ಆತ್ಮಹತ್ಯೆಗೆತ್ನಿಸಿದ ವಿದ್ಯಾರ್ಥಿನಿಯನ್ನು ರಕ್ಷಿಸಲು ಆಸ್ಪತ್ರೆಗೆ ಸಾಗಿಸುತ್ತಿರುವ ಮಧ್ಯೆ ಅಪಘಾತಕ್ಕೊಳಗಾಗಿ ಮ್ಯತ್ಯು.
ಕಾಸರಗೋಡು :ಬೇತೂರು ಪಾರ ಸಮೀಪದಲ್ಲಿ ಬುಧವಾರ ಬೆಳಿಗ್ಗೆ ಆತ್ಮಹತ್ಯೆಗೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳನ್ನು ರಕ್ಷಿಸಲು ಮನೆಯಿಂದ ಆಸ್ಪತ್ರೆಗೆ ಸಾಗಿಸುತ್ತಿರುವ ಮಧ್ಯೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಆಕೆ ಸಾವನ್ನಪ್ಪಿದ್ದಾಳೆ.ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ಬೇಡಡ್ಕ ಬೇತೂರುಪಾರ ತಚ್ಚಾರ್ ಕುಂಡುವಿನ ಬಾಬು ಎಂಬವರ ಪುತ್ರಿ ಮಹಿಮಾ (19) ಸಾವನ್ನಪ್ಪಿದ ದುರ್ದೈವಿ. ಬುಧವಾರ ಬೆಳಗ್ಗೆ ಮಹಿಮಾ ಮನೆಯ ಮಲಗುವ ಕೊಠಡಿಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇದನ್ನು ಗಮನಿಸಿದ ಮನೆಯವರು ತಕ್ಷಣ ನೇಣು ಹಗ್ಗದಿಂದ ಕೆಳಕ್ಕಿಳಿಸಿ ಕಾರಿನಲ್ಲಿ ಆಸ್ಪತ್ರೆಗೆ ಕಾಸರಗೋಡಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ….