ನ.7 ಮತ್ತು 8ರಂದು ನಿಟ್ಟೆ ವಿಶ್ವವಿದ್ಯಾನಿಲಯದ 15ನೇ ಘಟಿಕೋತ್ಸವ
ಉಡುಪಿ: ನಿಟ್ಟೆ ವಿಶ್ವವಿದ್ಯಾನಿಲಯದ ಮಂಗಳೂರು ಕ್ಯಾಂಪಸ್ನಲ್ಲಿ ನ.7ರಂದು ಮತ್ತು ನಿಟ್ಟೆ ಕ್ಯಾಂಪಸ್ಗಳಲ್ಲಿ ನ.8 ರಂದು 15ನೇ ವಾರ್ಷಿಕ ಘಟಿಕೋತ್ಸವ ಹಮ್ಮಿಕೊಳ್ಳಲಾಗಿದ್ದು, ಒಟ್ಟು 1, 999 ವಿದ್ಯಾರ್ಥಿಗಳು ಪದವಿ ಸ್ವೀಕರಿಸಲಿದ್ದಾರೆ ಎಂದು ಕುಲಪತಿ ಪ್ರೊ. ಡಾ. ಎಂ. ಎಸ್. ಮೂಡಿತ್ತಾಯ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನ. 7ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ವೈದ್ಯಕಿಯ ಕಾಲೇಜಿನ (ಕ್ಷೇಮ) ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ನ. 8ರಂದು ಬೆಳಿಗ್ಗೆ 10.30ಕ್ಕೆ ಕಾರ್ಕಳದ ನಿಟ್ಟೆಯ…