Avatar

Shramitha bejja

ಹುಟ್ಟುಹಬ್ಬದಂದೇ ಮೃತಪಟ್ಟ ಯುವಕ.ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ.

ಕನಕಗಿರಿ: ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಇಲ್ಲಿನ 10ನೇ ವಾರ್ಡ್ ನಿವಾಸಿ ಹಾಗೂ ನಟ ಗವಿಸ್ವಾಮಿ ವಸ್ತ್ರದ ಅವರ ಪುತ್ರ ಆರ್ಯನ್(22) ಅವರು ಸಾವಿನಲ್ಲಿ ಸಾರ್ಥಕ ಮೆರೆದಿದ್ದಾರೆ. ಅಪಘಾತಕ್ಕೆ ಒಳಗಾಗಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರ್ಯನ್ ತನ್ನಹುಟ್ಟಿದ ದಿನದಂದೇ ಮೃತಪಟ್ಟಿರುವುದು ಕುಟುಂಬದಲ್ಲಿ ದುಃಖ, ನೋವು ತರಿಸಿದೆ. ಎರಡು ಕಣ್ಣು, ಎರಡು ಕಿಡ್ನಿ, ಲಿವರ್ ಪ್ರ್ಯಾಂಕ್ರಿಯ್ಸ್, ಹೃದಯದ ಕವಟಗಳನ್ನು ದಾನ ಮಾಡಲಾಗಿದ್ದು, ಕಳೇಬರವನ್ನು ವಾಹನಕ್ಕೆ ತರುವ ಮುಂಚೆ ಆಸ್ಪತ್ರೆಯವರು ಮೃತನ ಕೈಯಿಂದ ಕೇಕ್ ಕಟ್ ಮಾಡಿಸಿದ್ದಾರೆ.ಮತ್ತೊಂದು ಜೀವಕ್ಕೆ…

Read More

ಸ್ಥಳೀಯಾಡಳಿತ ಚುನಾವಣೆ : ಎಸ್‌ಡಿಪಿಐ ಪಕ್ಷದ ಮೊದಲ ಹಂತದ ಅಭ್ಯರ್ಥಿ ಪಟ್ಟಿ ಬಿಡುಗಡೆ .

ಮಂಜೇಶ್ವರ: ರಾಜ್ಯದಲ್ಲಿ ಸ್ಥಳೀಯಾಡಳಿತ ಚುನಾವಣೆ ಸನ್ನಿಹಿತವಾಗಿರುವ ಹಿನ್ನೆಲೆಯಲ್ಲಿ ಕೇರಳದ ತುತ್ತ ತುದಿಯಲ್ಲಿರುವ ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯಾಡಳಿತ ಚುನಾವಣಾ ಕದನಕ್ಕೆ ವಿವಿಧ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿರುವ ಮಧ್ಯೆ ಎಸ್‌ಡಿಪಿಐ ಪಕ್ಷ ಮೊದಲ ಹಂತದ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಜೇಶ್ವರದ ಕಚೇರಿಯಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ಈ ಸಲ ಮಂಜೇಶ್ವರ ಪಂಚಾಯತಿನಲ್ಲಿ 3 ಹೊಸ ವಾರ್ಡ್‌ಗಳು ಸೇರಿಕೊಂಡಿದ್ದು, ಒಟ್ಟು 24 ವಾರ್ಡ್‌ಗಳಲ್ಲಿ ಪೈಪೋಟಿ ನಡೆಯಲಿದೆ. ಕಳೆದ ಚುನಾವಣೆಯಲ್ಲಿ 2 ವಾರ್ಡ್‌ಗಳನ್ನು ಗೆದ್ದಿದ್ದ ಎಸ್‌ಡಿಪಿಐ, ಈ ಬಾರಿ ಬಹುತೇಕ…

Read More

ಯುವಕನೊಬ್ಬನ ಸಮಯ ಪ್ರಜ್ಞೆಯಿಂದ ಮನೆಮಂದಿ ಗ್ಯಾಸ್ ಸಿಲಿಂಡರ್ ಅವಘಡದಿಂದ ಪಾರು.

ಬಂಟ್ವಾಳ : ಯುವಕನೊಬ್ಬನ ಸಮಯ ಪ್ರಜ್ಞೆಯಿಂದ ಮನೆಮಂದಿ ಗ್ಯಾಸ್ ಸಿಲಿಂಡರ್ ಅವಘಡದಿಂದ ಪಾರಾದ ಘಟನೆ ಬುಧವಾರ ರಾತ್ರಿ ಅನಂತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ‌ ಬಾಬನಕಟ್ಟೆ ಸಮೀಪದ ಹಿರ್ತಂದ ಬೈಲು ಎಂಬಲ್ಲಿ‌ ರಾತ್ರಿ 9.45ರ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಸಮಯಪ್ರಜ್ಞೆ ಮೆರೆದ ಯುವಕ ಜಯರಾಜ್ ನ ಮುಖ ಹಾಗೂ ಕೈ ಗೆ ಗಾಯಗಳಾಗಿದೆ. ಘಟನೆಯಲ್ಲಿ ದ್ವಿಚಕ್ರವಾಹನ ಸಹಿತ ಹಲವು ಉಪಕರಣಗಳಿಗೆ ಹಾನಿಯಾಗಿದೆ. ಘಟನೆ ವಿವರ : ತಾಯಿ ಸುಶೀಲ‌ ಹಾಗೂ ಜಯರಾಜ್ ವಾಸ್ತವ್ಯವಿರುವ ಮನೆಯಲ್ಲಿ, ಬುಧವಾರ ಗ್ಯಾಸ್…

Read More

ಪಟಾಕಿ ಅಂಗಡಿಗಳ ಮಾಲೀಕರಿಗೆ ಬೆದರಿಕೆ: ಕೊಲೆ ಆರೋಪಿ ವಿರುದ್ಧ ದಾಖಲಾಯ್ತು ಕೇಸ್ .

ಪಟಾಕಿ ಅಂಗಡಿಗಳ ಮಾಲೀಕರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಕೊಲೆ ಆರೋಪಿ, ರೌಡಿ ಶೀಟರ್ ಪ್ರಶಾಂತ್ ಯಾನೆ ಪಚ್ಚು ಮತ್ತು ಅಶ್ವಿತ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಬಜ್ಪೆಯ ಪಟಾಕಿ ಮಾರಾಟ ಮಳಿಗೆಗಳಿಗೆ ತೆರಳಿ ಹಣ ಕೊಡುವುದಿಲ್ಲ, ಆದರೆ ಎಲ್ಲರೂ ಪಟಾಕಿ ಕೊಡಲೇಬೇಕು ಎಂದು ಬೆದರಿಸಿ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಂದಹಾಗೇ ಈ ಘಟನೆ ಅ.22ರಂದು ನಡೆದಿದ್ದು,…

Read More

ಬಡ ರೈತರ ಕೃಷಿ ಭೂಮಿಯ ಅಕ್ರಮ ಸ್ವಾಧೀನದ ವಿರುದ್ಧ ಉಳ್ಳಾಲ ತಹಶೀಲ್ದಾರ್ ಕಚೇರಿಯೆದುರು ಪ್ರತಿಭಟನೆ .

ಬಡ ಗೇಣಿದಾರರ ಭೂಮಿಯನ್ನು ಮಾಲೀಕರಿಂದ ನೇರವಾಗಿ ಖರೀದಿ ಮಾಡಿ ಗೇಣಿದಾರರಿಗಾದ ಅನ್ಯಾಯದ ವಿರುದ್ಧ, ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿರುವುದರ ವಿರುದ್ಧ ಹಾಗೂ ಪಂಚಾಯತ್ ನಿಂದ ನಿರ್ಮಿಸಲ್ಪಟ್ಟಿದ್ದ ರಸ್ತೆಯ ಅತಿಕ್ರಮಣದ ವಿರುದ್ಧ ಅಂಬ್ಲಮೊಗರು ಗ್ರಾಮದ ನಾಗರೀಕರು ಕೃಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿಯ ನೇತ್ರತ್ವದಲ್ಲಿ ಇಂದು ಉಳ್ಳಾಲ ತಹಶೀಲ್ದಾರ್ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಅಂಬ್ಲಮೊಗರು ಮುನ್ನೂರು ಬೆಳ್ಮ ಗ್ರಾಮದ ನಾಗರಿಕರು ರಾಜ್ಯ ಸರಕಾರ, ಜಿಲ್ಲಾಡಳಿತ ಹಾಗೂ ತಾಲೂಕಾಡಳಿತದ ಬೇಜವಾಬ್ದಾರಿ ವರ್ತನೆಯನ್ನು ಘೋಷಣೆಗಳನ್ನು ಕೂಗುವ ಮೂಲಕ…

Read More

ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾಗಿ ಕಿಶೋರ್ ಡಿ ಶೆಟ್ಟಿ ಆಯ್ಕೆ .

ಮಂಗಳೂರು : ತುಳು ನಾಟಕ ಕಲಾವಿದರ ಒಕ್ಕೂಟ (ರಿ.) ಇದರ ನೂತನ ಅಧ್ಯಕ್ಷರಾಗಿ ಕಿಶೋರ್ ಡಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟ ಇದರ 2024-2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಕದ್ರಿ ಪಾರ್ಕ್ ಬಳಿಯ ಲಯನ್ಸ್ ಅಶೋಕ ಸೇವಾಭವನದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಿಶೋರ್ ಡಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕಿಶೋರ್ ಡಿ. ಶೆಟ್ಟಿಯವರು ಸರ್ವಾನುಮತದಿಂದ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಗೋಕುಲ್ ಕದ್ರಿ ಮತ್ತು…

Read More

ಸುರತ್ಕಲ್ ಚೂರಿ ಇರಿತ ಪ್ರಕರಣ.ನಾಲ್ವರು ಆರೋಪಿಗಳ ಗುರುತು ಪತ್ತೆ .

ಸುರತ್ಕಲ್: ದೀಪಕ್ ಬಾರ್ ಬಳಿ ಗುರುವಾರ ರಾತ್ರಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸಂಘ ಪರಿವಾರದ ಕಾರ್ಯಕರ್ತ ಗುರುರಾಜ್, ಆತನ ಸ್ನೇಹಿತರಾದ ಅಲೆಕ್ಸ್ ಸಂತೋಷ್, ಸುಶಾಂತ್ ಮತ್ತು ನಿತಿನ್ ದುಷ್ಕೃತ್ಯ ಎಸಗಿದ ಆರೋಪಿಗಳೆಂದು ತಿಳಿದು ಬಂದಿದೆ. ಪ್ರಕರಣದ ತನಿಖೆ ಆರಂಭಿಸಿದ ಸುರತ್ಕಲ್ ಪೊಲೀಸ್ ನಿರೀಕ್ಷ ಪ್ರಮೋದ್ ಕುಮಾರ್ ನೇತೃತ್ವದ ಪೊಲೀಸ್ ತಂಡ, ಘಟನೆ ನಡೆಯುವ ಸಂದರ್ಭ ಸ್ಥಳದಲ್ಲಿದ್ದ ಸಂತ್ರಸ್ತರ ಸ್ನೇಹಿತನೊಬ್ಬನ…

Read More

ಕರ್ನೂಲ್ ಬಸ್ ದುರಂತ .ಮೃತರ ಸಂಖ್ಯೆ 20ಕ್ಕೆ ಏರಿಕೆ .

ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಬೆಂಕಿಗಾಹುತಿಯಾಗಿರುವ ಘಟನೆಯಲ್ಲಿ ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.ಕರ್ನೂಲ್ ಜಿಲ್ಲೆಯ ಚಿನ್ನಾಟೇಕೂರ್ ಬಳಿ ಶುಕ್ರವಾರ ಬೆಳಗಿನ ಜಾವ ಘಟನೆ ನಡೆದಿದೆ. ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿ, ಕೆಲವೇ ಕ್ಷಣಗಳಲ್ಲಿ ಬಸ್‌ ಬೆಂಕಿಗಾಹುತಿಯಾಗಿದೆ. ಬೆಂಕಿಯ ತೀವ್ರತೆಗೆ ಇಡೀ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದೆ. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎನ್ನಲಾಗಿದೆ. ಇವರಲ್ಲಿ 18 ಮಂದಿಯನ್ನು ಜೀವಂತವಾಗಿ ರಕ್ಷಿಸಲಾಗಿದೆ. ಹಲವರ ಮೃತದೇಹ ಸಂಪೂರ್ಣವಾಗಿ…

Read More

ಹೂವಿನ ರಾಶಿಯೋ.. ಜಾರುವ ಪಾದಚಾರಿ ರಸ್ತೆಯೋ….

ಮಂಗಳೂರು: ನಗರದ ಹೃದಯ ಭಾಗವೆಂದು ಕರೆಯಲ್ಪಡುವ ಹಂಪನ ಕಟ್ಟೆಯ ಮಿನಿ ವಿಧಾನಸೌಧ ಎದುರು ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಹೂವಿನ ವ್ಯಾಪಾರ ಜೋರಾಗಿಯೇ ಇತ್ತು. ಘಟ್ಟ ಪ್ರದೇಶದಿಂದ ಕರಾವಳಿಯ ಕಡೆಗೆ ಹೂವಿನ ರಾಶಿಯೇ ಹರಿದು ಬಂದಿತ್ತು. ಸೇವಂತಿಕೆ, ಗೊಂಡೆ ಹೂವುಗಳ ರಾಶಿಯು ಕಣ್ಣಿಗೆ ಹಬ್ಬವಾಗಿತ್ತು. ಆದರೆ ಇದೀಗ ದೀಪಾವಳಿ ಹಬ್ಬ ಮುಗಿಯುತ್ತಿದಂತೆಯೇ ತಂದ ಹೂವುಗಳನ್ನು ಪಾದಚಾರಿ ಮಾರ್ಗದಲ್ಲೇ ಬಿಟ್ಟು ಹೋಗಿದ್ದು. ಅದು ಅಲ್ಲೇ ಚೆಲ್ಲಾಪಿಲ್ಲಿಯಾಗಿ ಉಳಿದು ಬಿಟ್ಟಿದೆ. ಸಂಜೆಯ ವೇಳೆಗೆ ಎಡೆ ಬಿಡದೆ ಸುರಿದ ಹಿಂಗಾರು ಮಳೆಯು ಹೂವಿನ…

Read More

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಶಶಿ ತರೀಕೆರೆ ನೇಮಕ…!

ಉಡುಪಿ:ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ಗೆ ಬೆಂಗಳೂರಿನ ಶಶಿ ತರೀಕೆರೆ ಅವರ ‘ಪ್ಯೂಪಾ’ ಕವನ ಸಂಕಲನ ಆಯ್ಕೆಯಾಗಿದೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕರಾದ ರವಿರಾಜ್ ಎಚ್. ಪಿ. ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಸಂಸ್ಥೆಯು 2024ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನಗಳನ್ನು ಪ್ರಶಸ್ತಿಗೆ ಆಹ್ವಾನಿಸಿತ್ತು. ಅದರಂತೆ ಪ್ರಶಸ್ತಿಗೆ 88…

Read More
error: Content is protected !!