ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು ನಾವಲ್ಲ – ಕಾರ್ಮಿಕ ಸಚಿವ ಸಂತೋಷ್ ಲಾಡ್
ಮಂಗಳೂರು: 2014ರ ವರೆಗೆ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ನರೇಂದ್ರ ಮೋದಿ ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ 185 ಲಕ್ಷ ಕೋಟಿಗೆ ಏರಿಕೆಯಾಗಿದೆ. ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು ನಾವಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ. ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಬಳಿಕ ಅವರು ಮಾತನಾಡುತ್ತಿದ್ದರು. ಬಿಜೆಪಿಗರು ಚುನಾವಣೆ ಸಂದರ್ಭ ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ, ಬದಲಾಗಿ…