಿದೆ. ಡಿ. 25 ಮತ್ತು 26 ರಂದು ಸಮಾಜ ಸೇವಾ ಸಂಘ (ರಿ) ಇದರ ವತಿಯಿಂದ ಕೆವಿಜಿ ಸುಳ್ಯ ಹಬ್ಬವನ್ನು ಆಯೋಜಿಸಲಾಗಿತ್ತು. ಕೋಮು ಸೌಹಾರ್ದತೆಯ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸಹಕಾರದಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮ ‘ದಫ್ ಪ್ರದರ್ಶನ’ವನ್ನು ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿತ್ತು. ದೇವಸ್ಥಾನದ ಮುಂಭಾಗ ದಫ್ ಪ್ರದರ್ಶನವನ್ನು ವಿಎಚ್ ಪಿ…

Read More

ಬ್ರಹ್ಮಾವರ: ಮರಕ್ಕೆ ಡಿಕ್ಕಿ‌ ಹೊಡೆದ ಟಿಪ್ಪರ್: ಚಾಲಕ ಸ್ಥಳದಲ್ಲೇ ಮೃತ್ಯು… !

ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಟಿಪ್ಪರ್ ಚಾಲಕ ಶ್ರೀಕಾಂತ್(26) ಎಂದು ಗುರುತಿಸಲಾಗಿದೆ. ನಿಟ್ಟೂರಿನ ರಂಜನ್ ಶೆಟ್ಟಿ ಎಂಬವರ ಮಾಲಕತ್ವದ ಟಿಪ್ಪರ್‌ನ್ನು ಚಾಲಕ ಶ್ರೀಕಾಂತ್, ನಿಟ್ಟೂರಿನಿಂದ ಜೆಲ್ಲಿ ಲೋಡ್‌ಗಾಗಿ ಚಲಾಯಿಸಿಕೊಂಡು ಹೋಗಿದ್ದರು. ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಹೋಗುತ್ತಿದ್ದ ಟಿಪ್ಪರ್, ರಸ್ತೆಯ ತಿರುವಿನಲ್ಲಿರುವ ರಸ್ತೆ ಹೊಂಡಕ್ಕೆ ಬಿದ್ದಿದ್ದು, ಇದರಿಂದ ನಿಯಂತ್ರಣ ತಪ್ಪಿದ ಟಿಪ್ಪರ್,…

Read More

ಡಿ.14ರಂದು ತುಳು ಅಕಾಡೆಮಿ ವತಿಯಿಂದ ‘ಮಣೇಲ್ ದ ಪೆರ್ಮೆ ರಾಣಿ ಅಬ್ಬಕ್ಕ’ ವಿಚಾರಗೋಷ್ಠಿ… !

ಮಂಗಳೂರು:ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರು ತಾಲೂಕಿನ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿಯ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ರಾಣಿ ಅಬ್ಬಕ್ಕನ ಕುರಿತಾಗಿ ‘ಮಣೇಲ್ ದ ಪರ್ಮೆ ರಾಣಿ ಅಬ್ಬಕ್ಕ’ ಎಂಬ ವಿಚಾರ ಕೂಟವನ್ನು ಸ್ಥಳೀಯ ರಾಣಿ ಅಬ್ಬಕ್ಕ ಚಾವಡಿಯ ಸಹಭಾಗಿತ್ವದಲ್ಲಿ ಡಿ.14ರಂದು ಬೆಳಿಗ್ಗೆ 10.00 ಗಂಟೆಗೆ ಆಯೋಜಿಸಲಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ರಾಣಿ ಅಬ್ಬಕ್ಕನ ಅರಮನೆ…

Read More

ದ. ಕ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢ ಶಾಲೆ ಅತ್ತಾವರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ತಾವರ ಮಂಗಳೂರು ದಕ್ಷಿಣ ವಲಯದ ವಾರ್ಷಿಕ ಕ್ರೀಡಾಕೂಟ

ದ. ಕ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢ ಶಾಲೆ ಅತ್ತಾವರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ತಾವರ ಮಂಗಳೂರು ದಕ್ಷಿಣ ವಲಯದ ವಾರ್ಷಿಕ ಕ್ರೀಡಾಕೂಟ ಶಾಲಾ ಮೈದಾನದಲ್ಲಿ ನಡೆಯಿತು.ಉದ್ಯಮಿ ಸತೀಶ್ ಕುಮಾರ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು, ಬಳಿಕ ಮಾತನಾಡಿದ ಅವರು ಸರಕಾರಿ ಶಾಲೆಗಳಲ್ಲಿ ಧನಾತ್ಮಕ ಶಕ್ತಿ ಇದೆ ಆದ್ದರಿಂದ ಎಲ್ಲರೂ ಭಾಗವಹಿಸಿ ಸಹಕಾರ ನೀಡುತ್ತಾರೆ ಎಂದರು.ಶಿಕ್ಷಣ ಶಿಕ್ಷಕ ಮಹಾವಿದ್ಯಾಲಯದ ಪ್ರಾಂಶುಪಾಲ ಪುಷ್ಪಲತಾ ಮಾತನಾಡಿ ಪಾಠದ ಜೊತೆಗೆ ಕ್ರೀಡೆಯ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಆವಾಗ ಮಕ್ಕಳು…

Read More
error: Content is protected !!