Avatar

Shramitha bejja

ನಿಯಂತ್ರಣ ತಪ್ಪಿ ಕಾರು ಚರಂಡಿ ಮೇಲೆ ಹತ್ತಿದ ಕಾರು….!

ಬಂಟ್ವಾಳ: ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ಕಳೆದು ಚರಂಡಿಯ ಮೇಲೆ ಕಾರು ಹತ್ತಿದ ಘಟನೆ ಆ.22 ರಂದು ರಾತ್ರಿ ವೇಳೆ ನಡೆದಿದೆ.ಪುತ್ತೂರು ನಿವಾಸಿ ಇರ್ಶಾದ್ ಎಂಬವರು ಪತ್ನಿ ಜೊತೆ ಮಂಗಳೂರಿಗೆ ತೆರಳುವ ಸಂದರ್ಭದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಅಪಾಯವಾಗದೆ ಕಾರಿನಲ್ಲಿದ್ದ ಇಬ್ಬರು ಸೇಫ್ ಆಗಿದ್ದಾರೆ.ಘಟನೆಯ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

Read More

ಅ.26ರಂದು ಕೃಷ್ಣಮಠದಲ್ಲಿ ‘ಭರತಮುನಿ ಜಯಂತ್ಯುತ್ಸವ’ ಆಚರಣೆ .

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಡುಪಿ ರಾಧಾಕೃಷ್ಣ ನೃತ್ಯ ನಿಕೇತನ ಸಂಸ್ಥೆಯ 23ನೇ ವರ್ಷದ ಭರತಮುನಿ ಜಯಂತ್ಯುತ್ಸವವನ್ನು ಇದೇ ಅ. 26ರಂದು ನಗರದ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿದುಷಿ ವೀಣಾ ಮುರಳೀಧರ ಸಾಮಗ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ‌ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಕ್ರಮವನ್ನು‌ ಉದ್ಘಾಟಿಸಲಿದ್ದಾರೆ. ಕಿರಿಯ ಯತಿಗಳಾದ ಸುಶೀಂಧ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ ಎಂದರು.ಈ ಸಂದರ್ಭದಲ್ಲಿ…

Read More

ಮಂಗಳೂರಿನ ಎಸ್‌ಸಿಎಸ್ ಆಸ್ಪತ್ರೆಯ 38 ವರ್ಷಗಳ ಶ್ರೇಷ್ಠ ನಿಸ್ವಾರ್ಥ ಸೇವೆಯ ಸಂಭ್ರಮಾಚರಣೆ….. !

ಮಂಗಳೂರು: ಎಸ್‌ಸಿಎಸ್ ಆಸ್ಪತ್ರೆ, ಮಂಗಳೂರು ಇದರ 38 ವರ್ಷಗಳ ಶ್ರೇಷ್ಠ ನಿಸ್ವಾರ್ಥ ಸೇವೆಯ ಸಂಭ್ರಮಾಚರಣೆ ಕಾರ್ಯಕ್ರಮ ಮತ್ತು ನೂತನವಾಗಿ ನಿರ್ಮಾಣಗೊಂಡ ಫುಜಿಫಿಲ್ಮ್ ಜಪಾನ್‌ನ 128 ಸ್ಪ್ಲೆಸ್ ಕಾರ್ಡಿಯಕ್ ಸಿಟಿ ಸ್ಕ್ಯಾನ್ ನೊಂದಿಗೆ ಆಧುನಿಕ ರೇಡಿಯಾಲಜಿ ವಿಭಾಗ ಮತ್ತು ಎನ್‌ಎಬಿಎಲ್ ಮಾನ್ಯತೆ ಪಡೆದ ಪ್ರಯೋಗಾಲಯವು ಇಂದು ಲೋಕಾರ್ಪಣೆಗೊಂಡಿತ್ತು . ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾ . ಬ್ರಿಜೇಶ್ ಚೌಟ ಮಾತನಾಡಿ , ಕಳೆದ 38 ವರ್ಷಗಳಿಂದ ಎಸ್‌ಸಿಎಸ್ ಆಸ್ಪತ್ರೆಯು ಜನ…

Read More

ಮಲ್ಪೆ ಬಂದರಿನಲ್ಲಿ ಕಾಲುಜಾರಿ ನೀರಿಗೆ ಬಿದ್ದ ಯುವಕನ ಪ್ರಾಣ ರಕ್ಷೆ…..!

ಉಡುಪಿ: ಮಲ್ಪೆ ಬಂದರಿನಲ್ಲಿ ಕಾಲುಜಾರಿ ನೀರಿಗೆ ಬಿದ್ದ ಯುವಕನನ್ನು ರಕ್ಷಿಸಲಾಗಿದೆ. ಇಲ್ಲಿ ಬೋಟುಗಳನ್ನು ಲಂಗರು ಹಾಕುವ ಪ್ರದೇಶದಲ್ಲಿ, ಈ ದುರ್ಘಟನೆ ಸಂಭವಿಸಿತ್ತು. ಎರಡು ಬೋಟುಗಳ ನಡುವಿನ ಇಕ್ಕಟ್ಟಿನಲ್ಲಿ ಯುವಕನೊಬ್ಬ ಹಿನ್ನೀರು ಪ್ರದೇಶದಲ್ಲಿ ಕುಸಿದು ಬಿದ್ದಿದ್ದ. ಅಪಾರ ಪ್ರಮಾಣದಲ್ಲಿ ಹೂಳು ತುಂಬಿರುವ ಈ ಪ್ರದೇಶದಲ್ಲಿ ಒಂದು ಬಾರಿ ನೀರಿಗೆ ಬಿದ್ದರೆ ಬದುಕಿ ಬರುವುದೇ ಕಷ್ಟ. ಯುವಕ ಕಾಲು ಜಾರಿ ಬೀಳುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಈಜುಪಟು ಈಶ್ವರ ಮಲ್ಪೆ, ಹರಸಹಸಪಟ್ಟು ಯುವಕನನ್ನು ಮೇಲಕ್ಕೆತ್ತಿದ್ದಾರೆ. ಅಪಾಯಕಾರಿ ಹೂಳಿನಲ್ಲಿ ಹೂತು ಹೋದರೆ ಮತ್ತೆ…

Read More

ಬೈಕ್ ಗೆ ಅಡ್ಡ ಬಂದ ಚಿರತೆಯ ದುರ್ಮರಣ….!

ಉಡುಪಿ: ಚಿರತೆಯೊಂದು ಚಲಿಸುತ್ತಿದ್ದ ಬೈಕ್​ಗೆ ಅಡ್ಡ ಬಂದ ಪರಿಣಾಮ ಸವಾರ ನಿಯಂತ್ರಣ ತಪ್ಪಿ ಚಿರತೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು, ಚಿರತೆ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರ್ ನಲ್ಲಿ ಈ ಘಟನೆ ಸಂಭವಿಸಿದೆ.ಗಂಭೀರ ಗಾಯಗೊಂಡ ಬೈಕ್ ಸವಾರ ನಂಚಾರ್ ನಿವಾಸಿ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಭಾಸ್ಕರ್ ಶೆಟ್ಟಿ ರಾತ್ರಿ ತನ್ನ ಬೈಕ್ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಒಮ್ಮೆಲೇ ಚಿರತೆಯೊಂದು ಅಡ್ಡ ಬಂದ ಪರಿಣಾಮ ಸವಾರ…

Read More

ಸಂಸದ ಕ್ಯಾ। ಬ್ರಿಜೇಶ್ ಚೌಟರಿಗೆ ಕ್ಲಾಸ್ ತೆಗೆದ ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್…… ! ಕಾರಣವೇನು …. ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾ। ಬ್ರಿಜೇಶ್ ಚೌಟ ನನ್ನ ಆತ್ಮೀಯ ಮಿತ್ರ ಮಾತ್ರವಲ್ಲದೆ, ವಿದ್ಯಾವಂತ ಸಂಸದ ಕೂಡ ಹೌದು. ಆದರೆ ಅವರು ತಮ್ಮ ವಿದ್ಯಾರ್ಹತೆಗೆ ಅಪಚಾರ ಆಗುವಂತೆ ಮಾಡಬಾರದು ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್. ಮನವಿ ಮಾಡಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಸಿಎಂ ಸಿದ್ದರಾಮಯ್ಯ ಪುತ್ತೂರು ಕಾರ್ಯಕ್ರಮದಲ್ಲಿ ಭಾಗವಹಿಸಿ ನೀಡಿದ ಹೇಳಿಕೆ ಕುರಿತಂತೆ, ಸಂಸದ ಬ್ರಿಜೇಶ್ ಚೌಟ ಪ್ರಕಟಣೆಯಲ್ಲಿ ಕೈಲಾಗದವರು ಮೈ ಪರಚಿಕೊಂಡಂತೆ ಆಗಿದೆ. ಜಿಎಸ್‌ಟಿ ಕಡಿಮೆ…

Read More

ನವoಬರ್ 4 ರ ಕೇರಳ- ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮದಲ್ಲಿ ಭರದ ಸಿದ್ಧತಾ ಸಭೆ.

ಕೇರಳ- ಕರ್ನಾಟಕ ಕನ್ನಡ ರಾಜ್ಯೋತ್ಸವ, ಕಾಸರಗೋಡು ಕನ್ನಡ ಗ್ರಾಮೋತ್ಸವ ,ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕನ್ನಡ ಗ್ರಾಮ ಕಾಸರಗೋಡು ಇದರ 35 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವು 2025 ನವಂಬರ್ 4 ಮಂಗಳವಾರದಂದು ಬೆಳಗ್ಗೆ 10.00 ಕ್ಕೆ ಧ್ವಜಾರೋಹಣ, ಶಿವರಾಮ ಕಾಸರಗೋಡು 60 ಫೋಟೋ ಗ್ಯಾಲರಿ ಉದ್ಘಾಟನೆ ,ಕಾಸರಗೋಡು ಕರ್ನಾಟಕದೊಂದಿಗೆ ವಿಲೀನೀಕರಣಕ್ಕಾಗಿ ಹೋರಾಡಿದ 60 ಮಂದಿ ಕನ್ನಡ ಸತ್ಯಾಗ್ರಹಿಗಳ, ಹೋರಾಟಗಾರರ ಭಾವಚಿತ್ರಕ್ಕೆ ಪುಷ್ಪ…

Read More

ಕೃಷ್ಣ ನಗರಿಯ ಶ್ರೀ ಕೃಷ್ಣಮಠದಲ್ಲಿ ವಿಶೇಷ ಗೋಪೂಜೆ ಸಂಭ್ರಮ …. !

ಉಡುಪಿ: ಪೊಡವಿಗೊಡೆಯ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಗೋಪೂಜೆಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಮಾಡಲಾಯಿತು. ಈ ಪ್ರಯುಕ್ತ ಕನಕ ಗೋಪುರದ ಎದುರು ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಪಾದರು ಗೋವುಗಳಿಗೆ ವಿಶೇಷ ಗೋಗ್ರಾಸವನ್ನು ನೀಡಿದರು. ನಂತರ ರಥಬೀದಿಯ ಸುತ್ತಲೂ ಗೋವುಗಳ ವೈಭವದ ಮೆರವಣಿಗೆ ನಡೆಯಿತು. ನಂತರ ಶ್ರೀ ಕೃಷ್ಣ ಮಠದ ಆವರಣದಲ್ಲಿ ಸಂಕಲ್ಪ ಸಹಿತ ಸಾಮೂಹಿಕ ಗೋಪೂಜೆ ಕಾರ್ಯಕ್ರಮವು ನಡೆಯಿತು. ಪರ್ಯಾಯ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು

Read More

ಉಡುಪಿಯಲ್ಲಿ ಚರಂಡಿಗೆ ಎಸೆದ ಹೂವುಗಳ ಮರು ಮಾರಾಟ ಜೋರು, ಧಾರ್ಮಿಕ ನಂಬಿಕೆಗಳಿಗೆ ದಕ್ಕೆ ….. !

ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿಯಲ್ಲಿ ಭರ್ಜರಿ ಹೂ ಮಾರಾಟ ನಡೆಯುತ್ತಿದೆ. ಹೊರ ಜಿಲ್ಲೆಯ ಹಲವು ಮಾರಾಟಗಾರರು ಕಳೆದ ಮೂರು ದಿನಗಳಿಂದ ಇಲ್ಲಿ ಠಿಕಾಣಿ ಹೂಡಿ ಹೂ ಮಾರಾಟ ಮಾಡುತ್ತಿದ್ದಾರೆ. ಇದೇ ವೇಳೆ ಎಸೆದಿರುವ ಹಾಳಾದ ಹೂವನ್ನು ತಂಡವೊಂದು ಸಂಗ್ರಹಿಸಿ ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದು ನಗರದ ಮಾರುಥಿ ವೀಥಿಕಾದಲ್ಲಿ ಕಂಡುಬಂದಿತು. ಸಾರ್ವಜನಿಕರಿಂದ ಮಾಹಿತಿ ಪಡೆದ ಸಮಾಜಸೇವಕ ನಿತ್ಯಾನಂದ ಒಳಕಾಡು, ಹೂವು ಮಾರಾಟಗಾರರನ್ನು ತರಾಟೆ ತೆಗೆದುಕೊಂಡು ವ್ಯಾಪಾರವನ್ನು ನಿಲ್ಲಿಸಿದರು. ಮಳೆ ಬಂದ ಕಾರಣ ಹೂವು ವ್ಯಾಪಾರ ಕುಸಿತ ಕಂಡ…

Read More

ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದ ಪೊಲೀಸರ ಜೀಪಿಗೆ ಡಿಕ್ಕಿಪಡಿಸಿ ಕೊಲೆಯತ್ನ ಮಾಡಿದ ಆರೋಪಿಯ ಕಾಲಿಗೆ ಗುಂಡು .

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದ ಪೊಲೀಸರ ಜೀಪಿಗೆ ಡಿಕ್ಕಿಪಡಿಸಿ ಕೊಲೆಯತ್ನ ಮಾಡಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ನಡೆದಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ಮಂಗಳ ಎಂಬಲ್ಲಿ ಇಂದು ಮುಂಜಾನೆ ಆರೋಪಿ ಅಬ್ದುಲ್ಲಾ ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದ. ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸರು…

Read More
error: Content is protected !!