Avatar

Shramitha bejja

ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಸಹಕಾರ ಕ್ಷೇತ್ರ ಅಪಾರ ಕೊಡುಗೆ ನೀಡಿದೆ : ಸ್ಪೀಕರ್ ಯು ಟಿ ಖಾದರ್

ಮಂಗಳೂರು: ಸಹಕಾರ ಕ್ಷೇತ್ರವು ದೇಶದ ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಒತ್ತು ನೀಡುವ ಮೂಲಕ ಗ್ರಾಮೀಣ ಜನರಿಗೆ ಶಕ್ತಿ ನೀಡಿದೆ. ದೇಶದ ಅಭಿವೃದ್ಧಿಗೆ ಸಹಕಾರ ರಂಗವು ಅಪಾರ ಕೊಡುಗೆ ನೀಡುತ್ತಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು ಎಂಬ ಧ್ಯೇಯ ವಾಕ್ಯ ದೊಂದಿಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ…

Read More

ಸಮಾಜಕ್ಕೆ ಮಾದರಿ ಮಕ್ಕಳ ಕೃಷಿ ಕಾಯಕಕ್ಕೆ ಒಲಿದ ಫಲವತ್ತೆಯ ಧ್ಯಾನ ದೇವತೆ …. !

ಬಂಟ್ವಾಳ: ಬೆಳೆವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ಇಲ್ಲಿನ ನಾಲ್ವರು ಮಕ್ಕಳು ತಮ್ಮ ಬಾಲ್ಯವೆಂಬ ಮೊಳಕೆಯಲ್ಲಿಯೇ ಬದುಕಿನ ಬೆಳೆಯನ್ನು ತೆಗೆದು ಮಾದರಿ ಯಾಗಿದ್ದಾರೆ. ಬಂಟ್ವಾಳ ತಾಲ್ಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬುದು ಕಲೆಂಜಿಮಲೆ ಎಂಬ ರಕ್ಷಿತಾರಣ್ಯದ ಹಸಿರ ತಪ್ಪಲಿನಲ್ಲಿರುವ ಸಣ್ಣ ಊರು. ಊರಿನ ಹೆಬ್ಬಾಗಿಲಿ ನಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಪುಣ್ಯ ಸನ್ನಿಧಿಯಿದೆ.ಪರಮ ಪೂಜ್ಯ ಮಹಾಭಲೇಶ್ವರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈ ಕ್ಷೇತ್ರ ಧಾರ್ಮಿಕ, ಸಾಮಾಜಿಕ, ಶ್ರದ್ದಾ ಕೇಂದ್ರವಾಗಿ ಬೆಳಗುತ್ತಿದೆ. ಈ ಕ್ಷೇತ್ರದ ಎದುರಿನ ಹೊರ ಭಾಗದಲ್ಲಿ ನೆರೆಹೊರೆಯ…

Read More

ಸೃಜನಶೀಲತೆ ಮತ್ತು ನಾವೀನ್ಯತೆಯನ್ನು ಮೆರೆದ ಬರಕಾ ಎಕ್ಸ್‌ಪ್ಲೋರಿಯಾ 2025

ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜು ಇತ್ತೀಚೆಗೆ ತನ್ನ ಬಹು ನಿರೀಕ್ಷಿತ ಶೈಕ್ಷಣಿಕ ಪ್ರದರ್ಶನವಾದ ಬರಕಾ ಎಕ್ಸ್‌ಪ್ಲೋರಿಯಾ 2025ನ್ನು ಆಯೋಜಿಸಿತು. ಇದರಲ್ಲಿ ವಿದ್ಯಾರ್ಥಿಗಳ ರೋಮಾಂಚಕ ಪ್ರತಿಭೆಗಳನ್ನು ಪ್ರದರ್ಶಿಸಲಾಯಿತು. ಈ ಕಾರ್ಯಕ್ರಮವು ವಿಜ್ಞಾನ ಪ್ರಯೋಗಗಳು, ರೋಬೋಟಿಕ್ಸ್ ಪ್ರದರ್ಶನಗಳು, ಇತಿಹಾಸ, ಸಾಹಿತ್ಯ, ಕಲೆ, ಸಾಂಸ್ಕೃತಿಕ ಪ್ರದರ್ಶನಗಳು ಮತ್ತು ಇಸ್ಲಾಮಿಕ್ ಅಧ್ಯಯನಗಳು ಸೇರಿದಂತೆ ವಿವಿಧ ವಿಷಯಗಳನ್ನು ಒಳಗೊಂಡಿತ್ತು. ಇದು ಶಾಲೆಯ ಸಮಗ್ರ ಮತ್ತು ಅನುಭವಾತ್ಮಕ ಕಲಿಕೆಗೆ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಪ್ರದರ್ಶನವನ್ನು ಮಂಗಳೂರಿನ ಪ್ರಸಿದ್ಧ ರಾಜಕಾರಣಿ ಮತ್ತು ಸಮಾಜಸೇವಕ ಪದ್ಮರಾಜ್ ಆರ್ ಪೂಜಾರಿ…

Read More

ಬಂದ್ಯೋಡ್ ರಾ.ಹೆದ್ದಾರಿಯಲ್ಲಿ ಕಾರುಗಳ ಮಧ್ಯೆ ಡಿಕ್ಕಿ : ಮಹಿಳೆ ಸಾವು : ನಾಲ್ಕು ಮಂದಿಗೆ ಗಾಯ

ಮಂಜೇಶ್ವರ : ಬಂದ್ಯೋಡ್ ಮುಟ್ಟಂ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾರ್ ಕಾರಿನ ಹಿಂಬಾಗಕ್ಕೆ ಆಲ್ಟೋ ಕಾರೊಂದು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಐದು ಮಂದಿ ಗಂಭೀರ ಗಾಯಗೊಂಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಕಾಸರಗೋಡು ಭಾಗದಿಂದ ತಲಪಾಡಿ ಭಾಗಕ್ಕೆ ಆಗಮಿಸುತ್ತಿದ್ದ ಎರಡೂ ವಾಹನಗಳು ಬಂದ್ಯೋಡ್ ಮುಟ್ಟಂ ನಲ್ಲಿ ಬಾನುವಾರ ರಾತ್ರಿ 7.45 ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಮಚ್ಚಂಪ್ಪಾಡಿ ನಿವಾಸಿ ಹುಸೈನ್ ಸಹದಿಯವರ ಪತ್ನಿ ಮಿರ್ಜಾನ (28) ಸಾವನ್ನಪ್ಪಿದ್ದಾರೆ. ಜೊತೆಯಾಗಿದ್ದ ಹುಸೈನ್ ಸಹದಿ(34)…

Read More

ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಅಂತರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ.ಎಕ್ಸ್‌ಪ್ಲೋರಾ 2025

ಫಾದರ್ ಮಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜ್ (FMHMC) ಮತ್ತು ಗ್ಲೋಬಲ್ ಹೋಮಿಯೋಪಥಿ ಫೌಂಡೇಶನ್ (GHF) ಹಾಗೂ ನವದೆಹಲಿಯ ಸೆಂಟ್ರಲ್  ಕೌನ್ಸಿಲ್ ಫಾರ್ ರಿಸರ್ಚ್ ಇನ್ ಹೋಮಿಯೋಪಥಿ (CCRH) ಯ ಸಹಯೋಗದಲ್ಲಿ, ಎಕ್ಸ್‌ಪ್ಲೋರಾ 2025 – ಹೋಮಿಯೋಪಥಿಕ್ ಶಿಕ್ಷಣ, ಅಭ್ಯಾಸ ಮತ್ತು ಸಂಶೋಧನೆಗಳ ಏಕೀಕರಣ ಎಂಬ ಅಂತರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮವು 2025ರ ನವೆಂಬರ್ 14ರಂದು ಬೆಳಿಗ್ಗೆ 11.30ಕ್ಕೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಶ್ರೀಮತಿ…

Read More

ನಾಳೆ ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಉದ್ಘಾಟನೆ

ಕರ್ನಾಟಕ ರಾಜ್ಯ ಮರಾಟ ಒಕ್ಕೂಟ ಮಂಗಳೂರು ಇದರ ಉದ್ಘಾಟನೆ ಮತ್ತು ಅಭಿನಂದನಾ ಸಮಾರಂಭವು ನ.16ರಂದು ಪುತ್ತೂರಿನ ಕೊಂಬೆಟ್ಟು ಮರಾಟಿ ಸಮಾಜ ಮಂದಿರದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಡಾ.ಕೆ.ಸುಂದರ್ ನಾಯಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ನೂತನ ಒಕ್ಕೂಟವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಒಕ್ಕೂಟದ ಅಧ್ಯಕ್ಷ ಡಾ.ಕೆ.ಸುಂದರ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭ ರಾಜ್ಯ ಮರಾಟಿ ಒಕ್ಕೂಟದ ಗೌರವಾಧ್ಯಕ್ಷ, ಭಾರತ ಸರಕಾರದ ಕೇಂದ್ರಾ ಡಳಿತ ಪ್ರದೇಶ ಮತ್ತು ಚಂಡೀಗಡದ ಮುಖ್ಯ ಕಾರ್ಯದರ್ಶಿ ಎಚ್.ರಾಜೇಶ್ ಪ್ರಸಾದ್‌ರನ್ನು ಅಭಿನಂದಿಸಿ ಗೌರವಿಸಲಾಗುವುದು….

Read More

ನಾಳೆ ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ, ‘ಸಹಕಾರ ಮಾಣಿಕ್ಯ’ ಪ್ರಶಸ್ತಿ ವಿತರಣೆ …. !

ಮಂಗಳೂರು: ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ಧೇಶದಿಂದ ನ.16ರಂದು ನಡೆಯುವ 2025ನೇ ಸಾಲಿನ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮ ಆಚರಣೆಯ ಸಂದರ್ಭದಲ್ಲಿ ‘ಸಹಕಾರ ಮಾಣಿಕ್ಯ’ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ 72ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು…

Read More

ಕನ್ನಡ ಭವನದಲ್ಲಿ ಕೋಲಾರ – ಕಾಸರಗೋಡು ಗಡಿನಾಡು ಕನ್ನಡ ರಾಜ್ಯೋತ್ಸವ ನ.15ರಂದು

ಕಾಸರಗೋಡು : ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ ಮತ್ತು ಬಿ ಶಿವಕುಮಾರ ನೇತೃತ್ವದ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿ ಆಶ್ರಯದಲ್ಲಿ ನ.15ರಂದು ಬೆಳಗ್ಗೆ 10ರಿಂದ ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ವೇದಿಕೆಯಲ್ಲಿ ಕೋಲಾರ-ಕಾಸರಗೋಡು ಗಡಿನಾಡ ಕನ್ನಡ ರಾಜ್ಯೋತ್ಸವ ಸಂಭ್ರಮ-2025 ನಡೆಯಲಿದೆ. ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ. ವಾಮನ್ ರಾವ್ ಬೇಕಲ್- ಸಂಧ್ಯಾರಾಣಿ ಟೀಚರ್ ದೀಪ ಬೆಳಗಿಸಿ, ಪ್ರಾಸ್ತಾವಿಕವಾಗಿ ಮಾತನಾಡುವರು. ಕೋಲಾರದ ಪಿ. ನಾರಾಯಣಪ್ಪ ಕನ್ನಡ ಧ್ವಜಾರೋಹಣದೊಂದಿಗೆ…

Read More

ಮಾರುಕಟ್ಟೆಗೆ “ನಂದಿನಿ” ಸೀಡ್ ಡಿಲೈಟ್ ಮತ್ತು “ನಂದಿನಿ” ಗುವಾ ಚಿಲ್ಲಿ ಲಸ್ಸಿ ಶೀಘ್ರವೇ ಮಾರುಕಟ್ಟೆಗೆ ಬಿಡುಗಡೆ….!

ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನವೆಂಬರ್ 16 ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಜರುಗಲಿರುವ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಆಚರಣೆಯ ಸುಸಂದರ್ಭದಲ್ಲಿ “ನಂದಿನಿ”. ಉತ್ಪನ್ನಗಳ ಶ್ರೇಣಿಗೆ ಸೀಡ್ಸ್ ಡಿಲೈಟ್ ಮತ್ತು ಗುವಾ ಚಿಲ್ಲಿ ಲಸ್ಸಿ ಉತ್ಪನ್ನವು ನೂತನವಾಗಿ ಬಿಡುಗಡೆಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ತಿಳಿಸಿದರು. ಅವರು ಕುಲಶೇಖರದ ಕೆ ಎಂ ಎಫ್ ಡೈರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಂದಿನಿ…

Read More

ಭಾರತ ಸೇವಾದಳ ವತಿಯಿಂದ ನೆಹರೂ ಜಯಂತಿ, ಮಕ್ಕಳ ದಿನಾಚರಣೆ

ಭಾರತ ಸೇವಾದಳ ವತಿಯಿಂದ ತಾ 14.11.2025ರಂದು ನಗರದ ಪಾಂಡೇಶ್ವರದಲ್ಲಿರುವ ನೆಹರೂ ಪ್ರತಿಮೆ ಬಳಿ ದೇಶದ ಮೊದಲ ಪ್ರಧಾನ ಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಭಾರತ ಸೇವಾದಳದ ಕೇಂದ್ರ ಸಮಿತಿ ಸದಸ್ಯ ಬಶೀರ್ ಬೈಕಂಪಾಡಿಯವರು, ಜವಾಹರಲಾಲ್ ನೆಹರೂರವರು ಆಧುನಿಕ ಭಾರತದ ಶಿಲ್ಪಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಹಾಕಿದ ಪಂಚ ವಾರ್ಷಿಕ ಯೋಜನೆಗಳು ದೇಶವನ್ನು ಅಭಿವೃದ್ಧಿ ಪಡಿಸುವಲ್ಲಿ ಸಹಕಾರಿಯಾಯಿತು. ಅವರ ಅವಧಿಯಲ್ಲಿ ಅನೇಕ ಬೃಹತ್ ಕೈಗಾರಿಕೆಗಳು, ಬ್ಯಾಂಕ್…

Read More
error: Content is protected !!